Just In
- 18 min ago
ಪೊಲೊ ಹ್ಯಾಚ್ಬ್ಯಾಕ್ ಮತ್ತು ವೆಂಟೊ ಸೆಡಾನ್ ಕಾರುಗಳ ಖರೀದಿ ಮೇಲೆ ಹೊಸ ವರ್ಷದ ಆಫರ್
- 1 hr ago
ದಿಢೀರನೆ ಕೈಕೊಟ್ಟ ಬ್ರೇಕ್, 3 ಕಿ.ಮೀ ರಿವರ್ಸ್ ಗೇರಿನಲ್ಲಿ ಸಾಗಿದ ಟ್ರಕ್ ಚಾಲಕ
- 1 hr ago
ಕೈಗೆಟುಕುವ ದರದಲ್ಲಿ ಟಿವಿಎಸ್ ಎಕ್ಸ್ಎಲ್100 ವಿನ್ನರ್ ಎಡಿಷನ್ ಬಿಡುಗಡೆ
- 2 hrs ago
ಭಾರತದಲ್ಲಿ ಅತಿದೊಡ್ಡ ಮಲ್ಟಿ ಬ್ರಾಂಡ್ ಕಾರ್ ಸರ್ವಿಸ್ ಸೆಂಟರ್ ತೆರೆದ ಬಾಷ್
Don't Miss!
- Sports
ಭಾರತ vs ಆಸ್ಟ್ರೇಲಿಯಾ: ಧೋನಿ ದಾಖಲೆ ಮುರಿದು 1000 ಟೆಸ್ಟ್ ರನ್ ಗಳಿಸಿದ ರಿಷಭ್ ಪಂತ್
- News
ಕಳಪೆ ಮಟ್ಟದಲ್ಲಿ ಲಸಿಕೆ ಅಭಿಯಾನ; ಎರಡು ರಾಜ್ಯಗಳಿಗೆ ಕೇಂದ್ರದ ತರಾಟೆ
- Finance
ಕಾರು ಖರೀದಿಗೆ ಅತ್ಯಂತ ಕಡಿಮೆ ಬಡ್ಡಿ ದರಕ್ಕೆ ಸಾಲ ನೀಡುವ ಬ್ಯಾಂಕ್ ಗಳಿವು
- Lifestyle
ಕೂದಲು ಬೇಗನೆ ಬೆಳ್ಳಗಾಗುವುದು: ಇದು ನಿಮ್ಮ ದೇಹದ ಕುರಿತು ಏನು ಸೂಚಿಸುತ್ತದೆ?
- Education
Indian Forest Service Recruitment 2021: 70 ಡಿಐಜಿಎಫ್/ಎಐಜಿಎಫ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Movies
ಚಿತ್ರೀಕರಣ ವೇಳೆ ಅಸ್ವಸ್ಥ: ನಟಿ ಅಲಿಯಾ ಭಟ್ ಆಸ್ಪತ್ರೆಗೆ ದಾಖಲು
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ದೀಪಾವಳಿ ಆಫರ್: ಜಾವಾ ಕ್ಲಾಸಿಕ್ ಬೈಕ್‌ಗಳ ಖರೀದಿ ಮೇಲೆ ಆಕರ್ಷಕ ಇಎಂಐ ಆಫರ್
ದೀಪಾವಳಿ ಸಂಭ್ರಮದಲ್ಲಿ ಹೊಸ ವಾಹನ ಖರೀದಿ ಭರಾಟೆ ಜೋರಾಗಿದ್ದು, ಬಹುತೇಕ ಆಟೋ ಕಂಪನಿಗಳು ವಿವಿಧ ಆಫರ್‌ಗಳ ಮೂಲಕ ಗ್ರಾಹಕರನ್ನು ಆಕರ್ಷಿಸುತ್ತಿವೆ. ಜಾವಾ ಮೋಟಾರ್‌ಸೈಕಲ್ ಕೂಡಾ ಗ್ರಾಹಕರನ್ನು ಸೆಳೆಯಲು ಆಕರ್ಷಕ ಇಎಂಐ ಆಫರ್ ನೀಡುತ್ತಿದ್ದು, ದೀಪಾವಳಿ ಸಂಭ್ರಮಕ್ಕಾಗಿ ಹೊಸ ಬೈಕ್ ವಿತರಿಸುವ ಭರವಸೆ ನೀಡಿದೆ.

ಕ್ಲಾಸಿಕ್ ಬೈಕ್ ಬಿಡುಗಡೆಯ ಸಂದರ್ಭದಲ್ಲಿ ಗ್ರಾಹಕರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದ್ದ ಜಾವಾ ಮೋಟಾರ್‌ಸೈಕಲ್ ಕಂಪನಿಯು ಇತ್ತೀಚೆಗೆ ವಿತರಣಾ ಅವಧಿಯ ವಿಚಾರವಾಗಿ ಗ್ರಾಹಕರ ಅಸಮಾಧಾನಕ್ಕೆ ಕಾರಣವಾಗಿತ್ತು. ಈ ಹಿನ್ನಲೆ ನಿಗದಿತ ಅವಧಿಯಲ್ಲಿ ಹೊಸ ಬೈಕ್ ವಿತರಣೆಯ ಭರವಸೆ ನೀಡಿರುವ ಕಂಪನಿಯು ಆಕರ್ಷಕ ಇಎಂಐ ಆಫರ್ ಜೊತೆಗೆ ಗ್ರಾಹಕರನ್ನು ಸೆಳೆಯುವ ಯೋಜನೆಯಲ್ಲಿದ್ದು, ಆಸಕ್ತ ಗ್ರಾಹಕರು ನಿಮ್ಮ ಹತ್ತಿರ ಶೋರೂಂಗಳಲ್ಲಿ ಅಥವಾ ಆನ್‌ಲೈನ್ ಪ್ಲ್ಯಾಟ್‌ಫಾರ್ಮ್‌ಗಳಲ್ಲಿ ಬುಕ್ಕಿಂಗ್ ಸಲ್ಲಿಕೆ ಮಾಡಬಹುದಾಗಿದೆ.

ಜಾವಾ ಮತ್ತು ಜಾವಾ 42 ಬೈಕ್ ಖರೀದಿಸುವ ಗ್ರಾಹಕರಿಗೆ ಗರಿಷ್ಠ ಅವಧಿಯ ಸಾಲ ಮರುಪಾವತಿಯ ಆಯ್ಕೆಯೊಂದಿಗೆ ಪ್ರತಿ ತಿಂಗಳು ರೂ. 4,444 ಇಎಂಐ ನಿಗದಿ ಮಾಡಿದ್ದು, ದಸರಾ ಸಂಭ್ರಮದ ಸಂದರ್ಭದಲ್ಲೂ ಹೊಸ ಆಫರ್‌ಗಳೊಂದಿಗೆ ಗರಿಷ್ಠ ಪ್ರಮಾಣದ ಬೈಕ್ ವಿತರಣೆ ಮಾಡಿದೆ.

ಇನ್ನು 2018ರ ಕೊನೆಯಲ್ಲಿ ಭಾರತದಲ್ಲಿ ಬಿಡುಗಡೆಗೊಂಡಿದ್ದ ಜಾವಾ ಹೊಸ ಬೈಕ್‌ಗಳು ಭಾರತದಲ್ಲಿ ಕ್ಲಾಸಿಕ್ ಬೈಕ್ ಪ್ರಿಯರ ಆಕರ್ಷಣೆಗೆ ಕಾರಣವಾಗಿದ್ದು, ದೇಶಾದ್ಯಂತ ಕಡ್ಡಾಯವಾಗಿ ಜಾರಿಗೆ ಬಂದಿರುವ ಬಿಎಸ್-6 ಎಂಜಿನ್‌ನೊಂದಿಗೆ ಮಾರಾಟಗೊಳ್ಳುತ್ತಿವೆ.

ಬಿಎಸ್-6 ಎಂಜಿನ್ ಜೋಡಣೆ ನಂತರ ಜಾವಾ ಕ್ಲಾಸಿಕ್ ಮತ್ತು ಜಾವಾ 42 ಬೈಕ್ ಬೆಲೆಯಲ್ಲಿ ತುಸು ದುಬಾರಿಯಾಗಿದ್ದು, ಹೊಸ ಎಂಜಿನ್ ಜೋಡಣೆ ನಂತರ ಬೈಕ್ ಎಂಜಿನ್ ಕಾರ್ಯಕ್ಷಮತೆ ಮತ್ತು ಮಾಲಿನ್ಯ ಹೊರಸೂಸುವಿಕೆಯಲ್ಲಿ ಸಾಕಷ್ಟು ಸುಧಾರಣೆ ಕಂಡಿವೆ. ಜಾವಾ ಕ್ಲಾಸಿಕ್ ಬೈಕ್ ಮಾದರಿಯು ಎಕ್ಸ್‌ಶೋರೂಂ ಪ್ರಕಾರ ಸಿಂಗಲ್ ಚಾನೆಲ್ ಎಬಿಎಸ್ ಮಾದರಿಯು ಆರಂಭಿಕವಾಗಿ ರೂ. 1.73 ಲಕ್ಷ ಬೆಲೆ ಹೊಂದಿದ್ದಲ್ಲಿ, ಡ್ಯುಯಲ್ ಚಾನೆಲ್ ಎಬಿಎಸ್ ಮಾದರಿಯು ರೂ.1.82 ಲಕ್ಷ ಬೆಲೆ ಪಡೆದುಕೊಂಡಿದೆ.

ಹಾಗೆಯೇ ಜಾವಾ 42 ಬೈಕ್ ಮಾದರಿಯು ಎಕ್ಸ್‌ಶೋರೂಂ ಪ್ರಕಾರ ಸಿಂಗಲ್ ಚಾನೆಲ್ ಎಬಿಎಸ್ ಮಾದರಿಯು ಆರಂಭಿಕವಾಗಿ ರೂ. 1.60 ಲಕ್ಷ ಬೆಲೆ ಹೊಂದಿದ್ದು, ಡ್ಯುಯಲ್ ಚಾನೆಲ್ ಎಬಿಎಸ್ ಮಾದರಿಯು ರೂ. 1.69 ಲಕ್ಷ ಬೆಲೆ ಪಡೆದುಕೊಂಡಿದೆ.
MOST READ: ಅತಿ ಕಡಿಮೆ ಬೆಲೆಯಲ್ಲಿ ಹೆಚ್ಚು ಮೈಲೇಜ್ ನೀಡುವ ರೆಟ್ರೊ ಎಲೆಕ್ಟ್ರಿಕ್ ಬೈಕ್ ಬಿಡುಗಡೆ

ಈ ಮೂಲಕ ಹೊಸ ಬೈಕ್‌ಗಳ ಬೆಲೆಗೂ ಮತ್ತು ಹಳೆಯ ಆವೃತ್ತಿಯ ಬೈಕ್ ಬೆಲೆಗೂ ಎಕ್ಸ್‌ಶೋರೂಂ ದರದಲ್ಲಿ ರೂ.5 ಸಾವಿರದಿಂದ ರೂ.9,928 ಹೆಚ್ಚಳವಾಗಿದ್ದು, ಆನ್-ರೋಡ್ ದರಗಳಲ್ಲಿ ಇದು ಇನ್ನಷ್ಟು ದುಬಾರಿಯಾಗಿರುತ್ತದೆ.

ಹೊಸ ಜಾವಾ ಮತ್ತು ಜಾವಾ 42 ಬೈಕ್‌ಗಳು ಈ ಹಿಂದಿನಂತೆಯೇ 293-ಸಿಸಿ ಸಿಂಗಲ್ ಸಿಲಿಂಡರ್ ಎಂಜಿನ್ ಪಡೆದುಕೊಂಡಿದ್ದು, ಲಿಕ್ವಿಡ್ ಕೂಲ್ಡ್ ಎಂಜಿನ್ ಬದಲಾಗಿ ಫ್ಯೂಲ್ ಇಂಜೆಕ್ಷನ್ ಫೀಚರ್ಸ್ ಪಡೆದುಕೊಂಡಿದೆ.
MOST READ: ಹೊಸ ಅವತಾರದಲ್ಲಿ ಬಿಡುಗಡೆಯಾಗಲಿದೆ ಟಿವಿಎಸ್ ಫಿಯರೊ 125 ಕಮ್ಯುಟರ್ ಬೈಕ್

ಫ್ಯೂಲ್ ಇಂಜೆಕ್ಷನ್ ಯುನಿಟ್ ಬಳಕೆಯಿಂದಾಗಿ ಬೈಕ್ ಚಾಲನೆ ವೇಳೆ ಸ್ಮೂತ್ ಪರ್ಫಾಮೆನ್ಸ್ ನೀಡುವುದರ ಜೊತೆಗೆ ಮಾಲಿನ್ಯ ಹೊರಸೂವಿಕೆ ಪ್ರಮಾಣದಲ್ಲಿ ಸಾಕಷ್ಟು ಕಡಿತಗೊಂಡಿದೆ. ಇದು ಹೊಸ ಬೈಕಿನ ಪ್ರಮುಖ ಬದಲಾವಣೆಯಾಗಿದ್ದು, ಇನ್ನುಳಿದಂತೆ ಬಹುತೇಕ ತಾಂತ್ರಿಕ ಅಂಶಗಳು ಬಿಎಸ್-4 ಮಾದರಿಯಂತೆಯೇ ಮುಂದುವರಿಸಲಾಗಿದೆ.