Just In
Don't Miss!
- Movies
ಸುದೀಪ್ 'ಫ್ಯಾಂಟಮ್' ಸಿನಿಮಾದಲ್ಲಿ ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್?
- News
ಖಾತೆ ಹಂಚಿಕೆ ಅಸಮಾಧಾನ: ಸಚಿವ ಸ್ಥಾನಕ್ಕೆ ಜೆ.ಸಿ. ಮಾಧುಸ್ವಾಮಿ ರಾಜೀನಾಮೆ?
- Sports
ಆಸ್ಟ್ರೇಲಿಯಾ ತಂಡದ ಬದ್ಧತೆ ಹಾಗೂ ಪೈಯ್ನ್ ನಾಯಕತ್ವವನ್ನು ಪ್ರಶ್ನಿಸಿದ ಮಾಜಿ ಆಸಿಸ್ ಕ್ರಿಕೆಟಿಗ
- Lifestyle
ಈ 3 ವಸ್ತುಗಳನ್ನು ಹಾಕಿ ಮಾಡಿದ ಜ್ಯೂಸ್ ಕುಡಿದರೆ ಬೊಜ್ಜು ಕರುಗುತ್ತೆ, ಸೌಂದರ್ಯ ಹೆಚ್ಚುತ್ತೆ
- Finance
1986ರಿಂದ 2021 ಸೆನ್ಸೆಕ್ಸ್ ಪ್ರಮುಖ ಮೈಲುಗಲ್ಲುಗಳು: 50,000 ಪಾಯಿಂಟ್ ದಾಖಲೆ ಹಾದಿ
- Education
BMRCL Recruitment 2021: ಸೀನಿಯರ್ ಅರ್ಬನ್ ಮತ್ತು ಟ್ರಾನ್ಸ್ ಪೋರ್ಟ್ ಪ್ಲಾನರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಬಿಡುಗಡೆಗೆ ಸಜ್ಜಾದ ಹೊಸ ಎಪ್ರಿಲಿಯಾ ಎಸ್‌ಎಕ್ಸ್‌ಆರ್ 160 ಮ್ಯಾಕ್ಸಿ-ಸ್ಕೂಟರ್
ಪಿಯಾಜಿಯೊ ಕಂಪನಿಯು ತನ್ನ ಹೊಸ ಎಪ್ರಿಲಿಯಾ ಎಸ್‌ಎಕ್ಸ್‌ಆರ್ 160 ಸ್ಕೂಟರ್ ಅನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲಿದೆ. ಹೊಸ ಎಪ್ರಿಲಿಯಾ ಎಸ್‌ಎಕ್ಸ್‌ಆರ್ 160 ಸ್ಕೂಟರ್ ಅನ್ನು ಮೊದಲ ಬಾರಿಗೆ ದೆಹಲಿಯಲ್ಲಿ ನಡೆದ 2020ರ ಆಟೋ ಎಕ್ಸ್‌ಪೋದಲ್ಲಿ ಅನಾವರಣಗೊಳಿಸಿತ್ತು.

ಎಪ್ರಿಲಿಯಾ ಎಸ್‌ಎಕ್ಸ್‌ಆರ್ 160 ಸ್ಕೂಟರ್ ಉತ್ಪಾದನೆಯನ್ನು ಭಾರತದಲ್ಲಿ ಪ್ರಾರಂಭವಾಗಲಿದೆ. ಬಾರಾಮತಿಯ ಪಿಯಾಜಿಯೊ ಇಂಡಿಯಾದ ಸ್ಥಾವರದಲ್ಲಿ ಎಪ್ರಿಲಿಯಾ ಎಸ್‌ಎಕ್ಸ್‌ಆರ್ 160 ಸ್ಕೂಟರ್ ಉತ್ಪಾದಿಸಲಾಗುತ್ತದೆ. ಹೊಸ ಎಸ್‌ಎಕ್ಸ್‌ಆರ್ 160 ಸ್ಕೂಟರ್ ಗಾಗಿ ಕೆಲವು ಡೀಲರುಗಳು ಅನಧಿಕೃತವಾಗಿ ಬುಕ್ಕಿಂಗ್ ಸ್ಬೀಕರಿಸಲು ಪ್ರಾರಂಭಿಸಿದ್ದಾರೆ. ಎಪ್ರಿಲಿಯಾ ಎಸ್‌ಎಕ್ಸ್‌ಆರ್ 160 ಪ್ರೀಮಿಯಂ ಸ್ಕೂಟರ್ ಆಗಿದೆ. ಎಪ್ರಿಲಿಯಾ ಎಸ್‌ಎಕ್ಸ್‌ಆರ್ 160 ಸ್ಕೂಟರ್ ಈಗಾಗಲೇ ಅನಾವರಣಗೊಳಿಸಿದ ಕೆಂಪು ಬಣ್ಣದ ಜೋತೆಗೆ ಹೊಸ ನೀಲಿ ಬಣ್ಣಗಳಲ್ಲಿಯು ಕೂಡ ಲಭ್ಯವಿರಲಿದೆ.

ಕೆಲವು ಡೀಲರು ಟೋಕನ್ ಮೊತ್ತ ರೂ.5,000 ಗಳಿಗೆ ಬುಕ್ಕಿಂಗ್ ಅನ್ನು ಸ್ವೀಕರಿಸಲಾಗುತ್ತಿದೆ. ಈ ಹೊಸ ಎಪ್ರಿಲಿಯಾ ಹೊಸ ಎಸ್‌ಎಕ್ಸ್‌ಆರ್ 160 ಸ್ಕೂಟರ್ ಇದೇ ತಿಂಗಳ ನಾಲ್ಕನೇ ವಾರದಲ್ಲಿ ಭಾರತೀಯ ಮಾರುಕಟ್ಟೆ ಬಿಡುಗಡೆಯಾಗಲಿದೆ. ಇನ್ನು ಜನವರಿ ಮೊದಲ ವಾರದಲ್ಲಿ ಈ ಹೊಸ ಸ್ಕೂಟರ್ ವಿತರಣೆಗಳು ಪ್ರಾರಂಭವಾಗುತ್ತವೆ. ಭಾರತದಲ್ಲಿ ಆಟೋಮ್ಯಾಟಿಕ್ ಸ್ಕೂಟರ್‌ಗಳಿಗೆ ಹೆಚ್ಚಿನ ಬೇಡಿಕೆಯಿದೆ.
MOST READ: ದುಬಾರಿಯಾಯ್ತು ಬಿಎಸ್-6 ಟಿವಿಎಸ್ ಎನ್‌ಟಾರ್ಕ್ 125 ಸ್ಕೂಟರ್

ಇದರ ಜೊತೆಗೆ ಗ್ರಾಹಕರು ಹೆಚ್ಚು ಸಾಮರ್ಥ್ಯವನ್ನು ಹೊಂದಿರುವ ವಿಶಿಷ್ಟ ವಿನ್ಯಾಸದ ಸ್ಕೂಟರ್‍ಗಳಿಗೆ ಹೆಚ್ಚು ಗಮನವನ್ನು ನೀಡುತ್ತಿದ್ದಾರೆ. ಈ ಕಾರಣಕ್ಕಾಗಿ ದ್ವಿಚಕ್ರ ವಾಹನ ತಯಾರಕ ಕಂಪನಿಯಾದ ಎಪ್ರಿಲಿಯಾ ತನ್ನ ಮ್ಯಾಕ್ಸಿ ಸ್ಕೂಟರ್ ಅನ್ನು ಭಾರತದಲ್ಲಿ ಬಿಡುಗಡೆಗೊಳಿಸಲು ಮುಂದಾಗಿದೆ.

ಈ ಎಸ್‌ಎಕ್ಸ್‌ಆರ್ 160 ಸ್ಕೂಟರ್ ಸೈಡ್ ಹಾಗೂ ಹಿಂಭಾಗದಲ್ಲಿರುವ ಸ್ಟೈಲಿಶ್ ಲುಕ್‍ನ ಬಾಡಿ ಗ್ರಾಫಿಕ್ಸ್ ಹಾಗೂ ಡಿಸೈನ್‍ಗಳು ಈ ಸ್ಕೂಟರ್‍ಗಳಿಗೆ ಸ್ಪೋರ್ಟಿ ಲುಕ್ ನೀಡುತ್ತವೆ. ಎಪ್ರಿಲಿಯಾ ಎಸ್‌ಎಕ್ಸ್‌ಆರ್ 160 ಮ್ಯಾಕ್ಸಿ-ಸ್ಕೂಟರ್ ಯುರೋಪಿಯನ್ ಮತ್ತು ಆಗ್ನೇಯ ಏಷ್ಯಾದ ಮಾರುಕಟ್ಟೆಗಳಲ್ಲಿ ಜನಪ್ರಿಯ ಮಾದರಿಯಾಗಿದೆ.
MOST READ: ಎಪ್ರಿಲಿಯಾ ಎಸ್‌ಎಕ್ಸ್‌ಆರ್ 160 ಸ್ಕೂಟರ್ ಟೀಸರ್ ಚಿತ್ರ ಬಿಡುಗಡೆ

ಕರೋನಾ ಸೋಂಕಿನ ಭೀತಿಯಿಂದಾಗ ಎಪ್ರಿಲಿಯಾ ಎಸ್‌ಎಕ್ಸ್‌ಆರ್ 160 ಸ್ಕೂಟರ್ ಭಾರತದಲ್ಲಿ ಬಿಡುಗಡೆಯಾಗುವುದು ವಿಳಂಬವಾಗಿದೆ. ಎಸ್‌ಎಕ್ಸ್‌ಆರ್ 160 ಸ್ಕೂಟರ್ ಅನ್ನು ಕ್ರಾಸ್ಒವರ್ ಸ್ಕೂಟರ್ ರೀತಿಯಲ್ಲಿ ಕಾಣುವಂತೆ ವಿನ್ಯಾಸಗೊಳಿಸಲಾಗಿದೆ. ಈ ಸ್ಕೂಟರ್‌ನಲ್ಲಿ ಡ್ಯುಯಲ್ ಎಲ್‌ಇಡಿ ಹೆಡ್‌ಲೈಟ್, ಡ್ಯುಯಲ್ ಎಲ್‌ಇಡಿ ಟೇಲ್ ಲೈಟ್ ಕ್ಲಸ್ಟರ್‌ಗಳಿವೆ.

ದೊಡ್ಡ ಗಾತ್ರದ ವಿಂಡ್‌ಸ್ಕ್ರೀನ್ ಸಿಸ್ಟಂ, ಪೂರ್ಣ ಪ್ರಮಾಣದ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಅನ್ನು ಸೀಟಿನ ಕೆಳಗಿರಿಸಲಾಗಿದೆ. ಎಪ್ರಿಲಿಯಾ ಎಸ್‌ಎಕ್ಸ್‌ಆರ್ 160 ಸ್ಕೂಟರ್‌ನಲ್ಲಿ ಫ್ಯೂಯಲ್ ಇಂಜೆಕ್ಷನ್ ಸಿಸ್ಟಂ ಅಳವಡಿಸಲಾಗಿದೆ.
MOST READ: ಬಿಡುಗಡೆಯಾಯ್ತು ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್‍ಮಾಸ್ಟರ್ ಬೈಕ್

ಎಪ್ರಿಲಿಯಾ ಎಸ್‌ಎಕ್ಸ್‌ಆರ್ 160 ಪ್ರೀಮಿಯಂ ಸ್ಕೂಟರ್ ಬೆಲೆಯು ಸುಮಾರು ರೂ.1.5 ಲಕ್ಷಗಳಾಗಿರಬಹುದು ಎಂದು ನಿರೀಕ್ಷಿಸುತ್ತೇವೆ. ಹೊಸ ಎಪ್ರಿಲಿಯಾ ಎಸ್‌ಎಕ್ಸ್‌ಆರ್ 160 ಪ್ರೀಮಿಯಂ ಸ್ಕೂಟರ್ ಶೀಘ್ರದಲ್ಲೇ ಬಿಡುಗಡೆಯಾಗಲಿದೆ. ಈ ಸ್ಕೋಟರ್ ಅನ್ನು ಸ್ಥಳೀಯವಾಗಿ ಅಭಿವೃದ್ದಿಪಡಿಸಲಾಗುತ್ತದೆ.

ಸ್ಕೂಟರ್ ಸವಾರ ಹಾಗೂ ಹಿಂಬದಿಯ ಪ್ರಯಾಣಿಕರಿಗೆ ಆರಾಮದಾಯಕವಾಗಿರುವ ಸೀಟ್‍ಗಳನ್ನು ನೀಡಲಾಗಿದೆ. ಈ ಸ್ಕೂಟರಿನ ಸೈಡ್ ಹಾಗೂ ಹಿಂಭಾಗದಲ್ಲಿರುವ ಸ್ಟೈಲಿಶ್ ಲುಕ್‍ನ ಬಾಡಿ ಗ್ರಾಫಿಕ್ಸ್ ಹಾಗೂ ಡಿಸೈನ್‍ಗಳು ಸಹ ಈ ಸ್ಕೂಟರಿಗೆ ಸ್ಪೋರ್ಟಿ ಲುಕ್ ನೀಡುತ್ತವೆ.