Just In
- 8 hrs ago Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- 8 hrs ago ಬಹುಕೋಟಿ ಬೆಲೆಯ ಕಾರುಗಳಿದ್ದರೂ ಸಾಮಾನ್ಯ ಮಾರುತಿ ಕಾರಿನಲ್ಲಿ ಓಡಾಡಿದ ರೋಹಿತ್ ಶರ್ಮಾ: ಕಾರಣವೇನು?
- 10 hrs ago HSRP ನಂಬರ್ ಪ್ಲೇಟ್ನಲ್ಲಿ ನಡೆಯುತ್ತಿದೆ ಭಾರೀ ಮೋಸ: ಬುಕ್ ಮಾಡದವರು ಇದನ್ನು ಗಮನಿಸಿ!
- 10 hrs ago Nissan Magnite: ಕಾಮಧೇನುವಾದ ನಿಸ್ಸಾನ್ ಮ್ಯಾಗ್ನೈಟ್.. 6 ಲಕ್ಷ ಬೆಲೆ, 20 ಕಿ.ಮೀ ಮೈಲೇಜ್
Don't Miss!
- Movies Shobha Shetty ; ನಿಶ್ಚಿತಾರ್ಥದ ಬಗ್ಗೆ ಮಾಹಿತಿ ನೀಡಿದ ನಟಿ ಶೋಭಾ ಶೆಟ್ಟಿ
- Sports IPL 2024 :ಬಲಿಷ್ಠ ಹೈದರಾಬಾದ್ ಬಗ್ಗು ಬಡಿದ ಆರ್ಸಿಬಿ: ಕಮಿನ್ಸ್ ಪಡೆಗೆ ಹೀನಾಯ ಸೋಲು
- News ಸಿಯಾಚಿನ್ ಬಳಿ ಚೀನಾ ಆಕ್ರಮಿತ ಕಾಶ್ಮೀರದಲ್ಲಿ ಹೊಸ ರಸ್ತೆ ನಿರ್ಮಾಣ; ಖಚಿತಪಡಿಸಿದ ಉಪಗ್ರಹ ಚಿತ್ರಗಳು
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬಿಡುಗಡೆಯಾಯ್ತು ಹೊಸ ಬಿಎಂಡಬ್ಲ್ಯು ಜಿ 310 ಆರ್, ಜಿ 310 ಜಿಎಸ್ ಬೈಕುಗಳು
ಬಿಎಂಡಬ್ಲ್ಯು ಮೋಟೊರಾಡ್ ಕಂಪನಿಯು ತನ್ನ ಹೊಸ ಜಿ 310 ಆರ್ ಮತ್ತು ಜಿ 310 ಜಿಎಸ್ ಬೈಕುಗಳನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದೆ. ಈ ಹೊಸ ಬಿಎಂಡಬ್ಲ್ಯು ಜಿ 310 ಆರ್ ಬೈಕಿನ ಬೆಲೆಯು ರೂ.2.45 ಲಕ್ಷಗಳಾದರೆ, ಜಿ 310 ಜಿಎಸ್ ಬೈಕಿನ ಬೆಲೆಯು ರೂ.2.85 ಲಕ್ಷಗಳಾಗಿದೆ. ಈ ಎಲ್ಲಾ ಬೆಲೆಗಳು ಎಕ್ಸ್ ಶೋರೂಂ ಪ್ರಕಾರವಾಗಿದೆ.
ಹೊಸ ಬಿಎಂಡಬ್ಲ್ಯು ಜಿ 310 ಆರ್ ಬೈಕಿನ ಬಗ್ಗೆ ಹೇಳುವುದಾದರೆ, ಹೆಚ್ಚು ಕೈಗೆಟುಕುವಂತಿದ್ದರೂ, ಹೊಸ ಜಿ 310 ಆರ್ ಹೆಚ್ಚುವರಿ ಪೀಚರ್ ಗಳನ್ನು ಪಡೆದುಕೊಂಡಿದೆ. ಈ ಬೈಕಿನ ಸ್ಟೈಲಿಂಗ್ ಬಗ್ಗೆ ಹೇಳುವುದಾದರೆ, ಕೆಲವು ನವೀಕರಣಗಳನ್ನು ಮಾಡಲಾಗಿದೆ.ಹೊಸ ಬಿಎಂಡಬ್ಲ್ಯು ಜಿ 310 ಆರ್ ಬೈಕ್ ಹೆಡ್ಲ್ಯಾಂಪ್, ಟರ್ನ್ ಸಿಗ್ನಲ್ಗಳು ಮತ್ತು ಟೈಲ್ ಲ್ಯಾಂಪ್ಗಾಗಿ ಎಲ್ಇಡಿ ಲೈಟಿಂಗ್ ಅನ್ನು ನವೀಕರಿಸಲಾಗಿದೆ. 2020ರ ನವೀಕರಣದ ಭಾಗವಾಗಿ, ಜಿ 310 ಆರ್ ಪ್ಯಾಲೆಟ್ಗೆ ಬಿಎಂಡಬ್ಲ್ಯು ಹೊಸ ಬಣ್ಣಗಳನ್ನು ಸೇರಿಸಿದೆ.
ಹೊಸ ಬಿಎಂಡಬ್ಲ್ಯು ಜಿ 310 ಆರ್, ಜಿ 310 ಜಿಎಸ್ ಬೈಕುಗಳಲ್ಲಿ 313 ಸಿಸಿ ಸಿಂಗಲ್-ಸಿಲಿಂಡರ್ ಲಿಕ್ವಿಡ್-ಕೂಲ್ಡ್ ಎಂಜಿನ್ ಅನ್ನು ಹೊಂದಿರಲಿದೆ. ಈ ಎಂಜಿನ್ 9,700 ಆರ್ಪಿಎಂನಲ್ಲಿ 34 ಬಿಹೆಚ್ಪಿ ಮತ್ತು 7,700 ಆರ್ಪಿಎಂನಲ್ಲಿ 28 ಎನ್ಎಂ ಪೀಕ್ ಟಾರ್ಕ್ ಅನ್ನು ಉತ್ಪಾದಿಸುತ್ತದೆ.
MOST READ: ಬಿಡುಗಡೆಯಾಯ್ತು ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್ಮಾಸ್ಟರ್ ಬೈಕ್
ಈ ಎಂಜಿನ್ ನೊಂದಿಗೆ 6-ಸ್ಪೀಡ್ ಗೇರ್ ಬಾಕ್ಸ್ ಅನ್ನು ಜೋಡಿಸಲಾಗುತ್ತದೆ. ತನ್ನ ಪ್ರತಿಸ್ಪರ್ಧಿಗ ಬೈಕುಗಳಗಿಂತ ಹೆಚ್ಚಿನ ಪವರ್ ಮತ್ತು ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎರಡು ಬೈಕುಗಳು ಹೆಚ್ಚು ಅಗ್ರೇಸಿವ್ ಲುಕ್ ಅನ್ನು ಹೊಂದಿರುವುದರಿಂದ ಹೆಚ್ಚಿನ ಯುವಗ್ರಾಹಕರನ್ನು ಸೆಳೆಯಬಹುದು.
ಈ ಎರಡು ಹೊಸ ಬೈಕುಗಳು 143 ಕಿ.ಮೀ ಟಾಪ್ ಸ್ಪೀಡ್ ಅನ್ನು ಹೊಂದಿದೆ. ಈ ಎರಡು ಹೊಸ ಬೈಕುಗಳು ಕೇವಲ 7.17 ಸೆಕೆಂಡುಗಳಲ್ಲಿ 0 ದಿಂದ 100 ಕಿ.ಮೀ ವೇಗವನ್ನು ಕ್ರಮಿಸುತ್ತದೆ.
MOST READ: ಬಿಡುಗಡೆಯಾಯ್ತು ಹೊಸ ಕವಾಸಕಿ ವಲ್ಕನ್ ಎಸ್ ಬೈಕ್
ಈ ಬಿಎಂಡಬ್ಲ್ಯು ಜಿ 310 ಜಿಎಸ್ ಬೈಕಿನಲ್ಲಿ ಹೊಸ ಹೆಡ್ಲೈಟ್ ಪಡೆಯುತ್ತದೆ, ಇನ್ನು ಎಲ್ಇಡಿ ಡೇಟೈಮ್ ರನ್ನಿಂಗ್ ಜೊತೆ ಲೈಟ್ ಸ್ಟ್ರಿಪ್ ಅನ್ನು ಸಹ ಹೊಂದಿದೆ. ಈ ಬೈಕಿನಲ್ಲಿ ಜಿಎಸ್' ಅಕ್ಷರಗಳು ಈಗ ದೊಡ್ಡದಾಗಿದೆ ಮತ್ತು ಎಡಿವಿ ಶೈಲಿಯ ಬೀಕ್ ಅಪ್ ಫ್ರಂಟ್ 'ರ್ಯಾಲಿ' ಸ್ಟಿಕ್ಕರ್ ಅನ್ನು ಸಹ ಪಡೆಯುತ್ತದೆ.
ದೊಡ್ಡ ಬಿಎಂಡಬ್ಲ್ಯು ಆರ್ 1250 ಜಿಎಸ್ ಮಾದರಿಗಳಿಂದ ಹಲವಾರು ಫೀಚರ್ ಗಳನ್ನು ಎರವಲು ಪಡೆಯಲಾಗಿದೆ, ಇದರಲ್ಲಿ ಅಗ್ರೇಸಿವ್ ಲುಕ್ ಅನ್ನು ಹೊಂದಿದೆ. ಎಂಡಬ್ಲ್ಯು ಆರ್ 1250 ಜಿಎಸ್ ಮಾದರಿಯ ವಿಂಡ್ಸ್ಕ್ರೀನ್ ಅನ್ನು ಹೊಂದಿದೆರ್.
ಇನ್ನು ಹೊಸ ಜಿ 310 ಜಿಎಸ್ ಅನ್ನು ಹೊಂದಾಣಿಕೆ ಮಾಡಬಹುದಾದ ಕ್ಲಚ್ ಮತ್ತು ಹ್ಯಾಂಡ್ಬ್ರೇಕ್ ಲಿವರ್ ಅಳವಡಿಸಲಾಗಿದೆ. ನಾಲ್ಕು ಹೊಂದಾಣಿಕೆ ಮಟ್ಟಗಳಿವೆ, ಇದನ್ನು ಗ್ರಾಹಕರು ತಮಗೆ ಸಹಕಾರಿಯಾಗುವಂತೆ ಕಸ್ಟಮೈಸ್ ಮಾಡಬಹುದು.
ಹೊಸ ಬಿಎಂಡಬ್ಲ್ಯು ಜಿ 310 ಆರ್ ಭಾರತೀಯ ಮಾರುಕಟ್ಟೆಯಲ್ಲಿ ಕೆಟಿಎಂ ಡ್ಯೂಕ್ 390, ಬಜಾಜ್ ಡೊಮಿನಾರ್ 400 ಮತ್ತು ಟಿವಿಎಸ್ ಅಪಾಚೆ ಆರ್ಆರ್310 ಬೈಕುಗಳಿಗೆ ಪೈಪೋಟಿ ನೀಡಿದರೆ, ಜಿ 310 ಜಿಎಸ್ ಮಾದರಿಯು ಕೆಟಿಎಂ 390 ಅಡ್ವೆಂಚರ್ ಮತ್ತು ರಾಯಲ್ ಎನ್ಫೀಲ್ಡ್ ಹಿಮಾಲಯನ್ ಬೈಕುಗಳಿಗೆ ಪೈಪೋಟಿ ನೀಡುತ್ತದೆ.
MOST READ: ಹೊಸ ಬಣ್ಣದ ಆಯ್ಕೆಯನ್ನು ಪಡೆದುಕೊಂಡ 2021ರ ಕವಾಸಕಿ ನಿಂಜಾ 1000 ಎಸ್ಎಕ್ಸ್ ಬೈಕ್
ಹೊಸ ಬಿಎಂಡಬ್ಲ್ಯು ಜಿ 310 ಆರ್, ಜಿ 310 ಜಿಎಸ್ ಬೈಕುಗಳಿಗಾಗಿ ಬುಕ್ಕಿಂಗ್ ಈಗಾಗಲೇ ಪ್ರಾರಂಭವಾಗಿದೆ. ಈ ಹೊಸ ಬೈಕುಗಳನ್ನು ಖರೀದಿಸಲು ಬಯಸುವವರು ಟೋಕನ್ ಮೊತ್ತ ರೂ.50,000 ಗಳವರೆಗೆ ಟೋಕನ್ ಮೊತ್ತ ಪಾವತಿಸಿ ಬುಕ್ಕಿಂಗ್ ಮಾಡಿಕೊಳ್ಳಬಹುದಾಗಿದೆ.