ಬಿಡುಗಡೆಯಾಗಲಿದೆ ಬಿಎಸ್-6 ಮಹೀಂದ್ರಾ ಮೊಜೊ ಬೈಕ್
ಮಹೀಂದ್ರಾ ಟೂ ವ್ಹೀಲರ್ ಕಂಪನಿಯು ತನ್ನ ಬಿಎಸ್-6 ಮೊಜೊ 300 ಬೈಕನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ. ಮಹೀಂದ್ರಾ ಕಂಪನಿಯು ಇತ್ತೀಚೆಗೆ ಬಿಎಸ್-6 ಮೊಜೊ 300 ಬೈಕಿನ ಟೀಸರ್ ಚಿತ್ರವನ್ನು ಬಿಡುಗಡೆಗೊಳಿಸಿತ್ತು.

ಇದಲ್ಲದೇ ಮಹೀಂದ್ರಾ ಟೂ ವ್ಹೀಲರ್ ಕಂಪನಿಯು ಇತ್ತೀಚೆಗೆ ಗಾರ್ನೆಟ್ ಬ್ಲ್ಯಾಕ್ ಬಣ್ಣದ ಆಯ್ಕೆಯ ಬಿಎಸ್-6 ಮೊಜೊ 300 ಬೈಕಿನ ಚಿತ್ರವನ್ನು ಬಿಡುಗಡೆಗೊಳಿಸಿದ್ದರು. ಇದೀಗ ಈ ಬೈಕಿನ ರೂಬಿ ರೆಡ್ ಬಣ್ಣದ ಆಯ್ಕೆಯ ಮತ್ತೊಂದು ಚಿತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಬಿಡುಗಡೆಗೊಳಿಸಿದೆ. ಚಿತ್ರದಲ್ಲಿ ಈ ಬೈಕಿನಲ್ಲಿ ಟ್ಯಾಂಕ್‌ನಲ್ಲಿ ಅರ್ಧ ರೆಡ್ ಮತ್ತು ಬ್ಲ್ಯಾಕ್ ಬಣ್ಣವನ್ನು ಹೊಂದಿದೆ. ರೂಬಿ ರೆಡ್ ರೂಪಾಂತರದ ಫ್ರೇಮ್ ಮತ್ತು ಸ್ವಿಂಗ್ ಆರ್ಮ್ ಬ್ಲ್ಯಾಕ್ ಬಣ್ಣದಲ್ಲಿ ಫಿನಿಶಿಂಗ್ ಹೊಂದಿದೆ.

ಹೊಸ ಮಹೀಂದ್ರಾ ಮೊಜೊ 300 ಬೈಕನ್ನು ಹಿಂದಿನಬಿಎಸ್-4 ಮಾದರಿಗೆ ಹೋಲಿಸಿದರೆ ಹೆಚ್ಚಿನ ಯಾವುದೇ ಬದಲಾವಣೆಗಳನ್ನು ಹೊಂದಿಲ್ಲ. ಈ ಹೊಸ ಮಹೀಂದ್ರಾ ಮೊಜೊ 300 ಬೈಕ್ ಈ ತಿಂಗಳು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಬೇಕಿತ್ತು.
MOST READ: ದುಬಾರಿಯಾಯ್ತು ಜನಪ್ರಿಯ ಬಿಎಸ್-6 ಬಜಾಜ್ ಪಲ್ಸರ್ ಎನ್ಎಸ್200 ಬೈಕ್

ಆದರೆ ಕರೋನ ಸೋಂಕಿನ ಭೀತಿಯಿಂದ ಈ ಹೊಸ ಬೈಕಿನ ಬಿಡುಗಡೆಯು ವಿಳಂಬವಾಗಿದೆ. ಇದೀಗ ಮಹೀಂದ್ರಾ ಕಂಪನಿಯು ಹೊಸ ಮೊಜೊ 300 ಬೈಕನ್ನು ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ.

ಮಹೀಂದ್ರಾ ಮೊಜೊ ಬೈಕನ್ನು ಭಾರತದಲ್ಲಿ 2015ರಲ್ಲಿ ಮೊದಲ ಬಾರಿಗೆ ಬಿಡುಗಡೆಗೊಳಿಸಿದ್ದರು. ಮಹೀಂದ್ರಾ ಮೊಜೊ ಮಾರುಕಟ್ಟೆಯಲ್ಲಿ ಹೆಚ್ಚು ಮಾರಾಟವಾಗುವ ಟೂರಿಂಗ್ ಬೈಕುಗಳಲ್ಲಿ ಒಂದಾಗಿದೆ. ಈ ಬೈಕಿನಲ್ಲಿ ಆಕರ್ಷಕ ಟ್ವಿನ್ ಹೆಡ್ ಲ್ಯಾಂಪ್ ಸೆಟಪ್ ಅನ್ನು ಹೊಂದಿದೆ.
MOST READ: ಬಿಡುಗಡೆಯಾಯ್ತು ಬಹುನಿರೀಕ್ಷಿತ ಹೊಸ ಹೋಂಡಾ ಎಕ್ಸ್-ಬ್ಲೇಡ್ ಬೈಕ್

ಈ ಬೈಕಿನಲ್ಲಿ ದೊಡ್ಡ ಫ್ಯೂಯಲ್ ಟ್ಯಾಂಕ್ ಅನ್ನು ಹೊಂದಿದೆ. ಹೊಸ ಮಹೀಂದ್ರಾ ಮೊಜೊ ಬೈಕಿನ ಬಗ್ಗೆ ಹೆಚ್ಚಿನ ಮಾಹಿತಿಗಳು ಲಭ್ಯವಾಗಿಲ್ಲ. ಮಹೀಂದ್ರಾ ಗ್ರೂಪ್‌ನ ಭಾಗವಾಗಿರುವ ಜಾವಾ ಮತ್ತು ಜಾವಾ 42 ಬೈಕುಗಳಲ್ಲಿ ಇರುವ ಮಾದರಿಯ ಎಂಜಿನ್ ಅನ್ನು ಹೊಸ ಮಹೀಂದ್ರಾ ಮೊಜೊ ಬೈಕಿನಲ್ಲಿ ಅಳವಡಿಸುವ ಸಾಧ್ಯತೆಗಳಿದೆ.

ಹೊಸ ಮೊಜೊ ಬೈಕಿನಲ್ಲಿ 293 ಸಿಸಿ ಸಿಂಗಲ್-ಸಿಲಿಂಡರ್, ಲಿಕ್ವಿಡ್-ಕೂಲ್ಡ್ ಎಂಜಿನ್ ಅನ್ನು ಅಳವಡಿಸಬಹುದು. ಈ ಎಂಜಿನ್ 26.2 ಬಿಹೆಚ್‍ಪಿ ಪವರ್ ಮತ್ತು 27.05 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ.
MOST READ: ಭಾರತಕ್ಕೆ ಲಗ್ಗೆ ಇಡಲಿದೆ ಜನಪ್ರಿಯ ಟ್ರಯಂಫ್ ಸ್ಟ್ರೀಟ್ ಟ್ರಿಪಲ್ ಆರ್ ಬೈಕ್

ಹಿಂದಿನ ಬಿಎಸ್-4 ಮಾದರಿಗೆ ಹೋಲಿಸಿದರೆ 0.8 ಬಿಹೆಚ್‌ಪಿ ಪವರ್ ಮತ್ತು 0.95 ಎನ್ಎಂ ಟಾರ್ಕ್ ಕಡಿಮೆಯಾಗಿದೆ. ಈ ಎಂಜಿನ್ ನೊಂದಿಗೆ 6-ಸ್ಪೀಡ್ ಗೇರ್ ಬಾಕ್ಸ್ ಅನ್ನು ಅಳವಡಿಸಲಾಗಿದೆ. ಈ ಬೈಕಿನ ಮುಂಭಾಗದಲ್ಲಿ 320 ಎಂಎಂ ಡಿಸ್ಕ್ ಬ್ರೇಕ್ ಮತ್ತು ಹಿಂಭಾಗದಲ್ಲಿ 240 ಎಂಎಂ ಡಿಸ್ಕ್ ಬ್ರೇಕ್ ಅನ್ನು ಅಳವಡಿಸಿದೆ.

ಇದರೊಂದಿಗೆ ಡ್ಯುಯಲ್-ಚಾನೆಲ್ ಎಬಿಎಸ್ ಅನ್ನು ಅಳವಡಿಸಿದೆ. ಬೈಕಿನ ಸಂಸ್ಪೆಕ್ಷನ್ ಗಾಗಿ ಮುಂಭಾಗದಲ್ಲಿ ಟೆಲಿಸ್ಕೋಪಿಕ್ ಫೋರ್ಕ್‌ಗಳು ಮತ್ತು ಹಿಂಭಾಗದಲ್ಲಿ ಮೊನೊ-ಶಾಕ್ ಸಂಸ್ಪೆಕ್ಷನ್ ಸೆಟಪ್ ಅನ್ನು ಅಳವಡಿಸಲಾಗಿದೆ. ಬಿಎಸ್-6 ಮಹೀಂದ್ರಾ ಮೊಜೊ 300 ಬೈಕ್ ರೂಬಿ ರೆಡ್ ಬಣ್ಣದಲ್ಲಿ ಆಕರ್ಷಕ ಲುಕ್ ಅನ್ನು ಹೊಂದಿದೆ.


Click it and Unblock the Notifications








