Just In
- 51 min ago
ಪೊಲೊ ಹ್ಯಾಚ್ಬ್ಯಾಕ್ ಮತ್ತು ವೆಂಟೊ ಸೆಡಾನ್ ಕಾರುಗಳ ಖರೀದಿ ಮೇಲೆ ಹೊಸ ವರ್ಷದ ಆಫರ್
- 1 hr ago
ದಿಢೀರನೆ ಕೈಕೊಟ್ಟ ಬ್ರೇಕ್, 3 ಕಿ.ಮೀ ರಿವರ್ಸ್ ಗೇರಿನಲ್ಲಿ ಸಾಗಿದ ಟ್ರಕ್ ಚಾಲಕ
- 2 hrs ago
ಕೈಗೆಟುಕುವ ದರದಲ್ಲಿ ಟಿವಿಎಸ್ ಎಕ್ಸ್ಎಲ್100 ವಿನ್ನರ್ ಎಡಿಷನ್ ಬಿಡುಗಡೆ
- 3 hrs ago
ಭಾರತದಲ್ಲಿ ಅತಿದೊಡ್ಡ ಮಲ್ಟಿ ಬ್ರಾಂಡ್ ಕಾರ್ ಸರ್ವಿಸ್ ಸೆಂಟರ್ ತೆರೆದ ಬಾಷ್
Don't Miss!
- News
ಕೊವ್ಯಾಕ್ಸಿನ್ ಬಗ್ಗೆ ಎಚ್ಚರ: ಲಸಿಕೆಯು ಯಾರಿಗೆ ಸೂಕ್ತ, ಯಾರಿಗೆ ಸೂಕ್ತವಲ್ಲ?
- Finance
34,000 ರುಪಾಯಿ ತನಕ ಕಾರುಗಳ ಬೆಲೆ ಏರಿಕೆ ಮಾಡಿದ ಮಾರುತಿ ಸುಜುಕಿ
- Sports
ಭಾರತ vs ಆಸ್ಟ್ರೇಲಿಯಾ: ಧೋನಿ ದಾಖಲೆ ಮುರಿದು 1000 ಟೆಸ್ಟ್ ರನ್ ಗಳಿಸಿದ ರಿಷಭ್ ಪಂತ್
- Lifestyle
ಕೂದಲು ಬೇಗನೆ ಬೆಳ್ಳಗಾಗುವುದು: ಇದು ನಿಮ್ಮ ದೇಹದ ಕುರಿತು ಏನು ಸೂಚಿಸುತ್ತದೆ?
- Education
Indian Forest Service Recruitment 2021: 70 ಡಿಐಜಿಎಫ್/ಎಐಜಿಎಫ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Movies
ಚಿತ್ರೀಕರಣ ವೇಳೆ ಅಸ್ವಸ್ಥ: ನಟಿ ಅಲಿಯಾ ಭಟ್ ಆಸ್ಪತ್ರೆಗೆ ದಾಖಲು
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಬಹುನೀರಿಕ್ಷಿತ ಕೆಟಿಎಂ 250 ಅಡ್ವೆಂಚರ್ ಬೈಕ್ ಬಿಡುಗಡೆ
ಕೆಟಿಎಂ ಕಂಪನಿಯು ತನ್ನ ಎಂಟ್ರಿ ಲೆವಲ್ ಅಡ್ವೆಂಚರ್ ಬೈಕ್ ಮಾದರಿಯಾದ 250 ಅಡ್ವೆಂಚರ್ ಬೈಕ್ ಮಾದರಿಯನ್ನು ಭಾರತದಲ್ಲೂ ಬಿಡುಗಡೆ ಮಾಡಿದ್ದು, ಹೊಸ ಬೈಕ್ ಮಾದರಿಯು ದೆಹಲಿ ಎಕ್ಸ್ಶೋರೂಂ ಪ್ರಕಾರ ರೂ. 2.48 ಲಕ್ಷ ಬೆಲೆ ಹೊಂದಿದೆ.

ಭಾರತದಲ್ಲಿ ಕಳೆದ ಐದು ವರ್ಷಗಳಲ್ಲಿ ಅಡ್ವೆಂಚರ್ ಟೂರರ್ ಬೈಕ್ ಮಾದರಿಗಳ ಮಾರಾಟದಲ್ಲಿ ಸಾಕಷ್ಟು ಬೆಳವಣಿಗೆ ಕಂಡುಬಂದಿದ್ದು, ಆಸ್ಟ್ರಿಯಾದ ಸ್ಪೋರ್ಟ್ ಬೈಕ್ ತಯಾರಿಕಾ ಕಂಪನಿಯಾದ ಕೆಟಿಎಂ ಕೂಡಾ ಗ್ರಾಹಕರ ಬೇಡಿಕೆಯೆಂತೆ ಹಲವಾರು ಹೊಸ ಬೈಕ್ ಉತ್ಪನ್ನಗಳನ್ನು ಅಭಿವೃದ್ದಿಗೊಳಿಸಿದೆ. ಜಾಗತಿಕ ಮಾರುಕಟ್ಟೆಗಳಲ್ಲಿ ಈಗಾಗಲೇ ಹಲವು ಅಡ್ವೆಂಚರ್ ಬೈಕ್ ಮಾದರಿಗಳನ್ನು ಮಾರಾಟ ಮಾಡುತ್ತಿರುವ ಕೆಟಿಎಂ ಕಂಪನಿಯು ಭಾರತದಲ್ಲೂ ಹಂತ ಹಂತವಾಗಿ ತನ್ನ ಪ್ರಮುಖ ಬೈಕ್ ಮಾದರಿಗಳನ್ನು ಬಿಡುಗಡೆ ಮಾಡುತ್ತಿದೆ.

ಭಾರತದಲ್ಲಿ ತನ್ನ ಸರಣಿ ಬೈಕ್ಗಳ ಮಾರಾಟವನ್ನು ಹೆಚ್ಚಿಸುತ್ತಿರುವ ಕೆಟಿಎಂ ಕಂಪನಿಯು ಕಳೆದ ಎರಡು ವರ್ಷಗಳ ಅವಧಿಯಲ್ಲಿ ಐದು ಹೊಸ ಬೈಕ್ಗಳನ್ನು ಬಿಡುಗಡೆ ಮಾಡಿದ್ದು, ಮುಂಬರುವ ಇನ್ನಷ್ಟು ಹೊಸ ಬೈಕ್ಗಳ ಬಿಡುಗಡೆಗೆ ಸಿದ್ದವಾಗಿದೆ.

ಪ್ರಸ್ತುತ ಮಾರುಕಟ್ಟೆಯಲ್ಲಿರುವ 390 ಅಡ್ವೆಂಚರ್ ಮಾದರಿಗಿಂತ ಕೆಳದರ್ಜೆಯಲ್ಲಿ ಮಾರಾಟವಾಗಲಿರುವ ಹೊಸ 250 ಅಡ್ವೆಂಚರ್ ಮಾದರಿಯು 390 ಅಡ್ವೆಂಚರ್ ಬೈಕಿನಲ್ಲಿರುವಂತಹ ಪ್ರಮುಖ ಅಂಶಗಳಾದ ವಿನ್ಯಾಸ, ಚಾಸಿಸ್ ಹಾಗೂ ಫ್ರೇಂಗಳನ್ನು ಎರವಲು ಪಡೆದುಕೊಂಡಿದೆ.

250 ಅಡ್ವೆಂಚರ್ ಮತ್ತು 390 ಅಡ್ವೆಂಚರ್ ಬೈಕಿನಲ್ಲಿ ಕೆಲವು ತಾಂತ್ರಿಕ ಅಂಶಗಳ ಬದಲಾವಣೆಯನ್ನು ಹೊರತುಪಡಿಸಿ ಎರಡು ಅಡ್ವೆಂಚರ್ ಬೈಕ್ ಮಾದರಿಗಳಲ್ಲಿ ಹಲವಾರು ತಾಂತ್ರಿಕ ಅಂಶಗಳು ಸಮನಾಗಿದ್ದು, ಎಂಜಿನ್ ಮತ್ತು ಪರ್ಫಾಮೆನ್ಸ್ ಎರಡು ಬೈಕ್ ಮಾದರಿಗಳು ತಮ್ಮದೆ ಆದ ಹಲವು ವಿಶೇಷ ವೈಶಿಷ್ಟ್ಯತೆಗಳನ್ನು ಹೊಂದಿವೆ. ಹೊಸ 250 ಅಡ್ವೆಂಚರ್ ಬೈಕ್ ಮಾದರಿಯಲ್ಲಿ 249 ಸಿಸಿ ಸಿಂಗಲ್ ಸಿಲಿಂಡರ್ ಎಂಜಿನ್ ಜೋಡಣೆ ಮಾಡಲಾಗಿದ್ದು, ಹೊಸ ಎಂಜಿನ್ ಲಿಕ್ವಿಡ್ ಕೂಲ್ಡ್ ಮಾದರಿಯಾಗಿದೆ.

ಆಫ್ ರೋಡ್ ಮತ್ತು ಅಡ್ವೆಂಚರ್ ಟೂರರ್ ರೈಡಿಂಗ್ ಕೌಶಲ್ಯಕ್ಕಾಗಿಯೇ ವಿಶೇಷವಾಗಿ ಸಿದ್ದಗೊಂಡಿರುವ 250 ಅಡ್ವೆಂಚರ್ ಬೈಕ್ ಮಾದರಿಯಲ್ಲಿ 6-ಸ್ಪೀಡ್ ಗೇರ್ಬಾಕ್ಸ್ ನೀಡಲಾಗಿದ್ದು, ಇದು 30-ಬಿಎಚ್ಪಿ ಮತ್ತು 24-ಎನ್ಎಂ ಟಾರ್ಕ್ ಉತ್ಪಾದನೆ ಮಾಡುತ್ತದೆ.

ಸ್ಮೂತ್ ರೈಡಿಂಗ್ ಸೌಲಭ್ಯಕ್ಕಾಗಿ ಪವರ್ ಅಸಿಸ್ಟ್ ಸ್ಲಿಪ್ಪರ್ ಕ್ಲಚ್ ಸೌಲಭ್ಯವನ್ನು ಸ್ಟ್ಯಾಂಡರ್ಡ್ ಆಗಿ ಪಡೆದುಕೊಂಡಿರುವ ಹೊಸ 250 ಅಡ್ವೆಂಚರ್ ಬೈಕ್ ಮಾದರಿಯು ಬೈಕ್ ಮುಂಭಾಗದಲ್ಲಿ 43ಎಂಎಂ ಡಬ್ಲ್ಯುಪಿ ಅಪ್ಸೈಡ್ ಡೌನ್ ಫೋರ್ಕ್ ಮತ್ತು ಹಿಂಭಾಗದಲ್ಲಿ 170ಎಂಎಂ ಟ್ರಾವೆಲ್ ಮೊನೊ ಶಾರ್ಕ್ ಸಸ್ಪೆಷನ್ ನೀಡಲಾಗಿದೆ.

ಬೈಕ್ ರೈಡಿಂಗ್ ಬೇಡಿಕೆಗೆ ಅನುಗುಣವಾಗಿ ಹಿಂಭಾಗದ ಸಸ್ಪೆಷನ್ ಸೌಲಭ್ಯವನ್ನು 177ಎಂಎಂ ವರೆಗೆ ಎತ್ತರ ಹೋಂದಾಣಿಕೆ ಮಾಡಿಕೊಳ್ಳಬಹುದಾಗಿದ್ದು, ಸ್ವಿಚ್ ಮಾಡಬಹುದಾದ ಡ್ಯುಯಲ್ ಚಾನೆಲ್ ಎಬಿಎಸ್ ಸೌಲಭ್ಯವನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗಿದೆ.
MOST READ: ಪ್ರತಿ ಚಾರ್ಜ್ಗೆ ಬರೋಬ್ಬರಿ 240ಕಿ.ಮೀ ಮೈಲೇಜ್ ನೀಡುವ ಇವಿ ಸ್ಕೂಟರ್ ಬಿಡುಗಡೆ ಮಾಡಲಿದೆ ಓಲಾ

ಇನ್ನು ಹೊಸ ಬೈಕಿನಲ್ಲಿ ಹಾಲೋಜೆನ್ ಹೆಡ್ಲ್ಯಾಂಪ್ ಜೊತೆಗೆ ಎಲ್ಇಡಿ ಡಿಆರ್ಎಲ್ಎಸ್, ಎಲ್ಇಡಿ ಟೈಲ್ ಲೈಟ್ ಮತ್ತು ಟರ್ನ್ ಇಂಡಿಕೇಟರ್, ಎಲ್ಸಿಡಿ ಡಿಸ್ಪ್ಲೇ, 14.5-ಲೀಟರ್ ಸಾಮರ್ಥ್ಯ ಫ್ಯೂಲ್ ಟ್ಯಾಂಕ್, 855ಎಂಎಂ ಎತ್ತರದ ಆಸನ ಮತ್ತು ಸ್ಲಿಮ್ ಸೀಟ್ ಸೌಲಭ್ಯವನ್ನು ಪಡೆದುಕೊಂಡಿದೆ.

ಹಾಗೆಯೇ ಹೊಸ ಬೈಕಿನಲ್ಲಿ ಸುರಕ್ಷತೆಗಾಗಿ ಮುಂಭಾಗದ ಚಕ್ರದಲ್ಲಿ 320 ಎಂಎಂ ಡಿಸ್ಕ್ ಬ್ರೇಕ್, ಹಿಂಭಾಗದ ಚಕ್ರದಲ್ಲಿ 230-ಎಂಎಂ ಡಿಸ್ಕ್ ಬ್ರೇಕ್ ನೀಡಲಾಗಿದ್ದು, ಅಡ್ವೆಂಚರ್ ಟೂರರ್ ವೈಶಿಷ್ಟ್ಯತೆಗಾಗಿ ಮುಂಭಾಗದಲ್ಲಿ 19-ಇಂಚಿನ ಮತ್ತು ಹಿಂಬದಿಯಲ್ಲಿ 17-ಇಂಚಿನ ಟ್ಯೂಬ್ಲೆಸ್ ಟೈರ್ ಜೋಡಿಸಲಾಗಿದೆ.
MOST READ: ಅತಿ ಹೆಚ್ಚು ಮೈಲೇಜ್ ನೀಡುವ ಟಾಪ್ 10 ಬಜೆಟ್ ಬೆಲೆಯ ಬೈಕುಗಳಿವು..!

ಹೊಸ ಬೈಕ್ ಖರೀದಿಗಾಗಿ ಈಗಾಗಲೇ ಅಧಿಕೃತ ಬುಕ್ಕಿಂಗ್ ಪ್ರಕ್ರಿಯೆ ಆರಂಭವಾಗಿದ್ದು, ಹೊಸ ಬೈಕಿನ ವಿತರಣೆಯು ಶೀಘ್ರದಲ್ಲೇ ಶುರುವಾಗಲಿದೆ. ಬ್ಲ್ಯಾಕ್ ಮತ್ತು ಆರೇಂಜ್ ಬಣ್ಣಗಳ ಆಯ್ಕೆ ಹೊಂದಿರುವ ಹೊಸ ಬೈಕ್ ಮಾದರಿಯು ರಾಯಲ್ ಎನ್ಫೀಲ್ಡ್ ಹೊಸ ಮಿಟಿಯೊರ್ 350 ಜೊತೆಗೆ ದುಬಾರಿ ಬೆಲೆಯ ಬಿಎಂಡಬ್ಲ್ಯು ಜಿ 310 ಜಿಎಸ್ ಮಾದರಿಗಳಿಗೆ ಪೈಪೋಟಿ ನೀಡಲಿದೆ.