ಕವಾಸಕಿ ಝಡ್‍ಎಕ್ಸ್ 25ಆರ್ ಬೈಕ್ ಬಿಡುಗಡೆಯನ್ನು ಕಾಡಿದ ಕರೋನಾ ವೈರಸ್‍

ಚೀನಾದಿಂದ ಹರಡಲಾರಂಭಿಸಿದ ಕರೋನಾ ವೈರಸ್‌ ಇಂದು ಜಗತ್ತಿನಾದ್ಯಂತ ಆತಂಕವನ್ನು ಸೃಷ್ಟಿಸುತ್ತಿದೆ. ಜಗತ್ತನ್ನೇ ತಲ್ಲಣಗೊಳಿಸಿರುವ ಕರೋನಾ ವೈರಸ್‌ ಭೀತಿಯಿಂದಾಗಿ ಹಲವಾರು ವಾಹನಾ ಉತ್ಪಾದನಾ ಕಂಪನಿಗಳು ಉತ್ಪಾದನೆಯನ್ನು ಸ್ಥಗಿತಗೊಳಿಸಲಾಗಿದೆ.

ಕವಾಸಕಿ ಝಡ್‍ಎಕ್ಸ್ 25ಆರ್ ಬೈಕ್ ಬಿಡುಗಡೆಯನ್ನು ಕಾಡಿದ ಕರೋನಾ ವೈರಸ್‍

ಇದರೊಂದಿಗೆ ಕವಾಸಕಿ ಕಂಪನಿಗೂ ಕರೋನಾ ವೈರಸ್ ಬಿಸಿ ತಟ್ಟಿದೆ. ಇದೀಗ ಕವಾಸಕಿ ಕಂಪನಿಯು ಕರೋನಾ ವೈರಸ್ ಭೀತಿಯಿಂದ ಝಡ್‍ಎಕ್ಸ್ 25ಆರ್ ಬೈಕು ಬಿಡುಗಡೆಗೊಳಿಸುವುದನ್ನು ಅನಿರ್ದಿಷ್ಟವಾಗಿ ಮುಂದೂಡಲಾಗಿದೆ. ಕ್ವಾರ್ಟರ್ ಲೀಟರ್ ಸ್ಪೋರ್ಟ್ಸ್ ಬೈಕ್ ಅನ್ನು ಇಂಡೋನೇಷ್ಯಾದಲ್ಲಿ ಏಪ್ರಿಲ್ 4ರಂದು ಬಿಡುಗಡೆ ಮಾಡಲು ಕಂಪನಿ ಯೋಜಿಸಿತ್ತು. ಆದರೆ ಕರೋನಾ ವೈರಸ್ ಬೀತಿಯಿಂದ ಕ್ವಾರ್ಟರ್ ಲೀಟರ್ ಸ್ಪೋರ್ಟ್ಸ್ ಬೈಕಿನ ಬಿಡುಗಡೆಯು ಮುಂದೂಡಲಾಗಿರುವುದನ್ನು ಕಂಪನಿಯ ಅಧಿಕೃತ ಯೂಟ್ಯೂಬ್ ಚಾನೆಲ್‍ ನಲ್ಲಿ ಪೋಸ್ಟ್ ಮಾಡಲಾಗಿದೆ.

ಕವಾಸಕಿ ಝಡ್‍ಎಕ್ಸ್ 25ಆರ್ ಬೈಕ್ ಬಿಡುಗಡೆಯನ್ನು ಕಾಡಿದ ಕರೋನಾ ವೈರಸ್‍

ಕಂಪನಿಯು 2019ರ ಟೋಕಿಯೊ ಮೋಟಾರ್ ಶೋನಲ್ಲಿ ಸಂಪೂರ್ಣ ಫೇರ್ಡ್ ಕವಾಸಕಿ ಝಡ್‍ಎಕ್ಸ್ 25ಆರ್ ಬೈಕನ್ನು ಮೊದಲ ಬಾರಿಗೆ ಪ್ರದರ್ಶಿಸಿತ್ತು. ಈ ಬೈಕ್ ತನ್ನ ಆಗ್ರೆಸಿವ್ ಸ್ಟೈಲಿಂಗ್ ಮತ್ತು ಇನ್-ಲೈನ್ ನಾಲ್ಕು ಎಂಜಿನ್ ನಿಂದ ಗ್ರಾಹಕರ ಗಮನಸೆಳೆಯಿತು.

ಕವಾಸಕಿ ಝಡ್‍ಎಕ್ಸ್ 25ಆರ್ ಬೈಕ್ ಬಿಡುಗಡೆಯನ್ನು ಕಾಡಿದ ಕರೋನಾ ವೈರಸ್‍

ಕವಾಸಕಿ ಝಡ್‍ಎಕ್ಸ್ 25ಆರ್ ಬೈಕ್ 249 ಸಿಸಿ, ಲಿಕ್ವಿಡ್-ಕೂಲ್ಡ್, ಇನ್-ಲೈನ್ ನಾಲ್ಕು ಸಿಲಿಂಡರ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ ಬಿಹೆಚ್‍ಪಿ ಪವರ್ ಮತ್ತು ಟಾರ್ಕ್ ಅಂಕಿ ಅಂಶಗಳು ಇನ್ನು ಕೂಡ ಬಹಿರಂಗಗೊಂಡಿಲ್ಲ. ಈ ಎಂಜಿನ್ ಸುಮಾರು 40 ಬಿಹೆಚ್‌ಪಿ ಪವರ್ ಅನ್ನು ಉತ್ಪಾದಿಸುತ್ತದೆ ಎಂದು ನಿರೀಕ್ಷಿಸುತ್ತೇವೆ. ಈ ಎಂಜಿನ್ ನೊಂದಿಗೆ 6 ಸ್ಪೀಡ್ ಗೇರ್‌ಬಾಕ್ಸ್‌ ಅನ್ನು ಅಳವಡಿಸಲಾಗಿದೆ. ಇದರೊಂದಿಗೆ ಸ್ಲಿಪ್ಪರ್ ಅಸಿಸ್ಟ್ ಕ್ಲಚ್ ಮತ್ತು ಕ್ವಿಕ್‌ಶಿಫ್ಟರ್ ಸಿಸ್ಟಂ ಅನ್ನು ಅಳವಡಿಸಲಾಗಿದೆ.

ಕವಾಸಕಿ ಝಡ್‍ಎಕ್ಸ್ 25ಆರ್ ಬೈಕ್ ಬಿಡುಗಡೆಯನ್ನು ಕಾಡಿದ ಕರೋನಾ ವೈರಸ್‍

ಕವಾಸಕಿ ಝಡ್‍ಎಕ್ಸ್ 25ಆರ್ ಟ್ವಿನ್ ಪಾಡ್ ಹೆಡ್‍ ಲ್ಯಾಂಪ್, ಫುಲ್ ಫೇರಿಂಗ್ ಮತ್ತು ಡ್ಯುಯಲ್ ಟೋನ್ ಬಣ್ಣದ ಆಯ್ಕೆಯನ್ನು ಹೊಂದಿದೆ. ಈ ಬೈಕ್ ಮಸ್ಕ್ಯುಲರ್ ಟ್ಯಾಂಕ್, ಅಂಡರ್ಬೆಲ್ಲಿ ಎಕ್ಸಾಸ್ಟ್ ಮತ್ತು ಕಡಿಮೆ ಸೆಟ್ ಕ್ಲಿಪ್-ಆನ್ ಹ್ಯಾಂಡಲ್‌ಬಾರ್‌ ಅನ್ನು ಹೊಂದಿದೆ.

ಕವಾಸಕಿ ಝಡ್‍ಎಕ್ಸ್ 25ಆರ್ ಬೈಕ್ ಬಿಡುಗಡೆಯನ್ನು ಕಾಡಿದ ಕರೋನಾ ವೈರಸ್‍

ಈ ಬೈಕಿನ ಮುಂಭಾಗದಲ್ಲಿ 37 ಎಂಎಂ ಅಪ್‌ಸೈಡ್-ಡೌನ್ ಶೋವಾ ಪ್ರತ್ಯೇಕ ಫಂಕ್ಷನ್ ಫೋರ್ಕ್‌ ಅನ್ನು ಹೊಂದಿದೆ. ಈ ಬೈಕಿನ ಹಿಂಭಾಗದಲ್ಲಿ ಬ್ಯಾಕ್-ಲಿಂಕ್ ಸಂಸೆಕ್ಷನ್ ಅನ್ನು ಹೊಂದಿದೆ. ಈ ಬೈಕಿನಲ್ಲಿ ಸುರಕ್ಷತೆಗಾಗಿ ಮುಂಭಾಗ ಮತ್ತು ಹಿಂಭಾಗದ ಟಯರ್‍ಗಳಲ್ಲಿ ಡಿಸ್ಕ್ ಬ್ರೇಕ್ ಗಳನ್ನು ಅಳವಡಿಸಲಾಗಿದೆ.

MOST READ: ಅನಾವರಣಗೊಂಡ ಹೊಸ ಹೋಂಡಾ ಸಿಬಿಆರ್ 250 ಆರ್‌ಆರ್ ಬೈಕ್

ಕವಾಸಕಿ ಝಡ್‍ಎಕ್ಸ್ 25ಆರ್ ಬೈಕ್ ಬಿಡುಗಡೆಯನ್ನು ಕಾಡಿದ ಕರೋನಾ ವೈರಸ್‍

ಕವಾಸಕಿ ಝಡ್‍ಎಕ್ಸ್ 25ಆರ್ ಬೈಕಿನಲ್ಲಿ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಅನ್ನು ಅಳವಡಿಸಲಾಗಿದೆ. ಇದರೊಂದಿಗೆ ಅನಲಾಗ್ ಟ್ಯಾಕೋಮೀಟರ್ ಮತ್ತು ಸೆಮಿ ಡಿಜೆಟಲ್ ಯುನಿಟ್ ಸಿಸ್ಟಂ ಅನ್ನು ಹೊಂದಿರಲಿದೆ. ಕವಾಸಕಿ ಝಡ್‍ಎಕ್ಸ್ 25ಆರ್ ಎಲೆಕ್ತ್ರಾನಿಕ್ ರೈಡರ್ ಅನ್ನು ಕೂಡ ಒಳಗೊಂಡಿದೆ. ಇವುಗಳೊಂದಿಗೆ ಡ್ಯುಯಲ್ ಚಾನೆಲ್ ಎಬಿಎಸ್ ಮತ್ತು ಟ್ರ್ಯಾಕ್ಷನ್ ಕಂಟ್ರೋಲ್ ಅನ್ನು ಹೊಂದಿದೆ.

MOST READ: ಬಿಎಸ್-6 ಹಾರ್ಲೆ ಡೇವಿಡ್ಸನ್ 1200 ಕಸ್ಟಮ್ ಬೈಕ್ ಬಿಡುಗಡೆ

ಕವಾಸಕಿ ಝಡ್‍ಎಕ್ಸ್ 25ಆರ್ ಬೈಕ್ ಭಾರತದಲ್ಲಿ ಬಿಡುಗಡೆಯಾದ ಬಳಿಕ ಹೋಂಡಾ ಸಿಬಿಆರ್ 250 ಆರ್ಆರ್ ಬೈಕಿಗೆ ನೇರ ಪೈಪೋಟಿಯನ್ನು ನೀಡುತ್ತದೆ. ಈ ಎರಡು ಬೈಕುಗಳು ಉತ್ತಮ ಕಾರ್ಯಕ್ಷಮತೆಯನ್ನು ಹೊಂದಿರುವುದರಿಂದ ಪ್ರಬಲ ಪೈಪೋಟಿಯನ್ನು ನೀಡುತ್ತದೆ.

MOST READ: ದಾಖಲೆ ಪ್ರಮಾಣದಲ್ಲಿ ಮಾರಾಟವಾಗುತ್ತಿವೆ ಬಿಎಸ್-6 ರಾಯಲ್ ಎನ್‍‍ಫೀಲ್ಡ್ ಹಿಮಾಲಯನ್ ಬೈಕ್

ಕವಾಸಕಿ ಝಡ್‍ಎಕ್ಸ್ 25ಆರ್ ಬೈಕ್ ಬಿಡುಗಡೆಯನ್ನು ಕಾಡಿದ ಕರೋನಾ ವೈರಸ್‍

ಕವಾಸಕಿ ಕಂಪನಿಯು ಕರೋನಾ ವೈರಸ್ ಭೀತಿಯಿಂದ ಝಡ್‍ಎಕ್ಸ್ 25ಆರ್ ಬೈಕು ಬಿಡುಗಡೆಗೊಳಿಸುವುದನ್ನು ಅನಿರ್ದಿಷ್ಟವಾಗಿ ಮುಂದೂಡಿದರೂ ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಎಂದು ನಿರೀಕ್ಷಿಸುತ್ತೇವೆ. ಝಡ್‍ಎಕ್ಸ್ 25ಆರ್ ಬೈಕು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿದಯೇ ಎಂಬುದು ಇನ್ನೂ ತಿಳಿದುಬಂದಿಲ್ಲ.

More from DriveSpark

Article Published On: Tuesday, March 31, 2020, 15:21 [IST]
English summary
Kawasaki ZX-25R Global Launch Delayed Due To Covid-19 Pandemic. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+