ವಿದೇಶಿ ಮಾರುಕಟ್ಟೆಗೂ ಲಗ್ಗೆಯಿಡುತ್ತಿದೆ ಜಾವಾ 300 ಕ್ಲಾಸಿಕ್ ಬೈಕ್

ಮಹೀಂದ್ರಾ ಒಡೆತನದ ಕ್ಲಾಸಿಕ್ ಲೆಜೆಂಡ್ ಕಂಪನಿಯು ಭಾರತದಲ್ಲಿ ಹೊಸ ಮಾದರಿಯ ಜಾವಾ ಮತ್ತು ಜಾವಾ 42 ಬೈಕ್ ಮಾದರಿಗಳನ್ನು ಮಾರಾಟ ಮಾಡುತ್ತಿದ್ದು, ಹೊಸ ಬೈಕ್‌ಗಳಿಗೆ ಇದೀಗ ವಿದೇಶಿ ಮಾರುಕಟ್ಟೆಯಲ್ಲೂ ಉತ್ತಮ ಬೇಡಿಕೆ ಹರಿದುಬರುತ್ತಿದೆ.

ವಿದೇಶಿ ಮಾರುಕಟ್ಟೆಗೂ ಲಗ್ಗೆಯಿಡುತ್ತಿದೆ ಜಾವಾ 300 ಕ್ಲಾಸಿಕ್ ಬೈಕ್

ಮೊದಲ ಹಂತವಾಗಿ ಯುರೋಪಿನ್ ಮಾರುಕಟ್ಟೆಗಳಲ್ಲಿ ಬಿಡುಗಡೆಗೆ ಸಿದ್ದವಾಗಿರುವ ಕ್ಲಾಸಿಕ್ ಲೆಜೆಂಡ್ ಕಂಪನಿಯು ಭಾರತದಲ್ಲಿ ಮಾರಾಟವಾಗುತ್ತಿರುವ ಜಾವಾ ಕ್ಲಾಸಿಕ್ ಮಾದರಿಯನ್ನೇ ಕೆಲವು ತಾಂತ್ರಿಕ ಬದಲಾವಣೆಯೊಂದಿಗೆ ಜಾವಾ 300 ಹೆಸರಿನಲ್ಲಿ ಅಭಿವೃದ್ದಿಪಡಿಸಿದೆ. ಯುರೋಪಿನ್ ಸ್ಟೈಲ್ ಹೊಂದಿರುವ ಜಾವಾ 300 ಮಾದರಿಯಲ್ಲಿ ಕೆಲವು ಹೆಚ್ಚುವರಿ ಪ್ರೀಮಿಯಂ ಫೀಚರ್ಸ್‌ಗಳನ್ನು ನೀಡಲಾಗಿದ್ದು, ಜೆಕ್ ಗಣರಾಜ್ಯದಲ್ಲಿ ಮಾರಾಟಗೊಳ್ಳಲು ಸಿದ್ದವಾಗಿದೆ.

ವಿದೇಶಿ ಮಾರುಕಟ್ಟೆಗೂ ಲಗ್ಗೆಯಿಡುತ್ತಿದೆ ಜಾವಾ 300 ಕ್ಲಾಸಿಕ್ ಬೈಕ್

ಹೊಸ ಬೈಕ್ ಮಾದರಿಯು ಭಾರತದಿಂದಲೇ ರಫ್ತುಗೊಳ್ಳಲಿದ್ದು, ಬೇಡಿಕೆಯ ಆಧಾರದ ಮೇಲೆ ಇನ್ನುಳಿದ ಎರಡು ಬೈಕ್ ಮಾದರಿಗಳಾದ ಜಾವಾ 42 ಮತ್ತು ಪೆರಾಕ್ ಬೈಕ್ ಮಾದರಿಗಳನ್ನು ಸಹ ವಿದೇಶಿ ಮಾರುಕಟ್ಟೆಗಳಿಗೆ ಪರಿಚಯಿಸುವ ಯೋಜನೆಯಲ್ಲಿದೆ.

MOST READ: ಕರೋನಾ ವೈರಸ್ ವಿರುದ್ಧ ಹೋರಾಟಕ್ಕಾಗಿ ಕೈಜೋಡಿಸಿದ ಜಾವಾ ಮೋಟಾರ್‌ಸೈಕಲ್

ವಿದೇಶಿ ಮಾರುಕಟ್ಟೆಗೂ ಲಗ್ಗೆಯಿಡುತ್ತಿದೆ ಜಾವಾ 300 ಕ್ಲಾಸಿಕ್ ಬೈಕ್

ಜೆಕ್ ಗಣರಾಜ್ಯದಲ್ಲಿ ಬಿಡುಗಡೆಯಾಗಲಿರುವ ಜಾವಾ 300 ಬೈಕ್ ಮಾದರಿಯು ಭಾರತದಲ್ಲಿ ಮಾರಾಟವಾಗಲಿರುವ ಮಾದರಿಗಿಂತಲೂ ತುಸು ಭಿನ್ನತೆಯನ್ನು ಹೊಂದಿದ್ದು, ಕ್ರೋಮ್ ವಿನ್ಯಾಸ, ದೊಡ್ಡದಾದ ಪೆಂಡರ್, ಸೈಡ್ ಪ್ಯಾನೆಲ್ ಮತ್ತು ಹೆಡ್‌ಲೈಟ್ ಡೂಮ್ ನೀಡಿರುವುದು ಆಕರ್ಷಕವಾಗಿದೆ.

ವಿದೇಶಿ ಮಾರುಕಟ್ಟೆಗೂ ಲಗ್ಗೆಯಿಡುತ್ತಿದೆ ಜಾವಾ 300 ಕ್ಲಾಸಿಕ್ ಬೈಕ್

ಹಾಗೆಯೇ ಜೆಕ್ ಗಣರಾಜ್ಯದಲ್ಲಿ ಬಿಡುಗಡೆಯಾಗುತ್ತಿರುವ ಜಾವಾ 300 ಮಾದರಿಯು ಭಾರತದಲ್ಲಿ ಮಾರಾಟವಾಗುತ್ತಿರುವ ಮಾದರಿಯಲ್ಲೇ ಎಂಜಿನ್ ಆಯ್ಕೆ ಪಡೆದುಕೊಂಡಿದ್ದು, ಪ್ರೀಮಿಯಂ ಫೀಚರ್ಸ್‌ಗಳಿಂದಾಗಿ ತುಸು ದುಬಾರಿಯಾಗಿರಲಿದೆ.

MOST READ: ಕೋವಿಡ್ 19 ಸೋಂಕಿತರನ್ನು ಪತ್ತೆಹಚ್ಚುತ್ತೆ ಈ ವಿಶೇಷ ಇನೋವಾ ಕಾರು..!

ವಿದೇಶಿ ಮಾರುಕಟ್ಟೆಗೂ ಲಗ್ಗೆಯಿಡುತ್ತಿದೆ ಜಾವಾ 300 ಕ್ಲಾಸಿಕ್ ಬೈಕ್

ಇನ್ನು 2018ರ ಕೊನೆಯಲ್ಲಿ ಭಾರತದಲ್ಲಿ ಬಿಡುಗಡೆಗೊಂಡಿದ್ದ ಜಾವಾ ಹೊಸ ಬೈಕ್‌ಗಳು ಭಾರತದಲ್ಲಿ ಕ್ಲಾಸಿಕ್ ಬೈಕ್ ಪ್ರಿಯರ ಆಕರ್ಷಣೆಗೆ ಕಾರಣವಾಗಿದ್ದು, ದೇಶಾದ್ಯಂತ ಕಡ್ಡಾಯವಾಗಿ ಜಾರಿಗೆ ಬಂದಿರುವ ಬಿಎಸ್-6 ಎಂಜಿನ್‌ನೊಂದಿಗೆ ಮಾರಾಟಗೊಳ್ಳುತ್ತಿವೆ.

ವಿದೇಶಿ ಮಾರುಕಟ್ಟೆಗೂ ಲಗ್ಗೆಯಿಡುತ್ತಿದೆ ಜಾವಾ 300 ಕ್ಲಾಸಿಕ್ ಬೈಕ್

ಬಿಎಸ್-6 ಎಂಜಿನ್ ಜೋಡಣೆ ನಂತರ ಜಾವಾ ಕ್ಲಾಸಿಕ್ ಮತ್ತು ಜಾವಾ 42 ಬೈಕ್ ಬೆಲೆಯಲ್ಲಿ ತುಸು ದುಬಾರಿಯಾಗಿದ್ದು, ಹೊಸ ಎಂಜಿನ್ ಜೋಡಣೆ ನಂತರ ಬೈಕ್ ಎಂಜಿನ್ ಕಾರ್ಯಕ್ಷಮತೆ ಮತ್ತು ಮಾಲಿನ್ಯ ಹೊರಸೂಸುವಿಕೆಯಲ್ಲಿ ಸಾಕಷ್ಟು ಸುಧಾರಣೆ ಕಂಡಿವೆ.

MOST READ: ಲಾಕ್‌ಡೌನ್ ವೇಳೆ ತಂಗಿಗಾಗಿ 85 ಕಿ.ಮೀ ದೂರ ಸೈಕಲ್ ತುಳಿದ ಅಣ್ಣ..!

ವಿದೇಶಿ ಮಾರುಕಟ್ಟೆಗೂ ಲಗ್ಗೆಯಿಡುತ್ತಿದೆ ಜಾವಾ 300 ಕ್ಲಾಸಿಕ್ ಬೈಕ್

ಜಾವಾ ಕ್ಲಾಸಿಕ್ ಬೈಕ್ ಮಾದರಿಯು ಎಕ್ಸ್‌ಶೋರೂಂ ಪ್ರಕಾರ ಸಿಂಗಲ್ ಚಾನೆಲ್ ಎಬಿಎಸ್ ಮಾದರಿಯು ಆರಂಭಿಕವಾಗಿ ರೂ. 1.73 ಲಕ್ಷ ಬೆಲೆ ಹೊಂದಿದ್ದಲ್ಲಿ, ಡ್ಯುಯಲ್ ಚಾನೆಲ್ ಎಬಿಎಸ್ ಮಾದರಿಯು ರೂ.1.82 ಲಕ್ಷ ಬೆಲೆ ಪಡೆದುಕೊಂಡಿದೆ.

ವಿದೇಶಿ ಮಾರುಕಟ್ಟೆಗೂ ಲಗ್ಗೆಯಿಡುತ್ತಿದೆ ಜಾವಾ 300 ಕ್ಲಾಸಿಕ್ ಬೈಕ್

ಹಾಗೆಯೇ ಜಾವಾ 42 ಬೈಕ್ ಮಾದರಿಯು ಎಕ್ಸ್‌ಶೋರೂಂ ಪ್ರಕಾರ ಸಿಂಗಲ್ ಚಾನೆಲ್ ಎಬಿಎಸ್ ಮಾದರಿಯು ಆರಂಭಿಕವಾಗಿ ರೂ. 1.60 ಲಕ್ಷ ಬೆಲೆ ಹೊಂದಿದ್ದು, ಡ್ಯುಯಲ್ ಚಾನೆಲ್ ಎಬಿಎಸ್ ಮಾದರಿಯು ರೂ. 1.69 ಲಕ್ಷ ಬೆಲೆ ಪಡೆದುಕೊಂಡಿದೆ.

MOST READ: ಅತಿ ಕಡಿಮೆ ಬೆಲೆಯಲ್ಲಿ 'ಏರ್ 100' ವೆಂಟಿಲೆಟರ್ ಪರಿಚಯಿಸಿದ ಮಹೀಂದ್ರಾ

ವಿದೇಶಿ ಮಾರುಕಟ್ಟೆಗೂ ಲಗ್ಗೆಯಿಡುತ್ತಿದೆ ಜಾವಾ 300 ಕ್ಲಾಸಿಕ್ ಬೈಕ್

ಈ ಮೂಲಕ ಹೊಸ ಬೈಕ್‌ಗಳ ಬೆಲೆಗೂ ಮತ್ತು ಹಳೆಯ ಆವೃತ್ತಿಯ ಬೈಕ್ ಬೆಲೆಗೂ ಎಕ್ಸ್‌ಶೋರೂಂ ದರದಲ್ಲಿ ರೂ.5 ಸಾವಿರದಿಂದ ರೂ.9,928 ಹೆಚ್ಚಳವಾಗಿದ್ದು, ಆನ್-ರೋಡ್ ದರಗಳಲ್ಲಿ ಇದು ಇನ್ನಷ್ಟು ದುಬಾರಿಯಾಗಿರುತ್ತದೆ.

ವಿದೇಶಿ ಮಾರುಕಟ್ಟೆಗೂ ಲಗ್ಗೆಯಿಡುತ್ತಿದೆ ಜಾವಾ 300 ಕ್ಲಾಸಿಕ್ ಬೈಕ್

ಬಿಎಸ್-6 ಎಂಜಿನ್ ವೈಶಿಷ್ಟ್ಯತೆ

ಹೊಸ ಜಾವಾ ಮತ್ತು ಜಾವಾ 42 ಬೈಕ್‌ಗಳು ಈ ಹಿಂದಿನಂತೆಯೇ 293-ಸಿಸಿ ಸಿಂಗಲ್ ಸಿಲಿಂಡರ್ ಎಂಜಿನ್ ಪಡೆದುಕೊಂಡಿದ್ದು, ಲಿಕ್ವಿಡ್ ಕೂಲ್ಡ್ ಎಂಜಿನ್ ಬದಲಾಗಿ ಫ್ಯೂಲ್ ಇಂಜೆಕ್ಷನ್ ಫೀಚರ್ಸ್ ಪಡೆದುಕೊಂಡಿದೆ.

ವಿದೇಶಿ ಮಾರುಕಟ್ಟೆಗೂ ಲಗ್ಗೆಯಿಡುತ್ತಿದೆ ಜಾವಾ 300 ಕ್ಲಾಸಿಕ್ ಬೈಕ್

ಫ್ಯೂಲ್ ಇಂಜೆಕ್ಷನ್ ಯುನಿಟ್ ಬಳಕೆಯಿಂದಾಗಿ ಬೈಕ್ ಚಾಲನೆ ವೇಳೆ ಸ್ಮೂತ್ ಪರ್ಫಾಮೆನ್ಸ್ ನೀಡುವುದರ ಜೊತೆಗೆ ಮಾಲಿನ್ಯ ಹೊರಸೂವಿಕೆ ಪ್ರಮಾಣದಲ್ಲಿ ಸಾಕಷ್ಟು ಕಡಿತಗೊಂಡಿದೆ. ಇದು ಹೊಸ ಬೈಕಿನ ಪ್ರಮುಖ ಬದಲಾವಣೆಯಾಗಿದ್ದು, ಇನ್ನುಳಿದಂತೆ ಬಹುತೇಕ ತಾಂತ್ರಿಕ ಅಂಶಗಳು ಬಿಎಸ್-4 ಮಾದರಿಯಂತೆಯೇ ಮುಂದುವರಿಸಲಾಗಿದೆ.

Most Read Articles

Kannada
English summary
Jawa Motorcycles To Export Jawa 300 Model To International Markets This Year. Read in Kannada.
Story first published: Friday, April 24, 2020, 20:02 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X