ಮಹೀಂದ್ರಾ ಮೊಜೊ 300 ಬೈಕ್ ಖರೀದಿಸುವರಿಗೆ ರೂ.5 ಸಾವಿರ ಮೌಲ್ಯದ ಹೆಲ್ಮೆಟ್ ಉಚಿತ

ಮಹೀಂದ್ರಾ ಟೂ ವ್ಹೀಲರ್ ಕಂಪನಿಯು ತನ್ನ ಬಿಎಸ್-6 ಮೊಜೊ 300 ಬೈಕನ್ನು ಭಾರತೀಯ ಮಾರುಕಟ್ಟೆಯಲ್ಲಿ ಈ ವರ್ಷದ ಜುಲೈ ತಿಂಗಳಲ್ಲಿ ಬಿಡುಗಡೆಗೊಳಿಸಿತ್ತು. ಈ ಹೊಸ ಮಹೀಂದ್ರಾ ಮೊಜೊ 300 ಬೈಕನ್ನು ಖರೀದಿಸುವ ಗ್ರಾಹಕರಿಗೆ ವರ್ಷಾಂತ್ಯ ಬಂಪರ್ ಆಫರ್ ಅನ್ನು ಘೋಷಿಸಿದೆ.

ಮಹೀಂದ್ರಾ ಮೊಜೊ 300 ಬೈಕ್ ಖರೀದಿಸುವರಿಗೆ ರೂ.5 ಸಾವಿರ ಮೌಲ್ಯದ ಹೆಲ್ಮೆಟ್ ಉಚಿತ

ಹೊಸ ಮಹೀಂದ್ರಾ ಮೊಜೊ 300 ಬೈಕನ್ನು ಖರೀದಿಸುವ ಗ್ರಾಹಕರು ರೂ.4,901 ಮೌಲ್ಯದ ಶಿರೋ ಬ್ರ್ಯಾಂಡೆಡ್ ಹೆಲ್ಮೆಟ್ ಸಂಪೂರ್ಣವಾಗಿ ಉಚಿತವಾಗಿ ನೀಡಲಿದೆ. ಹೆಚ್ಚುವರಿಯಾಗಿ ರೂ.2350 ಮೌಲ್ಯದ ಮೊಜೊ ಬ್ರ್ಯಾಂಡೆಡ್ ಲಾಂಗ್ ರೈಡಿಂಗ್ ಗ್ಲೋವ್‌ಗಳನ್ನು ಕೂಡ ಉಚಿತವಾಗಿ ಪಡೆಯಬಹುದು. ಈ ಆಫರ್ ಡಿಸೆಂಬರ್ ತಿಂಗಳ ಅಂತ್ಯದವೆರೂ ಲಭ್ಯವಿದೆ. ಕಳೆದ ತಿಂಗಳು ಮಹೀಂದ್ರಾ ಮೊಜೊ 300 ಮಾದರಿಯ 146 ಯುನಿಟ್ ಗಳು ಮಾರಟವಾಗಿವೆ.

ಮಹೀಂದ್ರಾ ಮೊಜೊ 300 ಬೈಕ್ ಖರೀದಿಸುವರಿಗೆ ರೂ.5 ಸಾವಿರ ಮೌಲ್ಯದ ಹೆಲ್ಮೆಟ್ ಉಚಿತ

ಈ ಹೊಸ ಮಹೀಂದ್ರಾ ಮೊಜೊ ಬೈಕಿನಲ್ಲಿ 294.7 ಸಿಸಿ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 25.2 ಬಿಹೆಚ್‌ಪಿ ಪವರ್ ಮತ್ತು 25.96 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಇನ್ನು ಇದರ ಹಿಂದಿನ ಮಾದರಿಯು 26.3 ಬಿಹೆಚ್‌ಪಿ ಮತ್ತು 28 ಎನ್ಎಂ ಟಾರ್ಕ್ ಉತ್ಪಾದಿಸುತ್ತಿತ್ತು.

MOST READ: ದುಬಾರಿಯಾಯ್ತು ಜನಪ್ರಿಯ ಬಿಎಸ್-6 ಯಮಹಾ ಎಂಟಿ-15 ಬೈಕ್

ಮಹೀಂದ್ರಾ ಮೊಜೊ 300 ಬೈಕ್ ಖರೀದಿಸುವರಿಗೆ ರೂ.5 ಸಾವಿರ ಮೌಲ್ಯದ ಹೆಲ್ಮೆಟ್ ಉಚಿತ

ಇದರ ಹಿಂದಿನ ಮಾದರಿಗೆ ಹೋಲಿಸಿದರೆ ಹೊಸ ಬಿಎಸ್ 6 ಮಾದರಿಯ ಬಿಹೆಚ್‍ಪಿ ಪವರ್ ಮತ್ತು ಟಾರ್ಕ್ ಅಂಕಿ ಅಂಶಗಳು ಕಡಿಮೆಯಾಗಿದೆ. ಇನ್ನು ಎಂಜಿನ್ ನೊಂದಿಗೆ 6-ಸ್ಪೀಡ್ ಗೇರ್ ಬಾಕ್ಸ್ ಅನ್ನು ಜೋಡಿಸಲಾಗಿದೆ. ಹೊಸ ಮಹೀಂದ್ರಾ ಮೊಜೊ ಬೈಕಿನ ಸಬ್ ಫ್ರೇಮ್ ನಲ್ಲಿ ಬದಲಾವಣೆಗಳನ್ನು ಮಾಡಲಾಗಿದೆ. ಇದರಿಂದ ಹಿಂದಿನ ಬಿಎಸ್ 4 ಮಾದರಿಗಿಂತ ಸೀಟ್ ಎತ್ತರ ಹೆಚ್ಚಾಗಿದೆ.

ಮಹೀಂದ್ರಾ ಮೊಜೊ 300 ಬೈಕ್ ಖರೀದಿಸುವರಿಗೆ ರೂ.5 ಸಾವಿರ ಮೌಲ್ಯದ ಹೆಲ್ಮೆಟ್ ಉಚಿತ

ಈ ಹೊಸ ಮಹೀಂದ್ರಾ ಮೊಜೊ 300 ಬೈಕ್ ಗಾರ್ನೆಟ್ ಬ್ಲ್ಯಾಕ್, ರೂಬಿ ರೆಡ್, ರೆಡ್ ಅಗೇಟ್ ಮತ್ತು ಪರ್ಲ್ ಬ್ಲ್ಯಾಕ್ ಎಂಬ ನಾಲ್ಕು ರೀತಿಯ ಬಣ್ಣಗಳ ಆಯ್ಕೆಯಲ್ಲಿ ಲಭ್ಯವಿದೆ.

MOST READ: ಹೊಸ ಬಣ್ಣದ ಆಯ್ಕೆಯನ್ನು ಪಡೆದುಕೊಂಡ 2021ರ ಕವಾಸಕಿ ನಿಂಜಾ 1000 ಎಸ್‌ಎಕ್ಸ್ ಬೈಕ್

ಮಹೀಂದ್ರಾ ಮೊಜೊ 300 ಬೈಕ್ ಖರೀದಿಸುವರಿಗೆ ರೂ.5 ಸಾವಿರ ಮೌಲ್ಯದ ಹೆಲ್ಮೆಟ್ ಉಚಿತ

ಇನ್ನು ಹೊಸ ಮಹೀಂದ್ರಾ ಮೊಜೊ ಬೈಕಿನಲ್ಲಿ ಟ್ವಿನ್-ಪಾಡ್ ಹೆಡ್‌ಲ್ಯಾಂಪ್, ಸ್ಟೆಪ್-ಅಪ್ ಸಿಂಗಲ್ ಪೀಸ್ ಸೀಟ್, ಒಡೋಮೀಟರ್ ಮತ್ತು ಟ್ರಿಪ್-ಮೀಟರ್, ಸೈಡ್ ಮೌಂಟೆಡ್ ಎಕ್ಸಾಸ್ಟ್ ಸಿಸ್ಟಂ, ಸೆಮಿ ಡಿಜಿಟಲ್ ಕ್ಲಸ್ಟರ್ ಮತ್ತು ದೊಡ್ಡ ರೇಡಿಯೇಟರ್ ಕವರ್ ಅನ್ನು ಹೊಂದಿದೆ.

ಮಹೀಂದ್ರಾ ಮೊಜೊ 300 ಬೈಕ್ ಖರೀದಿಸುವರಿಗೆ ರೂ.5 ಸಾವಿರ ಮೌಲ್ಯದ ಹೆಲ್ಮೆಟ್ ಉಚಿತ

ಮಹೀಂದ್ರಾ ಮೊಜೊ ಬೈಕನ್ನು ಭಾರತದಲ್ಲಿ 2015ರಲ್ಲಿ ಮೊದಲ ಬಾರಿಗೆ ಬಿಡುಗಡೆಗೊಳಿಸಿದ್ದರು. ಮಹೀಂದ್ರಾ ಮೊಜೊ ಮಾರುಕಟ್ಟೆಯಲ್ಲಿ ಹೆಚ್ಚು ಮಾರಾಟವಾಗುವ ಟೂರಿಂಗ್ ಬೈಕುಗಳಲ್ಲಿ ಒಂದಾಗಿದೆ.

MOST READ: ಬಿಡುಗಡೆಯಾಯ್ತು ಹೊಸ ಕವಾಸಕಿ ವಲ್ಕನ್ ಎಸ್ ಬೈಕ್

ಮಹೀಂದ್ರಾ ಮೊಜೊ 300 ಬೈಕ್ ಖರೀದಿಸುವರಿಗೆ ರೂ.5 ಸಾವಿರ ಮೌಲ್ಯದ ಹೆಲ್ಮೆಟ್ ಉಚಿತ

ಈ ಬೈಕಿನ ಮುಂಭಾಗದಲ್ಲಿ 320 ಎಂಎಂ ಡಿಸ್ಕ್ ಬ್ರೇಕ್ ಮತ್ತು ಹಿಂಭಾಗದಲ್ಲಿ 240 ಎಂಎಂ ಡಿಸ್ಕ್ ಬ್ರೇಕ್ ಅನ್ನು ಅಳವಡಿಸಿದೆ. ಇದರೊಂದಿಗೆ ಡ್ಯುಯಲ್-ಚಾನೆಲ್ ಎಬಿಎಸ್ ಅನ್ನು ಅಳವಡಿಸಿದೆ. ಈ ಬಿಎಸ್-6 ಮಹೀಂದ್ರಾ ಮೊಜೊ 300 ಸಂಸ್ಪೆಕ್ಷನ್ ಗಾಗಿ ಮುಂಭಾಗದಲ್ಲಿ ಟೆಲಿಸ್ಕೋಪಿಕ್ ಫೋರ್ಕ್‌ಗಳು ಮತ್ತು ಹಿಂಭಾಗದಲ್ಲಿ ಮೊನೊ-ಶಾಕ್ ಸಂಸ್ಪೆಕ್ಷನ್ ಸೆಟಪ್ ಅನ್ನು ಅಳವಡಿಸಲಾಗಿದೆ.

ಮಹೀಂದ್ರಾ ಮೊಜೊ 300 ಬೈಕ್ ಖರೀದಿಸುವರಿಗೆ ರೂ.5 ಸಾವಿರ ಮೌಲ್ಯದ ಹೆಲ್ಮೆಟ್ ಉಚಿತ

ಹೊಸ ಮಹೀಂದ್ರಾ ಮೊಜೊ 300 ಬೈಕ್ ಆಕರ್ಷಕ ಲುಕ್ ಅನ್ನು ಹೊಂದಿದೆ. ಈ ಹೊಸ ಮಹೀಂದ್ರಾ ಮೊಜೊ 300 ಭಾರತೀಯ ಮಾರುಕಟ್ಟೆಯಲ್ಲಿ ಬಜಾಜ್ ಡೊಮಿನಾರ್ 250 ಬೈಕಿಗೆ ನೇರ ಪೈಪೋಟಿಯನ್ನು ನೀಡುತ್ತದೆ.

Most Read Articles

Kannada
English summary
Mahindra Mojo 300 Buyers To Get Free Shiro Helmet Worth Rs 5k. Read In Kannada.
Story first published: Monday, December 14, 2020, 12:09 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X