ಸೆಪ್ಟೆಂಬರ್ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಜಾವಾ ಮೋಟಾರ್‌ಸೈಕಲ್

ಜನಪ್ರಿಯ ಜಾವಾ ಮೋಟಾರ್‌ಸೈಕಲ್ ಕಂಪನಿಯ 2020ರ ಸೆಪ್ಟೆಂಬರ್ ತಿಂಗಳ ಮಾರಾಟ ವರದಿಯು ಬಹಿರಂಗವಾಗಿದೆ. ಈ ವರದಿಯ ಪ್ರಕಾರ, ಜಾವಾ ಮೋಟಾರ್‌ಸೈಕಲ್ ಕಂಪನಿಯು 2020ರ ಸೆಪ್ಟೆಂಬರ್ ತಿಂಗಳ ಮಾರಾಟದಲ್ಲಿ ಗಮನಾರ್ಹ ಬೆಳವಣಿಗೆಯನ್ನು ದಾಖಲಿಸಿದೆ.

ಸೆಪ್ಟೆಂಬರ್ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಜಾವಾ ಮೋಟಾರ್‌ಸೈಕಲ್

ಜಾವಾ ಮೋಟಾರ್‌ಸೈಕಲ್ ಕಂಪನಿಯ ಮಾರಾಟದ ವರದಿಯನ್ನು ಫೆಡರೇಶನ್ ಆಫ್ ಆಟೋಮೊಬೈಲ್ ಡೀಲರ್ಸ್ ಅಸೋಸಿಯೇಷನ್ ಬಿಡುಗಡೆಗೊಳಿಸಿದೆ. ಕಳೆದ ವರ್ಷದ ಸೆಪ್ಟೆಂಬರ್ ತಿಂಗಳಲ್ಲಿ ಜಾವಾ ಮೋಟಾರ್‌ಸೈಕಲ್ ಕಂಪನಿಯು 1,492 ಯುನಿಟ್‌ಗಳನ್ನು ಮಾರಾಟ ಮಾಡುಲಾಗಿತ್ತು. ಈ ವರ್ಷದ ಸೆಪ್ಟೆಂಬರ್ ಜಾವಾ ಮೋಟಾರ್‌ಸೈಕಲ್ ಕಂಪನಿಯು 2,121 ಯುನಿಟ್‌ಗಳನ್ನು ಮಾರಾಟ ಮಾಡಿವೆ`.

ಸೆಪ್ಟೆಂಬರ್ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಜಾವಾ ಮೋಟಾರ್‌ಸೈಕಲ್

ಕಳೆದ ವರ್ಷದ ಸೆಪ್ಟೆಂಬರ್ ತಿಂಗಳ ಮಾರಾಟವನ್ನು ಈ ವರ್ಷದ ಅದೇ ಅವಧಿಗೆ ಹೋಲಿಸಿದರೆ ಶೇ.42.16 ರಷ್ಟು ಬೆಳವಣಿಗೆಯನ್ನು ಸಾಧಿಸಿದೆ. ಜಾವಾ ಮೋಟಾರ್‌ಸೈಕಲ್ ತನ್ನ ಪ್ರತಿಸ್ಪರ್ಧಿ ರಾಯಲ್ ಎನ್‌ಫೀಲ್ಡ್ ಬೈಕುಗಳಿಗೆ ಪ್ರಬಲ ಪೈಪೋಟಿ ನೀಡುತ್ತವೆ.

MOST READ: ದುಬಾರಿಯಾಯ್ತು ಜನಪ್ರಿಯ ಬಜಾಜ್ ಪಲ್ಸರ್ ಎನ್ಎಸ್ ಬೈಕುಗಳು

ಸೆಪ್ಟೆಂಬರ್ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಜಾವಾ ಮೋಟಾರ್‌ಸೈಕಲ್

ಇನ್ನು ಜಾವಾ ಮೋಟಾರ್‌ಸೈಕಲ್ ಕಂಪನಿಯು 2020ರ ಆಗಸ್ಟ್ ತಿಂಗಳಲ್ಲಿ 1,353 ಯುನಿ‍‍ಟ್‍‍ಗಳನ್ನು ಮಾರಾಟ ಮಾಡಿದೆ. ಕಳೆದ ವರ್ಷದ ಆಗಸ್ಟ್ ತಿಂಗಳಿಗೆ ಹೋಲಿಸಿದರೆ ಶೇ.5.91 ಕುಸಿತವನ್ನು ಕಂಡಿತ್ತು.

ಸೆಪ್ಟೆಂಬರ್ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಜಾವಾ ಮೋಟಾರ್‌ಸೈಕಲ್

ಜಾವಾ ಮೋಟಾರ್‌ಸೈಕಲ್ ಕಂಪನಿಯು ಹಲವು ವರ್ಷಗಳ ನಂತರ 2018ರಲ್ಲಿ ದೇಶಿಯ ಮಾರುಕಟ್ಟೆಗೆ ಮತ್ತೆ ಕಾಲಿಟ್ಟಿತು. ಜಾವಾ ಕಂಪನಿಯು ದೇಶಿಯ ಮಾರುಕಟ್ಟೆಯಲ್ಲಿ ಜಾವಾ ಸ್ಟ್ಯಾಂಡರ್ಡ್, ಜಾವಾ 42 ಹಾಗೂ ಜಾವಾ ಪೆರಾಕ್ ಎಂಬ ಮೂರು ಮಾದರಿಗಳನ್ನು ಮಾರಾಟ ಮಾಡುತ್ತಿದೆ.

MOST READ: ದುಬಾರಿಯಾಯ್ತು ಜನಪ್ರಿಯ ಬಿಎಸ್-6 ಯಮಹಾ ಎಂಟಿ-15 ಬೈಕ್

ಸೆಪ್ಟೆಂಬರ್ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಜಾವಾ ಮೋಟಾರ್‌ಸೈಕಲ್

ಇನ್ನು ಹೊಸ ಜಾವಾ ಪೆರಾಕ್ ಬೈಕಿನಲ್ಲಿ ಫ್ಲೋಟಿಂಗ್ ಸೀಟ್, ಬಾರ್-ಎಂಡ್ ಮೀರರ್ ಮತ್ತು ಸ್ಟಬಿ ಎಕ್ಸಾಸ್ಟ್ ಅನ್ನು ಹೊಂದಿರಲಿದೆ. ಇನ್ನು ಈ ಪೆರಾಕ್ ಬೈಕನ್ನು ಜಾವಾ 42 ಮತ್ತು ಜಾವಾ 300 ಮಾದರಿಗಳಿಗೆ ಹೋಲಿಸಿದರೆ ರೇರ್ ಸಬ್-ಫ್ರೇಮ್ ಮತ್ತು ಸಸ್ಪೆಂಕ್ಷನ್ ಸೆಟಪ್ ವಿಭಿನ್ನವಾಗಿರುತ್ತದೆ. ಪೆರಾಕ್ ಬೈಕಿನಲ್ಲಿ ಡ್ಯುಯಲ್-ಚಾನೆಲ್ ಎಬಿಎಸ್ ಅನ್ನು ಸಹ ಹೊಂದಿದೆ.

ಸೆಪ್ಟೆಂಬರ್ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಜಾವಾ ಮೋಟಾರ್‌ಸೈಕಲ್

ಜಾವಾ ಪೆರಾಕ್ ಬೈಕಿನಲ್ಲಿ 334 ಸಿಸಿ, ಸಿಂಗಲ್ ಸಿಲಿಂಡರ್, ಲಿಕ್ವಿಡ್-ಕೂಲ್ಡ್, ಡಿಒಹೆಚ್‌ಸಿ ಎಂಜಿನ್‌ ಅನ್ನು ಹೊಂದಿದೆ. ಈ ಎಂಜಿನ್ 30 ಬಿಹೆಚ್‌ಪಿ ಪವರ್ ಮತ್ತು 31 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

MOST READ: ಬಿಡುಗಡೆಯಾಯ್ತು ಹೊಸ ಕವಾಸಕಿ ವಲ್ಕನ್ ಎಸ್ ಬೈಕ್

ಸೆಪ್ಟೆಂಬರ್ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಜಾವಾ ಮೋಟಾರ್‌ಸೈಕಲ್

ಈ ಎಂಜಿನ್ ನೊಂದಿಗೆ 6-ಸ್ಫೀಡ್ ಮ್ಯಾನುವಲ್ ಗೇರ್ ಬಾಕ್ಸ್ ಅನ್ನು ಅಳವಡಿಸಿದೆ. ಇನ್ನು ಈ ಬೈಕಿನಲ್ಲಿ ಸಸ್ಪೆಂಕ್ಷನ್ ಗಾಗಿ ಮುಂಭಾಗದಲ್ಲಿ ಟೆಲಿಸ್ಕೋಪಿಕ್ ಫೋರ್ಕ್ಸ್ ಮತ್ತು ಹಿಂಭಾಗದಲ್ಲಿ ಮೊನೊ-ಶಾಕ್ ಅನ್ನು ಒಳಗೊಂಡಿದೆ.

ಸೆಪ್ಟೆಂಬರ್ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಜಾವಾ ಮೋಟಾರ್‌ಸೈಕಲ್

ಜಾವಾ ಬೈಕುಗಳು ಪ್ರತಿಸ್ಪರ್ಧಿ ರಾಯಲ್ ಎನ್‌ಫೀಲ್ಡ್ ಬೈಕುಗಳಿಗೆ ಪೈಪೋಟಿ ನೀಡಲು ಪ್ರಯತ್ನಿಸುತ್ತಿದೆ. ಇನ್ನು ಈ ಹಬ್ಬದ ಸೀಸನ್ ನಲ್ಲಿ ಜಾವಾ ಬೈಕುಗಳು ಮಾರಾಟವನ್ನು ಹೆಚ್ಚಾಗಬಹುದು ಎಂದು ಹೇಳಬಹುದು.

Most Read Articles

Kannada
English summary
Jawa Motorcycle Sales Sep 2020 Registers 42% Growth. Read In Kannada.
Story first published: Saturday, October 10, 2020, 9:47 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X