ಬಿಎಸ್-6 ಎಂಜಿನ್‍ನಲ್ಲಿ ಬಿಡುಗಡೆಯಾಯ್ತು ಕವಾಸಕಿ ನಿಂಜಾ 650 ಬೈಕ್
ಕವಾಸಕಿ ಕಂಪನಿಯು ತನ್ನ ಬಿಎಸ್-6 ನಿಂಜಾ 650 ಬೈಕನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದೆ. ಈ ಹೊಸ ನಿಂಜಾ 650 ಬೈಕಿನ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.6.24 ಲಕ್ಷಗಳಾಗಿದೆ.

2020ರ ಕವಾಸಕಿ ನಿಂಜಾ 650 ಬೈಕನ್ನು ಹಲವಾರು ಬದಲಾವಣೆಗಳೊಂದಿಗೆ ಬಿಡುಗಡೆಗೊಳಿಸಲಾಗಿದೆ. ಹೊಸ ಕವಾಸಕಿ ನಿಂಜಾ 650 ಬೈಕ್ ಆಗ್ರೇಸಿವ್ ಲುಕ್ ಅನ್ನು ಹೊಂದಿದೆ. ಈ ಆಗ್ರೇಸಿವ್ ಲುಕ್ ಹೊಂದಲು ಫೇರಿಂಗ್ ಅನ್ನು ನವೀಕರಿಸಲಾಗಿದೆ. ಇದು ಸ್ವಲ್ಪ ನವೀಕರಿಸಿದ ಗ್ರಾಫಿಕ್ಸ್ ಅನ್ನು ಸಹ ಹೊಂದಿದೆ. ಈ ಹೊಸ 2020ರ ಕವಾಸಕಿ ನಿಂಜಾ 650 ಬೈಕ್ ಆಕರ್ಷಕ ಲಕ್ ಅನ್ನು ಹೊಂದಿದೆ.

ಕವಾಸಕಿ ಕಂಪನಿಯು ಕಳೆದ ವರ್ಷದ ಡಿಸೆಂಬರ್ ತಿಂಗಳಲ್ಲಿ ಹೊಸ 650 ಬೈಕನ್ನು ಅನಾವರಣಗೊಳಿಸಿದ್ದರು. ಹೂಸ ನಿಂಜಾ 650 ಬೈಕ್ ಲೈಮ್ ಗ್ರೀನ್ ಎಬೊನಿ ಮತ್ತು ಪರ್ಲ್ ಫ್ಲಾಟ್ ಸ್ಟಾರ್‌ಡಸ್ಟ್ ವೈಟ್ ಎರಡು ಬಣ್ಣಗಳ ಆಯ್ಕೆಗಳಲ್ಲಿ ಲಭ್ಯವಿರಲಿದೆ.
MOST READ: ಹೊಸ ಬಿಎಂಡಬ್ಲ್ಯೂ ಆರ್ 18 ಕ್ರೂಸರ್ ಬೈಕ್ ಖರೀದಿಗೆ ಬುಕ್ಕಿಂಗ್ ಆರಂಭ

ಹೊಸ ಝಡ್ 650 ಬೈಕಿನಲ್ಲಿ 649 ಸಿಸಿಯ ಲಿಕ್ವಿಡ್ ಕೂಲ್ಡ್ ಟ್ವಿನ್ ಬಿಎಸ್ 6 ಎಂಜಿನ್ ಅಳವಡಿಸಲಾಗಿದೆ. ಈ ಎಂಜಿನ್ 8,000 ಆರ್‍ಪಿಎಂನಲ್ಲಿ 68 ಬಿಹೆಚ್‍ಪಿ ಪವರ್ ಹಾಗೂ 6,700 ಆರ್‍ಪಿಎಂನಲ್ಲಿ 65.7 ಎನ್‍ಎಂ ಟಾರ್ಕ್ ಉತ್ಪಾದಿಸುತ್ತದೆ. ಈ ಎಂಜಿನ್‍ನೊಂದಿಗೆ 6 ಸ್ಪೀಡಿನ ಗೇರ್‍ಬಾಕ್ಸ್ ಅಳವಡಿಸಲಾಗಿದೆ.

ಈ ಬೈಕಿನಲ್ಲಿ ಎಲ್‍ಇಡಿ ಹೆಡ್‍ಲೈಟ್, 4.3 ಇಂಚಿನ ಟಿಎಫ್‍ಟಿ ಕಲರ್ ಇನ್ಸ್ ಟ್ರೂಮೆಂಟೆಷನ್, ಸ್ಮಾರ್ಟ್ ಫೋನ್ ಕನೆಕ್ಟಿವಿಟಿ ಹಾಗೂ ಡನ್‍ಲಪ್ ಸ್ಪೋರ್ಟ್ಸ್ ಮ್ಯಾಕ್ಸ್ ರೋಡ್‍ಸ್ಪೋರ್ಟ್ ಟಯರ್‍ಗಳಿವೆ.
MOST READ: ಬಹಿರಂಗವಾಯ್ತು ಬಿಎಸ್-6 ಹೀರೋ ಎಕ್ಸ್‌ಪಲ್ಸ್ 200 ಬೈಕಿನ ಮಾಹಿತಿ

ಈ ಬೈಕಿನಲ್ಲಿರುವ ಎಲ್‍ಇಡಿ ಹೆಡ್‍ಲೈಟ್ ಹಾಗೂ ಟಿಎಫ್‍ಟಿ ಇನ್ಸ್ ಟ್ರೂಮೆಂಟೆಷನ್ ಸ್ಕ್ರೀನ್‍ಗಳು ಈ ಬೈಕಿನ ಲುಕ್ ಅನ್ನು ಮತ್ತಷ್ಟು ಹೆಚ್ಚಿಸುತ್ತವೆ. ಈ ಬೈಕಿನಲ್ಲಿ ಕಡಿಮೆ ತೂಕದ ಚಾಸೀಸ್ ಹಾಗೂ ಆರಾಮದಾಯಕವಾದ ಸೀಟುಗಳನ್ನು ಅಳವಡಿಸಲಾಗಿದೆ.

ಸಸ್ಪೆಂಷನ್‍ಗಳಿಗಾಗಿ ಈ ಬೈಕಿನಲ್ಲಿ ಮುಂಭಾಗದಲ್ಲಿ 41 ಎಂಎಂನ ಟೆಲಿಸ್ಕೋಪಿಕ್ ಫೋರ್ಕ್ ಹಾಗೂ ಹಿಂಭಾಗದಲ್ಲಿ ಮೊನೊಶಾಕ್‍ಗಳಿವೆ. ಬ್ರೇಕಿಂಗ್‍ಗಳಿಗಾಗಿ ಮುಂಭಾಗದಲ್ಲಿ 300 ಎಂಎಂನ ಪೆಟಲ್ ಡಿಸ್ಕ್ ಹಾಗೂ ಹಿಂಭಾಗದಲ್ಲಿ 200 ಎಂಎಂ ಡಿಸ್ಕ್ ಬ್ರೇಕ್ ಅನ್ನು ಹೊಂದಿರಲಿದೆ.
MOST READ: ಬಿಡುಗಡೆಯಾಯ್ತು ಬಹುನೀರಿಕ್ಷಿತ ಹೊಸ ಯಮಹಾ ಬೈಕುಗಳ ಟೀಸರ್

ಹೂಸ ನಿಂಜಾ 650 ಬೈಕಿಗೆ ಆನ್‌ಲೈನ್‌ನಲ್ಲಿ ಬುಕ್ಕಿಂಗ್ ಅನ್ನು ಪ್ರಾರಂಭಿಸಲಾಗಿದೆ. ಸದ್ಯ ಕರೋನಾ ವೈರಸ್ ಭೀತಿಯಿಂದ ದೇಶಾದ್ಯಂತ ಲಾಕ್ ಡೌನ್ ಮಾಡಲಾಗಿದೆ. ಲಾಕ್‌ಡೌನ್ ಮುಕ್ತಾಯವಾದಾಗ ಈ ಬೈಕನ್ನು ಗ್ರಾಹಕರಿಗೆ ವಿತರಿಸಬಹುದು.

2020ರ ಕವಾಸಕಿ ನಿಂಜಾ 650 ಬೈಕಿನ ಮೈಲೇಜ್ ಅಂಕಿ ಅಂಶ ಕೂಡ ಹೆಚ್ಚಾಗಿದೆ. ಕವಾಸಕಿ ಕಂಪನಿಯು ಭಾರತೀಯ ಮಾರುಕಟ್ಟೆಯಲ್ಲಿ ತನ್ನ ಇತರ ಜನಪ್ರಿಯ ಸೂಪರ್ ಬೈಕುಗಳ ಬುಕ್ಕಿಂಗ್ ಅನ್ನು ಕೂಡ ಪ್ರಾರಂಭಿಸಿದೆ.


Click it and Unblock the Notifications