ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಹೊಸ ಮಹೀಂದ್ರಾ ಮೊಜೊ 300 ಬೈಕ್

ಮಹೀಂದ್ರಾ ಟೂ ವ್ಹೀಲರ್ ಕಂಪನಿಯು ತನ್ನ ಬಿಎಸ್-6 ಮೊಜೊ 300 ಬೈಕನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ. ಮಹೀಂದ್ರಾ ಕಂಪನಿಯು ಈ ಬಿಎಸ್-6 ಮೊಜೊ 300 ಬೈಕನ್ನು ಹೊಸ ಬಣ್ಣಗಳ ಆಯ್ಕೆಯಲ್ಲಿ ಬಿಡುಗಡೆಗೊಳಿಸಲಿದೆ.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಹೊಸ ಮಹೀಂದ್ರಾ ಮೊಜೊ 300 ಬೈಕ್

ಮಹೀಂದ್ರಾ ಟೂ ವ್ಹೀಲರ್ ಕಂಪನಿಯು ಇತ್ತೀಚೆಗೆ ಗಾರ್ನೆಟ್ ಬ್ಲ್ಯಾಕ್ ಮತ್ತು ರೂಬಿ ರೆಡ್ ಬಣ್ಣಗಳ ಆಯ್ಕೆಯ ಚಿತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಬಿಡುಗಡೆಗೊಳಿಸಿದ್ದರು. ಇದೀಗ ಮಹೀಂದ್ರಾ ಕಂಪನಿಯು ಹೊಸ ರೆಡ್ ಅಗೇಟ್ ಮತ್ತು ಪರ್ಲ್ ಬ್ಲ್ಯಾಕ್ ಬಣ್ಣಗಳ ಆಯ್ಕೆಯನ್ನು ಬಹಿರಂಗಪಡಿಸಿದೆ. ಈ ರೆಡ್ ಅಗೇಟ್ ಬಣ್ಣದ ಆಯ್ಕೆಯ ಬೈಕ್ ರೆಡ್ ಮತ್ತು ಬ್ಲ್ಯಾಕ್ ಹೆಡ್‌ಲೈಟ್ ಕೌಲ್ ಅನ್ನು ಹೊಂದಿದೆ. ಫ್ಯೂಯಲ್ ಟ್ಯಾಂಕ್ ಮತ್ತು ರೇಡಿಯೇಟರ್ ರೆಡ್ ಮತ್ತು ವೈಟ್ ಬಣ್ಣವನ್ನು ಹೊಂದಿದೆ.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಹೊಸ ಮಹೀಂದ್ರಾ ಮೊಜೊ 300 ಬೈಕ್

ಹೊಸ ಮಹೀಂದ್ರಾ ಮೊಜೊ 300 ಬೈಕನ್ನು ಹಿಂದಿನಬಿಎಸ್-4 ಮಾದರಿಗೆ ಹೋಲಿಸಿದರೆ ಹೆಚ್ಚಿನ ಯಾವುದೇ ಬದಲಾವಣೆಗಳನ್ನು ಹೊಂದಿಲ್ಲ. ಈ ಹೊಸ ಮಹೀಂದ್ರಾ ಮೊಜೊ 300 ಬೈಕ್ ಈ ತಿಂಗಳು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಬೇಕಿತ್ತು.

MOST READ: ಬಿಡುಗಡೆಯಾಯ್ತು ಬಹುನಿರೀಕ್ಷಿತ ಹೊಸ ಹೋಂಡಾ ಎಕ್ಸ್-ಬ್ಲೇಡ್ ಬೈಕ್

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಹೊಸ ಮಹೀಂದ್ರಾ ಮೊಜೊ 300 ಬೈಕ್

ಆದರೆ ಕರೋನ ಸೋಂಕಿನ ಭೀತಿಯಿಂದ ಈ ಹೊಸ ಬೈಕಿನ ಬಿಡುಗಡೆಯು ವಿಳಂಬವಾಗಿದೆ. ಇದೀಗ ಮಹೀಂದ್ರಾ ಕಂಪನಿಯು ಹೊಸ ಮೊಜೊ 300 ಬೈಕನ್ನು ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಹೊಸ ಮಹೀಂದ್ರಾ ಮೊಜೊ 300 ಬೈಕ್

ಮಹೀಂದ್ರಾ ಮೊಜೊ ಬೈಕನ್ನು ಭಾರತದಲ್ಲಿ 2015ರಲ್ಲಿ ಮೊದಲ ಬಾರಿಗೆ ಬಿಡುಗಡೆಗೊಳಿಸಿದ್ದರು. ಮಹೀಂದ್ರಾ ಮೊಜೊ ಮಾರುಕಟ್ಟೆಯಲ್ಲಿ ಹೆಚ್ಚು ಮಾರಾಟವಾಗುವ ಟೂರಿಂಗ್ ಬೈಕುಗಳಲ್ಲಿ ಒಂದಾಗಿದೆ. ಈ ಬೈಕಿನಲ್ಲಿ ಆಕರ್ಷಕ ಟ್ವಿನ್ ಹೆಡ್ ಲ್ಯಾಂಪ್ ಸೆಟಪ್ ಅನ್ನು ಹೊಂದಿದೆ.

MOST READ: ಭಾರತಕ್ಕೆ ಲಗ್ಗೆ ಇಡಲಿದೆ ಜನಪ್ರಿಯ ಟ್ರಯಂಫ್ ಸ್ಟ್ರೀಟ್ ಟ್ರಿಪಲ್ ಆರ್ ಬೈಕ್

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಹೊಸ ಮಹೀಂದ್ರಾ ಮೊಜೊ 300 ಬೈಕ್

ಈ ಬೈಕಿನಲ್ಲಿ ದೊಡ್ಡ ಫ್ಯೂಯಲ್ ಟ್ಯಾಂಕ್ ಅನ್ನು ಹೊಂದಿದೆ. ಹೊಸ ಮಹೀಂದ್ರಾ ಮೊಜೊ ಬೈಕಿನ ಬಗ್ಗೆ ಹೆಚ್ಚಿನ ಮಾಹಿತಿಗಳು ಲಭ್ಯವಾಗಿಲ್ಲ. ಮಹೀಂದ್ರಾ ಗ್ರೂಪ್‌ನ ಭಾಗವಾಗಿರುವ ಜಾವಾ ಮತ್ತು ಜಾವಾ 42 ಬೈಕುಗಳಲ್ಲಿ ಇರುವ ಮಾದರಿಯ ಎಂಜಿನ್ ಅನ್ನು ಹೊಸ ಮಹೀಂದ್ರಾ ಮೊಜೊ ಬೈಕಿನಲ್ಲಿ ಅಳವಡಿಸುವ ಸಾಧ್ಯತೆಗಳಿದೆ.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಹೊಸ ಮಹೀಂದ್ರಾ ಮೊಜೊ 300 ಬೈಕ್

ಹೊಸ ಮೊಜೊ ಬೈಕಿನಲ್ಲಿ 293 ಸಿಸಿ ಸಿಂಗಲ್-ಸಿಲಿಂಡರ್, ಲಿಕ್ವಿಡ್-ಕೂಲ್ಡ್ ಎಂಜಿನ್ ಅನ್ನು ಅಳವಡಿಸಬಹುದು. ಈ ಎಂಜಿನ್ 26.2 ಬಿಹೆಚ್‍ಪಿ ಪವರ್ ಮತ್ತು 27.05 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ.

MOST READ: ಹೊಸ ಬಿಎಂಡಬ್ಲ್ಯೂ ಆರ್ 18 ಕ್ರೂಸರ್ ಬೈಕ್ ಖರೀದಿಗೆ ಬುಕ್ಕಿಂಗ್ ಆರಂಭ

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಹೊಸ ಮಹೀಂದ್ರಾ ಮೊಜೊ 300 ಬೈಕ್

ಹಿಂದಿನ ಬಿಎಸ್-4 ಮಾದರಿಗೆ ಹೋಲಿಸಿದರೆ 0.8 ಬಿಹೆಚ್‌ಪಿ ಪವರ್ ಮತ್ತು 0.95 ಎನ್ಎಂ ಟಾರ್ಕ್ ಕಡಿಮೆಯಾಗಿದೆ. ಈ ಎಂಜಿನ್ ನೊಂದಿಗೆ 6-ಸ್ಪೀಡ್ ಗೇರ್ ಬಾಕ್ಸ್ ಅನ್ನು ಅಳವಡಿಸಲಾಗಿದೆ. ಈ ಬೈಕಿನ ಮುಂಭಾಗದಲ್ಲಿ 320 ಎಂಎಂ ಡಿಸ್ಕ್ ಬ್ರೇಕ್ ಮತ್ತು ಹಿಂಭಾಗದಲ್ಲಿ 240 ಎಂಎಂ ಡಿಸ್ಕ್ ಬ್ರೇಕ್ ಅನ್ನು ಅಳವಡಿಸಿದೆ.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಹೊಸ ಮಹೀಂದ್ರಾ ಮೊಜೊ 300 ಬೈಕ್

ಇದರೊಂದಿಗೆ ಡ್ಯುಯಲ್-ಚಾನೆಲ್ ಎಬಿಎಸ್ ಅನ್ನು ಅಳವಡಿಸಿದೆ. ಬೈಕಿನ ಸಂಸ್ಪೆಕ್ಷನ್ ಗಾಗಿ ಮುಂಭಾಗದಲ್ಲಿ ಟೆಲಿಸ್ಕೋಪಿಕ್ ಫೋರ್ಕ್‌ಗಳು ಮತ್ತು ಹಿಂಭಾಗದಲ್ಲಿ ಮೊನೊ-ಶಾಕ್ ಸಂಸ್ಪೆಕ್ಷನ್ ಸೆಟಪ್ ಅನ್ನು ಅಳವಡಿಸಲಾಗಿದೆ.

More from DriveSpark

Article Published On: Tuesday, July 21, 2020, 16:09 [IST]
English summary
2 More Colours Of Upcoming BS6 Mahindra Mojo 300 Revealed. Read In Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+