ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಎಪ್ರಿಲಿಯಾ ಎಸ್‌ಎಕ್ಸ್‌ಆರ್ 160 ಸ್ಕೂಟರ್

ಪಿಯಾಜಿಯೊ ಕಂಪನಿಯು ತನ್ನ ಎಪ್ರಿಲಿಯಾ ಎಸ್‌ಎಕ್ಸ್‌ಆರ್ 160 ಸ್ಕೂಟರ್ ಅನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗಿದೆ. ಎಪ್ರಿಲಿಯಾ ಎಸ್‌ಎಕ್ಸ್‌ಆರ್ 160 ಸ್ಕೂಟರ್ ಅನ್ನು ಮೊದಲ ಬಾರಿಗೆ ದೆಹಲಿಯಲ್ಲಿ ನಡೆದ 2020ರ ಆಟೋ ಎಕ್ಸ್‌ಪೋದಲ್ಲಿ ಅನಾವರಣಗೊಳಿಸಿತ್ತು.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಎಪ್ರಿಲಿಯಾ ಎಸ್‌ಎಕ್ಸ್‌ಆರ್ 160 ಸ್ಕೂಟರ್

ಭಾರತದಲ್ಲಿ ಆಟೋಮ್ಯಾಟಿಕ್ ಸ್ಕೂಟರ್‌ಗಳಿಗೆ ಹೆಚ್ಚಿನ ಬೇಡಿಕೆಯಿದೆ. ಇದರ ಜೊತೆಗೆ ಗ್ರಾಹಕರು ಹೆಚ್ಚು ಸಾಮರ್ಥ್ಯವನ್ನು ಹೊಂದಿರುವ ವಿಶಿಷ್ಟ ವಿನ್ಯಾಸದ ಸ್ಕೂಟರ್‍‍ಗಳಿಗೆ ಹೆಚ್ಚು ಗಮನವನ್ನು ನೀಡುತ್ತಿದ್ದಾರೆ. ಈ ಕಾರಣಕ್ಕಾಗಿ ದ್ವಿಚಕ್ರ ವಾಹನ ತಯಾರಕ ಕಂಪನಿಯಾದ ಎಪ್ರಿಲಿಯಾ ತನ್ನ ಮ್ಯಾಕ್ಸಿ ಸ್ಕೂಟರ್ ಅನ್ನು ಭಾರತದಲ್ಲಿ ಬಿಡುಗಡೆಗೊಳಿಸಲು ಮುಂದಾಗಿದೆ. ಈ ಎಸ್‌ಎಕ್ಸ್‌ಆರ್ 160 ಸ್ಕೂಟರ್ ಸೈಡ್ ಹಾಗೂ ಹಿಂಭಾಗದಲ್ಲಿರುವ ಸ್ಟೈಲಿಶ್ ಲುಕ್‍‍ನ ಬಾಡಿ ಗ್ರಾಫಿಕ್ಸ್ ಹಾಗೂ ಡಿಸೈನ್‍‍ಗಳು ಈ ಸ್ಕೂಟರ್‍ಗಳಿಗೆ ಸ್ಪೋರ್ಟಿ ಲುಕ್ ನೀಡುತ್ತವೆ.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಎಪ್ರಿಲಿಯಾ ಎಸ್‌ಎಕ್ಸ್‌ಆರ್ 160 ಸ್ಕೂಟರ್

ವೆಸ್ಪಾ ರೇಸಿಂಗ್ ಸಿಕ್ಸ್‌ಟೀಸ್ ಸ್ಕೂಟರ್ ಬಿಡುಗಡೆಯ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಪಿಯಾಜಿಯೊ ಇಂಡಿಯಾದ ಅಧ್ಯಕ್ಷ ಮತ್ತು ಎಂಡಿ ಡಿಯಾಗೋ ಗೀಚು ಅವರು, 2020ರ ನವೆಂಬರ್‌ ತಿಂಗಳಲ್ಲಿ ಎಪ್ರಿಲಿಯಾ ಎಸ್‌ಎಕ್ಸ್‌ಆರ್ 160 ಮ್ಯಾಕ್ಸಿ-ಸ್ಕೂಟರ್ ಅನ್ನು ಬಿಡುಗಡೆಗೊಳಿಸುವುದಾಗಿ ಮಾಹಿತಿಯನ್ನು ನೀಡಿದ್ದಾರೆ.

MOST READ: ಬಿಡುಗಡೆಯಾಯ್ತು ಕಡಿಮೆ ಬೆಲೆಯ ಜಿಮೊಪೈ ಮಿಸೊ ಮಿನಿ ಎಲೆಕ್ಟ್ರಿಕ್ ಸ್ಕೂಟರ್

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಎಪ್ರಿಲಿಯಾ ಎಸ್‌ಎಕ್ಸ್‌ಆರ್ 160 ಸ್ಕೂಟರ್

ಎಪ್ರಿಲಿಯಾ ಎಸ್‌ಎಕ್ಸ್‌ಆರ್ 160 ಮ್ಯಾಕ್ಸಿ-ಸ್ಕೂಟರ್ ಯುರೋಪಿಯನ್ ಮತ್ತು ಆಗ್ನೇಯ ಏಷ್ಯಾದ ಮಾರುಕಟ್ಟೆಗಳಲ್ಲಿ ಜನಪ್ರಿಯ ಮಾದರಿಯಾಗಿದೆ. ಕರೋನಾ ಸೋಂಕಿನ ಭೀತಿಯಿಂದಾಗ ಎಪ್ರಿಲಿಯಾ ಎಸ್‌ಎಕ್ಸ್‌ಆರ್ 160 ಸ್ಕೂಟರ್ ಭಾರತದಲ್ಲಿ ಬಿಡುಗಡೆಯಾಗುವುದು ವಿಳಂಬವಾಗಿದೆ.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಎಪ್ರಿಲಿಯಾ ಎಸ್‌ಎಕ್ಸ್‌ಆರ್ 160 ಸ್ಕೂಟರ್

ಎಸ್‌ಎಕ್ಸ್‌ಆರ್ 160 ಸ್ಕೂಟರ್ ಅನ್ನು ಕ್ರಾಸ್ಒವರ್ ಸ್ಕೂಟರ್‌ ರೀತಿಯಲ್ಲಿ ಕಾಣುವಂತೆ ವಿನ್ಯಾಸಗೊಳಿಸಲಾಗಿದೆ. ಈ ಸ್ಕೂಟರ್‌ನಲ್ಲಿ ಡ್ಯುಯಲ್ ಎಲ್‌ಇಡಿ ಹೆಡ್‌ಲೈಟ್, ಡ್ಯುಯಲ್ ಎಲ್‌ಇಡಿ ಟೇಲ್ ಲೈಟ್ ಕ್ಲಸ್ಟರ್‌ಗಳಿವೆ.

MOST READ: ದುಬಾರಿಯಾಯ್ತು ಬಿಎಸ್-6 ಟಿವಿಎಸ್ ಎನ್‌ಟಾರ್ಕ್ 125 ಸ್ಕೂಟರ್

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಎಪ್ರಿಲಿಯಾ ಎಸ್‌ಎಕ್ಸ್‌ಆರ್ 160 ಸ್ಕೂಟರ್

ದೊಡ್ಡ ಗಾತ್ರದ ವಿಂಡ್‌ಸ್ಕ್ರೀನ್ ಸಿಸ್ಟಂ, ಪೂರ್ಣ ಪ್ರಮಾಣದ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಅನ್ನು ಸೀಟಿನ ಕೆಳಗಿರಿಸಲಾಗಿದೆ. ಎಪ್ರಿಲಿಯಾ ಎಸ್‌ಎಕ್ಸ್‌ಆರ್ 160 ಸ್ಕೂಟರ್‌ನಲ್ಲಿ ಫ್ಯೂಯಲ್ ಇಂಜೆಕ್ಷನ್ ಸಿಸ್ಟಂ ಅಳವಡಿಸಲಾಗಿದೆ.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಎಪ್ರಿಲಿಯಾ ಎಸ್‌ಎಕ್ಸ್‌ಆರ್ 160 ಸ್ಕೂಟರ್

ಈ ಸ್ಕೂಟರಿನ ಸೈಡ್ ಹಾಗೂ ಹಿಂಭಾಗದಲ್ಲಿರುವ ಸ್ಟೈಲಿಶ್ ಲುಕ್‍‍ನ ಬಾಡಿ ಗ್ರಾಫಿಕ್ಸ್ ಹಾಗೂ ಡಿಸೈನ್‍‍ಗಳು ಸಹ ಈ ಸ್ಕೂಟರಿಗೆ ಸ್ಪೋರ್ಟಿ ಲುಕ್ ನೀಡುತ್ತವೆ. ಸ್ಕೂಟರ್ ಸವಾರ ಹಾಗೂ ಹಿಂಬದಿಯ ಪ್ರಯಾಣಿಕರಿಗೆ ಆರಾಮದಾಯಕವಾಗಿರುವ ಸೀಟ್‍‍ಗಳನ್ನು ನೀಡಲಾಗಿದೆ.

MOST READ: ಬಿಡುಗಡೆಯ ಸನಿಹದಲ್ಲಿ ಬಹುನಿರೀಕ್ಷಿತ ಬಿಎಸ್-6 ಹೀರೋ ಬೈಕುಗಳು

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಎಪ್ರಿಲಿಯಾ ಎಸ್‌ಎಕ್ಸ್‌ಆರ್ 160 ಸ್ಕೂಟರ್

ಎಪ್ರಿಲಿಯಾ ಎಸ್‌ಎಕ್ಸ್‌ಆರ್ 160 ಸ್ಕೂಟರ್ 160 ಸಿಸಿ ಸಿಂಗಲ್ ಸಿಲಿಂಡರ್ ಎಂಜಿನ್ ಅನ್ನು ಹೊಂದಿದೆ. 3-ವ್ಯಾಲ್ಯೂ ಫ್ಯೂಯಲ್ ಇಂಜೆಕ್ಷನ್ ಅನ್ನು ಹೊಂದಿದೆ. ಈ ಎಂಜಿನ್ 11 ಬಿಹೆಚ್‌ಪಿ ಪವರ್ ಮತ್ತು 11.6 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಎಪ್ರಿಲಿಯಾ ಎಸ್‌ಎಕ್ಸ್‌ಆರ್ 160 ಸ್ಕೂಟರ್

ಎಪ್ರಿಲಿಯಾ ಎಸ್‌ಎಕ್ಸ್‌ಆರ್ 160 ಪ್ರೀಮಿಯಂ ಸ್ಕೂಟರ್ ತುಸು ದುಬಾರಿಯಾಗಿರಲಿದೆ ಎಂದು ನಿರೀಕ್ಷಿಸುತ್ತೇವೆ. ಎಸ್‍ಎಕ್ಸ್ ಆರ್ 160 ಸ್ಕೂಟರ್ ಇಟಲಿ ಮೂಲದ ಎಪ್ರಿಲಿಯಾ ಕಂಪನಿಯು ಭಾರತದಲ್ಲಿ ಬಿಡುಗಡೆಗೊಳಿಸುತ್ತಿರುವ ಮೊದಲ ಮ್ಯಾಕ್ಸಿ ಸ್ಕೂಟರ್ ಆಗಿದೆ. ಈ ಸ್ಕೋಟರ್ ಅನ್ನು ಭಾರತದಲ್ಲಿ ಅಭಿವೃದ್ದಿಪಡಿಸಲಾಗುತ್ತದೆ.

More from DriveSpark

Article Published On: Tuesday, September 1, 2020, 19:24 [IST]
English summary
Aprilia SXR 160 to be launched in India around November 2020. Read In Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+