ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಕೆಟಿಎಂ 390 ಅಡ್ವೆಂಚರ್

ಕೆಟಿ‍ಎಂ 390 ಅಡ್ವೆಂಚರ್ ಬೈಕ್ ಅನ್ನು 2019ರ ಇಂಡಿಯಾ ಬೈಕ್ ವೀಕ್‍‍ನಲ್ಲಿ ಅನಾವರಣಗೊಳಿಸಿತ್ತು. ಸಾಕಷ್ಟು ಸಂಚಲವನ್ನು ಮೂಡಿಸಿದ ಕೆಟಿಎಂ 390 ಅಡ್ವೆಂಚರ್ ಬೈಕ್ ಅನ್ನು ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸುವ ಮೊದಲು ಸ್ಪಾಟ್ ಟೆಸ್ಟ್ ನಡೆಸಲಾಗಿದೆ.

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಕೆಟಿಎಂ 390 ಅಡ್ವೆಂಚರ್

ಕೆಟಿಎಂ ಭಾರತದಲ್ಲಿ ಸ್ಪಾಟ್ ಟೆಸ್ಟ್ ನಡೆಸಿರುವುದನ್ನು ರಶ್‍ಲೇನ್ ಬಹಿರಂಗ ಪಡಿಸಿದೆ. ಕೆಟಿಎಂ 390 ಅಡ್ವೆಂಚರ್ ಬೈಕಿನಲ್ಲಿ ಎಡಿವಿ ಸ್ಪೋರ್ಟ್ಸ್ ಸ್ಪ್ಲಿಟ್ ಎಲ್‍ಇಡಿ ಹೆಡ್‍‍ಲ್ಯಾಂಪ್‍, ಎಲ್‍ಇಡಿ ಟರ್ನ್‍ ಇಂಡಿಕೇಟರ್‍‍‍ಗಳು ಮತ್ತು ಬ್ಲೂಟೂತ್ ಕನೆಕ್ಟಿವಿಟಿಯನ್ನು ಹೊಂದಿರುವ ಬಣ್ಣದಿಂದ ಕೂಡಿದ ಆಕರ್ಷಕ ಟಿಎಫ್‍ಟಿ ಡಿಸ್‍‍ಪ್ಲೇ ಅನ್ನು ಅಳವಡಿಸಲಾಗಿದೆ. ಈ ಬೈಕಿನಲ್ಲಿ 19 ಇಂಚಿನ ಫ್ರಂಟ್ ಮತ್ತು 17 ಇಂಚಿನ ರೇರ್ ಅಲಾಯ್ ವ್ಹೀಲ್‍ಗಳಲ್ಲಿ ಡ್ಯುಯಲ್ ಪರ್ಪಸ್ ಟಯರ್‍‍ಗಳನ್ನು ಅಳವಡಿಸಲಾಗಿದೆ.

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಕೆಟಿಎಂ 390 ಅಡ್ವೆಂಚರ್

ಕೆಟಿಎಂ 390 ಅಡ್ವೆಂಚರ್ ಬೈಕಿನಲ್ಲಿ ಅಲ್ಯೂಮಿನಿಯಂ ಹ್ಯಾಂಡಲ್‍‍ಬಾರ್‍‍ಗಳು ಸ್ಪ್ಲಿಟ್ ಸೀಟುಗಳು ಮತ್ತು ಫ್ಯೂಯಲ್ ಟ್ಯಾಂಕ್ ಸ್ಪಾಯ್ಲರ್‍‍ಗಳನ್ನು ಕೂಡ ಅಳವಡಿಸಲಾಗಿದೆ. ಫ್ಯೂಯಲ್ ಟ್ಯಾಂಕ್‍‍ನ ಸೀಟು‍‍ಗಳು ವಿಸ್ತರಿಸಿದಾಗ ಹ್ಯಾಂ‍ಡಲ್ ಬಾರ್‍‍ಗಳನ್ನು ಹೆಚ್ಚಿಸಲಾಗುತ್ತದೆ.

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಕೆಟಿಎಂ 390 ಅಡ್ವೆಂಚರ್

ಕೆಟಿಎಂ 390 ಅಡ್ವೆಂಚರ್ ಬೈಕಿನಲ್ಲಿ 200 ಗ್ರೌಂಡ್ ಕ್ಲಿಯರೆನ್ಸ್ ಎಂಎಂ ಮತ್ತು 855 ಸೀಟ್ ಎತ್ತರವನ್ನು ಹೊಂದಿದೆ. ಈ ಬೈಕಿನಲ್ಲಿ ಡ್ಯೂಕ್ 390 ಬೈಕಿನಲ್ಲಿರುವಂತಹ 373 ಸಿಸಿ ಲಿಕ್ವಿಡ್ ಕೂಲ್ಡ್ ಸಿಂಗಲ್ ಸಿಲಿಂಡರ್ ಎಂಜಿನ್ ಅಳವಡಿಸಲಾಗಿದೆ. ಈ ಎಂಜಿನ್ 43 ಬಿ‍‍ಹೆಚ್‍‍ಪಿ ಪವರ್ ಹಾಗೂ 37 ಎನ್‍ಎಂ ಟಾರ್ಕ್ ಉತ್ಪಾದಿಸುತ್ತದೆ.

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಕೆಟಿಎಂ 390 ಅಡ್ವೆಂಚರ್

ಈ ಎಂಜಿನ್‍‍ನಲ್ಲಿ 6 ಸ್ಪೀಡಿನ ಟ್ರಾನ್ಸ್ ಮಿಷನ್ ಅಳವಡಿಸಲಾಗಿದೆ. ಎಂಜಿನ್‍ನೊಂದಿಗೆ ಡ್ಯುಯಲ್ ಚಾನೆಲ್ ಎಬಿಎಸ್ ಅನ್ನು ಅಳವಡಿಸಲಾಗಿದೆ. ಎಬಿಎಸ್ ಆಫ್ ರೋಡ್ ಮೋಡ್ ಅನ್ನು ಹೊಂದಿದೆ.

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಕೆಟಿಎಂ 390 ಅಡ್ವೆಂಚರ್

ಇದರಿಂದಾಗಿ ರೈಡರ್ ಎಬಿಎಸ್ ಅನ್ನು ಸಂಪೂರ್ಣವಾಗಿ ಆಫ್ ಮಾಡಲು ಸಾಧ್ಯವಾಗುತ್ತದೆ. 43 ಎಂಎಂ ಬ್ರೇಕಿಂಗ್ ಇನ್ವಿರ್ಡಡ್ ಫೋರ್ಕ್‍‍ಗಳನ್ನು ಹೊಂದಿದ್ದು, 170 ಎಂಎಂ ಮತ್ತು 177 ಎಂಎಂ ಮೊನೊಶಾಕ್ ಅನ್ನು ಹೊಂದಿದೆ.

MOST READ: ನವೆಂಬರ್ ತಿಂಗಳಲ್ಲಿ ಮಾರಾಟವಾದ ರಾಯಲ್ ಎನ್‍‍ಫೀಲ್ಡ್ ಬೈಕ್‍‍ಗಳೆಷ್ಟು ಗೊತ್ತಾ?

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಕೆಟಿಎಂ 390 ಅಡ್ವೆಂಚರ್

ಮುಂಭಾಗದಲ್ಲಿ 320 ಎಂಎಂ ಸಿಂಗಲ್ ಡಿಸ್ಕ್ ಮತ್ತು ಹಿಂಭಾಗದಲ್ಲಿ 230 ಎಂಎಂ ಡಿಸ್ಕ್ ಬ್ರೇಕಿಂಗ್ ಅನ್ನು ಹೊಂದಿದೆ. ಕೆಟಿಎಂ 390 ಅಡ್ವೆಂಚರ್ ಬೈಕಿನಲ್ಲಿ ಟ್ರಾಕ್ಷನ್ ಕಂಟ್ರೂಲ್ ಅನ್ನು ಹೊಂದುವ ಮೊದಲ ಬೈಕ್ ಆಗಿರುತ್ತದೆ.

MOST READ: ಬೈಕ್ ಸವಾರನ ಪ್ರಾಣ ಉಳಿಸಿದ ಆಪಲ್ ವಾಚ್..!

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಕೆಟಿಎಂ 390 ಅಡ್ವೆಂಚರ್

ಹೊಸ ಕೆಟಿಎಂ 390 ಅಡ್ವೆಂಚರ್ ಬೈಕ್ ಅತ್ಯಾಧುನಿಕ ಫೀಚರ್ಸ್‍ಗಳನ್ನು ಹೊಂದಿರಲಿದೆ. ಕೆ‍ಟಿಎಂ 390 ಡ್ಯೂಕ್ ಬೈಕಿನ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.2.48 ಲಕ್ಷಗಳಾಗಿದೆ. ಇನ್ನೂ ಕೆಟಿಎಂ 390 ಅಡ್ವೆಂಚರ್ ಬೈಕಿಗೆ ಭಾರತದ ಎಕ್ಸ್ ಶೋರೂಂ ಪ್ರಕಾರ 3.32 ಲಕ್ಷಗಳಾಗಿರಲಿದೆ.

MOST READ: ಹೊಸ ಲುಕ್‍‍ನಲ್ಲಿ ಮಿಂಚಿದ ಮಾಡಿಫೈ ಕಿಯಾ ಸೆಲ್ಟೋಸ್

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಕೆಟಿಎಂ 390 ಅಡ್ವೆಂಚರ್

ಹೊಸ ಕೆಟಿಎಂ 390 ಅಡ್ವೆಂಚರ್ ಬೈಕ್ ಟ್ರಾ ಕ್ಷನ್ ಕಂಟ್ರೂಲ್ ಮತ್ತು ಎಬಿಎಸ್ ನಂತಹ ಹೊಸ ಫೀಚರ್ಸ್‍‍ಗಳ ಜೊತೆಗೆ ಬಿಎಸ್-6 ಎಂಜಿನ್ ಅನ್ನು ಹೊಂದಿರಲಿದೆ. ಇದೇ ಕಾರಣದಿಂದ ಈ ಬೈಕಿನ ಬೆಲೆಯು ಹೆಚ್ಚಾಗಿದೆ. ಈ ಬೈಕ್ ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ನಂತರ ರಾಯಲ್ ಎನ್‍‍ಫೀಲ್ಡ್ ಹಿಮಾಲಯನ್ ಹಾಗೂ ಬಿ‍ಎಂ‍‍ಡಬ್ಲ್ಯು ಮೋಟೊರಾಡ್ ಜಿ310ಜಿ‍ಎಸ್ ಬೈಕುಗಳಿಗೆ ಪೈಪೋಟಿ ನೀಡಲಿದೆ.

Article Published On: Monday, January 6, 2020, 11:55 [IST]
English summary
KTM 390 Adventure continues testing in India – Spied - Read in Kannaada
Read more on ಕೆಟಿಎಂ ktm
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+