Just In
- 14 hrs ago ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- 14 hrs ago ಟೊಯೊಟಾದ ಫಾರ್ಚ್ಯೂನರ್ನಲ್ಲೂ ಸಿಗಲಿದೆ ಹೈಬ್ರಿಡ್: ಇದರ ಮೈಲೇಜ್ ಕೇಳಿ ಸುಸ್ತಾದ ಗ್ರಾಹಕರು!
- 15 hrs ago ನಿಜವಾದ ಮಾನವತಾವಾದಿ: ನಟ ರಾಘವ ಲಾರೆನ್ಸ್ರಿಂದ ವಿಶೇಷ ಚೇತನ ಸಾಧಕರಿಗೆ 13 ಟಿವಿಎಸ್ ಸ್ಕೂಟರ್ ಗಿಫ್ಟ್
- 17 hrs ago ಜನ ಕ್ಯೂ ನಿಂತು ಖರೀದಿಸುತ್ತಿದ್ದ ಮಾರುತಿ ಸ್ವಿಫ್ಟ್ ಕಾರು ಮಾರಾಟದಲ್ಲಿ ಕುಸಿತ: ಕಾರಣವೇನು?
Don't Miss!
- News India weather: ಈ ಭಾಗಗಳಲ್ಲಿ ಮುಂದಿನ ಐದು ದಿನ ಗುಡುಗು, ಮಿಂಚು ಸಹಿತ ಬಿರುಗಾಳಿ ಮಳೆ ಮುನ್ಸೂಚನೆ
- Technology ಇಂದು ಮತ್ತೆ ಮೊಟೊರೊಲಾ ಎಡ್ಜ್ 50 ಪ್ರೊ ಫೋನಿನ ಸ್ಪೆಷಲ್ ಸೇಲ್!..ಡಿಸ್ಕೌಂಟ್ ಎಷ್ಟು?
- Sports PBKS vs MI IPL 2024: ಮತ್ತೊಮ್ಮೆ ಕೊನೆಯ ಓವರ್ನಲ್ಲಿ ಮುಗ್ಗರಿಸಿದ ಪಂಜಾಬ್ ಕಿಂಗ್ಸ್ ಪ್ಲೇಆಫ್ ಸನ್ನಿವೇಶ ಹೇಗಿದೆ?
- Finance ಕಚ್ಚಾ ತೈಲ ಆಮದು ಗಣನೀಯ ಇಳಿಕೆ, ಪೆಟ್ರೋಲ್ ಡಿಸೇಲ್ ಬೆಲೆ ಹೆಚ್ಚಾಗುತ್ತಾ?
- Lifestyle ಶುಕ್ರವಾರ ವೈಭವ ಲಕ್ಷ್ಮಿ ವ್ರತ ಮಾಡೋದೇಕೆ..? ಹೇಗೆ ಆಚರಿಸಬೇಕು ಎಂಬ ಮಾಹಿತಿ ಇಲ್ಲಿದೆ..!
- Movies 'ಮಾರ್ಟಿನ್' ಚಿತ್ರದ ನಿರ್ಮಾಪಕ- ನಿರ್ದೇಶಕರ ಮಧ್ಯೆ ಕಿರಿಕ್: ಕೊನೆಗೂ ಸಿಕ್ತು ಸ್ಪಷ್ಟನೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅನಾವರಣವಾಯ್ತು ಕವಾಸಕಿ ನಿಂಜಾ ಝಡ್ಎಕ್ಸ್ 25ಆರ್ ರೇಸರ್ ಕಸ್ಟಮ್ ಬೈಕ್
ಕವಾಸಕಿ ಕಂಪನಿಯು ಕರೋನಾ ವೈರಸ್ ಭೀತಿಯಿಂದ ನಿಂಜಾ ಝಡ್ಎಕ್ಸ್ 25ಆರ್ ರೇಸರ್ ಕಸ್ಟಮ್ ಬೈಕಿನ ಅನಾವರಣಗೊಳಿಸುವ ಕಾರ್ಯಕ್ರಮವನ್ನು ರದ್ದುಗೊಳ್ಳಿಸಬೇಕಾಯಿತು. ಆದರೆ ನಿಗದಿತ ಕಾರ್ಯಕ್ರಮದ ದಿನಾಂಕದ ಮೊದಲೇ ಈ ಬೈಕ್ ಅನ್ನು ಆನ್ಲೈನ್ ನಲ್ಲಿ ಅನಾವರಣಗೊಳಿಸಲಾಗಿದೆ.
ಕವಾಸಕಿ ಕಂಪನಿಯು ಕರೋನಾ ವೈರಸ್ ಭೀತಿಯಿಂದ ನಿಂಜಾ ಝಡ್ಎಕ್ಸ್ 25ಆರ್ ರೇಸರ್ ಕಸ್ಟಮ್ ಬೈಕಿನ ಅನಾವರಣ ಕಾರ್ಯಕ್ರಮವನ್ನು ರದ್ದುಗೊಳಿಸಲಾಯಿತ್ತು. ಆದರೆ ಇದರಿಂದ ಹೆಚ್ಚು ನಷ್ಟದ ಜೊತೆ ಸಾಕಷ್ಟು ಗೊಂದಲಗಳಿಗೆ ಕಾರಣವಾಗಬಹುದು ಎಂದು ಕಂಪನಿಯು ಈ ಹೊಸ ಕವಾಸಕಿ ನಿಂಜಾ ಝಡ್ಎಕ್ಸ್ 25ಆರ್ ರೇಸರ್ ಕಸ್ಟಮ್ ಬೈಕನ್ನು ಪರಿಣಾಮಕಾರಿಯಾದ ಸಾಮಾಜಿಕ ಜಾಲತಾಣದ ಮೂಲಕ ಅನಾವರಣಗೊಳಿಸಲಾಗಿದೆ. ಈ ಕವಾಸಕಿ ಬೈಕ್ ಟ್ರ್ಯಾಕ್-ಫೋಕಸ್ಡ್, ಟ್ರ್ಯಾಕ್-ಬ್ರೀಡ್ ಮತ್ತು ಟ್ರ್ಯಾಕ್-ಓನ್ಲಿ ಎಂಬ ಮೂರು ವೆರಿಯೆಂಟ್ಗಳನ್ನು ಒಳಗೊಂಡಿದೆ.
ಕಂಪನಿಯು 2019ರ ಟೋಕಿಯೊ ಮೋಟಾರ್ ಶೋನಲ್ಲಿ ಸಂಪೂರ್ಣ ಫೇರ್ಡ್ ನಿಂಜಾ ಝಡ್ಎಕ್ಸ್ 25ಆರ್ ಬೈಕನ್ನು ಮೊದಲ ಬಾರಿಗೆ ಪ್ರದರ್ಶಿಸಿತ್ತು. ಈ ಬೈಕ್ ತನ್ನ ಆಗ್ರೆಸಿವ್ ಸ್ಟೈಲಿಂಗ್ ಮತ್ತು ಇನ್-ಲೈನ್ ನಾಲ್ಕು ಎಂಜಿನ್ ನಿಂದ ಗ್ರಾಹಕರ ಗಮನಸೆಳೆಯಿತು.
ಕವಾಸಕಿ ನಿಂಜಾ ಝಡ್ಎಕ್ಸ್ 25ಆರ್ ರೇಸರ್ ಕಸ್ಟಮ್ ಬೈಕ್ 249 ಸಿಸಿ, ಲಿಕ್ವಿಡ್-ಕೂಲ್ಡ್, ಇನ್-ಲೈನ್ ನಾಲ್ಕು ಸಿಲಿಂಡರ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ ಬಿಹೆಚ್ಪಿ ಪವರ್ ಮತ್ತು ಟಾರ್ಕ್ ಅಂಕಿ ಅಂಶಗಳು ಇನ್ನು ಕೂಡ ಬಹಿರಂಗಗೊಂಡಿಲ್ಲ. ಈ ಎಂಜಿನ್ ಸುಮಾರು 40 ಬಿಹೆಚ್ಪಿ ಪವರ್ ಅನ್ನು ಉತ್ಪಾದಿಸುತ್ತದೆ ಎಂದು ನಿರೀಕ್ಷಿಸುತ್ತೇವೆ. ಈ ಎಂಜಿನ್ ನೊಂದಿಗೆ 6 ಸ್ಪೀಡ್ ಗೇರ್ಬಾಕ್ಸ್ ಅನ್ನು ಅಳವಡಿಸಲಾಗಿದೆ. ಇದರೊಂದಿಗೆ ಸ್ಲಿಪ್ಪರ್ ಅಸಿಸ್ಟ್ ಕ್ಲಚ್ ಮತ್ತು ಕ್ವಿಕ್ಶಿಫ್ಟರ್ ಸಿಸ್ಟಂ ಅನ್ನು ಅಳವಡಿಸಲಾಗಿದೆ.
ಕವಾಸಕಿ ನಿಂಜಾ ಝಡ್ಎಕ್ಸ್ 25ಆರ್ ರೇಸರ್ ಕಸ್ಟಮ್ ಟ್ವಿನ್ ಪಾಡ್ ಹೆಡ್ ಲ್ಯಾಂಪ್, ಫುಲ್ ಫೇರಿಂಗ್ ಮತ್ತು ಡ್ಯುಯಲ್ ಟೋನ್ ಬಣ್ಣದ ಆಯ್ಕೆಯನ್ನು ಹೊಂದಿದೆ. ಈ ಬೈಕ್ ಮಸ್ಕ್ಯುಲರ್ ಟ್ಯಾಂಕ್, ಅಂಡರ್ಬೆಲ್ಲಿ ಎಕ್ಸಾಸ್ಟ್ ಮತ್ತು ಕಡಿಮೆ ಸೆಟ್ ಕ್ಲಿಪ್-ಆನ್ ಹ್ಯಾಂಡಲ್ಬಾರ್ ಅನ್ನು ಹೊಂದಿದೆ.
ಈ ಬೈಕಿನ ಮುಂಭಾಗದಲ್ಲಿ 37 ಎಂಎಂ ಅಪ್ಸೈಡ್-ಡೌನ್ ಶೋವಾ ಪ್ರತ್ಯೇಕ ಫಂಕ್ಷನ್ ಫೋರ್ಕ್ ಅನ್ನು ಹೊಂದಿದೆ. ಈ ಬೈಕಿನ ಹಿಂಭಾಗದಲ್ಲಿ ಬ್ಯಾಕ್-ಲಿಂಕ್ ಸಂಸೆಕ್ಷನ್ ಅನ್ನು ಹೊಂದಿದೆ. ಈ ಬೈಕಿನಲ್ಲಿ ಸುರಕ್ಷತೆಗಾಗಿ ಮುಂಭಾಗ ಮತ್ತು ಹಿಂಭಾಗದ ಟಯರ್ಗಳಲ್ಲಿ ಡಿಸ್ಕ್ ಬ್ರೇಕ್ ಗಳನ್ನು ಅಳವಡಿಸಲಾಗಿದೆ.
ಕವಾಸಕಿ ನಿಂಜಾ ಝಡ್ಎಕ್ಸ್ 25ಆರ್ ರೇಸರ್ ಕಸ್ಟಮ್ ಬೈಕಿನಲ್ಲಿ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಅನ್ನು ಅಳವಡಿಸಲಾಗಿದೆ. ಇದರೊಂದಿಗೆ ಅನಲಾಗ್ ಟ್ಯಾಕೋಮೀಟರ್ ಮತ್ತು ಸೆಮಿ ಡಿಜೆಟಲ್ ಯುನಿಟ್ ಸಿಸ್ಟಂ ಅನ್ನು ಹೊಂದಿರಲಿದೆ. ಕವಾಸಕಿ ಝಡ್ಎಕ್ಸ್ 25ಆರ್ ಎಲೆಕ್ತ್ರಾನಿಕ್ ರೈಡರ್ ಅನ್ನು ಕೂಡ ಒಳಗೊಂಡಿದೆ. ಇವುಗಳೊಂದಿಗೆ ಡ್ಯುಯಲ್ ಚಾನೆಲ್ ಎಬಿಎಸ್ ಮತ್ತು ಟ್ರ್ಯಾಕ್ಷನ್ ಕಂಟ್ರೋಲ್ ಅನ್ನು ಹೊಂದಿದೆ.
ಕವಾಸಕಿ ನಿಂಜಾ ಝಡ್ಎಕ್ಸ್ 25ಆರ್ ರೇಸರ್ ಕಸ್ಟಮ್ ಬೈಕ್ ಭಾರತದಲ್ಲಿ ಬಿಡುಗಡೆಯಾದ ಬಳಿಕ ಹೋಂಡಾ ಸಿಬಿಆರ್ 250 ಆರ್ಆರ್ ಬೈಕಿಗೆ ನೇರ ಪೈಪೋಟಿಯನ್ನು ನೀಡುತ್ತದೆ. ಈ ಎರಡು ಬೈಕುಗಳು ಉತ್ತಮ ಕಾರ್ಯಕ್ಷಮತೆಯನ್ನು ಹೊಂದಿರುವುದರಿಂದ ಪ್ರಬಲ ಪೈಪೋಟಿಯನ್ನು ನೀಡುತ್ತದೆ.