ಕವಾಸಕಿ ಕಂಪನಿಯ ಅತಿ ಹೆಚ್ಚು ಮಾರಾಟವಾಗುವ ಬೈಕ್ ಮಾದರಿಯಾಗಿ ಹೊರಹೊಮ್ಮಿದ ಝಡ್‍900

ಕವಾಸಕಿ ಕಂಪನಿಯ ಸರಣಿಯಲ್ಲಿ ಝಡ್‍900 ಇದೀಗ ಅತಿ ಹೆ‌ಚ್ಚು ಮಾರಾಟವಾಗುವ ಬೈಕ್ ಆಗಿ ಹೊರಹೊಮ್ಮಿದೆ. ಕಳೆದ ವರ್ಷ ಡಿಸೆಂಬರ್‌ನಲ್ಲಿ ಕಂಪನಿಯು ನಿಂಜಾ 300 ಉತ್ಪಾದನೆಯನ್ನು ಸ್ಥಗಿತಗೊಳಿಸಿತ್ತು. ಇದರಿಂದಾಗಿ ಝಡ್‍900 ಬೈಕ್ ಅಗ್ರ ಸ್ಥಾನವನ್ನು ವಶಪಡಿಸಿಕೊಂಡಿದೆ.

ಕವಾಸಕಿ ಕಂಪನಿಯ ಅತಿ ಹೆಚ್ಚು ಮಾರಾಟವಾಗುವ ಬೈಕ್ ಮಾದರಿಯಾಗಿ ಹೊರಹೊಮ್ಮಿದ ಝಡ್‍900

ಕವಾಸಕಿ ನಿಂಜಾ 300 ಬೈಕನ್ನು ಸ್ಥಳೀಯವಾಗಿ ಅಭಿವೃದ್ದಿಪಡಿಸಿದ್ದರು. ಇದರಿಂದಾಗಿ ಈ ಬೈಕಿಗೆ ಮಾರುಕಟ್ಟೆಯಲ್ಲಿ ಹೆಚ್ಚಿನ ಬೇಡಿಕೆ ಇತ್ತು. ಅದರೆ ಕಂಪನಿಯು ಈ ಬೈಕನ್ನು ಇನ್ನು ಕೂಡ ಅಪ್‌ಗ್ರೇಡ್ ಮಾಡಲಾಗಿಲ್ಲ. ಇದರಿಂದಾಗಿ ಝಡ್‍900 ಬೈಕ್ ಉತ್ತಮವಾಗಿ ಮಾರಾಟವಾಗುತ್ತಿದೆ. ಕಳೆದ ವರ್ಷದ ಫೆಬ್ರವರಿ ತಿಂಗಳಲ್ಲಿ ಝಡ್900 ಬೈಕಿನ 39 ಮಾರಾಟವಾಗಿತ್ತು. ಆದರೆ ಈ ವರ್ಷದ ಫೆಬ್ರವರಿ ತಿಂಗಳಲ್ಲಿ 71 ಯುನಿಟ್‌ಗಳು ಮಾರಾಟವಾಗಿವೆ. ಫೆಬ್ರವರಿ ತಿಂಗಳ ಮಾರಾಟದಲ್ಲಿ ಕಂಪನಿಯ ಇತರ ಮಾದರಿಗಳನ್ನು ಹಿಂದಿಕ್ಕಿ ಝಡ್‍900 ಬೈಕ್ ಅಗ್ರ ಸ್ಥಾನವನ್ನು ಪಡೆದುಕೊಂಡಿದೆ.

ಕವಾಸಕಿ ಕಂಪನಿಯ ಅತಿ ಹೆಚ್ಚು ಮಾರಾಟವಾಗುವ ಬೈಕ್ ಮಾದರಿಯಾಗಿ ಹೊರಹೊಮ್ಮಿದ ಝಡ್‍900

ಬಿಎಸ್-4 ಕವಾಸಕಿ ಝಡ್900 ಬೈಕಿನ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.7.99 ಲಕ್ಷಗಳಾಗಿದೆ. ಕವಾಸಕಿ ಝಡ್‍900 ಬೈಕ್ 948 ಸಿಸಿ ಇನ್‍-ಲೈನ್ ನಾಲ್ಕು ಲಿಕ್ವಿಡ್ ಕೂಲ್ಡ್ ಬಿಎಸ್-4 ಎಂಜಿನ್ ಹೊಂದಿದೆ.

ಕವಾಸಕಿ ಕಂಪನಿಯ ಅತಿ ಹೆಚ್ಚು ಮಾರಾಟವಾಗುವ ಬೈಕ್ ಮಾದರಿಯಾಗಿ ಹೊರಹೊಮ್ಮಿದ ಝಡ್‍900

ಈ ಎಂಜಿನ್ 9,500 ಆರ್‍‍‍ಪಿಎಂನಲ್ಲಿ 123 ಬಿ‍‍ಹೆಚ್‍‍ಪಿ ಪವರ್ ಮತ್ತು 7,700 ಆರ್‍‍ಪಿಎಂನಲ್ಲಿ 98.4 ಎನ್‍ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್‍‍‍ನೊಂದಿಗೆ 6 ಸ್ಪೀಡ್ ಗೇರ್‍‍ಬಾಕ್ಸ್ ಅನ್ನು ಅಳವಡಿಸಲಾಗಿದೆ.

ಕವಾಸಕಿ ಕಂಪನಿಯ ಅತಿ ಹೆಚ್ಚು ಮಾರಾಟವಾಗುವ ಬೈಕ್ ಮಾದರಿಯಾಗಿ ಹೊರಹೊಮ್ಮಿದ ಝಡ್‍900

ಕವಾಸಕಿ ಝಡ್900 ಬೈಕ್ ಹಲವಾರು ಹೊಸ ಫೀಚರ್ಸ್‍‍ಗಳನ್ನು ಹೊಂದಿದೆ. ಇದರಲ್ಲಿ ಹೆಡ್‍‍ಲ್ಯಾಂಪ್ ಮತ್ತು ಝಡ್ ಆಕಾರಾದ ಟೇಲ್‍‍ಲೈ‍‍ಟ್‍, ಎಲ್‍ಇಡಿ ಲೈಟ್‍ಗಳು ಮತ್ತು ಎರಡು ತುದಿಯಲ್ಲಿ ನವೀಕರಿಸಿದ ಸಸ್ಪೆಂಕ್ಷನ್ ಸೆಟ್ಟಿಂಗ್‍‍ಗಳು ಮತ್ತು ರೈಡಿಯಾಲಜಿ ಎಂಬ ಆ್ಯಪ್ ಮೂಲಕ ಸ್ಮಾರ್ಟ್‍‍ಫೋನ್ ಕನೆಕ್ಟಿವಿಟಿ ಹೊಂದಿರುವ ಹೊಸ 4.3 ಇಂಚಿನ ಟಿಎ‍ಫ್‍ಟಿ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಅನ್ನು ಒಳಗೊಂಡಿದೆ.

ಕವಾಸಕಿ ಕಂಪನಿಯ ಅತಿ ಹೆಚ್ಚು ಮಾರಾಟವಾಗುವ ಬೈಕ್ ಮಾದರಿಯಾಗಿ ಹೊರಹೊಮ್ಮಿದ ಝಡ್‍900

ಕವಾಸಕಿ ಝಡ್900 ಬೈಕ್‍‍ನಲ್ಲಿ ಹೊಸ ಸ್ಪೋರ್ಟ್, ರೈನ್, ರೋಡ್ ಮತ್ತು ಮ್ಯಾನುಯಲ್ ಎಂಬ ಮೂರು ಮೋಡ್‍‍ಗಳನ್ನು ಹೊಂದಿದೆ. ಇದರೊಂದಿಗೆ ಟ್ರಾಕ್ಷನ್ ಕಂಟ್ರೂಲ್, ಸ್ಟ್ರಾಂಗ್ ಫ್ರೇಮ್ ಮತ್ತು ಡನ್‍‍ಲಾಪ್ ಸ್ಪೋರ್ಟ್ಸ್‌ಮ್ಯಾಕ್ಸ್ ರೋಡ್ಸ್‌ಪೋರ್ಟ್ 2 ಟಯರ್‍‍ಗಳನ್ನು ಅಳವಡಿಸಲಾಗಿದೆ.

ಕವಾಸಕಿ ಕಂಪನಿಯ ಅತಿ ಹೆಚ್ಚು ಮಾರಾಟವಾಗುವ ಬೈಕ್ ಮಾದರಿಯಾಗಿ ಹೊರಹೊಮ್ಮಿದ ಝಡ್‍900

ಕವಾಸಕಿ ಝಡ್900 ಬಿಎಸ್-4 ಬೈಕ್ ಅನ್ನು ಎರಡು ಡ್ಯುಯಲ್ ಟೋನ್ ಬಣ್ಣಗಳನ್ನು ಹೊಂದಿದೆ. ಇದರಲ್ಲಿ ಮೆಟಾಲಿಕ್ ಗ್ರ್ಯಾಫೈಟ್ ಗ್ರೇ ಅಥವಾ ಮೆಟಾಲಿಕ್ ಸ್ಪಾರ್ಕ್ ಬ್ಲ್ಯಾಕ್ ಮತ್ತು ಮೆಟಾಲಿಕ್ ಸ್ಪಾರ್ಕ್ ಬ್ಲ್ಯಾಕ್ ಅಥವಾ ಮೆಟಾಲಿಕ್ ಫ್ಲಾಟ್ ಸ್ಪಾರ್ಕ್ ಬ್ಲ್ಯಾಕ್ ಬಣ್ಣಗಳಾಗಿದೆ.

ಕವಾಸಕಿ ಕಂಪನಿಯ ಅತಿ ಹೆಚ್ಚು ಮಾರಾಟವಾಗುವ ಬೈಕ್ ಮಾದರಿಯಾಗಿ ಹೊರಹೊಮ್ಮಿದ ಝಡ್‍900

ಬ್ರೇಕಿಂಗ್ ಸಿಸ್ಟಂ ಬಗ್ಗೆ ಹೇಳುವುದಾದರೆ ಮುಂಭಾಗದಲ್ಲಿ ಡ್ಯುಯಲ್ 300 ಎಂಎಂ ಪೆಟಲ್ ಡಿಸ್ಕ್ ಮತ್ತು ಹಿಂಭಾಗದಲ್ಲಿ ಒಂದೇ 250 ಎಂಎಂ ಪೆಟಲ್ ಡಿಸ್ಕ್ ಅನ್ನು ಹೊಂದಿದೆ. ಇದರೊಂದಿಗೆ ಡ್ಯುಯಲ್ ಚಾನೆಲ್ ಎಬಿ‍ಎಸ್ ಅನ್ನು ಸ್ಟ್ಯಾಂಡರ್ಡ್ ಆಗಿ ಅಳವಡಿಸಲಾಗಿದೆ.

ಕವಾಸಕಿ ಕಂಪನಿಯ ಅತಿ ಹೆಚ್ಚು ಮಾರಾಟವಾಗುವ ಬೈಕ್ ಮಾದರಿಯಾಗಿ ಹೊರಹೊಮ್ಮಿದ ಝಡ್‍900

ಕವಾಸಕಿ ಝಡ್900 ಲೀಟರ್-ಕ್ಲಾಸ್ ಸೆಗ್‍‍ಮೆಂಟ್‍‍ನಲ್ಲಿ ಅತ್ಯಂತ ಜನಪ್ರಿಯವಾದ ಸೂಪರ್‍‍ನೇಕ್ಡ್ ಬೈಕ್‍‍ಗಳಲ್ಲಿ ಒಂದಾಗಿದೆ. ಭಾರತದಲ್ಲಿ ಕವಾಸಕಿ ಝಡ್900 ಬೈಕ್ ಇತರ 1000 ಸಿಸಿ ನೇಕೆಡ್ ಸೆಗ್‍‍ಮೆಂಟ್‍ ಬೈಕ್‍‍ಗಳಾದ ಟ್ರಯಂಫ್ ಸ್ಟ್ರೀಟ್ ಟ್ರಿಪಲ್ ಆರ್‍ಎಸ್, ಕೆಟಿಎಂ 790 ಡ್ಯೂಕ್ ಮತ್ತು ಸುಜುಕಿ ಜಿಎಸ್ಎಕ್ಸ್-ಆರ್ 750 ಬೈಕ್‍‍ಗಳಿಗೆ ಪೈಪೋಟಿಯನ್ನು ನೀಡುತ್ತದೆ.

Most Read Articles

Kannada
English summary
Kawasaki Z900 Becomes Brand’s Best-Selling Motorcycle In India. Read in Kannada.
Story first published: Thursday, March 26, 2020, 14:42 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X