Just In
- 30 min ago
ದಿಢೀರನೆ ಕೈಕೊಟ್ಟ ಬ್ರೇಕ್, 3 ಕಿ.ಮೀ ರಿವರ್ಸ್ ಗೇರಿನಲ್ಲಿ ಸಾಗಿದ ಟ್ರಕ್ ಚಾಲಕ
- 1 hr ago
ಕೈಗೆಟುಕುವ ದರದಲ್ಲಿ ಟಿವಿಎಸ್ ಎಕ್ಸ್ಎಲ್100 ವಿನ್ನರ್ ಎಡಿಷನ್ ಬಿಡುಗಡೆ
- 2 hrs ago
ಭಾರತದಲ್ಲಿ ಅತಿದೊಡ್ಡ ಮಲ್ಟಿ ಬ್ರಾಂಡ್ ಕಾರ್ ಸರ್ವಿಸ್ ಸೆಂಟರ್ ತೆರೆದ ಬಾಷ್
- 13 hrs ago
ಮಧ್ಯಮ ಗಾತ್ರದ ಕಾರುಗಳಿಗೆ ಹೊಸ ಡೀಸೆಲ್ ಎಂಜಿನ್ ಪರಿಚಯಿಸಲು ಸಜ್ಜಾದ ಮಾರುತಿ ಸುಜುಕಿ
Don't Miss!
- News
''ಹಿಂಸಾಚಾರವನ್ನು ಎಂದಿಗೂ ಸಹಿಸುವುದಿಲ್ಲ'': ಮೆಲಾನಿಯಾ ಟ್ರಂಪ್ ವಿದಾಯದ ಭಾಷಣ
- Finance
ಕಾರು ಖರೀದಿಗೆ ಅತ್ಯಂತ ಕಡಿಮೆ ಬಡ್ಡಿ ದರಕ್ಕೆ ಸಾಲ ನೀಡುವ ಬ್ಯಾಂಕ್ ಗಳಿವು
- Sports
ಥಾಯ್ಲೆಂಡ್ ಓಪನ್ 2021: ಎರಡನೇ ಸುತ್ತಿಗೆ ಪ್ರವೇಶಿಸಿದ ಪಿವಿ ಸಿಂಧು
- Lifestyle
ಕೂದಲು ಬೇಗನೆ ಬೆಳ್ಳಗಾಗುವುದು: ಇದು ನಿಮ್ಮ ದೇಹದ ಕುರಿತು ಏನು ಸೂಚಿಸುತ್ತದೆ?
- Education
Indian Forest Service Recruitment 2021: 70 ಡಿಐಜಿಎಫ್/ಎಐಜಿಎಫ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Movies
ಚಿತ್ರೀಕರಣ ವೇಳೆ ಅಸ್ವಸ್ಥ: ನಟಿ ಅಲಿಯಾ ಭಟ್ ಆಸ್ಪತ್ರೆಗೆ ದಾಖಲು
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಬಿಡುಗಡೆಗೂ ಮುನ್ನ ಡೀಲರ್ಸ್ ಯಾರ್ಡ್ ತಲುಪಿದ ಕೆಟಿಎಂ ಹೊಸ 250 ಅಡ್ವೆಂಚರ್
ಕೆಟಿಎಂ ಇಂಡಿಯಾ ಕಂಪನಿಯು ತನ್ನ ಹೊಚ್ಚ ಹೊಸ ಬೈಕ್ ಮಾದರಿಯಾದ 250 ಅಡ್ವೆಂಚರ್ ಬೈಕ್ ಮಾದರಿಯನ್ನು ದೇಶಿಯ ಮಾರುಕಟ್ಟೆಯಲ್ಲಿ ಇದೇ ತಿಂಗಳಾಂತ್ಯಕ್ಕೆ ಬಿಡುಗಡೆ ಮಾಡುವ ಯೋಜನೆಯಲ್ಲಿದ್ದು, ಹೊಸ ಅಡ್ವೆಂಚರ್ ಬೈಕ್ ಮಾದರಿಯು ಈಗಾಗಲೇ ಕೆಟಿಎಂ ಪ್ರಮುಖ ಡೀಲರ್ಸ್‌ಗಳಲ್ಲಿ ಸ್ಟಾಕ್ ಮಾಡಲಾಗುತ್ತಿದೆ.

ಹೊಸ 250 ಅಡ್ವೆಂಚರ್ ಬೈಕ್ ಬಿಡುಗಡೆಗಾಗಿ ಈಗಾಗಲೇ ವಿವಿಧ ಹಂತದ ಹಂತದ ರೋಡ್ ಟೆಸ್ಟಿಂಗ್ ಪ್ರಕ್ರಿಯೆಯನ್ನು ಪೂರ್ಣಗೊಳಿಸಿರುವ ಕೆಟಿಎಂ ಕಂಪನಿಯು ಬಿಡುಗಡೆಗಾಗಿ ಪೂರ್ವಭಾವಿ ಸಿದ್ದತೆ ನಡೆಸುತ್ತಿದ್ದು, ಹೊಸ ಬೈಕ್ ಮಾದರಿಯನ್ನು ಪ್ರಸ್ತುತ ಮಾರುಕಟ್ಟೆಯಲ್ಲಿರುವ 390 ಅಡ್ವೆಂಚರ್ ಬೈಕ್ ಮಾದರಿಯಲ್ಲೇ ಕೆಲವು ಬದಲಾವಣೆಗಳೊಂದಿಗೆ ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಲಿದೆ.

ಭಾರತದಲ್ಲಿ ತನ್ನ ಸರಣಿ ಬೈಕ್‌ಗಳ ಮಾರಾಟವನ್ನು ಹೆಚ್ಚಿಸುತ್ತಿರುವ ಕೆಟಿಎಂ ಕಂಪನಿಯು ಕಳೆದ ಎರಡು ವರ್ಷಗಳ ಅವಧಿಯಲ್ಲಿ ನಾಲ್ಕು ಹೊಸ ಬೈಕ್‌ಗಳನ್ನು ಬಿಡುಗಡೆ ಮಾಡಿದ್ದು, ಮುಂಬರುವ ಇನ್ನಷ್ಟು ಹೊಸ ಬೈಕ್‌ಗಳ ಬಿಡುಗಡೆಗೆ ಸಿದ್ದವಾಗಿದೆ.

ಪ್ರಸ್ತುತ ಮಾರುಕಟ್ಟೆಯಲ್ಲಿರುವ 390 ಅಡ್ವೆಂಚರ್ ಮಾದರಿಗಿಂತ ಕೆಳದರ್ಜೆಯಲ್ಲಿ ಮಾರಾಟವಾಗಲಿರುವ ಹೊಸ 250 ಅಡ್ವೆಂಚರ್ ಮಾದರಿಯು 390 ಅಡ್ವೆಂಚರ್ ಬೈಕಿನಲ್ಲಿರುವಂತಹ ಪ್ರಮುಖ ಅಂಶಗಳಾದ ವಿನ್ಯಾಸ, ಚಾಸಿಸ್ ಹಾಗೂ ಫ್ರೇಂಗಳನ್ನು ಎರವಲು ಪಡೆದುಕೊಂಡಿದೆ.

250 ಅಡ್ವೆಂಚರ್ ಮತ್ತು 390 ಅಡ್ವೆಂಚರ್ ಬೈಕಿನಲ್ಲಿ ಕೆಲವು ತಾಂತ್ರಿಕ ಅಂಶಗಳ ಬದಲಾವಣೆಯನ್ನು ಹೊರತುಪಡಿಸಿ ಬಾಡಿ ಪ್ಯಾನೆಲ್, ಬೆಲ್ಲಿ ಪ್ಯಾನ್, ಫ್ಯೂಯಲ್ ಟ್ಯಾಂಕ್ ಎಕ್ಸ್ ಟೆಂಷನ್, ರೇಡಿಯೇಟರ್ ಶ್ರೌಡ್ ಹಾಗೂ ಟೇಲ್ ಸೆಕ್ಷನ್ ಸಮನಾಂತರವಾಗಿರಲಿವೆ. 250 ಅಡ್ವೆಂಚರ್ ಬೈಕಿನಲ್ಲಿ 390 ಅಡ್ವೆಂಚರ್ ಬೈಕಿಗಿಂತಲೂ ವಿಭಿನ್ನವಾದ ಬಾಡಿ ಗ್ರಾಫಿಕ್ಸ್ ಹಾಗೂ ಹಾಲೊಜೆನ್ ಹೆಡ್‍ಲ್ಯಾಂಪ್ ಯುನಿಟ್ ಹೊಂದಿದ್ದು, ಪ್ರೀಮಿಯಂ ಮಾದರಿಯಾದ 390 ಅಡ್ವೆಂಚರ್ ಬೈಕಿನಲ್ಲಿ ಪೂರ್ಣ ಪ್ರಮಾಣದ ಎಲ್‍ಇಡಿ ಯುನಿಟ್ ನೀಡಲಾಗಿದೆ.
MOST READ: ಅತಿ ಕಡಿಮೆ ಬೆಲೆಯಲ್ಲಿ ಹೆಚ್ಚು ಮೈಲೇಜ್ ನೀಡುವ ರೆಟ್ರೊ ಎಲೆಕ್ಟ್ರಿಕ್ ಬೈಕ್ ಬಿಡುಗಡೆ

ವರದಿಗಳ ಪ್ರಕಾರ, ಕೆಟಿಎಂ 250 ಅಡ್ವೆಂಚರ್ ಬೈಕ್ ಮಾದರಿಯು 390 ಬೈಕಿನಲ್ಲಿರುವಂತಹ ಅಲಾಯ್ ವ್ಹೀಲ್ ಹಾಗೂ ಟಯರ್ ಮಾದರಿಗಳನ್ನೇ ಹೊಂದಿರಲಿದ್ದು, ಮುಂಭಾಗದಲ್ಲಿ 19 ಇಂಚಿನ ವ್ಹೀಲ್ ಹಾಗೂ ಹಿಂಭಾಗದಲ್ಲಿರುವ 17 ಇಂಚಿನ ವ್ಹೀಲ್‍ಗಳು ಸೇರಿಸಲಾಗಿದೆ.

ಬೆಲೆ ಕಾರಣಕ್ಕೆ 390 ಅಡ್ವೆಂಚರ್ ಬೈಕಿನಲ್ಲಿರುವ ಹಲವು ಪ್ರೀಮಿಯಂ ಫೀಚರ್ಸ್‌ಗಳು 250 ಅಡ್ವೆಂಚರ್ ಬೈಕ್‌ನಲ್ಲಿ ನೀಡುವುದಿಲ್ಲ ಎನ್ನಲಾಗಿದ್ದು, 250 ಅಡ್ವೆಂಚರ್ ಬೈಕಿನಲ್ಲಿ 249ಸಿಸಿಯ ಸಿಂಗಲ್ ಸಿಲಿಂಡರ್ ಲಿಕ್ವಿಡ್ ಕೂಲ್ ಬಿಎಸ್ 6 ಎಂಜಿನ್ ಅಳವಡಿಸಲಾಗುತ್ತಿದೆ.
MOST READ: ಭಾರತದಲ್ಲಿಯೂ ಬಿಡುಗಡೆಯಾಗಲಿದೆ ದುಬಾರಿ ಬೆಲೆಯ ಫೋರ್ಜಾ ಮ್ಯಾಕ್ಸಿ ಸ್ಕೂಟರ್

ಹೊಸ ಎಂಜಿನ್ 6-ಸ್ಪೀಡ್ ಗೇರ್‌ಬಾಕ್ಸ್‌ನೊಂದಿಗೆ 30-ಬಿಹೆಚ್‍ಪಿ ಮತ್ತು 24-ಎನ್‍ಎಂ ಟಾರ್ಕ್ ಉತ್ಪಾದಿಸಲಿದ್ದು, ಆಫ್-ರೋಡ್ ಕೌಶಲ್ಯಕ್ಕೆ ಬೇಕಾದ ಹಲವು ವಿಶೇಷ ತಾಂತ್ರಿಕ ಸೌಲಭ್ಯಗಳಿವೆ. ಇನ್ನು ಹೊಸ ಬೈಕಿನ ಬೆಲೆಯು ಸಾಮಾನ್ಯ ಡ್ಯೂಕ್ 250 ಮಾದರಿಯ ಬೆಲೆಗಿಂತ ತುಸು ಹೆಚ್ಚಿರಲಿದ್ದು, ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 2.20 ಲಕ್ಷದಿಂದ ರೂ. 2.40 ಲಕ್ಷದ ತನಕ ಬೆಲೆ ಪಡೆದುಕೊಳ್ಳಬಹುದಾಗಿದೆ ಎನ್ನಲಾಗಿದೆ.