ಕಳೆದ ಆರು ತಿಂಗಳಲ್ಲಿ ಹೆಚ್ಚು ಮಾರಾಟವಾದ ದ್ವಿಚಕ್ರ ವಾಹನಗಳಿವು

2020-21ರ ಹಣಕಾಸು ವರ್ಷದ ಮೊದಲ ಆರು ತಿಂಗಳ (ಏಪ್ರಿಲ್-ಸೆಪ್ಟೆಂಬರ್) ಅವಧಿಯ ದ್ವಿಚಕ್ರ ವಾಹನ ಮಾರಾಟ ವರದಿಯನ್ನು ಬಿಡುಗಡೆಗೊಳಿಸಲಾಗಿದೆ. ಈ ವರದಿಯ ಪ್ರಕಾರ ಹೀರೋ ಸ್ಪ್ಲೆಂಡರ್ ಹೆಚ್ಚು ಮಾರಾಟವಾದ ದ್ವಿಚಕ್ರ ವಾಹನವಾಗಿದೆ.

ಕಳೆದ ಆರು ತಿಂಗಳಲ್ಲಿ ಹೆಚ್ಚು ಮಾರಾಟವಾದ ದ್ವಿಚಕ್ರ ವಾಹನಗಳಿವು

ಹೀರೋ ಮೋಟೊಕಾರ್ಪ್ ಈ ಆರು ತಿಂಗಳಲ್ಲಿ 9,48,228 ಯುನಿಟ್ ಸ್ಪ್ಲೆಂಡರ್ ಬೈಕುಗಳನ್ನು ಮಾರಾಟ ಮಾಡಿದೆ. 7,19,914 ಯುನಿಟ್‌ಗಳ ಮಾರಾಟದೊಂದಿಗೆ ಹೋಂಡಾ ಆಕ್ಟಿವಾ ಹೆಚ್ಚು ಮಾರಾಟವಾದ ದ್ವಿಚಕ್ರ ವಾಹನಗಳ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಹೀರೋ ಹೆಚ್‌ಎಫ್ ಡೀಲಕ್ಸ್ 7,01,943 ಯುನಿಟ್‌ಗಳ ಮಾರಾಟದೊಂದಿಗೆ ಮೂರನೇ ಸ್ಥಾನದಲ್ಲಿದೆ.

ಕಳೆದ ಆರು ತಿಂಗಳಲ್ಲಿ ಹೆಚ್ಚು ಮಾರಾಟವಾದ ದ್ವಿಚಕ್ರ ವಾಹನಗಳಿವು

ಬಜಾಜ್ ಪಲ್ಸರ್ ಹಾಗೂ ಹೋಂಡಾ ಸಿಬಿ ಶೈನ್ ಬೈಕುಗಳು ಕ್ರಮವಾಗಿ ನಾಲ್ಕನೇ ಹಾಗೂ ಐದನೇ ಸ್ಥಾನವನ್ನು ಗಳಿಸಿವೆ. ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್ 350 ಹಾಗೂ ಟಿವಿಎಸ್ ಅಪಾಚೆ ಸರಣಿ ಬೈಕ್‌ಗಳು ಈ ಪಟ್ಟಿಯಲ್ಲಿ ಕೆಳಗಿನ ಸ್ಥಾನದಲ್ಲಿವೆ.

MOST READ:ರಿಕ್ಷಾ ಕಳೆದುಕೊಂಡವನಿಗೆ ಹೊಸ ರಿಕ್ಷಾ ಕೊಡಿಸಿದ ಆಪದ್ಭಾಂಧವ

ಕಳೆದ ಆರು ತಿಂಗಳಲ್ಲಿ ಹೆಚ್ಚು ಮಾರಾಟವಾದ ದ್ವಿಚಕ್ರ ವಾಹನಗಳಿವು

ಈ ಅವಧಿಯಲ್ಲಿ ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್ 350 ಬೈಕಿನ 1,31,884 ಯೂನಿಟ್ ಹಾಗೂ ಟಿವಿಎಸ್ ಅಪಾಚೆ ಸರಣಿಯ 1,23,256 ಯೂನಿಟ್‌ಗಳು ಮಾರಾಟವಾಗಿವೆ. ಕಳೆದ ಹಣಕಾಸು ವರ್ಷದಲ್ಲಿ ಇದೇ ಅವಧಿಯಲ್ಲಿ 7,69,0136 ಯೂನಿಟ್ ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಲಾಗಿತ್ತು.

ಕಳೆದ ಆರು ತಿಂಗಳಲ್ಲಿ ಹೆಚ್ಚು ಮಾರಾಟವಾದ ದ್ವಿಚಕ್ರ ವಾಹನಗಳಿವು

ಈ ಹಣಕಾಸು ವರ್ಷದ ಮೊದಲ ಆರು ತಿಂಗಳಲ್ಲಿ 36.758 ಯೂನಿಟ್ ಇಳಿಕೆಯೊಂದಿಗೆ 27.75 ಲಕ್ಷ ವಾಹನಗಳು ಕಡಿಮೆ ಮಾರಾಟವಾಗಿರುವುದು ಅಂಕಿ ಅಂಶಗಳಿಂದ ಕಂಡು ಬಂದಿದೆ. ಈ ಪಟ್ಟಿಯಲ್ಲಿ ಬಜಾಜ್ ಪಲ್ಸರ್ ಬೈಕ್‌ಗಳು ಮಾತ್ರ ಕಳೆದ ವರ್ಷಕ್ಕಿಂತ ಹೆಚ್ಚು ಮಾರಾಟವಾಗಿವೆ.

MOST READ:ಶೋಚನೀಯ ಸ್ಥಿತಿಯಲ್ಲಿವೆ ದುಬಾರಿ ಬೆಲೆಯ ಐಷಾರಾಮಿ ರೋಲ್ಸ್ ರಾಯ್ಸ್ ಕಾರುಗಳು

ಕಳೆದ ಆರು ತಿಂಗಳಲ್ಲಿ ಹೆಚ್ಚು ಮಾರಾಟವಾದ ದ್ವಿಚಕ್ರ ವಾಹನಗಳಿವು

ಕರೋನಾ ವೈರಸ್ ಕಾರಣದಿಂದಾಗಿ ದೇಶಾದ್ಯಂತ ಜಾರಿಯಾಗಿದ್ದ ಸುಮಾರು 120 ದಿನಗಳ ಲಾಕ್ ಡೌನ್ ನಿಂದಾಗಿ ದ್ವಿಚಕ್ರ ವಾಹನಗಳ ಮಾರಾಟದಲ್ಲಿ ಗಮನಾರ್ಹ ಕುಸಿತ ಕಂಡುಬಂದಿದೆ. ಆದರೆ ಸೆಪ್ಟೆಂಬರ್ ತಿಂಗಳಿನಿಂದ ಮಾರಾಟ ಪ್ರಮಾಣವು ಸುಧಾರಿಸುತ್ತಿದೆ.

ಕಳೆದ ಆರು ತಿಂಗಳಲ್ಲಿ ಹೆಚ್ಚು ಮಾರಾಟವಾದ ದ್ವಿಚಕ್ರ ವಾಹನಗಳಿವು

ಹೀರೋ ಮೋಟೊಕಾರ್ಪ್ ಭಾರತದ ಅತಿದೊಡ್ಡ ದ್ವಿಚಕ್ರ ವಾಹನ ತಯಾರಕ ಕಂಪನಿಗಳಲ್ಲಿ ಒಂದಾಗಿದೆ. ಕಂಪನಿಯ ಬೈಕುಗಳು ಕೈಗೆಟುಕುವ ಬೆಲೆಯನ್ನು ಹೊಂದಿರುವುದು ಹಾಗೂ ಆಫ್ಟರ್ ಸೇಲ್ಸ್ ಸರ್ವೀಸ್ ನಿಂದಾಗಿ ಹೀರೋ ಮೋಟೊಕಾರ್ಪ್ ಕಂಪನಿಯ ಬೈಕುಗಳು ಹೆಚ್ಚಿನ ಪ್ರಮಾಣದಲ್ಲಿ ಮಾರಾಟವಾಗುತ್ತವೆ.

MOSTREAD: ಇನ್ನು ಮುಂದೆ ಈ ನಗರಗಳಲ್ಲಿ ಡೀಸೆಲ್ ವಾಹನಗಳನ್ನು ಮಾರಾಟ ಮಾಡುವಂತಿಲ್ಲ

ಕಳೆದ ಆರು ತಿಂಗಳಲ್ಲಿ ಹೆಚ್ಚು ಮಾರಾಟವಾದ ದ್ವಿಚಕ್ರ ವಾಹನಗಳಿವು

ಹೀರೋ ಮೋಟೊಕಾರ್ಪ್ ಕಂಪನಿಯು ಇತ್ತೀಚೆಗೆ ಸ್ಪ್ಲೆಂಡರ್ ಪ್ಲಸ್‌ನ ಕಪ್ಪು ಆವೃತ್ತಿಯನ್ನು ಬಿಡುಗಡೆಗೊಳಿಸಿದೆ. ಈ ಮೂಲಕ ಹಬ್ಬದ ಸಂದರ್ಭದಲ್ಲಿ ಹೊಸ ಗ್ರಾಹಕರನ್ನು ಸೆಳೆಯಲು ಮುಂದಾಗಿದೆ.

ಕಳೆದ ಆರು ತಿಂಗಳಲ್ಲಿ ಹೆಚ್ಚು ಮಾರಾಟವಾದ ದ್ವಿಚಕ್ರ ವಾಹನಗಳಿವು

ಹೋಂಡಾ ಕಂಪನಿಯ ದ್ವಿಚಕ್ರ ವಾಹನಗಳು ಹೀರೋ ಮೋಟೊಕಾರ್ಪ್ ಕಂಪನಿಯ ದ್ವಿಚಕ್ರ ವಾಹನಗಳಿಗೆ ಪೈಪೋಟಿ ನೀಡುತ್ತಿವೆ. ಆಕ್ಟಿವಾ ಸ್ಕೂಟರ್, ಕಂಪನಿಯ ಹೆಚ್ಚು ಮಾರಾಟವಾದ ಸ್ಕೂಟರ್ ಆಗಿ ಹೊರಹೊಮ್ಮಿದೆ.

Most Read Articles

Kannada
English summary
Most selling two wheelers during April September 2020. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X