ಬೇಡಿಕೆಗೆ ತಕ್ಕಂತೆ ಪೂರೈಸಲಾಗದೇ ಚೇತಕ್ ಬುಕ್ಕಿಂಗ್ ಸ್ಥಗಿತಗೊಳಿಸಿದ ಬಜಾಜ್

80ರ ದಶಕದಲ್ಲಿ ಭಾರತೀಯರ ನೆಚ್ಚಿನ ಸ್ಕೂಟರ್ ಆಗಿದ್ದ ಚೇತಕ್ ಹೊಸ ಅವತಾರದಲ್ಲಿ ಬಜಾಜ್ ಕಂಪನಿಯು ಬಿಡುಗಡೆಗೊಳಿಸಿದ್ದರು. ಐತಿಹಾಸಿಕ ಚೇತಕ್ ಸ್ಕೂಟರ್ ಅನ್ನು ಎಲೆಕ್ಟ್ರಿಕ್ ರೂಪದಲ್ಲಿ ಬಿಡುಗಡೆಗೊಳಿಸುವ ಮೂಲಕ ಭಾರತೀಯ ಮಾರುಕಟ್ಟೆಯಲ್ಲಿ ಹೊಸ ಸಂಚಲವನ್ನು ಮೂಡಿಸುವ ಪ್ರಯತ್ನವನ್ನು ಬಜಾಜ್ ಮಾಡಿತು.

ಬೇಡಿಕೆಗೆ ತಕ್ಕಂತೆ ಪೂರೈಸಲಾಗದೇ ಚೇತಕ್ ಬುಕ್ಕಿಂಗ್ ಸ್ಥಗಿತಗೊಳಿಸಿದ ಬಜಾಜ್

ಆದರೆ ಆರಂಭಿಕ ಹಂತದಿಂದಲೂ ಬಜಾಜ್ ಕಂಪನಿಯು ಹಲವಾರು ವಿಘ್ನಗಳನ್ನು ಎದುರಿಸಬೇಕಾಯಿತು. ಆರಂಭದಲ್ಲಿ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ವಿನ್ಯಾಸದ ಬಗ್ಗೆ ಹಲವರು ಟೀಕೆಯನ್ನು ಮಾಡಿದರು. ಬಜಾಜ್ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಈ ವರ್ಷದ ಆರಂಭದಲ್ಲಿ ಬಿಡುಗಡೆಗೊಳಿಸಿದ್ದರು. ಆರಂಭದಲ್ಲಿ ಬಜಾಜ್ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಪುಣೆ ಮತ್ತು ಬೆಂಗಳೂರಿನಲ್ಲಿ ಮಾತ್ರ ಮಾರಾಟ ಮಾಡಲಾಗುತ್ತಿತ್ತು. ನಂತರದ ದಿನಗಳಲ್ಲಿ ಇತರ ಪ್ರಮುಖ ನಗರಗಳಿಗೆ ಎಲೆಕ್ಟ್ರಿಕ್ ಸ್ಕೂಟರ್ ಮಾರಾಟವನ್ನು ವಿಸ್ತರಿಸಲು ಯೋಜನೆ ಮಾಡಿದ್ದರು.

ಬೇಡಿಕೆಗೆ ತಕ್ಕಂತೆ ಪೂರೈಸಲಾಗದೇ ಚೇತಕ್ ಬುಕ್ಕಿಂಗ್ ಸ್ಥಗಿತಗೊಳಿಸಿದ ಬಜಾಜ್

ಆದರೆ ಕರೋನಾ ಸೋಂಕಿನಾ ಭೀತಿಯಿಂದ ಸರ್ಕಾರ ದೇಶಾದ್ಯಂತ ಲಾಕ್ ಡೌನ್ ಹೇರಿದ್ದರು. ಇದರಿಂದ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಉತ್ಪಾದನೆಯನ್ನು ನಡೆಸಲು ಸಾಧ್ಯವಾಗಲಿಲ್ಲ. ಇದರಿಂದ ಮಾರ್ಚ್ ಮತ್ತು ಏಪ್ರಿಲ್ ತಿಂಗಳಲ್ಲಿ ಬುಕ್ಕಿಂಗ್ ಸ್ವೀಕರಿಸುವುದನ್ನು ನಿಲ್ಲಿಸಿದ್ದರು.

MOST READ: ದುಬಾರಿಯಾಯ್ತು ಬಿಎಸ್-6 ಟಿವಿಎಸ್ ಎನ್‌ಟಾರ್ಕ್ 125 ಸ್ಕೂಟರ್

ಬೇಡಿಕೆಗೆ ತಕ್ಕಂತೆ ಪೂರೈಸಲಾಗದೇ ಚೇತಕ್ ಬುಕ್ಕಿಂಗ್ ಸ್ಥಗಿತಗೊಳಿಸಿದ ಬಜಾಜ್

ಜೂನ್‌ನಲ್ಲಿ ಅನ್‌ಲಾಕ್ ಪ್ರಕ್ರಿಯೆ ಪ್ರಾರಂಭವಾದ ನಂತರ ಬಜಾಜ್ ಚೇತಕ್ ಬುಕ್ಕಿಂಗ್ ಅನ್ನು ಪುನರಾರಂಭಿಸಿದ್ದರು. ಇದೀಗ ಮತ್ತೆ ಬುಕ್ಕಿಂಗ್ ಸ್ವೀಕಿಸುವುದನ್ನು ಸ್ಥಗಿತಗೊಳಿಸಲಾಗಿದೆ.

ಬೇಡಿಕೆಗೆ ತಕ್ಕಂತೆ ಪೂರೈಸಲಾಗದೇ ಚೇತಕ್ ಬುಕ್ಕಿಂಗ್ ಸ್ಥಗಿತಗೊಳಿಸಿದ ಬಜಾಜ್

ಬಜಾಜ್ ಚೇತಕ್ ಭಾರತದಲ್ಲಿ ಉತ್ಪಾದನೆಯನ್ನು ಮಾಡುವುದಾದರೂ ಬ್ಯಾಟರಿ ಪ್ಯಾಕ್ ಸೇರಿದಂತೆ ಪ್ರಮುಖ ಬಿಡಿಭಾಗಗಳನ್ನು ಚೀನಾ ದೇಶದಿಂದ ಆಮದು ಮಾಡಿಕೊಳ್ಳಲಾಗುತ್ತಿದೆ. ಇದರಿಂದ ಚೀನಾದಿಂದ ಬಿಡಿ ಭಾಗಗಳನ್ನು ತರಿಸಿಕೊಳ್ಳಲಾಗದೆ ಉತ್ಪಾದನೆಯ ಮೇಲೆ ಪಾರಿಣಾಮವನ್ನು ಬೀರಿದೆ.

MOST READ: ಆಗಸ್ಟ್ ತಿಂಗಳ ಮಾರಾಟ ವರದಿ ಪ್ರಕಟಿಸಿದ ಸುಜುಕಿ ಮೋಟಾರ್‌ಸೈಕಲ್

ಬೇಡಿಕೆಗೆ ತಕ್ಕಂತೆ ಪೂರೈಸಲಾಗದೇ ಚೇತಕ್ ಬುಕ್ಕಿಂಗ್ ಸ್ಥಗಿತಗೊಳಿಸಿದ ಬಜಾಜ್

ಮಾರ್ಚ್ ಏಪ್ರಿಲ್ ತಿಂಗಳಲ್ಲಿ ಕರೋನಾ ಭೀತಿಯಿಂದ ಬಿಡಿಭಾಗಗಳನ್ನು ಆಮದು ಮಾಡಿಕೊಳ್ಳಲು ಸಾಧ್ಯವಾಗಲಿಲ್ಲ. ಇದೀಗ ಚೀನಾ ಮತ್ತು ಭಾರತದ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ಇರುವುದರಿಂದ ಬಿಡಿಭಾಗಗಳನ್ನು ಆಮದು ಮಾಡಿಕೊಳ್ಳುವುದು ಕಷ್ಟವಾಗಿದೆ.

ಬೇಡಿಕೆಗೆ ತಕ್ಕಂತೆ ಪೂರೈಸಲಾಗದೇ ಚೇತಕ್ ಬುಕ್ಕಿಂಗ್ ಸ್ಥಗಿತಗೊಳಿಸಿದ ಬಜಾಜ್

ಇದರಿಂದಾಗಿ ಬಜಾಜ್ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಉತ್ಪಾದನೆಯ ಮೇಲೆ ಪರಿಣಾಮ ಬೀರಿದೆ. ಬೇಡಿಕೆಗೆ ತಕ್ಕಂತೆ ಪೂರೈಕೆ ಮಾಡಲು ಸಾಧ್ಯವಾಗದೆ ಬಜಾಜ್ ಕಂಪನಿಯು ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಗಾಗಿ ಬುಕ್ಕಿಂಗ್ ಸ್ವೀಕರಿಸುವುದನ್ನು ಸ್ಥಗಿತಗೊಳಿಸಲಾಗಿದೆ.

MOST READ: ಬಿಡುಗಡೆಯ ಸನಿಹದಲ್ಲಿ ಬಹುನಿರೀಕ್ಷಿತ ಬಿಎಸ್-6 ಹೀರೋ ಬೈಕುಗಳು

ಬೇಡಿಕೆಗೆ ತಕ್ಕಂತೆ ಪೂರೈಸಲಾಗದೇ ಚೇತಕ್ ಬುಕ್ಕಿಂಗ್ ಸ್ಥಗಿತಗೊಳಿಸಿದ ಬಜಾಜ್

ಬಜಾಜ್ ಚೇತಕ್ ಸ್ಕೂಟರ್ ಅನ್ನು ಅರ್ಬೈನ್ ಮತ್ತು ಲೆಕ್ಟಿಕ್ ಪ್ರೀಮಿಯಂ ಎಂಬ ಎರಡು ರೂಪಾಂತರಗಳಲ್ಲಿ ಮಾರಾಟ ಮಾಡಲಾಗುತ್ತಿದೆ. ಚೇತಕ್ ಎಂಟ್ರಿ ಲೆವೆಲ್ ಅರ್ಬೈನ್ ಸ್ಕೂಟರ್ ಸಿಟ್ರಶ್ ರಶ್ ಮತ್ತು ಸೈಬರ್ ವೈಟ್ ಬಣ್ಣಗಳಲ್ಲಿ ಲಭ್ಯವಿದೆ.

ಬೇಡಿಕೆಗೆ ತಕ್ಕಂತೆ ಪೂರೈಸಲಾಗದೇ ಚೇತಕ್ ಬುಕ್ಕಿಂಗ್ ಸ್ಥಗಿತಗೊಳಿಸಿದ ಬಜಾಜ್

ಇನ್ನು ಪ್ರೀಮಿಯಂ ರೂಪಾಂತರವು ಹ್ಯಾಝಲ್ನಟ್, ಬ್ರೂಕ್ಲಿನ್ ಬ್ಲ್ಯಾಕ್, ಸಿಟ್ರಸ್ ರಶ್, ವೆಲುಟ್ಟೊ ರೊಸ್ಸೊ ಮತ್ತು ಇಂಡಿಗೊ ಮೆಟಾಲಿಕ್ ಬಣ್ಣಗಳಲ್ಲಿ ಲಭ್ಯವಿದೆ. ಚೇತಕ್ ಎಲೆಕ್ಟ್ರಿಕ್ ಸ್ಕೂಟರ್‌ 4ಕೆ ಡಬ್ಲ್ಯು ಲೀಥಿಯಂ ಅಯಾನ್ ಬ್ಯಾಟರಿ ಪ್ಯಾಕ್ ಅನ್ನು ಹೊಂದಿದೆ.

ಬೇಡಿಕೆಗೆ ತಕ್ಕಂತೆ ಪೂರೈಸಲಾಗದೇ ಚೇತಕ್ ಬುಕ್ಕಿಂಗ್ ಸ್ಥಗಿತಗೊಳಿಸಿದ ಬಜಾಜ್

ಇಕೋ‌ ಮೋಡ್‍ನಲ್ಲಿ ಪ್ರತಿ ಚಾರ್ಜ್‌ಗೆ 95ಕಿ.ಮೀ ಮತ್ತು ಸ್ಪೋರ್ಟ್ ಮೋಡ್‌ನಲ್ಲಿ ಪ್ರತಿ ಚಾರ್ಜ್‌ಗೆ 85 ಕಿ.ಮೀ ಚಲಿಸುತ್ತದೆ. ಎಲೆಕ್ಟ್ರಿಕ್ ಸ್ಕೂಟರ್ ರಿರ್ವಸ್ ಅಸಿಸ್ಟ್ ಮೋಡ್ ಅನ್ನು ಹೊಂದಿದೆ. ಚೇತಕ್ ಎಲೆಕ್ಟ್ರಿಕ್ ಸ್ಕೂಟರ್‍‍ನಲ್ಲಿ ಬಳಕೆ ಮಾಡಲಾಗಿರುವ ಬ್ಯಾಟರಿ ಬರೋಬ್ಬರಿ 70 ಸಾವಿರ ಕಿ.ಮೀ ನಷ್ಟು ಕಾರ್ಯಕ್ಷಮತೆ ಹೊಂದಿದೆ.

Most Read Articles

Kannada
English summary
Bajaj Chetak Bookings Closed As Company Struggles To Meet Demand. Read In Kannada.
Story first published: Saturday, September 12, 2020, 15:53 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X