ಪೆರಾಕ್ ಬೈಕ್ ಬಿಡುಗಡೆ ನಂತರವೂ ರೋಡ್ ಟೆಸ್ಟಿಂಗ್ ಮುಂದುವರಿಸಿದ ಜಾವಾ
ಕಳೆದ ವರ್ಷ ನವೆಂಬರ್ ಮಧ್ಯಂತರದಲ್ಲಿ ಪೆರಾಕ್ ಬೈಕ್ ಬಿಡುಗಡೆ ಮಾಡಿದ್ದ ಜಾವಾ ಮೋಟಾರ್‌ಸೈಕಲ್ ಕಂಪನಿಯು 2020ರ ಏಪ್ರಿಲ್ 1ರಿಂದ ವಿತರಣೆ ಮಾಡುವುದಾಗಿ ಹೇಳಿಕೊಂಡಿತ್ತು. ಆದರೆ ಕರೋನಾ ಪರಿಣಾಮ ಬೈಕ್ ವಿತರಣೆ ಇನ್ನಷ್ಟು ತಡವಾಗುವ ಸಾಧ್ಯತೆಗಳಿದ್ದು, ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳು ಇದುವರೆಗೂ ಪೂರ್ಣಗೊಂಡಿಲ್ಲ.

ಹೊಸ ಬೈಕಿನ ಉತ್ಪಾದನಾ ಆವೃತ್ತಿಯು ಅನಾವರಣಗೊಂಡಿದ್ದರೂ ಕೆಲವು ತಾಂತ್ರಿಕ ಅಂಶಗಳ ಕುರಿತಾಗಿ ಮತ್ತೊಂದು ಹಂತದ ರೋಡ್ ಟೆಸ್ಟಿಂಗ್ ನಡೆಸಿರುವ ಜಾವಾ ಕಂಪನಿಯು ಮುಂಬರುವ ಅಗಸ್ಟ್ ಅಥವಾ ಸೆಪ್ಟೆಂಬರ್‌ನಲ್ಲಿ ಹೊಸ ಬೈಕಿನ ವಿತರಣೆ ಶುರು ಮಾಡಬಹುದಾಗಿದೆ. ಹೊಸ ಬೈಕ್ ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 1,95,500 ಬೆಲೆ ಪಡೆದುಕೊಂಡಿದ್ದು, ಸಾಮಾನ್ಯ ಬೈಕ್ ಮಾದರಿಗಳಾದ ಜಾವಾ ಮತ್ತು ಜಾವಾ 42 ಬೈಕ್‌ಗಳಿಂತಲೂ ವಿಶೇಷ ವಿನ್ಯಾಸ ಹೊಂದಿದೆ.

ಕ್ಲಾಸಿಕ್ ಬೈಕ್ ಪ್ರಿಯರಲ್ಲಿ ತೀವ್ರ ಕುತೂಹಲ ಮೂಡಿಸಿರುವ ಜಾವಾ ಪೆರಾಕ್ ಬೈಕ್ ಮಾದರಿಯು ಇದೀಗ ಅಂತಿಮವಾಗಿ ಗ್ರಾಹಕರ ಕೈಸೇರಲು ಸಿದ್ದವಾಗಿದ್ದು, ಬೈಕ್ ಖರೀದಿಗಾಗಿ ರೂ.10 ಸಾವಿರ ಮುಂಗಡದೊಂದಿಗೆ ಈಗಾಗಲೇ ಆನ್‌ಲೈನ್ ಬುಕ್ಕಿಂಗ್ ಮಾಡಬಹುದಾಗಿದೆ.

1940ರ ಅವಧಿಯಲ್ಲಿನ ಬಾಬರ್ ಸ್ಟೈಲ್ ಬೈಕ್ ವಿನ್ಯಾಸವನ್ನು ಹೊತ್ತುಬಂದಿರುವ ಪೆರಾಕ್ ಬೈಕ್ ಮಾದರಿಯು ವಿಶೇಷ ಬಾಡಿ ಶೈಲಿಯೊಂದಿಗೆ ಭಾರತದಲ್ಲಿರುವ ಇತರೆ ಎಲ್ಲಾ ಬೈಕ್ ಮಾದರಿಗಳಿಂತಲೂ ಉದ್ದವಾದ ವೀಲ್ಹ್ ಬೆಸ್ ಹೊಂದಿರುವ ಮೊದಲ ಬೈಕ್ ಇದಾಗಿದೆ.

ಪೆರಾಕ್ ಬೈಕ್ ಮಾದರಿಯು 2020ರ ಎಪ್ರಿಲ್ 1ರಿಂದ ಕಡ್ಡಾಯವಾಗಿ ಜಾರಿಗೆ ಬಂದಿರುವ ಬಿಎಸ್-6 ನಿಯಮ ಅನುಸಾರವಾಗಿ ಹೊಸ ಎಂಜಿನ್ ಪಡೆದುಕೊಂಡಿದ್ದು, ಹೊಸ ಬೈಕಿನಲ್ಲಿ 334-ಸಿಸಿ ಎಂಜಿನ್ ಸಿಂಗಲ್ ಸಿಲಿಂಡರ್ ಎಂಜಿನ್‌ನೊಂದಿಗೆ 30-ಬಿಎಚ್‌ಪಿ ಮತ್ತು 31-ಎನ್ಎಂ ಟಾರ್ಕ್ ಉತ್ಪಾದನಾ ಗುಣಹೊಂದಿದೆ.

ಪೆರಾಕ್ ಬೈಕ್ ಮಾದರಿಯು ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಹಲವಾರು ಪ್ರೀಮಿಯಂ ಫೀಚರ್ಸ್‌ಗಳನ್ನು ಪಡೆದುಕೊಂಡಿದ್ದು, ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್ 350 ಬೈಕ್ ಮಾದರಿಗೆ ಪೈಪೋಟಿ ನೀಡುವ ನೀರಿಕ್ಷೆಯಲ್ಲಿದೆ. ಮತ್ತೊಂದು ವಿಶೇಷ ಅಂದ್ರೆ, ಪೆರಾಕ್ ಮಾದರಿಯು ಕ್ಲಾಸಿಕ್ ಲೆಜೆಂಡ್ ಕಂಪನಿಯಿಂದಲೇ ಮಾಡಿಫೈಗೊಂಡ ಬೈಕ್ ಆವೃತ್ತಿಯಾಗಲಿದ್ದು, ಡ್ಯುಯಲ್ ಚಾನೆಲ್ ಎಬಿಎಸ್, ಎರಡು ಬದಿಯ ಚಕ್ರಗಳಲ್ಲೂ ಡಿಸ್ಕ್ ಬ್ರೇಕ್, ರೌಂಡ್ ಹೆಡ್‌ಲ್ಯಾಂಪ್, ಡ್ಯಯಲ್ ಎಕ್ಸಾಸ್ಟ್ ಫೀಚರ್ಸ್‌ಗಳು ಹೊಸ ಬೈಕಿನ ಪ್ರಮುಖ ಆಕರ್ಷಣೆಯಾಗಿವೆ.
MOST READ: ಹೊಸ ಪೊಲೊ ಕಾರು ವಿತರಣೆ ಮಾಡಿದ ಎರಡೇ ನಿಮಿಷದಲ್ಲಿ ನಡೆಯಿತು ಅಪಘಾತ..!

ಈ ಮೂಲಕ ದುಬಾರಿ ಬೆಲೆಯ ಹಾರ್ಲೆ ಡೇವಿಡ್ಸನ್ ಬೈಕ್ ರೈಡಿಂಗ್ ಅನುಭವ ನೀಡುವ ಪೆರಾಕ್ ಬೈಕ್ ಯುವ ಸಮುದಾಯದ ನೆಚ್ಚಿನ ಬೈಕ್ ಮಾದರಿಯಾಗುವ ಎಲ್ಲಾ ಗುಣಲಕ್ಷಣಗಳನ್ನು ಹೊಂದಿದ್ದು, ಕ್ಲಾಸಿಕ್ 350 ಮಾತ್ರವಲ್ಲದೇ ಇತ್ತೀಚೆಗೆ ಬಿಡುಗಡೆಯಾಗಲಿರುವ ಬೆನೆಲ್ಲಿ ಇಂಪೀರಿಯಲ್ 400 ಬೈಕಿಗೂ ಸಹ ಇದು ಪೈಪೋಟಿ ನೀಡಲಿದೆ.

ಇನ್ನು ಜಾವಾ ಬೈಕ್‌ಗಳು ದಶಕಗಳ ಹಿಂದೆ ಭಾರತದಲ್ಲಿ ಅಬ್ಬರಿಸಿ ಮರೆಯಾಗಿದ್ದಲ್ಲದೆ ಇದೀಗ ನವ ವಿನ್ಯಾಸ ಹಾಗೂ ನೂತನ ತಂತ್ರಜ್ಞಾನದೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಟ್ಟಿದ್ದು, ಜಾವಾ ಸಂಸ್ಥೆಯನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳುವ ಮೂಲಕ ಗ್ರಾಹಕರ ಅಭಿರುಚಿಗೆ ತಕ್ಕಂತೆ ಹೊಸ ಬೈಕ್ ನಿರ್ಮಿಸುವಲ್ಲಿ ಮಹೀಂದ್ರಾ ಅಂಗಸಂಸ್ಥೆಯಾದ ಕ್ಲಾಸಿಕ್ ಲೆಜೆಂಡ್ ಯಶಸ್ವಿಯಾಗಿದೆ.
MOST READ: ಬಜಾಜ್ ಅವೆಂಜರ್‌ಗೆ ಪೈಪೋಟಿಯಾಗಿ ಟಿವಿಎಸ್ ರೊನಿನ್ ಬಿಡುಗಡೆಗೆ ಸಿದ್ದತೆ

ಆದರೆ ಜಾವಾ ಹೊಸ ಬೈಕ್‌ಗಳಿಗೆ ಭಾರೀ ಬೇಡಿಕೆಯಿದ್ದರೂ ಸಹ ಬೇಡಿಕೆಗೆ ತಕ್ಕಂತೆ ನಿಗದಿತ ಅವಧಿಯಲ್ಲಿ ಬೈಕ್ ಉತ್ಪಾದನೆ ಮತ್ತು ವಿತರಣೆಯನ್ನು ವಿಳಂಬ ಮಾಡುವ ಕ್ಲಾಸಿಕ್ ಲೆಜೆಂಡ್ ಸಂಸ್ಥೆಯ ವಿರುದ್ಧ ಹಲವಾರು ಗ್ರಾಹಕರ ಅಸಮಾಧಾನವಿದ್ದು, ಇದರಿಂದ ಗ್ರಾಹಕರ ಬೇಡಿಕೆಗೆ ತಕ್ಕಂತೆ ನಿಗದಿತ ಅವಧಿಯಲ್ಲಿ ಬೈಕ್ ಉತ್ಪನ್ನಗಳನ್ನು ಪೂರೈಸುವ ನಿಟ್ಟಿನಲ್ಲಿ ಉತ್ಪಾದನೆ ಹೆಚ್ಚಿಸುವ ಅವಶ್ಯಕತೆಯಿದೆ.
Source: Rushlane


Click it and Unblock the Notifications








