Just In
- 4 hrs ago ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- 5 hrs ago ಕಂಪನಿಗೆ 140ರ ಸಂಭ್ರಮ: ಕೇವಲ 140 ವಿಶೇಷ ಆವೃತ್ತಿಗಳು ನಿರ್ಮಾಣ: ಬುಕಿಂಗ್ ಆರಂಭ
- 6 hrs ago ಟಿವಿಎಸ್ ಐಕ್ಯೂಬ್ಗೆ ನಡುಕ ಶುರು!: ಸದ್ಯದಲ್ಲೇ ಕಡಿಮೆ ಬೆಲೆ ಮಾರುಕಟ್ಟೆಗೆ ಬಜಾಜ್ ಚೇತಕ್ ಎಲೆಕ್ಟ್ರಿಕ್
- 7 hrs ago ರಾಜ್ಯದಲ್ಲಿ ತಯಾರಾಗುವ ಟೊಯೊಟಾ ಇನ್ನೋವಾ ಹೈಕ್ರಾಸ್ಗೆ ಸೆಲೆಬ್ರಿಟಿಗಳು ಫಿಧಾ: ಈ ಕಾರು ಖರೀದಿಸಿದ ನಟಿ
Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Movies ಡಿ. ಕೆ ಸುರೇಶ್ ಪರ ನಟ ದರ್ಶನ್ ಪ್ರಚಾರ; ಆ 2 ವಿಧಾನಸಭಾ ಕ್ಷೇತ್ರಗಳಲ್ಲಿ ಮತಬೇಟೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹೊಸ ಡುಕಾಟಿ ಮಲ್ಟಿಸ್ಟ್ರಾಡಾ 950 ಎಸ್ ಬೈಕ್ ಖರೀದಿಗೆ ಬುಕ್ಕಿಂಗ್ ಆರಂಭ
ಡುಕಾಟಿ ಕಂಪನಿಯು ತನ್ನ 2020ರ ಮಲ್ಟಿಸ್ಟ್ರಾಡಾ 950 ಎಸ್ ಅಡ್ವೆಂಚರ್-ಟೂರರ್ ಮಾದರಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸುವುದಕ್ಕೆ ಸಜ್ಜಾಗುತ್ತಿದೆ. ಈ ವರ್ಷದ ಕೊನೆಯಲ್ಲಿ ಈ ಡುಕಾಟಿ ಮಲ್ಟಿಸ್ಟ್ರಾಡಾ 950 ಎಸ್ ಬೈಕ್ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿದೆ.
ಡುಕಾಟಿ ಕಂಪನಿಯು ತನ್ನ 2020ರ ಮಲ್ಟಿಸ್ಟ್ರಾಡಾ 950 ಎಸ್ ಬೈಕನ್ನು ಈಗಾಗಲೇ ಭಾರತದಲ್ಲಿ ಬಿಡುಗಡೆಗೊಳಿಸಬೇಕಿತ್ತು. ಆದರೆ ಕರೋನಾ ಭೀತಿಯಿಂದ ಭಾರತದಲ್ಲಿ 2020ರ ಮಲ್ಟಿಸ್ಟ್ರಾಡಾ 950 ಬೈಕಿನ ಬಿಡುಗಡೆಯನ್ನು ಮುಂದೂಡಿದರು. ಇದೀಗ ಡುಕಾಟಿ ಡೀಲರುಗಳು 2020ರ ಮಲ್ಟಿಸ್ಟ್ರಾಡಾ 950 ಎಸ್ ಬೈಕಿಗಾಗಿ ಪ್ರೀ-ಬುಕ್ಕಿಂಗ್ ನ್ನು ಪ್ರಾರಂಭಿಸಿದ್ದಾರೆ. ಅಂತರರಾಷ್ಟ್ರೀಯ ಮಟ್ಟದ ಡುಕಾಟಿ ಮಲ್ಟಿಸ್ಟ್ರಾಡಾ 950 ಬೈಕನ್ನು ಸ್ಟ್ಯಾಂಡರ್ಡ್, ಎಸ್ ಮತ್ತು ಎಸ್ ಸ್ಪೋಕ್ಡ್ ವ್ಹೀಲ್ಸ್ ಎಂಬ ಮೂರು ರೂಪಾಂತರಗಳಲ್ಲಿ ಲಭ್ಯವಿದೆ.
ಭಾರತದಲ್ಲಿ ಡುಕಾಟಿ ಡೀಲರುಗಳು 2020ರ ಮಲ್ಟಿಸ್ಟ್ರಾಡಾ 950 ಎಸ್ ರೂಪಾಂತರಕ್ಕೆ ಮಾತ್ರ ಬುಕ್ಕಿಂಗ್ ಅನ್ನು ಪ್ರಾರಂಭಿಸಿದ್ದಾರೆ. ಡುಕಾಟಿ ಮಲ್ಟಿಸ್ಟ್ರಾಡಾ 950 ಹೆಚ್ಚು ಸಾಮರ್ಥ್ಯ ಹೊಂದಿರುವ ಬೈಕ್ ಆಗಿದ್ದು, ಈ ಬೈಕ್ ಅನ್ನು ಯಾವುದೇ ಹೆಚ್ಚಿನ ಒತ್ತಡವಿಲ್ಲದೇ ಚಲಾಯಿಸಬಹುದಾಗಿದೆ.
MOST READ: ಬಿಡುಗಡೆಯಾಯ್ತು ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್ಮಾಸ್ಟರ್ ಬೈಕ್
2020ರ ಈ ಅಡ್ವೆಂಚರ್-ಟೂರರ್ ಹಲವಾರು ಹೊಸ ಫೀಚರ್ಸ್ ಮತ್ತು ಎಲೆಕ್ಟ್ರಾನಿಕ್ ಸಿಸ್ಟಂಗಳೊಂದಿಗೆ ಬಿಡುಗಡೆಯಾಗಲಿದೆ.ಹೊಸ ಡುಕಾಟಿ ಮಲ್ಟಿಸ್ಟ್ರಾಡಾ 950 ಬೈಕ್ ಅದೇ 937 ಸಿಸಿ ಎಲ್-ಟ್ವಿನ್ ಲಿಕ್ವಿಡ್-ಕೂಲ್ಡ್ ನವೀಕರಿಸಿದ ಎಂಜಿನ್ ಅನ್ನು ಹೊಂದಿರಲಿದೆ.
ಈ ಎಂಜಿನ್ 111 ಬಿಹೆಚ್ಪಿ ಪವರ್ ಮತ್ತು 96 ಎನ್ಎಂ ಟಾರ್ಕ್ ಅನ್ನ್ನು ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ ಆರು-ಸ್ಪೀಡ್ ಗೇರ್ಬಾಕ್ಸ್ಗೆ ಸ್ಟ್ಯಾಂಡರ್ಡ್ ಕ್ವಿಕ್-ಶಿಫ್ಟರ್ ಜೋಡಿಸಲಾಗಿದೆ.
MOST READ: ಬಿಡುಗಡೆಯಾಯ್ತು ಹೊಸ ಕವಾಸಕಿ ವಲ್ಕನ್ ಎಸ್ ಬೈಕ್
2020ರ ಡುಕಾಟಿ ಮಲ್ಟಿಸ್ಟ್ರಾಡಾ ಡುಕಾಟಿ ಮಲ್ಟಿಸ್ಟ್ರಾಡಾ ಎಸ್ ಬೈಕಿನಲ್ಲಿ ಹೆಚ್ಚುವರಿಯಾಗಿ ಹಲವಾರು ನೂತನ ಫೀಚರ್ಸ್ ಗಳನ್ನು ಅಳವಡಿಸಲಾಗಿದೆ. ಇದರಲ್ಲಿ ಸೆಮಿ-ಆಕ್ಟಿವ್ ಸಸ್ಪೆಂಷನ್ ಸೆಟಪ್, ಬೈ-ಡೈರಕ್ಷನ್ ಕ್ವಿಕ್-ಶಿಫ್ಟರ್ ಮತ್ತು ಬಾಷ್ನಿಂದ ಕಾರ್ನರಿಂಗ್ ಎಬಿಎಸ್ ಅನ್ನು ಹೊಂದಿದೆ.
ಇನ್ನು ಈ ಬೈಕಿನಲ್ಲಿ ಸುತ್ತಲೂ ಎಲ್ಇಡಿ ಲೈಟಿಂಗ್, ಕಾರ್ನರಿಂಗ್ ಲ್ಯಾಂಪ್ ಮತ್ತು ಇನ್ಸ್ ಟ್ರೂಮೆಂಟ್ ಕನ್ಸೋಲ್ಗಾಗಿ ಐದು ಇಂಚಿನ ಬಣ್ಣಗಳಿಂದ ಕೂಡಿದ ಟಿಎಫ್ಟಿ ಡಿಸ್ ಪ್ಲೇಯನ್ನು ಹೊಂದಿದೆ.
MOST READ: ದುಬಾರಿಯಾಯ್ತು ಜನಪ್ರಿಯ ಬಿಎಸ್-6 ಯಮಹಾ ಎಂಟಿ-15 ಬೈಕ್
ಹೊಸ ಡುಕಾಟಿ ಮಲ್ಟಿಸ್ಟ್ರಾಡಾ 950 ಎಸ್ ನವೀಕರಿಸಿದ ಸ್ಟೈಲಿಂಗ್ ಮತ್ತು ವಿನ್ಯಾಸ ಅಂಶಗಳೊಂದಿಗೆ ಬಿಡುಗಡೆಯಾಗಲಿದೆ. ಹೊಸ ಮಲ್ಟಿಸ್ಟ್ರಾಡಾ 950 ಎಸ್ ಬೈಕ್ ಫೇರಿಂಗ್ ವಿನ್ಯಾಸವು ತನ್ನ ಬ್ರ್ಯಾಂಡ್ ನ ಮಲ್ಟಿಸ್ಟ್ರಾಡಾ 1260 ಮಾದರಿಗೆ ಹೋಲುತ್ತದೆ. ಟಾಪ್-ಸ್ಪೆಕ್ 950 ಎಸ್ ಮಾದರಿಯು ವೈರ್-ಸ್ಪೋಕ್ ವ್ಹೀಲ್ ಆಯ್ಕೆಯನ್ನು ಹೊಂದಿರುತ್ತದೆ.
ಹೊಸ ಡುಕಾಟಿ ಮಲ್ಟಿಸ್ಟ್ರಾಡಾ 950 ಬೈಕ್ ಭಾರತೀಯ ಮಾರುಕಟ್ಟೆಯಲ್ಲಿ ಶೀಘ್ರದಲ್ಲೇ ಬಿಡುಗಡೆಗೊಳಿಸಲಿದೆ. ಈ ಬೈಕ್ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಬಳಿಕ ಕವಾಸಕಿ ವರ್ಸಿಸ್ 1000, ಸುಜುಕಿ ವಿ-ಸ್ಟ್ರೋಮ್ 1000 ಮತ್ತು ಟ್ರಯಂಫ್ ಟೈಗರ್ 900 ಬೈಕುಗಳಿಗೆ ಪೈಪೋಟಿಯನ್ನು ನೀಡುತ್ತದೆ.