ಬಿಡುಗಡೆಯಾಯ್ತು ಹೊಸ ಎಪ್ರಿಲಿಯಾ ಸ್ಟ್ರೋಮ್ 125 ಸ್ಕೂಟರ್

ಪಿಯಾಜಿಯು ಕಂಪನಿಯು ತನ್ನ ಬಿಎಸ್-6 ಎಪ್ರಿಲಿಯಾ ಸ್ಟ್ರೋಮ್ 125 ಸ್ಕೂಟರ್ ಅನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದೆ. ಈ ಹೊಸ ಸ್ಟ್ರೋಮ್ 125 ಸ್ಕೂಟರ್‌ನಲ್ಲಿ ಫ್ರಂಟ್ ಡಿಸ್ಕ್ ಬ್ರೇಕ್ ಸೇರಿದಂತೆ ಹಲವು ಹೊಸ ಫೀಚರುಗಳೊಂದಿಗೆ ಬಿಡುಗಡೆಗೊಳಿಸಲಾಗಿದೆ.

ಬಿಡುಗಡೆಯಾಯ್ತು ಹೊಸ ಎಪ್ರಿಲಿಯಾ ಸ್ಟ್ರೋಮ್ 125 ಸ್ಕೂಟರ್

ಬಿಎಸ್-6 ಎಪ್ರಿಲಿಯಾ ಸ್ಟ್ರೋಮ್ 125 ಸ್ಕೂಟರ್ ಬೆಲೆಯು ಪುಣೆ ಎಕ್ಸ್ ಶೋರೂಂ ಪ್ರಕಾರ ರೂ.91,321 ಗಳಾಗಿದೆ. ಭಾರತೀಯ ಮಾರುಕಟ್ಟೆಯಲ್ಲಿ 125 ಸಿಸಿ ಪ್ರೀಮಿಯಂ ಸ್ಕೂಟರ್ ವಿಭಾಗದಲ್ಲಿ ಈ ಎಪ್ರಿಲಿಯಾ ಸ್ಟ್ರೋಮ್ ಅತ್ಯಂತ ಜನಪ್ರಿಯ ಮಾದರಿಗಳಲ್ಲಿ ಒಂದಾಗಿದೆ. ಎಪ್ರಿಲಿಯಾ ಸ್ಟ್ರೋಮ್ ಸ್ಕೂಟರ್‌ನಲ್ಲಿ ಶಾರ್ಪ್ ಲೈನ್ ಗಳನ್ನು ಒಳಗೊಂಡಿದೆ. ಇನ್ನು ಈ ಸ್ಕೂಟರ್ ಸ್ಪೂರ್ಟಿ ಲುಕ್ ಅನ್ನು ಹೊಂದಿರುವುದರಿಂದ ಹೆಚ್ಚಿನ ಗ್ರಾಹಕರನ್ನು ಸೆಳೆಯಬಹುದು.

ಬಿಡುಗಡೆಯಾಯ್ತು ಹೊಸ ಎಪ್ರಿಲಿಯಾ ಸ್ಟ್ರೋಮ್ 125 ಸ್ಕೂಟರ್

ಬಿಎಸ್-6 ಎಪ್ರಿಲಿಯಾ ಸ್ಟ್ರೋಮ್ ಸ್ಕೂಟರ್ ಹಲವರು ಹೊಸ ಫೀಚರುಗಳನ್ನು ಹೊಂದಿರಲಿದೆ. ಹಿಂದಿನ ಮಾದರಿಗೆ ಹೋಲಿಸಿದರೆ ಹೊಸ ಹೊಸ ಸ್ಟ್ರೋಮ್ ಸ್ಕೂಟರ್‌ನಲ್ಲಿ ಸುಧಾರಿತ ಬ್ರೇಕಿಂಗ್ ಸಿಸ್ಟಂಗಳನ್ನು ಒಳಗೊಂಡಿದೆ.

MOST READ: ಬಿಡುಗಡೆಯಾಯ್ತು ಬಹುನಿರೀಕ್ಷಿತ ಹೊಸ ಹೋಂಡಾ ಎಕ್ಸ್-ಬ್ಲೇಡ್ ಬೈಕ್

ಬಿಡುಗಡೆಯಾಯ್ತು ಹೊಸ ಎಪ್ರಿಲಿಯಾ ಸ್ಟ್ರೋಮ್ 125 ಸ್ಕೂಟರ್

ಬಿಎಸ್-6 ಎಪ್ರಿಲಿಯಾ ಸ್ಟ್ರೋಮ್ ಸ್ಕೂಟರ್ ಮುಂಭಾಗದಲ್ಲಿ 200 ಎಂಎಂ ಡಿಸ್ಕ್ ಇರುವುದರಿಂದ ಸ್ಟ್ಯಾಂಡರ್ಡ್‌ನಂತೆ ಕಾಂಬಿ-ಬ್ರೇಕಿಂಗ್ ಸಿಸ್ಟಂಗೆ ಬೆಂಬಲಿಸುತ್ತದೆ. ಈ ಸ್ಕೂಟರ್‌ನಲ್ಲಿ 12 ಇಂಚಿನ ಅಲಾಯ್ ವ್ಹೀಲ್ ಗಳನ್ನು ಅಳವಡಿಸಲಾಗಿದೆ.

ಬಿಡುಗಡೆಯಾಯ್ತು ಹೊಸ ಎಪ್ರಿಲಿಯಾ ಸ್ಟ್ರೋಮ್ 125 ಸ್ಕೂಟರ್

ಇನ್ನು ಈ ಸ್ಕೂಟರ್‌ನಲ್ಲಿ ಸೆಮಿ-ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್, ಎಲ್ಇಡಿ ಹೆಡ್ ಲ್ಯಾಂಪ್ ಮತ್ತು ನವೀಕರಿಸಿದ ಬಾಡಿ ಗ್ರಾಫಿಕ್ಸ್ ಅನ್ನು ಹೊಂದಿದೆ. ಇನ್ನು ಈ ಸ್ಕೂಟರ್‌ನಲ್ಲಿ ಸಸ್ಪೆಂಕ್ಷನ್ ಗಾಗಿ ಮುಂಭಾಗದಲ್ಲಿ ಟೆಲಿಸ್ಕೋಪಿಕ್ ಫೋರ್ಕ್ಸ್ ಮತ್ತು ಹಿಂಭಾಗದಲ್ಲಿ ಮೊನೊಶಾಕ್ ಅನ್ನು ಒಳಗೊಂಡಿವೆ.

MOST READ: ಬಹಿರಂಗವಾಯ್ತು ಬಿಎಸ್-6 ಹೀರೋ ಎಕ್ಸ್‌ಪಲ್ಸ್ 200 ಬೈಕಿನ ಮಾಹಿತಿ

ಬಿಡುಗಡೆಯಾಯ್ತು ಹೊಸ ಎಪ್ರಿಲಿಯಾ ಸ್ಟ್ರೋಮ್ 125 ಸ್ಕೂಟರ್

ಎಪ್ರಿಲಿಯಾ ಸ್ಟ್ರೋಮ್ ಸ್ಕೂಟರ್‌ನಲ್ಲಿ ಹಿಂದಿನ ಮಾದರಿಯಲ್ಲಿರುವಂತಹ 124.45 ಸಿಸಿ ಸಿಂಗಲ್ ಸಿಲಿಂಡರ್ ಏರ್-ಕೂಲ್ಡ್ ಎಂಜಿನ್ ಹೊಂದಿದೆ. ಈ ಎಂಜಿನ್ 9.7 ಬಿಹೆಚ್‍ಪಿ ಪವರ್ ಮತ್ತು 9.60 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ,

ಬಿಡುಗಡೆಯಾಯ್ತು ಹೊಸ ಎಪ್ರಿಲಿಯಾ ಸ್ಟ್ರೋಮ್ 125 ಸ್ಕೂಟರ್

ನೋಯ್ಡಾದಲ್ಲಿ ನಡೆದಿದ್ದ 2020ರ ಆಟೋ ಎಕ್ಸ್‌ಪೋದಲ್ಲಿ ಕಂಪನಿಯು ಈ ಬಿಎಸ್-6 ಎಪ್ರಿಲಿಯಾ ಸ್ಟ್ರೋಮ್ ಅನ್ನು ಪ್ರದರ್ಶಿಸಿತ್ತು. ಕಂಪನಿಯು ಈ ಸ್ಕೂಟರ್‌ಗಳ ಆನ್‌ಲೈನ್‌ ಬುಕ್ಕಿಂಗ್ ಗಳನ್ನು ಆರಂಭಿಸಿದೆ.

MOST READ: ದುಬಾರಿಯಾಯ್ತು ಜನಪ್ರಿಯ ಬಿ‍ಎಸ್-6 ಬಜಾಜ್ ಪಲ್ಸರ್ ಎನ್ಎಸ್200 ಬೈಕ್

ಬಿಡುಗಡೆಯಾಯ್ತು ಹೊಸ ಎಪ್ರಿಲಿಯಾ ಸ್ಟ್ರೋಮ್ 125 ಸ್ಕೂಟರ್

ಪಿಯಾಜಿಯೊ ಇಂಡಿಯಾದ ಎಂಡಿ ಡಿಯಾಗೋ ಗ್ರಾಫಿ ಅವರು ಮಾತನಾಡಿ, ಹೊಸ ಪ್ರೀಮಿಯಂ ಸ್ಕೂಟರ್ ಗಳನ್ನು ಮಾರುಕಟ್ಟೆಗಳಿಗೆ ಬಿಡುಗಡೆಗೊಳಿಸಲು ನಾವು ಸಂತಸ ಪಡುತ್ತೇವೆ. ಈ ಹೊಸ ಎಪ್ರಿಲಿಯಾ ಸ್ಟ್ರೋಮ್ ಸ್ಕೂಟರ್‌ನಲ್ಲಿ ಹೊಸ ತಂತ್ರಜ್ಞಾನಗಳೊಂದಿಗೆ ಹೊಸ ಕಾರ್ಯಕ್ಷಮತೆಯನ್ನು ಹೊಂದಿದೆ ಎಂದು ಹೇಳಿದರು.

ಬಿಡುಗಡೆಯಾಯ್ತು ಹೊಸ ಎಪ್ರಿಲಿಯಾ ಸ್ಟ್ರೋಮ್ 125 ಸ್ಕೂಟರ್

ಎಪ್ರಿಲಿಯಾ ಸ್ಟ್ರೋಮ್ 125 ಸ್ಕೂಟರ್ ಭಾರತೀಯ ಮಾರುಕಟ್ಟೆಯಲ್ಲಿ ಪ್ರೀಮಿಯಂ 125 ಸಿಸಿ ವಿಭಾಗದಲ್ಲಿ ಜನಪ್ರಿಯ ಮಾದರಿಗಳಲ್ಲ ಒಂದಾಗಿದೆ. ಈ ಬಿಎಸ್-6 ಎಪ್ರಿಲಿಯಾ ಸ್ಟ್ರೋಮ್ ಸ್ಕೂಟರ್ ಭಾರತೀಯ ಮಾರುಕಟ್ಟೆಯಲ್ಲಿ ಸುಜುಕಿ ಆಕ್ಸೆಸ್ 125 ಮತ್ತು ಟಿವಿಎಸ್ ಎನ್‍‍ಟಾರ್ಕ್ 125 ಸ್ಕೂಟರ್‌ಗಳಿಗೆ ಪೈಪೋಟಿಯನ್ನು ನೀಡುತ್ತದೆ.

Article Published On: Tuesday, July 21, 2020, 10:54 [IST]
English summary
Aprilia Storm 125 BS6 Scooter Launched In India. Read In Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+