Just In
- 5 hrs ago
ವಾಣಿಜ್ಯ ವಾಹನಗಳ ಖರೀದಿಗಾಗಿ ಹಲವು ಆಕರ್ಷಕ ಸಾಲಸೌಲಭ್ಯಗಳಿಗೆ ಚಾಲನೆ ನೀಡಿದ ಟಾಟಾ
- 5 hrs ago
2021ರ ಜೀಪ್ ಕಂಪಾಸ್ ಫೇಸ್ಲಿಫ್ಟ್ ಎಸ್ಯುವಿ ವೆರಿಯೆಂಟ್ ಮಾಹಿತಿ ಬಹಿರಂಗ
- 6 hrs ago
ವಿದೇಶಿ ಮಾರುಕಟ್ಟೆಗೂ ಲಗ್ಗೆಯಿಟ್ಟ ಮೇಡ್ ಇನ್ ಇಂಡಿಯಾ ಹೋಂಡಾ ಹೈನೆಸ್ ಸಿಬಿ 350
- 6 hrs ago
ಎಂಟೇ ನಿಮಿಷಗಳಲ್ಲಿ ರಸ್ತೆ ಗುಂಡಿಗಳನ್ನು ಸರಿ ಪಡಿಸಲಿದೆ ಜೆಸಿಬಿಯ ಈ ಹೊಸ ಯಂತ್ರ
Don't Miss!
- News
Biden Inauguration live updates: ಅಮೆರಿಕ ಅಧ್ಯಕ್ಷರಾಗಿ ಜೋ ಬೈಡನ್ ಪದಗ್ರಹಣದ ನೇರಪ್ರಸಾರ
- Finance
ಸಿಯೆಟ್ ಲಿಮಿಟೆಡ್ ಲಾಭದ ಪ್ರಮಾಣ ಎರಡೂವರೆ ಪಟ್ಟು ಹೆಚ್ಚಳ
- Sports
ಐಎಸ್ಎಲ್: ಹೈದರಾಬಾದ್ ಜಯಕ್ಕೆ ಅಡ್ಡಿಯಾದ ಕಳಿಂಗ ವಾರಿಯರ್ಸ್
- Education
AAI Recruitment 2021: 7 ಸಲಹೆಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ
- Movies
ಅಂಧ ವ್ಯಕ್ತಿಯ ಬಾಳಿಗೆ ಬೆಳಕಾದ ಕಿಚ್ಚ ಸುದೀಪ ಚಾರಿಟೇಬಲ್ ಸೊಸೈಟಿ
- Lifestyle
ಜ. 25ಕ್ಕೆ ಕುಂಭ ರಾಶಿಗೆ ಬುಧನ ಸಂಚಾರ: 12 ರಾಶಿಗಳ ಮೇಲೆ ಇದರ ಪ್ರಭಾವವೇನು?
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಬಿಡುಗಡೆಯಾಯ್ತು ಹೊಸ ಡುಕಾಟಿ ಪಾನಿಗಲೆ ವಿ2 ಬೈಕ್
ಇಟಲಿ ಮೂಲದ ದ್ವಿಚಕ್ರ ವಾಹನ ತಯಾರಕ ಸಂಸ್ಥೆಯಾದ ಡುಕಾಟಿ ತನ್ನ ಬಿಎಸ್-6 ಪಾನಿಗಲೆ ವಿ2 ಬೈಕನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದೆ. ಈ ಹೊಸ ಡುಕಾಟಿ ಪಾನಿಗಲೆ ವಿ2 ಬೈಕಿನ ಬೆಲೆಯು ದೆಹಲಿ ಎಕ್ಸ್ ಶೋರೂಂ ಪ್ರಕಾರ ರೂ.16.99 ಲಕ್ಷಗಳಾಗಿದೆ.

ಈ ಹೊಸ ಡುಕಾಟಿ ಪಾನಿಗಲೆ ವಿ2 ಬೈಕ್ ಈ ಮೊದಲೇ ಭಾರತದಲ್ಲಿ ಬಿಡುಗಡೆಯಾಗಬೇಕಿತ್ತು. ಆದರೆ ಡುಕಾಟಿ ಕಂಪನಿಯು ಕರೋನಾ ಸೋಂಕಿನ ಭೀತಿಯಿಂದ ಈ ಹೊಸ ಪಾನಿಗಲೆ ವಿ2 ಬೈಕನ್ನು ಭಾರತದಲ್ಲಿ ಬಿಡುಗಡೆಗೊಳಿಸಲು ವಿಳಂಬ ಮಾಡಿದರು. ಡುಕಾಟಿ ಕಂಪನಿಯು ಈ ಪಾನಿಗಲೆ ವಿ2 ಬೈಕಿನ ಬುಕ್ಕಿಂಗ್ ಅನ್ನು ಸ್ವೀಕರಿಸಲು ಈಗಗಾಲೇ ಪ್ರಾರಂಭಿಸಲಾಗಿದೆ. ಈ ಹೊಸ ಡುಕಾಟಿ ಪಾನಿಗಲೆ ವಿ2 ಬೈಕನ್ನು ಖರೀದಿಸಲು ಬಯಸುವ ಗ್ರಾಹಕರು ಟೋಕನ್ ಮೊತ್ತ ರೂ.1 ಲಕ್ಷ ಪಾವತಿಸಿ ಬುಕ್ಕಿಂಗ್ ಮಾಡಿಕೊಳ್ಳಬಹುದಾಗಿದೆ.

ಡುಕಾಟಿ ಪಾನಿಗಲೆ ವಿ2 ದೇಶದ ಮೊದಲ ಬಿಎಸ್-6 ಪ್ರೇರಿಯ ಸೂಪರ್ ಬೈಕ್ ಆಗಿದೆ. ಹೂಸ ಡುಕಾಟಿ ಪಾನಿಗಲೆ ವಿ2 ಬೈಕಿನಲ್ಲಿ 955 ಸಿಸಿ ಸೂಪರ್ಕ್ವಾಡ್ರೊ 90-ಡಿಗ್ರಿ ವಿ2 ಎಂಜಿನ್ ಅನ್ನು ಹೊಂದಿದೆ.
MOST READ: ಬಿಡುಗಡೆಯಾಯ್ತು ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್ಮಾಸ್ಟರ್ ಬೈಕ್

ಈ ಎಂಜಿನ್ 10,750 ಆರ್ಪಿಎಂನಲ್ಲಿ 155 ಬಿಹೆಚ್ಪಿ ಮತ್ತು 9000 ಆರ್ಪಿಎಂನಲ್ಲಿ 104 ಎನ್ಎಂ ಪೀಕ್ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ಅನ್ನು 6-ಸ್ಪೀಡ್ ಗೇರ್ಬಾಕ್ಸ್ಗೆ ಜೋಡಿಸಲಾಗಿದೆ. ಹಿಂದಿನ ಬಿಎಸ್-4 ಮಾದರಿಗೆ ಹೋಲಿಸಿದರೆ 5 ಬಿಹೆಚ್ಪಿ ಪವರ್ ಮತ್ತು 2 ಎನ್ಎಂ ಟಾರ್ಕ್ ಹೆಚ್ಚು ಉತ್ಪಾದಿಸುತ್ತದೆ

ಈ ಹೊಸ ಪಾನಿಗಲೆ ವಿ2 ಬೈಕ್ ಫ್ರಂಟ್ ಫೇರಿಂಗ್, ಮತ್ತು ಸಿಂಗಲ್ ಸೈಡ್ ಸ್ವಿಂಗಾರ್ಮ್ ಅನ್ನು ಒಳಗೊಂಡಿದೆ. ಈ ಹೊಸ ಡುಕಾಟಿ ಪಾನಿಗಲೆ ವಿ2 ಬೈಕ್ ಆಕರ್ಷಕ ಲುಕ್ ಅನ್ನು ಹೊಂದಿದೆ. ಪಾನಿಗಲೆ ವಿ4 ಬೈಕಿನಲ್ಲಿರುವಂತಹ ಕೆಲವು ಸ್ಟೈಲಿಂಗ್ ಅಂಶಗಳು ಹೊಸ ಪಾನಿಗಲೆ ವಿ2 ಬೈಕಿನಲ್ಲಿದೆ.
MOST READ: ಬಿಡುಗಡೆಯಾಯ್ತು ಬಹುನಿರೀಕ್ಷಿತ ಹೊಸ ಹೋಂಡಾ ಎಕ್ಸ್-ಬ್ಲೇಡ್ ಬೈಕ್

ಈ ಡುಕಾಟಿ ಪಾನಿಗಲೆ ವಿ2 ಬೈಕ್ ಬ್ರ್ಯಾಂಡ್ ಸಿಗ್ನೇಚರ್ ಪ್ರೊಜೆಕ್ಟರ್ ಹೆಡ್ ಲ್ಯಾಂಪ್, ಏರ್ ಡ್ಯಾಮ್ ಮತ್ತು ವಿ-ಆಕಾರದ ಡಿಆರ್ಎಲ್ ಅನ್ನು ಹೊಂದಿದೆ. ಡುಕಾಟಿ ಪಾನಿಗಲೆ ವಿ2 ಬೈಕಿನಲ್ಲಿ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಕ್ಲಸ್ಟರ್ಗಾಗಿ 4.3-ಇಂಚಿನ ಟಿಎಫ್ಟಿ ಡಿಸ್ ಪ್ಲೇಯನ್ನು ಹೊಂದಿದೆ. ಈ ಹೊಸ ಬೈಕಿನಲ್ಲಿ ಸ್ಲಂಗ್ ಅಂಡರ್ ಎಕ್ಸಾಸ್ಟ್ ಅನ್ನು ಕೂಡ ಹೊಂದಿದೆ.

ಹೊಸ ಡುಕಾಟಿ ಪಾನಿಗಲೆ ವಿ2 ಬೈಕಿನಲ ಬ್ರೇಕಿಂಗ್ ಸಿಸ್ಟಂ ಬಗ್ಗೆ ಹೇಳುವುದಾದರೆ, ಮುಂಭಾಗದಲ್ಲಿ ಬ್ರೆಂಬೊದಿಂದ 4-ಪಿಸ್ಟನ್ ಕ್ಯಾಲಿಪರ್ಗಳೊಂದಿಗೆ ಡ್ಯುಯಲ್ 320 ಎಂಎಂ ಫ್ಲೋಟಿಂಗ್ ಡಿಸ್ಕ್ ಬ್ರೇಕ್ ಮತ್ತು ಹಿಂಭಾಗದಲ್ಲಿ ಒಂದೇ 245 ಎಂಎಂ ಡಿಸ್ಕ್ ಅನ್ನು ಹೊಂದಿದೆ.
MOST READ: ಬಿಡುಗಡೆಯ ಸನಿಹದಲ್ಲಿ ಬಹುನಿರೀಕ್ಷಿತ ಬಿಎಸ್-6 ಹೀರೋ ಬೈಕುಗಳು

ಡುಕಾಟಿ ಪಾನಿಗಲೆ ವಿ2 ಬೈಕ್ ತನ್ನ ಸಂಪೂರ್ಣ ಎಲೆಕ್ಟ್ರಾನಿಕ್ಸ್ ಕಿಟ್ ಅನ್ನು 959 ಮಾದರಿಯಿಂದ ಎರವಲು ಪಡದಿದೆ. ಈ ಹೊಸ ಡುಕಾಟಿ ಪಾನಿಗಲೆ ವಿ2 ಬೈಕಿನಲ್ಲಿ ಟ್ರಾಕ್ಷನ್ ಕಂಟ್ರೋಲ್ ಅನ್ನು ನೀಡಿದೆ.

ಡುಕಾಟಿ ಪಾನಿಗಲೆ ವಿ2 ಉತ್ತಮ ಕಾರ್ಯಕ್ಷಮತೆ ಬೈಕ್ ಆಗಿದೆ. ಹೊಸ ಡುಕಾಟಿ ಪಾನಿಗಲೆ ವಿ2 ಬೈಕನ್ನು ಹಿಂದಿನ ಬಿಎಸ್-4 ಮಾದರಿಗೆ ಹೋಲಿಸಿದರೆ ಹೆಚ್ಚಿನ ಯಾವುದೇ ಬದಲಾವಣೆಗಳನ್ನು ಹೊಂದಿಲ್ಲ. ಆದರೆ ಹಿಂದಿನ ಮಾದರಿಗಿಂತ ತುಸು ಹೆಚ್ಚು ಪವರ್ ಉತ್ಪಾದಿಸುತ್ತದೆ.