ಹೊಸ ಬಣ್ಣದ ಆಯ್ಕೆಯನ್ನು ಹೊಂದಿದ ಕವಾಸಕಿ ನಿಂಜಾ 650 ಬೈಕ್
ಜನಪ್ರಿಯ ದ್ವಿಚಕ್ರ ವಾಹನ ಕಂಪನಿಯಾದ ಕವಾಸಕಿ ತನ್ನ ಬಿಎಸ್-6 ನಿಂಜಾ 650 ಬೈಕನ್ನು ಭಾರತೀಯ ಮಾರುಕಟ್ಟೆಯಲ್ಲಿ ಈ ವರ್ಷದ ಮೇ ತಿಂಗಳಲ್ಲಿ ಬಿಡುಗಡೆಗೊಳಿಸಿತ್ತು. ಹೊಸ ಕವಾಸಕಿ ನಿಂಜಾ 650 ಬೈಕಿನ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.6.24 ಲಕ್ಷಗಳಾಗಿದೆ.

2020ರ ಕವಾಸಕಿ ನಿಂಜಾ 650 ಬೈಕನ್ನು ಹಲವಾರು ಬದಲಾವಣೆಗಳೊಂದಿಗೆ ಬಿಡುಗಡೆಗೊಳಿಸಲಾಗಿತ್ತು. ಹೊಸ ಕವಾಸಕಿ ನಿಂಜಾ 650 ಬೈಕ್ ಆಗ್ರೇಸಿವ್ ಲುಕ್ ಅನ್ನು ಹೊಂದಿದೆ. ಈ ಆಗ್ರೇಸಿವ್ ಲುಕ್ ಹೊಂದಲು ಫೇರಿಂಗ್ ಅನ್ನು ನವೀಕರಿಸಲಾಗಿದೆ. ಇದು ಸ್ವಲ್ಪ ನವೀಕರಿಸಿದ ಗ್ರಾಫಿಕ್ಸ್ ಅನ್ನು ಸಹ ಹೊಂದಿದೆ. ಈ ಹೊಸ 2020ರ ಕವಾಸಕಿ ನಿಂಜಾ 650 ಬೈಕ್ ಆಕರ್ಷಕ ಲಕ್ ಅನ್ನು ಹೊಂದಿದೆ.

ಈ ನಿಂಜಾ 650 ಬೈಕ್ ಲೈಮ್ ಗ್ರೀನ್ ಎಬೊನಿ ಮತ್ತು ಪರ್ಲ್ ಫ್ಲಾಟ್ ಸ್ಟಾರ್‌ಡಸ್ಟ್ ವೈಟ್ ಎರಡು ಬಣ್ಣಗಳ ಆಯ್ಕೆಗಳನ್ನು ಹೊಂದಿದೆ. ಇದೀಗ ಲೈಮ್ ಗ್ರೀನ್ ಆವೃತ್ತಿಯಲ್ಲಿ ಪ್ಯಾಲೆಟ್ ಬಣ್ಣವನ್ನು ಸೇರಿಸಲಾಗಿದೆ.
MOST READ: ಬಿಡುಗಡೆಯಾಯ್ತು ಹೊಸ ಕವಾಸಕಿ ವಲ್ಕನ್ ಎಸ್ ಬೈಕ್

ಹೊಸ ಲೈಮ್ ಗ್ರೀನ್ ಬಣ್ಣದ ಜೊತೆ ಗ್ರೀನ್ ಮತ್ತು ಮ್ಯಾಟ್ ಗ್ರೇ ಶೇಡ್ ಅನ್ನು ಹೊಂದಿದೆ. ಹೊಸ ಬಣ್ಣದ ಆಯ್ಕೆಯ ಮಾದರಿಯಲ್ಲಿ ಮುಂಭಾಗ ಫೇರಿಂಗ್ ಮತ್ತು ಹಿಂಭಾಗದ ಪ್ಯಾನೆಲ್ ರೆಡ್ ಪಟ್ಟೆಗಳಂತಹ ವಿಭಿನ್ನ ಗ್ರಾಫಿಕ್ಸ್‌ನಿಂದ ಅಲಂಕರಿಸಲಾಗಿದೆ.

ಹೊಸ ಬಣ್ಣದ ಆಯ್ಕೆಯನ್ನು ಹೊರತುಪಡಿಸಿ ಇತರ ಬದಲಾವಣೆಗಳಲ್ಲಿ. ಕವಾಸಕಿ ಕಂಪನಿಯು ಕಳೆದ ವರ್ಷದ ಡಿಸೆಂಬರ್ ತಿಂಗಳಲ್ಲಿ ಈ ಹೊಸ ನಿಂಜಾ 650 ಬೈಕನ್ನು ಅನಾವರಣಗೊಳಿಸಿದ್ದರು.
MOST READ: ಬಿಡುಗಡೆಯಾಯ್ತು ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್‍ಮಾಸ್ಟರ್ ಬೈಕ್

ಹೊಸ ಝಡ್ 650 ಬೈಕಿನಲ್ಲಿ 649 ಸಿಸಿಯ ಲಿಕ್ವಿಡ್ ಕೂಲ್ಡ್ ಟ್ವಿನ್ ಬಿಎಸ್ 6 ಎಂಜಿನ್ ಅಳವಡಿಸಲಾಗಿದೆ. ಈ ಎಂಜಿನ್ 8,000 ಆರ್‍ಪಿಎಂನಲ್ಲಿ 68 ಬಿಹೆಚ್‍ಪಿ ಪವರ್ ಹಾಗೂ 6,700 ಆರ್‍ಪಿಎಂನಲ್ಲಿ 65.7 ಎನ್‍ಎಂ ಟಾರ್ಕ್ ಉತ್ಪಾದಿಸುತ್ತದೆ. ಈ ಎಂಜಿನ್‍ನೊಂದಿಗೆ 6 ಸ್ಪೀಡಿನ ಗೇರ್‍ಬಾಕ್ಸ್ ಅಳವಡಿಸಲಾಗಿದೆ.

ಈ ಬೈಕಿನಲ್ಲಿ ಎಲ್‍ಇಡಿ ಹೆಡ್‍ಲೈಟ್, 4.3 ಇಂಚಿನ ಟಿಎಫ್‍ಟಿ ಕಲರ್ ಇನ್ಸ್ ಟ್ರೂಮೆಂಟೆಷನ್, ಸ್ಮಾರ್ಟ್ ಫೋನ್ ಕನೆಕ್ಟಿವಿಟಿ ಹಾಗೂ ಡನ್‍ಲಪ್ ಸ್ಪೋರ್ಟ್ಸ್ ಮ್ಯಾಕ್ಸ್ ರೋಡ್‍ಸ್ಪೋರ್ಟ್ ಟಯರ್‍ಗಳಿವೆ.
MOST READ: ರಾಯಲ್ ಎನ್‍ಫೀಲ್ಡ್ ಬೈಕ್‍ಗಳಿಗೆ ಟಕ್ಕರ್ ನೀಡಲು ಸಜ್ಜಾದ ಹೊಸ ಹೋಂಡಾ ಬೈಕ್

ಈ ಬೈಕಿನಲ್ಲಿರುವ ಎಲ್‍ಇಡಿ ಹೆಡ್‍ಲೈಟ್ ಹಾಗೂ ಟಿಎಫ್‍ಟಿ ಇನ್ಸ್ ಟ್ರೂಮೆಂಟೆಷನ್ ಸ್ಕ್ರೀನ್‍ಗಳು ಈ ಬೈಕಿನ ಲುಕ್ ಅನ್ನು ಮತ್ತಷ್ಟು ಹೆಚ್ಚಿಸುತ್ತವೆ. ಈ ಬೈಕಿನಲ್ಲಿ ಕಡಿಮೆ ತೂಕದ ಚಾಸೀಸ್ ಹಾಗೂ ಆರಾಮದಾಯಕವಾದ ಸೀಟುಗಳನ್ನು ಅಳವಡಿಸಲಾಗಿದೆ.

ಸಸ್ಪೆಂಷನ್‍ಗಳಿಗಾಗಿ ಈ ಬೈಕಿನಲ್ಲಿ ಮುಂಭಾಗದಲ್ಲಿ 41 ಎಂಎಂನ ಟೆಲಿಸ್ಕೋಪಿಕ್ ಫೋರ್ಕ್ ಹಾಗೂ ಹಿಂಭಾಗದಲ್ಲಿ ಮೊನೊಶಾಕ್‍ಗಳಿವೆ. ಬ್ರೇಕಿಂಗ್‍ಗಳಿಗಾಗಿ ಮುಂಭಾಗದಲ್ಲಿ 300 ಎಂಎಂನ ಪೆಟಲ್ ಡಿಸ್ಕ್ ಹಾಗೂ ಹಿಂಭಾಗದಲ್ಲಿ 200 ಎಂಎಂ ಡಿಸ್ಕ್ ಬ್ರೇಕ್ ಅನ್ನು ಹೊಂದಿರಲಿದೆ.
MOST READ: ದುಬಾರಿಯಾಯ್ತು ಜನಪ್ರಿಯ ಬಿಎಸ್-6 ಯಮಹಾ ಎಂಟಿ-15 ಬೈಕ್

2020ರ ಕವಾಸಕಿ ನಿಂಜಾ 650 ಬೈಕಿನ ಮೈಲೇಜ್ ಅಂಕಿ ಅಂಶ ಕೂಡ ಹೆಚ್ಚಾಗಿದೆ. 2020ರ ಕವಾಸಕಿ ನಿಂಜಾ 650 ಭಾರತೀಯ ಮಾರುಕಟ್ಟೆಯಲ್ಲಿ ಹೋಂಡಾ ಸಿಬಿಆರ್650ಆರ್ ಬೈಕಿಗೆ ಪೈಪೋಟಿಯನ್ನು ನೀಡುತ್ತದೆ.

ಇನ್ನು ಕವಾಸಕಿ ಕಂಪನಿಯು ಭಾರತೀಯ ಮಾರುಕಟ್ಟೆಯಲ್ಲಿ ತನ್ನ ಇತರ ಜನಪ್ರಿಯ ಸೂಪರ್ ಬೈಕುಗಳನ್ನು ಕೂಡ ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸಿ ಬಿಡುಗಡೆಗೊಳಿಸಲಾಗುತ್ತಿದೆ.


Click it and Unblock the Notifications