ಚೀನಾ ಬ್ಯಾಟರಿಯಿಂದ ಎಲೆಕ್ಟ್ರಿಕ್ ಸ್ಕೂಟರ್ ಉತ್ಪಾದಿಸಲಿದೆ ಬಜಾಜ್

ಬಜಾಜ್ ಕಂಪನಿಯು ಈ ವರ್ಷದ ಆರಂಭದಲ್ಲಿ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿತ್ತು. ಬಜಾಜ್ ಕಂಪನಿಯು ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಉತ್ಪಾದನೆಯನ್ನು ಶೀಘ್ರದಲ್ಲೇ ಪುನಾರಂಭಿಸಲಿದೆ.

ಚೀನಾ ಬ್ಯಾಟರಿಯಿಂದ ಎಲೆಕ್ಟ್ರಿಕ್ ಸ್ಕೂಟರ್ ಉತ್ಪಾದಿಸಲಿದೆ ಬಜಾಜ್

ಕರೋನಾ ಸೋಂಕಿನ ಭೀತಿಯಿಂದ ದೇಶಾದ್ಯಂತ ಲಾಕ್‌ಡೌನ್‌ ಆದ ಸಂದರ್ಭದಲ್ಲಿ ಬಜಾಜ್ ಕಂಪನಿಯು ಬಜಾಜ್ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಉತ್ಪಾದನೆಯನ್ನು ಸ್ಥಗಿತಗೊಳಿಸಿದ್ದರು. ಈ ಎಲೆಕ್ಟ್ರಿಕ್ ಸ್ಕೂಟರ್ ಬುಕ್ಕಿಂಗ್ ಅನ್ನು ಕೂಡ ತಾತ್ಕಾಲಿಕವಾಗಿ ನಿಲ್ಲಿಸಿದ್ದರು. ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಉತ್ಪಾದನೆಯನ್ನು ಆರಂಭಿಸಲು ಕಂಪನಿಯು ಬ್ಯಾಟರಿ ಸೆಲ್‌ಗಳನ್ನು ಚೀನಾ ದೇಶದಿಂದ ಆಮದು ಮಾಡಿಕೊಳ್ಳಲು ಪ್ರಾರಂಭಿಸಿದೆ.

ಚೀನಾ ಬ್ಯಾಟರಿಯಿಂದ ಎಲೆಕ್ಟ್ರಿಕ್ ಸ್ಕೂಟರ್ ಉತ್ಪಾದಿಸಲಿದೆ ಬಜಾಜ್

ಕಿಲ್ಲರ್ ಕರೋನಾ ವೈರಸ್ ಹುಟ್ಟೂರು ವುಹಾನ್ ನಿಂದ ಬ್ಯಾಟರಿಯನ್ನು ಆಮದು ಮಾಡಿಕೊಳ್ಳುವುದರಿಂದ ಉತ್ಪಾದನೆಯ ಮೇಲೆಯು ಪರಿಣಾಮವನ್ನು ಬೀರಿತ್ತು. ಆದರೆ ವುಹಾನ್ ಪಟ್ಟಣ ಸಹಜ ಸ್ಥಿತಿಗೆ ಮರಳಿರುವುದರಿಂದ ಬ್ಯಾಟರಿಯನ್ನು ಆಮದು ಮಾಡಿಕೊಳ್ಳವ ಪಕ್ರಿಯೆಯು ಪ್ರಾರಂಭವಾಗಿದೆ.

MOST READ: ಬಿಡುಗಡೆಯಾಯ್ತು ಹೊಸ ಆಂಪಿಯರ್ ಮ್ಯಾಗ್ನಸ್ ಪ್ರೊ ಎಲೆಕ್ಟ್ರಿಕ್ ಸ್ಕೂಟರ್

ಚೀನಾ ಬ್ಯಾಟರಿಯಿಂದ ಎಲೆಕ್ಟ್ರಿಕ್ ಸ್ಕೂಟರ್ ಉತ್ಪಾದಿಸಲಿದೆ ಬಜಾಜ್

ಬಜಾಜ್ ಕಂಪನಿಯು ಪುಣೆ ಸ್ಥಾವರದಲ್ಲಿ ಕಾರ್ಯಾಚರಣೆ ಆರಂಭಿಸಿದೆ. ಇಲ್ಲಿಯೇ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ತಯಾರಿಸಲಾಗುತ್ತದೆ. ಈ ಕುರಿತು ಮಾತನಾಡಿದ ಬಜಾಜ್ ಆಟೋ ಕಾರ್ಯನಿರ್ವಾಹಕ ನಿರ್ದೇಶಕ ರಾಕೇಶ್ ಶರ್ಮಾ, ಮುಂಬೈ ಬಂದರಿಗೆ ಈಗಾಗಲೇ ಬ್ಯಾಟರಿ ಸೆಲ್‌ಗಳು ಬಂದಿವೆ. ಇವು ಸ್ಥಾವರವನ್ನು ತಲುಪಿದ ಕೂಡಲೇ ಕಂಪನಿಯು ಉತ್ಪಾದನೆಯನ್ನು ಪುನರಾರಂಭಿಸುತ್ತದೆ ಎಂದು ಹೇಳಿದ್ದಾರೆ.

ಚೀನಾ ಬ್ಯಾಟರಿಯಿಂದ ಎಲೆಕ್ಟ್ರಿಕ್ ಸ್ಕೂಟರ್ ಉತ್ಪಾದಿಸಲಿದೆ ಬಜಾಜ್

ಬಾಯ್ಕಾಟ್ ಚೀನಾ ಅಭಿಯಾನ ಕೂಡ ಭಾರತದಲ್ಲಿ ನಡೆಯುತ್ತಿದೆ. ಈ ಸಂದರ್ಭದಲ್ಲಿ ಜನಪ್ರಿಯ ಎಲೆಕ್ಟ್ರಿಕ್ ಸ್ಕೂಟರ್ ನಲ್ಲಿ ಚೀನಾ ಬ್ಯಾಟರಿ ಸೆಲ್‌ಗಳನ್ನು ಬಳುಸುವುದರಿಂದ ಮಾರಾಟದ ಮೇಲೆ ಪರಿಣಾಮ ಬೀರುತ್ತದೆ ಎಂಬುದು ಕಾದು ನೋಡಬೇಕು.

MOST READ: ಭಾರತಕ್ಕೆ ಲಗ್ಗೆ ಇಡಲಿದೆ ಜನಪ್ರಿಯ ಟ್ರಯಂಫ್ ಸ್ಟ್ರೀಟ್ ಟ್ರಿಪಲ್ ಆರ್ ಬೈಕ್

ಚೀನಾ ಬ್ಯಾಟರಿಯಿಂದ ಎಲೆಕ್ಟ್ರಿಕ್ ಸ್ಕೂಟರ್ ಉತ್ಪಾದಿಸಲಿದೆ ಬಜಾಜ್

ಬಜಾಜ್ ಚೇತಕ್ ಸ್ಕೂಟರ್ ಅನ್ನುಅರ್ಬೈನ್ ಮತ್ತು ಲೆಕ್ಟಿಕ್ ಪ್ರೀಮಿಯಂ ಎಂಬ ಎರಡು ರೂಪಾಂತರಗಳಲ್ಲಿ ಮಾರಾಟ ಮಾಡಲಾಗುತ್ತಿದೆ. ಚೇತಕ್ ಎಂಟ್ರಿ ಲೆವೆಲ್ ಅರ್ಬೈನ್ ಸ್ಕೂಟರ್ ಸಿಟ್ರಶ್ ರಶ್ ಮತ್ತು ಸೈಬರ್ ವೈಟ್ ಬಣ್ಣಗಳಲ್ಲಿ ಲಭ್ಯವಿದೆ.

ಚೀನಾ ಬ್ಯಾಟರಿಯಿಂದ ಎಲೆಕ್ಟ್ರಿಕ್ ಸ್ಕೂಟರ್ ಉತ್ಪಾದಿಸಲಿದೆ ಬಜಾಜ್

ಇನ್ನು ಪ್ರೀಮಿಯಂ ರೂಪಾಂತರವು ಹ್ಯಾಝಲ್ನಟ್, ಬ್ರೂಕ್ಲಿನ್ ಬ್ಲ್ಯಾಕ್, ಸಿಟ್ರಸ್ ರಶ್, ವೆಲುಟ್ಟೊ ರೊಸ್ಸೊ ಮತ್ತು ಇಂಡಿಗೊ ಮೆಟಾಲಿಕ್ ಬಣ್ಣಗಳಲ್ಲಿ ಲಭ್ಯವಿದೆ. ಚೇತಕ್ ಎಲೆಕ್ಟ್ರಿಕ್ ಸ್ಕೂಟರ್‌ 4ಕೆ ಡಬ್ಲ್ಯು ಲೀಥಿಯಂ ಅಯಾನ್ ಬ್ಯಾಟರಿ ಪ್ಯಾಕ್ ಅನ್ನು ಹೊಂದಿದೆ.

MOST READ: ಬಹಿರಂಗವಾಯ್ತು ಬಿಎಸ್-6 ಹೀರೋ ಎಕ್ಸ್‌ಪಲ್ಸ್ 200 ಬೈಕಿನ ಮಾಹಿತಿ

ಚೀನಾ ಬ್ಯಾಟರಿಯಿಂದ ಎಲೆಕ್ಟ್ರಿಕ್ ಸ್ಕೂಟರ್ ಉತ್ಪಾದಿಸಲಿದೆ ಬಜಾಜ್

ಇಕೋ‌ ಮೋಡ್‍ನಲ್ಲಿ ಪ್ರತಿ ಚಾರ್ಜ್‌ಗೆ 95ಕಿ.ಮೀ ಮತ್ತು ಸ್ಪೋರ್ಟ್ ಮೋಡ್‌ನಲ್ಲಿ ಪ್ರತಿ ಚಾರ್ಜ್‌ಗೆ 85 ಕಿ.ಮೀ ಚಲಿಸುತ್ತದೆ. ಎಲೆಕ್ಟ್ರಿಕ್ ಸ್ಕೂಟರ್ ರಿರ್ವಸ್ ಅಸಿಸ್ಟ್ ಮೋಡ್ ಅನ್ನು ಹೊಂದಿದೆ.

ಚೀನಾ ಬ್ಯಾಟರಿಯಿಂದ ಎಲೆಕ್ಟ್ರಿಕ್ ಸ್ಕೂಟರ್ ಉತ್ಪಾದಿಸಲಿದೆ ಬಜಾಜ್

ಚೇತಕ್ ಸ್ಕೂಟರ್ ಮೊದಲ ನೋಟದಲ್ಲಿ ವೆಸ್ಪಾ ಸ್ಕೂಟರ್‍‍ನಂತೆ ಕಾಣುತ್ತದೆ. ಚೇತಕ್ ಎಲೆಕ್ಟ್ರಿಕ್ ಸ್ಕೂಟರ್‍‍ನಲ್ಲಿ ಬಳಕೆ ಮಾಡಲಾಗಿರುವ ಬ್ಯಾಟರಿ ಬರೋಬ್ಬರಿ 70 ಸಾವಿರ ಕಿ.ಮೀ ನಷ್ಟು ಕಾರ್ಯಕ್ಷಮತೆ ಹೊಂದಿದೆ.

Most Read Articles

Kannada
English summary
Bajaj Chetak battery cells start arriving from China – Production to restart soon. Read In Kannada.
Story first published: Tuesday, June 23, 2020, 18:55 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X