ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಹೊಸ ಬಿಎಂಡಬ್ಲ್ಯು ಜಿ 310 ಆರ್ ಬೈಕ್

ಬಿಎಂಡಬ್ಲ್ಯು ಮೋಟೊರಾಡ್ ಕಂಪನಿಯು ತನ್ನ ಜಿ 310 ಆರ್ ನೇಕೆಡ್ ಸ್ಟ್ರೀಟ್ ಫೈಟರ್ ಮತ್ತು ಜಿ 310 ಜಿಎಸ್ ಬೈಕುಗಳನ್ನು ಮೊದಲ ಬಾರಿಗೆ 2018ರಲ್ಲಿ ಭಾರತದಲ್ಲಿ ಬಿಡುಗಡೆಗೊಳಿಸಿದ್ದರು. ಇದೀಗ ಬಿಎಂಡಬ್ಲ್ಯು ಮೋಟೊರಾಡ್ ಕಂಪನಿಯು ಈ ಜಿ 310 ಟ್ವಿನ್ ಬೈಕುಗಳನ್ನು ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸಿ ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ.

ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಹೊಸ ಬಿಎಂಡಬ್ಲ್ಯು ಜಿ 310 ಆರ್ ಬೈಕ್

ಈ ಹಿಂದೆ ಬಿಎಂಡಬ್ಲ್ಯು ಜಿ 310 ಆರ್ ಮತ್ತು ಜಿ 310 ಜಿಎಸ್ ಬೈಕುಗಳು ಒಟ್ಟಿಗೆ ಸ್ಪಾಟ್ ಟೆಸ್ಟ್ ನಲ್ಲಿ ಕಾಣಿಸಿಕೊಂಡಿತ್ತು. ಆದರೆ ಈ ಬಾರಿ ಜಿ 310 ಆರ್ ಬೈಕ್ ಮಾತ್ರ ಭಾರತದಲ್ಲಿ ಮತ್ತೊಮ್ಮೆ ಸ್ಪಾಟ್ ಟೆಸ್ಟ್ ನಡೆಸಿದೆ. ಇನ್ನು ಈ ಹೊಸ ಬಿಎಂಡಬ್ಲ್ಯು ಜಿ 310 ಆರ್ ನೇಕೆಡ್ ಸ್ಟ್ರೀಟ್ ಫೈಟರ್ ಸ್ಪಾಟ್ ಟೆಸ್ಟ್ ಅನ್ನು ನಡೆಸುತ್ತಿರುವುದನ್ನು ಇಂಡಿಯನ್ ಆಟೋಬ್ಲಾಗ್ ಬಹಿರಂಗಪಡಿಸಿದೆ. ಈ ಹೊಸ ಮ್ಯಾಟ್ ಬ್ಲ್ಯಾಕ್ ಬಣ್ಣದ ಆಯ್ಕೆಯ ಬಿಎಂಡಬ್ಲ್ಯು ಜಿ 310 ಆರ್ ನೇಕೆಡ್ ಸ್ಟ್ರೀಟ್ ಫೈಟರ್ ಬೈಕ್ ಸ್ಪಾಟ್ ಟೆಸ್ಟ್ ನಡೆಸಿದೆ.

ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಹೊಸ ಬಿಎಂಡಬ್ಲ್ಯು ಜಿ 310 ಆರ್ ಬೈಕ್

ಇನ್ನು ಭಾರತದಲ್ಲಿ ಈ ಬಿಎಂಡಬ್ಲ್ಯು ಜಿ 310 ಟ್ವಿನ್ ಬೈಕುಗಳ ಉತ್ಪಾದನೆಯನ್ನು ಪ್ರಾರಂಭಿಸಲಿದೆ. ಆದರೆ ಭಾರತದಲ್ಲಿ ಕೊರೊನಾ ಭೀತಿ ಇರುವುದರಿಂದ ಭಾರತದಲ್ಲಿ ಉತ್ಪಾದನೆಯನ್ನು ಪ್ರಾರಂಭಿಸಲು ವಿಳಂಬವಾಗಿದೆ. ಭಾರತದಲ್ಲಿ ಕೆಲವು ಬದಲಾವಣೆಗಳನ್ನು ನಡೆಸಿ ಬಿಡುಗಡೆಗೊಳಿಸಬಹುದು.

MOST READ: ಬಿಡುಗಡೆಯಾಯ್ತು ಬಹುನಿರೀಕ್ಷಿತ ಹೊಸ ಹೋಂಡಾ ಎಕ್ಸ್-ಬ್ಲೇಡ್ ಬೈಕ್

ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಹೊಸ ಬಿಎಂಡಬ್ಲ್ಯು ಜಿ 310 ಆರ್ ಬೈಕ್

ಇನ್ನು ಸ್ಪಾಟ್ ಟೆಸ್ಟ್ ನಲ್ಲಿ ಕಾಣಿಸಿಕೊಂಡ ಹೊಸ ಬಿಎಂಡಬ್ಲ್ಯು ಜಿ 310 ಆರ್ ಬೈಕ್ ನವೀಕರಿಸಿದ ಫ್ಯೂಯಲ್ ಟ್ಯಾಂಕ್ ಮತ್ತು ರೇಡಿಯೇಟರ್ ಜೊತೆಗೆ ಹೊಸ ಎಲ್ಇಡಿ ಹೆಡ್‌ಲ್ಯಾಂಪ್ ಅನ್ನು ಒಳಗೊಂಡಿದೆ. ಒಟ್ಟಾರೆಯಾಗಿ ಹೊಸ ಬಿಎಂಡಬ್ಲ್ಯು ಜಿ 310 ಆರ್ ಬೈಕ್ ಹೆಚ್ಚಿನ ಅಗ್ರೇಸಿವ್ ಲುಕ್ ಅನ್ನು ಹೊಂದಿದೆ.

ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಹೊಸ ಬಿಎಂಡಬ್ಲ್ಯು ಜಿ 310 ಆರ್ ಬೈಕ್

ಈ ಹೊಸ ಬಿಎಂಡಬ್ಲ್ಯು ಜಿ 310 ಆರ್ ಬೈಕ್ ಕೆಟಿಎಂ 390 ಡ್ಯೂಕ್ ಬೈಕಿಗೆ ಪೈಪೋಟಿಯನ್ನು ನೀಡುತ್ತದೆ. ಈ ಬಿಎಂಡಬ್ಲ್ಯು ಜಿ 310 ಆರ್ ಬೈಕಿನಲ್ಲಿ 313 ಸಿಸಿ ಸಿಂಗಲ್ ಸಿಲಿಂಡರ್ ಎಂಜಿನ್ ಅನ್ನು ಅಳವಡಿಸಬಹುದು.

MOST READ: ದುಬಾರಿಯಾಯ್ತು ಜನಪ್ರಿಯ ಬಿ‍ಎಸ್-6 ಬಜಾಜ್ ಪಲ್ಸರ್ ಎನ್ಎಸ್200 ಬೈಕ್

ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಹೊಸ ಬಿಎಂಡಬ್ಲ್ಯು ಜಿ 310 ಆರ್ ಬೈಕ್

ಯುರೋಪಿಯನ್ ಮಾರುಕಟ್ಟೆಯಲ್ಲಿ ಬಿಎಂಡಬ್ಲ್ಯು ಕಂಪನಿಯು ಈ ಟ್ವಿನ್ ಬೈಕುಗಳನ್ನು ಯುರೋ 5 ಮಾನದಂಡಗಳಿಗೆ ಅನುಗುಣವಾಗಿ ನವೀಕರಿಸಲಾಗಿದೆ. ಭಾರತದಲ್ಲಿ ಬಿಡುಗಡೆಯಾಗಲಿರುವ ಬಿಎಂಡಬ್ಲ್ಯು ಜಿ 310 ಆರ್ ಬೈಕನ್ನು ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸಲಾಗುತ್ತದೆ.

ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಹೊಸ ಬಿಎಂಡಬ್ಲ್ಯು ಜಿ 310 ಆರ್ ಬೈಕ್

ಹೊಸ ಟ್ವಿನ್ ಬೈಕುಗಳು ತನ್ನ ಪ್ರತಿಸ್ಪರ್ಧಿಗಳಿಗಿಂತ ಹೆಚ್ಚಿನ ಪವರ್ ಫುಲ್ ಆಗಿರುತ್ತದೆ ಎಂದು ನಿರೀಕ್ಷಿಸುತ್ತೇವೆ. ಪ್ರಸ್ತುತ ಮಾರುಕಟ್ಟೆಯಲ್ಲಿರುವ ಬಿಎಂಡಬ್ಲ್ಯು ಜಿ 310 ಆರ್ 313 ಸಿಸಿ ಸಿಂಗಲ್ ಸಿಲಿಂಡರ್ ಎಂಜಿನ್ ಅನ್ನು ಹೊಂದಿದೆ.

MOST READ: ಹೊಸ ಬಿಎಂಡಬ್ಲ್ಯೂ ಆರ್ 18 ಕ್ರೂಸರ್ ಬೈಕ್ ಖರೀದಿಗೆ ಬುಕ್ಕಿಂಗ್ ಆರಂಭ

ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಹೊಸ ಬಿಎಂಡಬ್ಲ್ಯು ಜಿ 310 ಆರ್ ಬೈಕ್

ಈ ಎಂಜಿನ್ 33.6 ಬಿಹೆಚ್‍ಪಿ ಪವರ್ ಮತ್ತು 28 ಎನ್‌ಎಂ ಟಾರ್ಕ್ ಅನ್ನು ಅಭಿವೃದ್ಧಿಪಡಿಸುತ್ತದೆ, ಆದರೆ ಹೊಸ ಬಿಎಂಡಬ್ಲ್ಯು ಜಿ 310 ಟ್ವಿನ್ ಬೈಕುಗಳ ಪವರ್ ಮತ್ತು ಟಾರ್ಕ್ ಅಂಕಿ ಅಂಶಗಳು ಬಹಿರಂಗವಾಗಿಲ್ಲ.

ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಹೊಸ ಬಿಎಂಡಬ್ಲ್ಯು ಜಿ 310 ಆರ್ ಬೈಕ್

ಪ್ರಸ್ತುತ ಮಾರುಕಟ್ಟೆಯಲ್ಲಿ ಬಿಎಂಡಬ್ಲ್ಯು ಜಿ 310 ಆರ್ ಬೈಕಿನ ಬೆಲೆ ಎಕ್ಸ್ ಶೋರೂಂ ಪ್ರಕಾರ ರೂ.2.99 ಲಕ್ಷಗಳಾಗಿದೆ. ಆದರೆ ಹೊಸ ಬಿಎಂಡಬ್ಲ್ಯು ಜಿ 310 ಆರ್ ಬೈಕಿನ ಬೆಲೆಯು ತುಸು ದುಬಾರಿಯಾಗಿರಬಹುದು ಎಂದು ನಿರೀಕ್ಶಿಸುತ್ತೇವೆ.

Most Read Articles

Kannada
English summary
BMW G 310 R BS6 Spotted Testing For The Second Time This Month. Read In Kannada.
Story first published: Wednesday, July 22, 2020, 16:00 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X