ಅತ್ಯಾಧುನಿಕ ಫೀಚರ್‌ಗಳೊಂದಿಗೆ ಬಿಡುಗಡೆಯಾಯ್ತು ಬ್ಯಾಟ್‌ರಿ ಜಿಪಿಎಸ್ಸಿ ಎಲೆಕ್ಟ್ರಿಕ್ ಸ್ಕೂಟರ್

ಬ್ಯಾಟ್‌ರಿ ಎಲೆಕ್ಟ್ರಿಕ್ ಮೊಬಿಲಿಟಿಯು ಜಿಪಿಎಸ್ಸಿ ಎಂಬ ಹೊಸ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದೆ. ಈ ಹೊಸ ಬ್ಯಾಟ್‍ರಿ ಜಿಪಿಎಸ್ಸಿ ಎಲೆಕ್ಟ್ರಿಕ್ ಸ್ಕೂಟರ್ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.64,990 ಗಳಾಗಿದೆ.

ಅತ್ಯಾಧುನಿಕ ಫೀಚರ್‌ಗಳೊಂದಿಗೆ ಬಿಡುಗಡೆಯಾಯ್ತು ಬ್ಯಾಟ್‌ರಿ ಜಿಪಿಎಸ್ಸಿ ಎಲೆಕ್ಟ್ರಿಕ್ ಸ್ಕೂಟರ್

ಈ ಎಲೆಕ್ಟ್ರಿಕ್ ಸ್ಕೂಟರ್ ಇಂಟರ್ನೆಟ್ ಸಂಪರ್ಕವನ್ನು ಒಳಗೊಂಡಂತಹ ಹಲವಾರು ಫೀಚರ್ ಗಳನ್ನು ಹೊಂದಿದೆ. ಬ್ರ್ಯಾಟ್‍ರಿ ಜಿಪಿಎಸ್ಸಿ(GPSie) ಎಲೆಕ್ಟ್ರಿಕ್ ಸ್ಕೂಟರ್ ತಯಾರಕ ಕಂಪನಿ ಮತ್ತು ಕಮ್ಯುನಿಕೇಷನ್ಸ್ ಕಂಪನಿಯು ಸಹಭಾಗಿತ್ವವನ್ನು ಹೊಂದಿದೆ. ಈ ಎರಡು ಕಂಪನಿಗಳ ನಡುವಿನ ಸಹಭಾಗಿತ್ವದಲ್ಲಿ ತಯಾರಿಸಿದ ಹೊಸ ಎಲೆಕ್ಟ್ರಿಕ್ ಸ್ಕೂಟರ್ ಇಂಟರ್ನೆಟ್-ಕನೆಕ್ಟಿವಿಟಿ ನಂತಹ ಅತ್ಯಾಧುನಿಕ ಫೀಚರ್ ಗಳನ್ನು ಹೊಂದಿದೆ.

ಅತ್ಯಾಧುನಿಕ ಫೀಚರ್‌ಗಳೊಂದಿಗೆ ಬಿಡುಗಡೆಯಾಯ್ತು ಬ್ಯಾಟ್‌ರಿ ಜಿಪಿಎಸ್ಸಿ ಎಲೆಕ್ಟ್ರಿಕ್ ಸ್ಕೂಟರ್

ಬ್ಯಾಟ್‍ರಿ ಜಿಪಿಎಸ್ಸಿ ಸ್ಕೂಟರ್ ನಲ್ಲಿ 48ವಿ/24 ಎಎಚ್ ಲಿಥಿಯಂ ಫಿರೋ ಫಾಸ್ಫೇಟ್ (ಎಲ್‌ಎಫ್‌ಪಿ) ಬ್ಯಾಟರಿಯನ್ನು ಹೊಂದಿದೆ. ಇದು ಗರಿಷ್ಠ 65 ಕಿ.ಮೀ ರೇಂಜ್ ಅನ್ನು ಹೊಂದಿದೆ. ಈ ಸ್ಕೂಟರ್ 2.5 ಗಂಟೆಗಳಲ್ಲಿ ಸಂಪೂರ್ಣವಾಗಿ ಚಾರ್ಜ್ ಆಗುತ್ತದೆ. ಬ್ಯಾಟರಿಯನ್ನು 250ಡಬ್ಲ್ಯೂ ಹಬ್ ಮೋಟರ್ ನೊಂದಿಗೆ ಜೋಡಿಸಲಾಗಿದೆ.

MOST READ: ಬಿಎಸ್-6 ಎಂಜಿನ್‍‍ನಲ್ಲಿ ಬಿಡುಗಡೆಯಾಯ್ತು ಜನಪ್ರಿಯ ಟೆವಿಎಸ್ ಸ್ಪೋರ್ಟ್ ಬೈಕ್

ಅತ್ಯಾಧುನಿಕ ಫೀಚರ್‌ಗಳೊಂದಿಗೆ ಬಿಡುಗಡೆಯಾಯ್ತು ಬ್ಯಾಟ್‌ರಿ ಜಿಪಿಎಸ್ಸಿ ಎಲೆಕ್ಟ್ರಿಕ್ ಸ್ಕೂಟರ್

ಈ ಎಲೆಕ್ಟ್ರಿಕ್ ಸ್ಕೂಟರ್ ಗಂಟೆಗೆ 25 ಕಿ.ಮೀ ವೇಗದಲ್ಲಿ ಚಲಿಸುತ್ತದೆ. ಈ ಸ್ಕೂಟರ್ ನಲ್ಲಿ ಹಲವಾರು ಫೀಚರ್ ಗಳನ್ನು ಹೊಂದಿದೆ. ಈ ಸ್ಕೂಟರ್ ನಲ್ಲಿ ಎಲ್‌ಇಡಿ ಹೆಡ್‌ಲ್ಯಾಂಪ್, ಡಿಜಿಟಲ್ ಓಡೋಮೀಟರ್, ಕೀಲೆಸ್ ಇಗ್ನಿಷನ್, ಯುಎಸ್‌ಬಿ ಚಾರ್ಜರ್,ರಿಜನರೇಟಿವ್ ಬ್ರೇಕಿಂಗ್, ಟ್ಯೂಬ್‌ಲೆಸ್ ಟಯರ್ ಗಳೊಂದಿಗೆ 10 ಇಂಚಿನ ವ್ಹೀಲ್ಸ್ ಮತ್ತು 220 ಎಂಎಂ ಡಿಸ್ಕ್ ಬ್ರೇಕ್ ಮತ್ತು ಇಬಿಎಸ್ ಅನ್ನು ಹೊಂದಿದೆ.

ಅತ್ಯಾಧುನಿಕ ಫೀಚರ್‌ಗಳೊಂದಿಗೆ ಬಿಡುಗಡೆಯಾಯ್ತು ಬ್ಯಾಟ್‌ರಿ ಜಿಪಿಎಸ್ಸಿ ಎಲೆಕ್ಟ್ರಿಕ್ ಸ್ಕೂಟರ್

ಈ ಬ್ಯಾಟ್‍ರಿ ಜಿಪಿಎಸ್ಸಿ ಇಂಟಿಗ್ರೇಟೆಡ್ ಸಿಮ್ನೊಂದಿಗೆ ಬರುತ್ತದೆ, ಇದು ಹೆಚ್ಚುವರಿ ಕನ್ಕೆಟಿವಿಟಿ ಫೀಚರ್ ಅನ್ನು ನೀಡುತ್ತದೆ. ಇದರಲ್ಲಿ ಜಿಪಿಎಸ್ ಟ್ರ್ಯಾಕಿಂಗ್, ಜಿಯೋಫೆನ್ಸಿಂಗ್, ರಿಮೋಟ್ ಇಮೊಬಿಲೈಸೇಶನ್, ಟ್ರಿಪ್ ರಿಪೋರ್ಟ್, ವೇಗ ಮತ್ತು ಕ್ರ್ಯಾಶ್ ಅಲರ್ಟ್ ಮತ್ತು ಇತರ ಸುರಕ್ಷಿತ ಫೀಚರ್ ಗಳಿಂದ ಕೂಡಿದೆ.

MOST READ: ಬಿಡುಗಡೆಯಾಯ್ತು ಬಹುನೀರಿಕ್ಷಿತ ಹೊಸ ಯಮಹಾ ಬೈಕುಗಳ ಟೀಸರ್

ಅತ್ಯಾಧುನಿಕ ಫೀಚರ್‌ಗಳೊಂದಿಗೆ ಬಿಡುಗಡೆಯಾಯ್ತು ಬ್ಯಾಟ್‌ರಿ ಜಿಪಿಎಸ್ಸಿ ಎಲೆಕ್ಟ್ರಿಕ್ ಸ್ಕೂಟರ್

ಎಲೆಕ್ಟ್ರಿಕ್ ಸ್ಕೂಟರ್ ಅನ್ನು ರೈಡರ್ ಸ್ಮಾರ್ಟ್‌ಫೋನ್‌ಗೆ ಮೀಸಲಾದ ಆ್ಯಪ್ ಮೂಲಕ ಜೋಡಿಸಲಾಗಿದೆ, ಇದು ಎಲ್ಲಾ ವಿವರಗಳನ್ನು ಪ್ರದರ್ಶಿಸುತ್ತದೆ. ಈ ಬ್ಯಾಟ್‍ರಿ ಜಿಪಿಎಸ್ಸಿ ಎಲೆಕ್ಟ್ರಿಕ್ ಸ್ಕೂಟರ್ ಕೆಂಪು, ಬಿಳಿ ಮತ್ತು ನೀಲಿ ಎಂಬ ಮೂರು ರೀತಿಯ ಬಣ್ಣಗಳ ಆಯ್ಕೆಯನ್ನು ಹೊಂದಿದೆ.

ಅತ್ಯಾಧುನಿಕ ಫೀಚರ್‌ಗಳೊಂದಿಗೆ ಬಿಡುಗಡೆಯಾಯ್ತು ಬ್ಯಾಟ್‌ರಿ ಜಿಪಿಎಸ್ಸಿ ಎಲೆಕ್ಟ್ರಿಕ್ ಸ್ಕೂಟರ್

ಕರ್ನಾಟಕ, ತೆಲಂಗಾಣ, ತಮಿಳುನಾಡು, ಗುಜರಾತ್, ಮಹಾರಾಷ್ಟ್ರ, ಆಂಧ್ರಪ್ರದೇಶ ಮತ್ತು ಉತ್ತರ ಪ್ರದೇಶ ಸೇರಿದಂತೆ ವಿವಿಧ ರಾಜ್ಯಗಳಲ್ಲಿ 50ಕ್ಕೂ ಹೆಚ್ಚು ಈ ಎಲೆಕ್ಟ್ರಿಕ್ ಸ್ಕೂಟರ್ ತಯಾರಕರ ಕಂಪನಿಯ ಡೀಲರ್ ಗಳಿವೆ.

MOST READ: ಬಹಿರಂಗವಾಯ್ತು ಬಿಎಸ್-6 ಹೀರೋ ಎಕ್ಸ್‌ಪಲ್ಸ್ 200 ಬೈಕಿನ ಮಾಹಿತಿ

ಅತ್ಯಾಧುನಿಕ ಫೀಚರ್‌ಗಳೊಂದಿಗೆ ಬಿಡುಗಡೆಯಾಯ್ತು ಬ್ಯಾಟ್‌ರಿ ಜಿಪಿಎಸ್ಸಿ ಎಲೆಕ್ಟ್ರಿಕ್ ಸ್ಕೂಟರ್

ಈ ಡೀಲರ್‍‍ಗಳ ಬಳಿ ಗ್ರಾಹಕರು ಹೊಸ ಜಿಪಿಎಸ್ಸಿ ಎಲೆಕ್ಟ್ರಿಕ್ ಸ್ಕೂಟರ್ ಖರೀದಿಸಬಹುದು. ಇನ್ನು ಬ್ಯಾಟ್‍ರಿ ಜಿಪಿಎಸ್ಸಿ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಆನ್‌ಲೈನ್‌ನಲ್ಲಿ ಅಮೆಜಾನ್ ಇಂಡಿಯಾ ಇ-ಕಾಮರ್ಸ್ ಪ್ಲಾಟ್‌ಫಾರ್ಮ್‌ನಲ್ಲಿ ಮಾರಾಟ ಮಾಡಲಾಗುತ್ತದೆ.

ಅತ್ಯಾಧುನಿಕ ಫೀಚರ್‌ಗಳೊಂದಿಗೆ ಬಿಡುಗಡೆಯಾಯ್ತು ಬ್ಯಾಟ್‌ರಿ ಜಿಪಿಎಸ್ಸಿ ಎಲೆಕ್ಟ್ರಿಕ್ ಸ್ಕೂಟರ್

ಬ್ಯಾಟ್‍ರಿ ಜಿಪಿಎಸ್ಸಿ ಸ್ಕೂಟರ್ ಕಡಿಮೆ ವೇಗದ ಎಲೆಕ್ಟ್ರಿಕ್ ಸ್ಕೂಟರ್ ಪಟ್ಟಿಗೆ ಸೇರುತ್ತದೆ. ಈ ಹೊಸ ಬ್ಯಾಟ್‍ರಿ ಜಿಪಿಎಸ್ಸಿ ಸ್ಕೂಟರ್ ಭಾರತೀಯ ಮಾರುಕಟ್ಟೆಯಲ್ಲಿ ಆಂಪಿಯರ್ ಮತ್ತು ಅವನ್ ಮೋಟಾರ್ಸ್ ಎಲೆಕ್ಟ್ರಿಕ್ ಸ್ಕೂಟರ್ ಗಳಿಗೆ ಪೈಪೋಟಿ ನೀಡುತ್ತದೆ.

Most Read Articles

Kannada
English summary
BattRE GPSie Electric Scooter Launched In India. Read In Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X