ಡೀಲರ್ ಬಳಿ ಕಾಣಿಸಿಕೊಂಡ ಹೊಸ ಕವಾಸಕಿ ನಿಂಜಾ 1000 ಎಸ್‌ಎಕ್ಸ್ ಬೈಕ್

ಕವಾಸಕಿ ಕಂಪನಿಯು ತನ್ನ 2021ರ ನಿಂಜಾ 1000 ಎಸ್‌ಎಕ್ಸ್ ಬೈಕನ್ನು ಭಾರತೀಯ ಮಾರುಕಟ್ಟೆಯಲ್ಲಿ ಇತ್ತೀಚೆಗೆ ಬಿಡುಗಡೆಗೊಳಿಸಿತ್ತು. ಈ ಹೊಸ ನಿಂಜಾ 1000 ಎಸ್‌ಎಕ್ಸ್ ಬೈಕ್ ಡೀಲರ್ ಬಳಿ ತಲುಪಲು ಪ್ರಾರಂಭವಾಗಿದೆ.

ಡೀಲರ್ ಬಳಿ ಕಾಣಿಸಿಕೊಂಡ ಹೊಸ ಕವಾಸಕಿ ನಿಂಜಾ 1000 ಎಸ್‌ಎಕ್ಸ್ ಬೈಕ್

ಈ ಹೊಸ ನಾಲ್ಕನೇ ತಲೆಮಾರಿನ ಕವಾಸಕಿ ನಿಂಜಾ 1000 ಎಸ್‌ಎಕ್ಸ್ ಬೈಕಿನ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.10.79 ಲಕ್ಷಗಳಾಗಿದೆ. ಕವಾಸಕಿ ನಿಂಜಾ 1000 ಎಸ್‌ಎಕ್ಸ್ ಭಾರತದ ಮೊದಲ ಸ್ಥಳೀಯವಾಗಿ ತಯಾರಿಸಿದ ಪ್ರೀಮಿಯಂ ಸ್ಪೋರ್ಟ್-ಟೂರರ್ ಬೈಕ್ ಆಗಿದೆ. ನವೀಕರಿಸಿದ 2021ರ ನಿಂಜಾ 1000 ಎಸ್‌ಎಕ್ಸ್ ಬೈಕ್ ಅಗ್ರೇಸಿವ್ ಲುಕ್ ಅನ್ನು ಹೊಂದಿದೆ. ಅಲ್ಲದೇ ಈ ಬೈಕಿನಲ್ಲಿ ಹಲವಾರು ಹೊಸ ಫೀಚರ್ ಗಳನ್ನು ಒಳಗೊಂಡಿದೆ. ಕವಾಸಕಿ ಬೈಕುಗಳ ಸರಣಿಯಲ್ಲಿ ಜನಪ್ರಿಯ ಮಾದರಿಗಳಲ್ಲಿ ಒಂದಾಗಿದೆ.

ಡೀಲರ್ ಬಳಿ ಕಾಣಿಸಿಕೊಂಡ ಹೊಸ ಕವಾಸಕಿ ನಿಂಜಾ 1000 ಎಸ್‌ಎಕ್ಸ್ ಬೈಕ್

ಹೊಸ ನಿಂಜಾ 1000 ಎಸ್‌ಎಕ್ಸ್ ಬೈಕ್ ಡೀಲರ್ ಬಳಿ ತಲುಪಲು ಪ್ರಾರಂಭವಾಗಿರುವುದರಿಂದ ಶೀಘ್ರದಲ್ಲೇ ಈ ಬೈಕಿನ ವಿತರಣೆಯನ್ನು ಪ್ರಾರಂಭಿಸಬಹುದು.2021ರ ಕವಾಸಕಿ ನಿಂಜಾ 1000 ಎಸ್‌ಎಕ್ಸ್ ಬೈಕ್ ಎಕ್ಸಾಸ್ಟ್ ಸಿಸ್ಟಂ ಅನ್ನು ಹೊಂದಿದೆ.

MOST READ: ಭಾರತಕ್ಕೆ ಲಗ್ಗೆ ಇಡಲಿದೆ ಜನಪ್ರಿಯ ಟ್ರಯಂಫ್ ಸ್ಟ್ರೀಟ್ ಟ್ರಿಪಲ್ ಆರ್ ಬೈಕ್

ಡೀಲರ್ ಬಳಿ ಕಾಣಿಸಿಕೊಂಡ ಹೊಸ ಕವಾಸಕಿ ನಿಂಜಾ 1000 ಎಸ್‌ಎಕ್ಸ್ ಬೈಕ್

2021ರ ಕವಾಸಕಿ ನಿಂಜಾ 1000 ಎಸ್‌ಎಕ್ಸ್ ಬೈಕಿನ ಸೈಡ್ ಪ್ಯಾನೆಲ್‌ಗಳು ಮತ್ತು ಸ್ವಲ್ಪ ನವೀಕರಿಸಿದ ಬೆಲ್ಲಿ ಪ್ಯಾನ್ ಸಹ ಸೇರಿವೆ. ಹೊಸ ನಿಂಜಾ 1000 ಎಸ್‌ಎಕ್ಸ್‌ನಲ್ಲಿ ನವೀಕರಿಸಿದ ಪ್ಯಾನೆಲ್ ಅನ್ನು ಹೊಂದಿದೆ.

ಡೀಲರ್ ಬಳಿ ಕಾಣಿಸಿಕೊಂಡ ಹೊಸ ಕವಾಸಕಿ ನಿಂಜಾ 1000 ಎಸ್‌ಎಕ್ಸ್ ಬೈಕ್

ಇನ್ನು ಈ ಹೊಸ ಬೈಕಿನಲ್ಲಿ ಆ್ಯಪ್ ಮೂಲಕ ಸ್ಮಾರ್ಟ್‍ ಫೋನ್ ಕನೆಕ್ಟಿವಿಟಿ ಮಾಡುವ ಹೊಸ 4.3-ಇಂಚಿನ ಟಿಎಫ್ಟಿ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಅನ್ನು ಹೊಂದಿದೆ. ಈ ಬೈಕಿನಲ್ಲಿ ಎಲ್ಇಡಿ ಲೈಟಿಂಗ್ ಅನ್ನು ಹೊಂದಿದೆ. ಇನ್ನು ಹೊಸ ನಿಂಜಾ 1000 ಎಸ್‌ಎಕ್ಸ್ ಬೈಕ್ 4-ಹಂತದ ಹೊಂದಾಣಿಕೆಯೊಂದಿಗೆ ವಿಂಡ್‌ಸ್ಕ್ರೀನ್ ಅನ್ನು ಹೊಂದಿದೆ.

MOST READ: ಡೀಲರ್ ಬಳಿ ತಲುಪಿದ ಹೊಸ ಜಾವಾ ಬೈಕುಗಳು

ಡೀಲರ್ ಬಳಿ ಕಾಣಿಸಿಕೊಂಡ ಹೊಸ ಕವಾಸಕಿ ನಿಂಜಾ 1000 ಎಸ್‌ಎಕ್ಸ್ ಬೈಕ್

2021ರ ಕವಾಸಕಿ ನಿಂಜಾ 1000 ಎಸ್‌ಎಕ್ಸ್ ಬೈಕಿನ ರೈಡರ್ ಮತ್ತು ಪಿಲಿಯನ್ ಎರಡಕ್ಕೂ ನವೀಕರಿಸಿದ ಎರ್ಗಾನೊಮಿಕ್ಸ್ ಒಳಗೊಂಡಿದೆ. ರೈಡರ್ ಮತ್ತು ಪಿಲಿಯನ್ ಸೀಟುಗಳು ದಪ್ಪವಿದೆ. ರೈಡರ್ ಸೀಟನ್ನು ಮೊದಲಗಿಂತಲೂ ಅಗಲವಾಗಿದೆ.

ಡೀಲರ್ ಬಳಿ ಕಾಣಿಸಿಕೊಂಡ ಹೊಸ ಕವಾಸಕಿ ನಿಂಜಾ 1000 ಎಸ್‌ಎಕ್ಸ್ ಬೈಕ್

ಹೊಸ ಕವಾಸಕಿ ನಿಂಜಾ 1000 ಎಸ್‌ಎಕ್ಸ್ ಬೈಕಿನಲ್ಲಿ 1,043 ಸಿಸಿ ಲಿಕ್ವಿಡ್-ಕೂಲ್ಡ್ ಇನ್-ಲೈನ್ ನಾಲ್ಕು ಸಿಲಿಂಡರ್ ಎಂಜಿನ್‌ ಅನ್ನು ಹೊಂದಿದೆ. ಈ ಎಂಜಿನ್ 10,000 ಆರ್‍ಪಿಎಂನಲ್ಲಿ 140 ಬಿಹೆಚ್‍ಪಿ ಪವರ್ ಮತ್ತು 8,000 ಆರ್‍ಪಿಎಂನಲ್ಲಿ 111 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ಅನ್ನು 6-ಸ್ಪೀಡ್ ಗೇರ್‌ಬಾಕ್ಸ್‌ಗೆ ಜೋಡಿಸಲಾಗಿದೆ.

MOST READ: ಹೊಸ ಬಿಎಂಡಬ್ಲ್ಯೂ ಆರ್ 18 ಕ್ರೂಸರ್ ಬೈಕ್ ಖರೀದಿಗೆ ಬುಕ್ಕಿಂಗ್ ಆರಂಭ

ಡೀಲರ್ ಬಳಿ ಕಾಣಿಸಿಕೊಂಡ ಹೊಸ ಕವಾಸಕಿ ನಿಂಜಾ 1000 ಎಸ್‌ಎಕ್ಸ್ ಬೈಕ್

ಮೇಲಿನ ಬದಲಾವಣೆಗಳು ಮತ್ತು ನವೀಕರಣಗಳ ಹೊರತಾಗಿ, ಹೊಸ ಕವಾಸಕಿ ನಿಂಜಾ 1000 ಎಸ್‌ಎಕ್ಸ್ ಸಹ ಹೊಸ ಎಲೆಕ್ಟ್ರಾನಿಕ್ಸ್‌ ಆಯ್ಜೆಯನ್ನು ಹೊಂದಿದೆ. ಇದರಲ್ಲಿ ಎಲೆಕ್ಟ್ರಾನಿಕ್ ಥ್ರೊಟಲ್, ಎಲೆಕ್ಟ್ರಾನಿಕ್ ಕ್ರೂಸ್ ಕಂಟ್ರೋಲ್, ಕ್ವಿಕ್-ಶಿಫ್ಟರ್, ಕಾರ್ನರಿಂಗ್ ಮ್ಯಾನೇಜ್ಮೆಂಟ್ ಫಂಕ್ಷನ್, ಇಂಟೆಲಿಜೆಂಟ್ ಆಂಟಿ-ಲಾಕ್ ಬ್ರೇಕ್ ಸಿಸ್ಟಂ, ಮಲ್ಟಿಪಲ್ ರೈಡಿಂಗ್ ಮೋಡ್ ಮತ್ತು 3-ಹಂತದ ಟ್ರಾಕ್ಷನ್ ಸಿಸ್ಟಂ ಒಳಗೊಂಡಿದೆ.

ಡೀಲರ್ ಬಳಿ ಕಾಣಿಸಿಕೊಂಡ ಹೊಸ ಕವಾಸಕಿ ನಿಂಜಾ 1000 ಎಸ್‌ಎಕ್ಸ್ ಬೈಕ್

2021ರ ಕವಾಸಕಿ ನಿಂಜಾ 1000 ಎಸ್‌ಎಕ್ಸ್ ಬೈಕ್ ಮೆಟಾಲಿಕ್ ಗ್ರ್ಯಾಫೈಟ್ ಗ್ರೇ/ಮೆಟಾಲಿಕ್ ಡಯಾಬ್ಲೊ ಬ್ಲ್ಯಾಕ್ ಮತ್ತು ಎಮರಾಲ್ಡ್ ಗ್ರೀನ್, ಲೋಹೀಯ ಕಾರ್ಬನ್ ಗ್ರೇ ಎಂಬ ಎರಡು ಬಣ್ಣಗಳ ಆಯ್ಕೆಯಲ್ಲಿ ಲಭ್ಯವಿದೆ. ಕವಾಸಕಿ ನಿಂಜಾ 1000 ಎಸ್‌ಎಕ್ಸ್ ಭಾರತದ ಮೊದಲ ಸ್ಥಳೀಯವಾಗಿ ತಯಾರಿಸಿದ ಪ್ರೀಮಿಯಂ ಸ್ಪೋರ್ಟ್-ಟೂರರ್ ಮಾದರಿಯಾಗಿದೆ.

More from DriveSpark

Article Published On: Monday, June 22, 2020, 10:10 [IST]
English summary
Kawasaki Ninja 1000SX starts reaching dealerships. Read In Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+