ಕೆಟಿಎಂ ಆಯ್ದ ಡೀಲರ್ಸ್‌ಗಳಲ್ಲಿ 250 ಅಡ್ವೆಂಚರ್ ಬೈಕ್ ಖರೀದಿಗಾಗಿ ಬುಕ್ಕಿಂಗ್ ಶುರು

ಕೆಟಿಎಂ ಇಂಡಿಯಾ ಕಂಪನಿಯು ಶೀಘ್ರದಲ್ಲೇ ತನ್ನ ಹೊಚ್ಚ ಬೈಕ್ ಮಾದರಿಯಾದ 250 ಅಡ್ವೆಂಚರ್ ಬೈಕ್ ಮಾದರಿಯನ್ನು ಸಹ ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡುವ ಸಿದ್ದತೆಯಲ್ಲಿದ್ದು, ದೇಶದ ಪ್ರಮುಖ ನಗರಗಳಲ್ಲಿನ ಕೆಟಿಎಂ ಡೀಲರ್ಸ್‌ಗಳಲ್ಲಿ ಬುಕ್ಕಿಂಗ್ ಪ್ರಕ್ರಿಯೆಯನ್ನು ಆರಂಭಿಸಲಾಗಿದೆ.

ಕೆಟಿಎಂ 250 ಅಡ್ವೆಂಚರ್ ಬೈಕ್ ಖರೀದಿಗಾಗಿ ಬುಕ್ಕಿಂಗ್ ಶುರು

ಹೊಸ 250 ಅಡ್ವೆಂಚರ್ ಬೈಕ್ ಖರೀದಿಗಾಗಿ ಅಧಿಕೃತ ಬುಕ್ಕಿಂಗ್ ಪ್ರಕ್ರಿಯೆಗೆ ಇನ್ನು ಚಾಲನೆ ನೀಡಿಲ್ಲವಾದರೂ ಗ್ರಾಹಕರ ಬೇಡಿಕೆಯೆಂತೆ ಆಯ್ದ ಕೆಟಿಎಂ ಡೀಲರ್ಸ್‌ಗಳಲ್ಲಿ ಬುಕ್ಕಿಂಗ್ ಹಣ ಪಡೆದುಕೊಳ್ಳವಾಗುತ್ತಿದ್ದು, ಹೊಸ ಬೈಕ್ ಮಾದರಿಯು ದೀಪಾವಳಿಗೂ ಮುನ್ನ ಖರೀದಿಗೆ ಲಭ್ಯವಿರಲಿದೆ ಎನ್ನಲಾಗಿದೆ. ಹೊಸ 250 ಅಡ್ವೆಂಚರ್ ಬೈಕ್ ಬಿಡುಗಡೆಗಾಗಿ ಈಗಾಗಲೇ ವಿವಿಧ ಹಂತದ ಹಂತದ ರೋಡ್ ಟೆಸ್ಟಿಂಗ್ ಪ್ರಕ್ರಿಯೆಯನ್ನು ಪೂರ್ಣಗೊಳಿಸಿರುವ ಕೆಟಿಎಂ ಕಂಪನಿಯು ಬಿಡುಗಡೆಗಾಗಿ ಪೂರ್ವಭಾವಿ ಸಿದ್ದತೆ ನಡೆಸಿದೆ.

ಕೆಟಿಎಂ 250 ಅಡ್ವೆಂಚರ್ ಬೈಕ್ ಖರೀದಿಗಾಗಿ ಬುಕ್ಕಿಂಗ್ ಶುರು

ಹೊಸ 250 ಅಡ್ವೆಂಚರ್ ಬೈಕ್ ಮಾದರಿಯು ಪ್ರಸ್ತುತ ಮಾರುಕಟ್ಟೆಯಲ್ಲಿರುವ 390 ಅಡ್ವೆಂಚರ್ ಬೈಕ್ ಮಾದರಿಯಲ್ಲೇ ಕೆಲವು ಬದಲಾವಣೆಗಳೊಂದಿಗೆ ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡುತ್ತಿದೆ.

ಕೆಟಿಎಂ 250 ಅಡ್ವೆಂಚರ್ ಬೈಕ್ ಖರೀದಿಗಾಗಿ ಬುಕ್ಕಿಂಗ್ ಶುರು

ಭಾರತದಲ್ಲಿ ತನ್ನ ಸರಣಿ ಬೈಕ್ ಮಾರಾಟವನ್ನು ಹೆಚ್ಚಿಸುತ್ತಿರುವ ಕೆಟಿಎಂ ಕಂಪನಿಯು ಕಳೆದ ಎರಡು ವರ್ಷಗಳ ಅವಧಿಯಲ್ಲಿ ನಾಲ್ಕು ಹೊಸ ಬೈಕ್‌ಗಳನ್ನು ಬಿಡುಗಡೆ ಮಾಡಿದ್ದು, ಮುಂಬರುವ ಇನ್ನಷ್ಟು ಹೊಸ ಬೈಕ್‌ಗಳ ಬಿಡುಗಡೆಗೆ ಸಿದ್ದವಾಗಿದೆ.

ಕೆಟಿಎಂ 250 ಅಡ್ವೆಂಚರ್ ಬೈಕ್ ಖರೀದಿಗಾಗಿ ಬುಕ್ಕಿಂಗ್ ಶುರು

390 ಅಡ್ವೆಂಚರ್ ಮಾದರಿಗಿಂತ ಕೆಳದರ್ಜೆಯಲ್ಲಿ ಮಾರಾಟವಾಗಲಿರುವ ಹೊಸ 250 ಅಡ್ವೆಂಚರ್ ಮಾದರಿಯು 390 ಅಡ್ವೆಂಚರ್ ಬೈಕಿನಲ್ಲಿರುವಂತಹ ಪ್ರಮುಖ ಅಂಶಗಳಾದ ವಿನ್ಯಾಸ, ಚಾಸೀಸ್ ಹಾಗೂ ಫ್ರೇಂಗಳನ್ನು ಎರವಲು ಪಡೆದುಕೊಂಡಿದೆ. 250 ಅಡ್ವೆಂಚರ್ ಮತ್ತು 390 ಅಡ್ವೆಂಚರ್ ಬೈಕಿನಲ್ಲಿ ಕೆಲವು ತಾಂತ್ರಿಕ ಅಂಶಗಳ ಬದಲಾವಣೆಯನ್ನು ಹೊರತುಪಡಿಸಿ ಬಾಡಿ ಪ್ಯಾನೆಲ್, ಬೆಲ್ಲಿ ಪ್ಯಾನ್, ಫ್ಯೂಯಲ್ ಟ್ಯಾಂಕ್ ಎಕ್ಸ್ ಟೆಂಷನ್, ರೇಡಿಯೇಟರ್ ಶ್ರೌಡ್ ಹಾಗೂ ಟೇಲ್ ಸೆಕ್ಷನ್‍ ಸಮನಾಂತರವಾಗಿರಲಿವೆ.

ಕೆಟಿಎಂ 250 ಅಡ್ವೆಂಚರ್ ಬೈಕ್ ಖರೀದಿಗಾಗಿ ಬುಕ್ಕಿಂಗ್ ಶುರು

250 ಅಡ್ವೆಂಚರ್ ಬೈಕಿನಲ್ಲಿ 390 ಅಡ್ವೆಂಚರ್ ಬೈಕಿಗಿಂತಲೂ ವಿಭಿನ್ನವಾದ ಬಾಡಿ ಗ್ರಾಫಿಕ್ಸ್ ಹಾಗೂ ಹಾಲೊಜೆನ್ ಹೆಡ್‍‍ಲ್ಯಾಂಪ್ ಯುನಿಟ್ ಹೊಂದಿದ್ದು, ಪ್ರೀಮಿಯಂ ಮಾದರಿಯಾದ 390 ಅಡ್ವೆಂಚರ್ ಬೈಕಿನಲ್ಲಿ ಪೂರ್ಣ ಪ್ರಮಾಣದ ಎಲ್‍ಇ‍‍ಡಿ ಯುನಿಟ್ ನೀಡಲಾಗಿದೆ.

MOST READ: ಭಾರತದಲ್ಲಿಯೂ ಬಿಡುಗಡೆಯಾಗಲಿದೆ ದುಬಾರಿ ಬೆಲೆಯ ಫೋರ್ಜಾ ಮ್ಯಾಕ್ಸಿ ಸ್ಕೂಟರ್

ಕೆಟಿಎಂ 250 ಅಡ್ವೆಂಚರ್ ಬೈಕ್ ಖರೀದಿಗಾಗಿ ಬುಕ್ಕಿಂಗ್ ಶುರು

ವರದಿಗಳ ಪ್ರಕಾರ, ಕೆಟಿಎಂ 250 ಅಡ್ವೆಂಚರ್ ಬೈಕ್ ಮಾದರಿಯು 390 ಬೈಕಿನಲ್ಲಿರುವಂತಹ ಅಲಾಯ್ ವ್ಹೀಲ್ ಹಾಗೂ ಟಯರ್‍ ಮಾದರಿಗಳನ್ನೇ ಹೊಂದಿರಲಿದ್ದು, ಮುಂಭಾಗದಲ್ಲಿ 19 ಇಂಚಿನ ವ್ಹೀಲ್ ಹಾಗೂ ಹಿಂಭಾಗದಲ್ಲಿರುವ 17 ಇಂಚಿನ ವ್ಹೀಲ್‍ಗಳು ಸೇರಿಸಲಾಗಿದೆ.

ಕೆಟಿಎಂ 250 ಅಡ್ವೆಂಚರ್ ಬೈಕ್ ಖರೀದಿಗಾಗಿ ಬುಕ್ಕಿಂಗ್ ಶುರು

ಬೆಲೆ ಕಾರಣಕ್ಕೆ 390 ಅಡ್ವೆಂಚರ್ ಬೈಕಿನಲ್ಲಿರುವ ಹಲವು ಪ್ರೀಮಿಯಂ ಫೀಚರ್ಸ್‌ಗಳು 250 ಅಡ್ವೆಂಚರ್ ಬೈಕ್‌ನಲ್ಲಿ ನೀಡುವುದಿಲ್ಲ ಎನ್ನಲಾಗಿದ್ದು, 250 ಅಡ್ವೆಂಚರ್ ಬೈಕಿನಲ್ಲಿ 249ಸಿಸಿಯ ಸಿಂಗಲ್ ಸಿಲಿಂಡರ್ ಲಿಕ್ವಿಡ್ ಕೂಲ್ ಬಿ‍ಎಸ್ 6 ಎಂಜಿನ್ ಅಳವಡಿಸಲಾಗುತ್ತಿದೆ.

MOST READ: ಅತಿ ಕಡಿಮೆ ಬೆಲೆಯಲ್ಲಿ ಹೆಚ್ಚು ಮೈಲೇಜ್ ನೀಡುವ ರೆಟ್ರೊ ಎಲೆಕ್ಟ್ರಿಕ್ ಬೈಕ್ ಬಿಡುಗಡೆ

ಕೆಟಿಎಂ ಆಯ್ದ ಡೀಲರ್ಸ್‌ಗಳಲ್ಲಿ 250 ಅಡ್ವೆಂಚರ್ ಬೈಕ್ ಖರೀದಿಗಾಗಿ ಬುಕ್ಕಿಂಗ್ ಶುರು

ಹೊಸ ಎಂಜಿನ್ 6-ಸ್ಪೀಡ್ ಗೇರ್‌ಬಾಕ್ಸ್‌ನೊಂದಿಗೆ 30-ಬಿ‍‍ಹೆಚ್‍‍ಪಿ ಮತ್ತು 24-ಎನ್‍ಎಂ ಟಾರ್ಕ್ ಉತ್ಪಾದಿಸಲಿದ್ದು, ಆಫ್-ರೋಡ್ ಕೌಶಲ್ಯಕ್ಕೆ ಬೇಕಾದ ಹಲವು ವಿಶೇಷ ತಾಂತ್ರಿಕ ಸೌಲಭ್ಯಗಳಿವೆ. ಇನ್ನು ಹೊಸ ಬೈಕಿನ ಬೆಲೆಯು ಸಾಮಾನ್ಯ ಡ್ಯೂಕ್ 250 ಮಾದರಿಯ ಬೆಲೆಗಿಂತ ತುಸು ಹೆಚ್ಚಿರಲಿದ್ದು, ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 2.20 ಲಕ್ಷದಿಂದ ರೂ. 2.40 ಲಕ್ಷದ ತನಕ ಬೆಲೆ ಪಡೆದುಕೊಳ್ಳಬಹುದಾಗಿದೆ ಎನ್ನಲಾಗಿದೆ.

More from DriveSpark

Article Published On: Wednesday, October 14, 2020, 22:16 [IST]
English summary
KTM 250 Adventure Bookings Begin At Dealerships. Read in Kannada.
Read more on ಕೆಟಿಎಂ ktm
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+