ಎಪ್ರಿಲಿಯಾ ಎಸ್‌ಎಕ್ಸ್‌ಆರ್ 160 ಸ್ಕೂಟರ್ ಟೀಸರ್ ಚಿತ್ರ ಬಿಡುಗಡೆ

ಎಪ್ರಿಲಿಯಾ ಕಂಪನಿಯು ತನ್ನ ಎಸ್‌ಎಕ್ಸ್‌ಆರ್ 160 ಸ್ಕೂಟರ್ ಅನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗಿದೆ. ಇದೀಗ ಎಪ್ರಿಲಿಯಾ ಹೊಸ ಎಸ್‌ಎಕ್ಸ್‌ಆರ್ 160 ಸ್ಕೂಟರ್ ಟೀಸರ್ ಚಿತ್ರವನ್ನು ಬಿಡುಗಡೆಗೊಳಿಸಿದೆ.

ಎಪ್ರಿಲಿಯಾ ಎಸ್‌ಎಕ್ಸ್‌ಆರ್ 160 ಸ್ಕೂಟರ್ ಟೀಸರ್ ಚಿತ್ರ ಬಿಡುಗಡೆ

ಎಪ್ರಿಲಿಯಾ ಎಸ್‌ಎಕ್ಸ್‌ಆರ್ 160 ಸ್ಕೂಟರ್ ಅನ್ನು ಮೊದಲ ಬಾರಿಗೆ ದೆಹಲಿಯಲ್ಲಿ ನಡೆದ 2020ರ ಆಟೋ ಎಕ್ಸ್‌ಪೋದಲ್ಲಿ ಅನಾವರಣಗೊಳಿಸಿತ್ತು. ಭಾರತದಲ್ಲಿ ಆಟೋಮ್ಯಾಟಿಕ್ ಸ್ಕೂಟರ್‌ಗಳಿಗೆ ಹೆಚ್ಚಿನ ಬೇಡಿಕೆಯಿದೆ. ಇದರ ಜೊತೆಗೆ ಗ್ರಾಹಕರು ಹೆಚ್ಚು ಸಾಮರ್ಥ್ಯವನ್ನು ಹೊಂದಿರುವ ವಿಶಿಷ್ಟ ವಿನ್ಯಾಸದ ಸ್ಕೂಟರ್‍‍ಗಳಿಗೆ ಹೆಚ್ಚು ಗಮನವನ್ನು ನೀಡುತ್ತಿದ್ದಾರೆ. ಈ ಕಾರಣಕ್ಕಾಗಿ ದ್ವಿಚಕ್ರ ವಾಹನ ತಯಾರಕ ಕಂಪನಿಯಾದ ಎಪ್ರಿಲಿಯಾ ತನ್ನ ಮ್ಯಾಕ್ಸಿ ಸ್ಕೂಟರ್ ಅನ್ನು ಭಾರತದಲ್ಲಿ ಬಿಡುಗಡೆಗೊಳಿಸಲು ಮುಂದಾಗಿದೆ.

ಎಪ್ರಿಲಿಯಾ ಎಸ್‌ಎಕ್ಸ್‌ಆರ್ 160 ಸ್ಕೂಟರ್ ಟೀಸರ್ ಚಿತ್ರ ಬಿಡುಗಡೆ

ಎಪ್ರಿಲಿಯಾ ಎಸ್‌ಎಕ್ಸ್‌ಆರ್ 160 ಸ್ಕೂಟರಿನ ಆಕರ್ಷಕ ಟೀಸರ್ ಚಿತ್ರವನ್ನು ಬಿಡುಗಡೆಗೊಳಿಸಿದೆ. ಈ ಎಸ್‌ಎಕ್ಸ್‌ಆರ್ 160 ಸ್ಕೂಟರ್ ಸೈಡ್ ಹಾಗೂ ಹಿಂಭಾಗದಲ್ಲಿರುವ ಸ್ಟೈಲಿಶ್ ಲುಕ್‍‍ನ ಬಾಡಿ ಗ್ರಾಫಿಕ್ಸ್ ಹಾಗೂ ಡಿಸೈನ್‍‍ಗಳು ಈ ಸ್ಕೂಟರ್‍ಗಳಿಗೆ ಸ್ಪೋರ್ಟಿ ಲುಕ್ ನೀಡುತ್ತವೆ.

MOST READ: ದುಬಾರಿಯಾಯ್ತು ಬಿಎಸ್-6 ಟಿವಿಎಸ್ ಎನ್‌ಟಾರ್ಕ್ 125 ಸ್ಕೂಟರ್

ಎಪ್ರಿಲಿಯಾ ಎಸ್‌ಎಕ್ಸ್‌ಆರ್ 160 ಸ್ಕೂಟರ್ ಟೀಸರ್ ಚಿತ್ರ ಬಿಡುಗಡೆ

ಎಪ್ರಿಲಿಯಾ ಎಸ್‌ಎಕ್ಸ್‌ಆರ್ 160 ಮ್ಯಾಕ್ಸಿ-ಸ್ಕೂಟರ್ ಮುಂದಿನ ತಿಂಗಳು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿದೆ. ಎಪ್ರಿಲಿಯಾ ಎಸ್‌ಎಕ್ಸ್‌ಆರ್ 160 ಮ್ಯಾಕ್ಸಿ-ಸ್ಕೂಟರ್ ಯುರೋಪಿಯನ್ ಮತ್ತು ಆಗ್ನೇಯ ಏಷ್ಯಾದ ಮಾರುಕಟ್ಟೆಗಳಲ್ಲಿ ಜನಪ್ರಿಯ ಮಾದರಿಯಾಗಿದೆ.

ಎಪ್ರಿಲಿಯಾ ಎಸ್‌ಎಕ್ಸ್‌ಆರ್ 160 ಸ್ಕೂಟರ್ ಟೀಸರ್ ಚಿತ್ರ ಬಿಡುಗಡೆ

ಕರೋನಾ ಸೋಂಕಿನ ಭೀತಿಯಿಂದಾಗ ಎಪ್ರಿಲಿಯಾ ಎಸ್‌ಎಕ್ಸ್‌ಆರ್ 160 ಸ್ಕೂಟರ್ ಭಾರತದಲ್ಲಿ ಬಿಡುಗಡೆಯಾಗುವುದು ವಿಳಂಬವಾಗಿದೆ. ಎಸ್‌ಎಕ್ಸ್‌ಆರ್ 160 ಸ್ಕೂಟರ್ ಅನ್ನು ಕ್ರಾಸ್ಒವರ್ ಸ್ಕೂಟರ್‌ ರೀತಿಯಲ್ಲಿ ಕಾಣುವಂತೆ ವಿನ್ಯಾಸಗೊಳಿಸಲಾಗಿದೆ. ಈ ಸ್ಕೂಟರ್‌ನಲ್ಲಿ ಡ್ಯುಯಲ್ ಎಲ್‌ಇಡಿ ಹೆಡ್‌ಲೈಟ್, ಡ್ಯುಯಲ್ ಎಲ್‌ಇಡಿ ಟೇಲ್ ಲೈಟ್ ಕ್ಲಸ್ಟರ್‌ಗಳಿವೆ.

MOST READ: ಬಿಡುಗಡೆಯ ಸನಿಹದಲ್ಲಿ ಬಹುನಿರೀಕ್ಷಿತ ಬಿಎಸ್-6 ಹೀರೋ ಬೈಕುಗಳು

ಎಪ್ರಿಲಿಯಾ ಎಸ್‌ಎಕ್ಸ್‌ಆರ್ 160 ಸ್ಕೂಟರ್ ಟೀಸರ್ ಚಿತ್ರ ಬಿಡುಗಡೆ

ದೊಡ್ಡ ಗಾತ್ರದ ವಿಂಡ್‌ಸ್ಕ್ರೀನ್ ಸಿಸ್ಟಂ, ಪೂರ್ಣ ಪ್ರಮಾಣದ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಅನ್ನು ಸೀಟಿನ ಕೆಳಗಿರಿಸಲಾಗಿದೆ. ಎಪ್ರಿಲಿಯಾ ಎಸ್‌ಎಕ್ಸ್‌ಆರ್ 160 ಸ್ಕೂಟರ್‌ನಲ್ಲಿ ಫ್ಯೂಯಲ್ ಇಂಜೆಕ್ಷನ್ ಸಿಸ್ಟಂ ಅಳವಡಿಸಲಾಗಿದೆ.

ಎಪ್ರಿಲಿಯಾ ಎಸ್‌ಎಕ್ಸ್‌ಆರ್ 160 ಸ್ಕೂಟರ್ ಟೀಸರ್ ಚಿತ್ರ ಬಿಡುಗಡೆ

ಈ ಸ್ಕೂಟರಿನ ಸೈಡ್ ಹಾಗೂ ಹಿಂಭಾಗದಲ್ಲಿರುವ ಸ್ಟೈಲಿಶ್ ಲುಕ್‍‍ನ ಬಾಡಿ ಗ್ರಾಫಿಕ್ಸ್ ಹಾಗೂ ಡಿಸೈನ್‍‍ಗಳು ಸಹ ಈ ಸ್ಕೂಟರಿಗೆ ಸ್ಪೋರ್ಟಿ ಲುಕ್ ನೀಡುತ್ತವೆ. ಸ್ಕೂಟರ್ ಸವಾರ ಹಾಗೂ ಹಿಂಬದಿಯ ಪ್ರಯಾಣಿಕರಿಗೆ ಆರಾಮದಾಯಕವಾಗಿರುವ ಸೀಟ್‍‍ಗಳನ್ನು ನೀಡಲಾಗಿದೆ.

MOST READ: ಆಗಸ್ಟ್ ತಿಂಗಳ ಮಾರಾಟ ವರದಿ ಪ್ರಕಟಿಸಿದ ಸುಜುಕಿ ಮೋಟಾರ್‌ಸೈಕಲ್

ಎಪ್ರಿಲಿಯಾ ಎಸ್‌ಎಕ್ಸ್‌ಆರ್ 160 ಸ್ಕೂಟರ್ ಟೀಸರ್ ಚಿತ್ರ ಬಿಡುಗಡೆ

ಎಪ್ರಿಲಿಯಾ ಎಸ್‌ಎಕ್ಸ್‌ಆರ್ 160 ಸ್ಕೂಟರ್ 160 ಸಿಸಿ ಸಿಂಗಲ್ ಸಿಲಿಂಡರ್ ಎಂಜಿನ್ ಹೊಂದಿದೆ. ಇದು 3-ವ್ಯಾಲ್ಯೂ ಫ್ಯೂಯಲ್ ಇಂಜೆಕ್ಷನ್ ಅನ್ನು ಹೊಂದಿದೆ. ಈ ಎಂಜಿನ್ 11 ಬಿಹೆಚ್‌ಪಿ ಪವರ್ ಮತ್ತು 11.6 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ಎಪ್ರಿಲಿಯಾ ಎಸ್‌ಎಕ್ಸ್‌ಆರ್ 160 ಸ್ಕೂಟರ್ ಟೀಸರ್ ಚಿತ್ರ ಬಿಡುಗಡೆ

ಎಪ್ರಿಲಿಯಾ ಎಸ್‌ಎಕ್ಸ್‌ಆರ್ 160 ಪ್ರೀಮಿಯಂ ಸ್ಕೂಟರ್ ತುಸು ದುಬಾರಿಯಾಗಿರಲಿದೆ ಎಂದು ನಿರೀಕ್ಷಿಸುತ್ತೇವೆ. ಎಸ್‍ಎಕ್ಸ್ ಆರ್ 160 ಸ್ಕೂಟರ್ ಇಟಲಿ ಮೂಲದ ಎಪ್ರಿಲಿಯಾ ಕಂಪನಿಯು ಭಾರತದಲ್ಲಿ ಬಿಡುಗಡೆಗೊಳಿಸುತ್ತಿರುವ ಮೊದಲ ಮ್ಯಾಕ್ಸಿ ಸ್ಕೂಟರ್ ಆಗಿದೆ. ಈ ಸ್ಕೋಟರ್ ಅನ್ನು ಸ್ಥಳೀಯವಾಗಿ ಅಭಿವೃದ್ದಿಪಡಿಸಲಾಗುತ್ತದೆ.

Most Read Articles

Kannada
English summary
Aprilia SXR 160 Teaser Image Released, India Launch Soon. Read In Kannada.
Story first published: Monday, September 14, 2020, 17:13 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X