ಭಾರತಕ್ಕೆ ಲಗ್ಗೆ ಇಡಲಿದೆ ಮತ್ತೊಂದು ರೆಟ್ರೋ-ಶೈಲಿಯ ಬೈಕ್
ಭಾರತೀಯ ಮಾರುಕಟ್ಟೆಯಲ್ಲಿ ರೆಟ್ರೋ-ಶೈಲಿಯ ಬೈಕುಗಳು ಇತ್ತೀಚಿನ ದಿನಗಳಲ್ಲಿ ಸಾಕಷ್ಟು ಜನಪ್ರಿಯತೆ ಗಳಿಸುತ್ತಿವೆ. ಭಾರತೀಯ ಮಾರುಕಟ್ಟೆಯ ರೆಟ್ರೋ-ಶೈಲಿಯ ವಿಭಾಗದಲ್ಲಿ ರಾಯಲ್ ಎನ್‌ಫೀಲ್ಡ್ ಹಲವು ದಶಕಗಳಿಂದ ಪಾರುಪತ್ಯ ಸಾಧಿಸುತ್ತಿದೆ.

ಭಾರತೀಯ ಮಾರುಕಟ್ಟೆಯಲ್ಲಿ ರಾಯಲ್ ಎನ್‌ಫೀಲ್ಡ್ ಬೈಕುಗಳಿಗೆ ಜಾವಾ ಬೈಕುಗಳು ಪ್ರಬಲ ಪೈಪೋಟಿಯನ್ನು ನೀಡುತ್ತದೆ. ಇತ್ತೀಚೆಗೆ ಹೋಂಡಾ ರಾಯಲ್ ಎನ್‌ಫೀಲ್ಡ್ ಬೈಕುಗಳಿಗೆ ಪೈಪೋಟಿ ನೀಡಲು ಹೈನೆಸ್ ಸಿಬಿ350 ಅನ್ನು ಬಿಡುಗಡೆಗೊಳಿಸಿತ್ತು. ಇನ್ನು ಕವಾಸಕಿ ಕಂಪನಿಯು ‘ಡಬ್ಲ್ಯು' ಸರಣಿಯ ಸುಂದರವಾದ ರೆಟ್ರೊ-ಶೈಲಿಯ ಬೈಕುಗಳನ್ನು ಒಳಗೊಂಡಿದೆ. ಈ ಸರಣಿಯ ಬೈಕುಗಳ ಎಂಜಿನ್‌ಗಳು 175 ಸಿಸಿ ಯಿಂದ 800 ಸಿಸಿ ವರೆಗೆ ಸಾಮರ್ಥ್ಯ ಹೊಂದಿವೆ.

ಇತ್ತೀಚಿನ ವರದಿ ಪ್ರಕಾರ, ಜಪಾನಿನ ತಯಾರಕರು ಮುಂದಿನ ವರ್ಷ ಭಾರತದಲ್ಲಿ ಈ ಸರಣಿಯ ಡಬ್ಲ್ಯು175 ಎಂಬ ಅತ್ಯಂತ ಚಿಕ್ಕ ಮಾದರಿಯನ್ನು ಬಿಡುಗಡೆಗೊಳಿಸಲು ಸಜ್ಜಾಗಿದೆ. ಇದು ಭಾರತೀಯ ಮಾರುಕಟ್ಟೆಯಲ್ಲಿ ಬ್ರ್ಯಾಂಡ್‌ನ ಅತ್ಯಂತ ಒಳ್ಳೆ ಬೈಕ್ ಆಗಿರುತ್ತದೆ.
MOST READ: ಬಿಡುಗಡೆಯಾಯ್ತು ಹೊಸ ಕವಾಸಕಿ ವಲ್ಕನ್ ಎಸ್ ಬೈಕ್

ಕವಾಸಕಿ ಡಬ್ಲ್ಯು 175 ಬೈಕ್ ಈಗಾಗಲೇ ಥೈಲ್ಯಾಂಡ್ ಮತ್ತು ಇಂಡೋನೇಷ್ಯಾದಂತಹ ಕೆಲವು ಅಂತರರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಮಾರಾಟದಲ್ಲಿದೆ, ಈ ಬೈಕನ್ನು ಭಾರತಕ್ಕೆ ಸಿಕೆಡಿ ಮಾರ್ಗಗಳ ಮೂಲಕ ತರಲಾಗುತ್ತದೆ ಎಂದು ನಾವು ನಿರೀಕ್ಷಿಸುತ್ತೇವೆ,

ಭಾರತದಲ್ಲಿ ಬೈಕು ಜೋಡಿಸುವುದು ಕವಾಸಕಿ ಕಂಪನಿಯ ವೆಚ್ಚವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಈ ಹೊಸ ಕವಾಸಕಿ ಡಬ್ಲ್ಯು175 ಬೈಕಿಗೆ ಸ್ಪರ್ಧಾತ್ಮಕವಾಗಿ ಬೆಲೆಯನ್ನು ನಿಗದಿಪಡಿಸಬಹುದು.
MOST READ: ಹೊಸ ಬಣ್ಣದ ಆಯ್ಕೆಯನ್ನು ಪಡೆದುಕೊಂಡ 2021ರ ಕವಾಸಕಿ ನಿಂಜಾ 1000 ಎಸ್‌ಎಕ್ಸ್ ಬೈಕ್

ಕೆಲವು ವರದಿಗಳ ಪ್ರಕಾರ, ಕವಾಸಕಿ ಡಬ್ಲ್ಯು 175 ಬೈಕಿನ ಬೆಲೆಯು ಸುಮಾರು ರೂ.1.4 ಲಕ್ಷಗಳಾಗಿದೆ. ಹೊಸ ಕವಾಸಕಿ ಡಬ್ಲ್ಯು175 ಬೈಕಿನಲ್ಲಿ 177 ಸಿಸಿ, ಏರ್-ಕೂಲ್ಡ್, ಎಸ್‌ಒಹೆಚ್‌ಸಿ ಎಂಜಿನ್ ಅನ್ನು ಅಳವಡಿಸಲಾಗಿದೆ.

ಈ ಎಂಜಿನ್ 13 ಬಿಹೆಚ್‍ಪಿ ಪವರ್ ಮತ್ತು 13.2 ಎನ್ಎಂ ಪೀಕ್ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ಅನ್ನು 5-ಸ್ಪೀಡ್ ಗೇರ್‌ಬಾಕ್ಸ್‌ಗೆ ಜೋಡಿಸಲಾಗಿದೆ. ಪವರ್ ಅಂಕಿಅಂಶಗಳು ಹೆಚ್ಚು ಪ್ರಭಾವಶಾಲಿಯಾಗಿಲ್ಲ, ಆದರೆ ಬೈಕು ಸಾಕಷ್ಟು ಹಗುರವಾಗಿರುತ್ತದೆ ಮತ್ತು ಆಕರ್ಷಕವಾಗಿದೆ.
MOST READ: ದುಬಾರಿಯಾಯ್ತು ಜನಪ್ರಿಯ ಬಜಾಜ್ ಪಲ್ಸರ್ ಎನ್ಎಸ್ ಬೈಕುಗಳು

ಈ ಡಬ್ಲ್ಯು175 ಬೈಕ್ ಫ್ಯೂಯಲ್ ಇಂಜೆಕ್ಷನ್ ಅನ್ನು ಸೇರಿಸಬಹುದು. ಈ ಬೈಕ್ ಅತ್ಯಂತ ಸರಳವಾದ ವಿನ್ಯಾಸವನ್ನು ಹೊಂದಿದೆ. ಈ ಬೈಕಿನಲ್ಲಿ ರೌಂಡ್ ಹೆಡ್‌ಲ್ಯಾಂಪ್, ಟಿಯರ್‌ಡ್ರಾಪ್ ಆಕಾರದ ಫ್ಯೂಯಲ್ ಟ್ಯಾಂಕ್, ವೈರ್-ಸ್ಪೋಕ್ ವ್ಹೀಲ್ಸ್ ಮತ್ತು ಪಿ-ಶೂಟರ್ ಎಕ್ಸಾಸ್ಟ್ ಅನ್ನು ಹೊಂದಿದೆ.

ಹೊಸ ಕವಾಸಕಿ ಡಬ್ಲ್ಯು175 ಬೈಕ್ ಫುಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್, ಸ್ಪೀಡೋ, ಓಡೋಮೀಟರ್ ಮತ್ತು ಟ್ರಿಪ್‌ಮೀಟರ್ ಜೊತೆಗೆ ಟೆಲ್-ಟೇಲ್ ಲ್ಯಾಂಪ್ ಅನ್ನು ಹೊಂದಿವೆ. ಈ ಬೈಕಿನಲ್ಲಿ ಸಾಂಪ್ರದಾಯಿಕ ಟೆಲಿಸ್ಕೋಪಿಕ್ ಫೋರ್ಕ್ಸ್ ಮತ್ತು ಡ್ಯುಯಲ್ ರಿಯರ್ ಶಾಕ್ ಅಬ್ಸಾರ್ಬರ್ ಗಳನ್ನು ಸಹ ಪಡೆಯುತ್ತದೆ.

ಹೊಸ ಕವಾಸಕಿ ಡಬ್ಲ್ಯು175 ಬೈಕ್ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಬಳಿಕ ಯಾವುದೇ ನೇರ ಪ್ರತಿಸ್ಪರ್ಧಿಗಳನ್ನು ಹೊಂದಿರುವುದಿಲ್ಲ. ಕೆಂದರೆ ಭಾರತದಲ್ಲಿ ರೆಟ್ರೊ-ಶೈಲಿಯ ಬೈಕ್‌ಗಳು 250 ಸಿಸಿಗಿಂತ ಹೆಚ್ಚಾಗಿದೆ. .


Click it and Unblock the Notifications