ಬಿಎಸ್-6 ಮೊಜೊ 300 ಬೈಕಿನ ಬೆಲೆಯನ್ನು ಹೆಚ್ಚಿಸಿದ ಮಹೀಂದ್ರಾ

ಮಹೀಂದ್ರಾ ಟೂ ವ್ಹೀಲರ್ ಕಂಪನಿಯು ತನ್ನ ಬಿಎಸ್-6 ಮೊಜೊ 300 ಬೈಕನ್ನು ಭಾರತೀಯ ಮಾರುಕಟ್ಟೆಯಲ್ಲಿ ಇತ್ತೀಚೆಗೆ ಬಿಡುಗಡೆಗೊಳಿಸಿತ್ತು. ಈ ಹೊಸ ಮಹೀಂದ್ರಾ ಮೊಜೊ 300 ಬೈಕಿನ ಕೆಲವು ಬಣ್ಣಗಳ ಆಯ್ಕೆಯ ಮಾದರಿಗಳ ಬೆಲೆಯನ್ನು ಹೆಚ್ಚಿಸಿದೆ.

ಬಿಎಸ್-6 ಮೊಜೊ 300 ಬೈಕಿನ ಬೆಲೆಯನ್ನು ಹೆಚ್ಚಿಸಿದ ಮಹೀಂದ್ರಾ

ಈ ಹೊಸ ಮಹೀಂದ್ರಾ ಮೊಜೊ 300 ಬೈಕ್ ಗಾರ್ನೆಟ್ ಬ್ಲ್ಯಾಕ್, ರೂಬಿ ರೆಡ್, ರೆಡ್ ಅಗೇಟ್ ಮತ್ತು ಪರ್ಲ್ ಬ್ಲ್ಯಾಕ್ ಎಂಬ ನಾಲ್ಕು ರೀತಿಯ ಬಣ್ಣಗಳ ಆಯ್ಕೆಯಲ್ಲಿ ಲಭ್ಯವಿದೆ. ವರದಿಗಳ ಪ್ರಕಾರ ರೆಡ್ ಅಗೇಟ್ ಮತು ರೂಬಿ ರೆಡ್ ಮಾದರಿಗಳ ಬೆಲೆಯನ್ನು ರೂ.11,000 ಗಳವರೆಗೆ ಹೆಚ್ಚಿಸಿದೆ. ಇನ್ನು ಗಾರ್ನೆಟ್ ಬ್ಲ್ಯಾಕ್ ಬಣ್ಣದ ಆಯ್ಕೆಯ ಮಾದರಿಗೆ ರೂ.6,000 ಗಳವರೆಗೆ ಹೆಚ್ಚಿಸಿದೆ. ಆದರೆ ಬೇಸ್ ಸ್ಪೇಕ್ ಬ್ಲ್ಯಾಕ್ ಪರ್ಲ್ ಬಣ್ಣದ ಮಾದರಿಯ ಬೆಲೆಯಲ್ಲಿ ಯಾವುದೇ ಬದಲಾವಣೆಗಳನ್ನು ಮಾಡಲಾಗಿಲ್ಲ.

ಬಿಎಸ್-6 ಮೊಜೊ 300 ಬೈಕಿನ ಬೆಲೆಯನ್ನು ಹೆಚ್ಚಿಸಿದ ಮಹೀಂದ್ರಾ

ಇದೀಗ ಹೊಸ ಮೊಜೊ 300 ಬೈಕಿನ ಎಕ್ಸ್ ಶೋರೂಂ ಬೆಲೆಯು ರೂ.2.00-2.11 ಲಕ್ಷಗಳಾಗಿದೆ. ಈ ಹೊಸ ಮಹೀಂದ್ರಾ ಮೊಜೊ ಬೈಕಿನಲ್ಲಿ 294.7 ಸಿಸಿ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 25.2 ಬಿಹೆಚ್‌ಪಿ ಪವರ್ ಮತ್ತು 25.96 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

MOST READ: ಬಿಡುಗಡೆಯ ಸನಿಹದಲ್ಲಿ ಬಹುನಿರೀಕ್ಷಿತ ಬಿಎಸ್-6 ಹೀರೋ ಬೈಕುಗಳು

ಬಿಎಸ್-6 ಮೊಜೊ 300 ಬೈಕಿನ ಬೆಲೆಯನ್ನು ಹೆಚ್ಚಿಸಿದ ಮಹೀಂದ್ರಾ

ಇನ್ನು ಇದರ ಹಿಂದಿನ ಮಾದರಿಯು 26.3 ಬಿಹೆಚ್‌ಪಿ ಮತ್ತು 28 ಎನ್ಎಂ ಟಾರ್ಕ್ ಉತ್ಪಾದಿಸುತ್ತಿತ್ತು. ಇದರ ಹಿಂದಿನ ಮಾದರಿಗೆ ಹೋಲಿಸಿದರೆ ಹೊಸ ಬಿಎಸ್ 6 ಮಾದರಿಯ ಬಿಹೆಚ್‍ಪಿ ಪವರ್ ಮತ್ತು ಟಾರ್ಕ್ ಅಂಕಿ ಅಂಶಗಳು ಕಡಿಮೆಯಾಗಿದೆ. ಇನ್ನು ಎಂಜಿನ್ ನೊಂದಿಗೆ 6-ಸ್ಪೀಡ್ ಗೇರ್ ಬಾಕ್ಸ್ ಅನ್ನು ಜೋಡಿಸಲಾಗಿದೆ.

ಬಿಎಸ್-6 ಮೊಜೊ 300 ಬೈಕಿನ ಬೆಲೆಯನ್ನು ಹೆಚ್ಚಿಸಿದ ಮಹೀಂದ್ರಾ

ಮಹೀಂದ್ರಾ ಕಂಪನಿಯು ಈ ಬಿಎಸ್-6 ಮೊಜೊ 300 ಬೈಕಿನ ಬುಕ್ಕಿಂಗ್ ಅನ್ನು ಸ್ವೀಕರಿಸಲು ಕಳೆದ ತಿಂಗಳಿನಿಂದ ಪ್ರಾರಂಭಿಸಿದ್ದಾರೆ. ಈ ಹೊಸ ಮೊಜೊ 300 ಬೈಕನ್ನು ಖರೀದಿಸಲು ಇಚ್ಚಿಸುವ ಗ್ರಾಹಕರು ಟೋಕನ್ ಮೊತ್ತ ರೂ.5,000 ಪಾವತಿಸಿ ಬುಕ್ಕಿಂಗ್ ಮಾಡಿಕೊಳ್ಳಬಹುದಾಗಿದೆ. ಇನ್ನು ಈ ಹೊಸ ಬೈಕಿನ ವಿತರಣೆಯನ್ನು ಮುಂದಿನ ತಿಂಗಳಿನಿಂದ ಪ್ರಾರಂಭಿಸಬಹುದು.

MOST READ: ಬಿಡುಗಡೆಯಾಯ್ತು ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್‍‍ಮಾಸ್ಟರ್ ಬೈಕ್

ಬಿಎಸ್-6 ಮೊಜೊ 300 ಬೈಕಿನ ಬೆಲೆಯನ್ನು ಹೆಚ್ಚಿಸಿದ ಮಹೀಂದ್ರಾ

ಇನ್ನು ಹೊಸ ಮಹೀಂದ್ರಾ ಮೊಜೊ ಬೈಕಿನಲ್ಲಿ ಟ್ವಿನ್-ಪಾಡ್ ಹೆಡ್‌ಲ್ಯಾಂಪ್, ಸ್ಟೆಪ್-ಅಪ್ ಸಿಂಗಲ್ ಪೀಸ್ ಸೀಟ್, ಒಡೋಮೀಟರ್ ಮತ್ತು ಟ್ರಿಪ್-ಮೀಟರ್, ಸೈಡ್ ಮೌಂಟೆಡ್ ಎಕ್ಸಾಸ್ಟ್ ಸಿಸ್ಟ, ಸೆಮಿ ಡಿಜಿಟಲ್ ಕ್ಲಸ್ಟರ್ ಮತ್ತು ದೊಡ್ಡ ರೇಡಿಯೇಟರ್ ಕವರ್ ಅನ್ನು ಹೊಂದಿದೆ.

ಬಿಎಸ್-6 ಮೊಜೊ 300 ಬೈಕಿನ ಬೆಲೆಯನ್ನು ಹೆಚ್ಚಿಸಿದ ಮಹೀಂದ್ರಾ

ಮಹೀಂದ್ರಾ ಮೊಜೊ ಬೈಕನ್ನು ಭಾರತದಲ್ಲಿ 2015ರಲ್ಲಿ ಮೊದಲ ಬಾರಿಗೆ ಬಿಡುಗಡೆಗೊಳಿಸಿದ್ದರು. ಮಹೀಂದ್ರಾ ಮೊಜೊ ಮಾರುಕಟ್ಟೆಯಲ್ಲಿ ಹೆಚ್ಚು ಮಾರಾಟವಾಗುವ ಟೂರಿಂಗ್ ಬೈಕುಗಳಲ್ಲಿ ಒಂದಾಗಿದೆ.

MOST READ: ಬಿಡುಗಡೆಯಾಯ್ತು ಬಹುನಿರೀಕ್ಷಿತ ಹೊಸ ಹೋಂಡಾ ಎಕ್ಸ್-ಬ್ಲೇಡ್ ಬೈಕ್

ಬಿಎಸ್-6 ಮೊಜೊ 300 ಬೈಕಿನ ಬೆಲೆಯನ್ನು ಹೆಚ್ಚಿಸಿದ ಮಹೀಂದ್ರಾ

ಈ ಬೈಕಿನ ಮುಂಭಾಗದಲ್ಲಿ 320 ಎಂಎಂ ಡಿಸ್ಕ್ ಬ್ರೇಕ್ ಮತ್ತು ಹಿಂಭಾಗದಲ್ಲಿ 240 ಎಂಎಂ ಡಿಸ್ಕ್ ಬ್ರೇಕ್ ಅನ್ನು ಅಳವಡಿಸಿದೆ. ಇದರೊಂದಿಗೆ ಡ್ಯುಯಲ್-ಚಾನೆಲ್ ಎಬಿಎಸ್ ಅನ್ನು ಅಳವಡಿಸಿದೆ.

ಬಿಎಸ್-6 ಮೊಜೊ 300 ಬೈಕಿನ ಬೆಲೆಯನ್ನು ಹೆಚ್ಚಿಸಿದ ಮಹೀಂದ್ರಾ

ಈ ಬಿಎಸ್-6 ಮಹೀಂದ್ರಾ ಮೊಜೊ 300 ಸಂಸ್ಪೆಕ್ಷನ್ ಗಾಗಿ ಮುಂಭಾಗದಲ್ಲಿ ಟೆಲಿಸ್ಕೋಪಿಕ್ ಫೋರ್ಕ್‌ಗಳು ಮತ್ತು ಹಿಂಭಾಗದಲ್ಲಿ ಮೊನೊ-ಶಾಕ್ ಸಂಸ್ಪೆಕ್ಷನ್ ಸೆಟಪ್ ಅನ್ನು ಅಳವಡಿಸಲಾಗಿದೆ. ಹೊಸ ಮಹೀಂದ್ರಾ ಮೊಜೊ 300 ಬೈಕ್ ಆಕರ್ಷಕ ಲುಕ್ ಅನ್ನು ಹೊಂದಿದೆ. ಈ ಹೊಸ ಮಹೀಂದ್ರಾ ಮೊಜೊ 300 ಭಾರತೀಯ ಮಾರುಕಟ್ಟೆಯಲ್ಲಿ ಬಜಾಜ್ ಡೊಮಿನಾರ್ 250 ಬೈಕಿಗೆ ನೇರ ಪೈಪೋಟಿಯನ್ನು ನೀಡುತ್ತದೆ.

More from DriveSpark

Article Published On: Friday, August 28, 2020, 17:01 [IST]
English summary
2020 Mahindra Mojo 300 BS6 Prices Hiked By Rs 11k. Read In Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+