ಹೊಸ ಡುಕಾಟಿ ಸ್ಕ್ರ್ಯಾಂಬ್ಲರ್ 1100 ಪ್ರೊ ಬೈಕ್ ಬಿಡುಗಡೆ ದಿನಾಂಕ ಬಹಿರಂಗ

ಇಟಲಿ ಮೂಲದ ದ್ವಿಚಕ್ರ ವಾಹನ ತಯಾರಕ ಸಂಸ್ಥೆಯಾದ ಡುಕಾಟಿ ತನ್ನ ಸರಣಿಯಲ್ಲಿರುವ ಪಾನಿಗಲೆ ವಿ2 ಮಾದರಿಯನ್ನು ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸಿ ಕಳೆದ ತಿಂಗಳು ಬಿಡುಗಡೆಗೊಳಿಸಿತ್ತು. ಇದೀಗ ಮತ್ತೊಂದು ಬಿಎಸ್-6 ಮಾದರಿಯನ್ನು ಭಾರತದಲ್ಲಿ ಬಿಡುಗಡೆಗೊಳಿಸಲು ಡುಕಾಟಿ ಸಜ್ಜಾಗಿದೆ.

ಹೊಸ ಡುಕಾಟಿ ಸ್ಕ್ರ್ಯಾಂಬ್ಲರ್ 1100 ಪ್ರೊ ಬೈಕ್ ಬಿಡುಗಡೆ ದಿನಾಂಕ ಬಹಿರಂಗ

ಡುಕಾಟಿ ಇಂಡಿಯಾ ಕಂಪನಿಯು ಬಿಎಸ್-6 ಸ್ಕ್ರ್ಯಾಂಬ್ಲರ್ 1100 ಪ್ರೊ ಬೈಕನ್ನು ಭಾರತದಲ್ಲಿ ಬಿಡುಗಡೆಳಿಸಲಿದೆ. ಇದೇ ತಿಂಗಳ 22 ರಂದು ಬಿಎಸ್-6 ಸ್ಕ್ರ್ಯಾಂಬ್ಲರ್ 1100 ಪ್ರೊ ಬೈಕ್ ಭಾರತದಲ್ಲಿ ಬಿಡುಗಡೆಯಾಗಲಿದೆ. ಈ ಡುಕಾಟಿ ಸ್ಕ್ರ್ಯಾಂಬ್ಲರ್ 1100 ಪ್ರೊ ಈ ವರ್ಷದ ಆರಂಭದಲ್ಲಿ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಿತ್ತು. ಸ್ಕ್ರ್ಯಾಂಬ್ಲರ್ 1100 ಪ್ರೊ ಹೊಸ ಗ್ರಾಫಿಕ್ಸ್ ಅನ್ನು ಹೊಂದಿದೆ.

ಹೊಸ ಡುಕಾಟಿ ಸ್ಕ್ರ್ಯಾಂಬ್ಲರ್ 1100 ಪ್ರೊ ಬೈಕ್ ಬಿಡುಗಡೆ ದಿನಾಂಕ ಬಹಿರಂಗ

ಬಿಎಸ್-6 ಸ್ಕ್ರ್ಯಾಂಬ್ಲರ್ 1100 ಪ್ರೊ ಬೈಕ್ ಓಷನ್ ಡ್ರೈವ್' ಎಂಬ ಹೊಸ ಡ್ಯುಯಲ್ ಟೋನ್ ಬಣ್ಣದ ಆಯ್ಕೆಯಲ್ಲಿ ಲಭ್ಯವಿರಲಿದೆ. ಇನ್ನು ಈ ಬೈಕಿನ ಬಲಭಾಗದಲ್ಲಿ ಹೊಸ ಡ್ಯುಯಲ್ ಟೈಲ್-ಪೈಪ್, ಹೊಸ ನಂಬರ್ ಪ್ಲೇಟ್ ಹೋಲ್ಡರ್ ಮತ್ತು ಹೊಸ ಲಿವರಿ ಅನ್ನು ಪಡೆಯುತ್ತದೆ.

MOST READ: ರಾಯಲ್ ಎನ್‍‍ಫೀಲ್ಡ್ ಬೈಕ್‍‍ಗಳಿಗೆ ಟಕ್ಕರ್ ನೀಡಲು ಸಜ್ಜಾದ ಹೊಸ ಹೋಂಡಾ ಬೈಕ್

ಹೊಸ ಡುಕಾಟಿ ಸ್ಕ್ರ್ಯಾಂಬ್ಲರ್ 1100 ಪ್ರೊ ಬೈಕ್ ಬಿಡುಗಡೆ ದಿನಾಂಕ ಬಹಿರಂಗ

ಹೊಸ ಸ್ಕ್ರ್ಯಾಂಬ್ಲರ್ 1100 ಪ್ರೊ ಹೆಡ್‌ಲ್ಯಾಂಪ್‌ನಲ್ಲಿ ಬ್ಲ್ಯಾಕ್ ಮೆಟಲ್ 'ಎಕ್ಸ್' ರೂಪದಲ್ಲಿ ರೆಟ್ರೊ ಟಚ್ ಅನ್ನು ನೀಡಿದೆ. ಬಿಎಸ್-6 ಸ್ಕ್ರ್ಯಾಂಬ್ಲರ್ 1100 ಪ್ರೊ ಬೈಕಿನಲ್ಲಿ 1079 ಸಿಸಿ ಏರ್-ಕೂಲ್ಡ್ ಎಲ್-ಟ್ವಿನ್ ಎಂಜಿನ್ ಅನ್ನು ಅಳವಡಿಸಲಾಗಿದೆ.

ಹೊಸ ಡುಕಾಟಿ ಸ್ಕ್ರ್ಯಾಂಬ್ಲರ್ 1100 ಪ್ರೊ ಬೈಕ್ ಬಿಡುಗಡೆ ದಿನಾಂಕ ಬಹಿರಂಗ

ಈ ಎಂಜಿನ್ 7250 ಆರ್‌ಪಿಎಂನಲ್ಲಿ 84.7 ಬಿಹೆಚ್‍ಪಿ ಪವರ್ ಮತ್ತು 4750 ಆರ್‌ಪಿಎಂನಲ್ಲಿ 90.5 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಈ ಎಂಜಿನ್ ಅನ್ನು 6-ಸ್ಪೀಡ್ ಗೇರ್‌ಬಾಕ್ಸ್‌ಗೆ ಜೋಡಿಸಲಾಗಿದೆ.

MOST READ: ದುಬಾರಿಯಾಯ್ತು ಜನಪ್ರಿಯ ಬಿಎಸ್-6 ಯಮಹಾ ಎಂಟಿ-15 ಬೈಕ್

ಹೊಸ ಡುಕಾಟಿ ಸ್ಕ್ರ್ಯಾಂಬ್ಲರ್ 1100 ಪ್ರೊ ಬೈಕ್ ಬಿಡುಗಡೆ ದಿನಾಂಕ ಬಹಿರಂಗ

ಇನ್ನು ಡುಕಾಟಿ ಸ್ಕ್ರ್ಯಾಂಬ್ಲರ್ 1100 ಸ್ಪೋಟ್ ಪ್ರೊ ಬೈಕನ್ನು ಕೂಡ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸುವ ಸಾಧ್ಯತೆಗಳಿದೆ. ಇನ್ನು ಸ್ಪೋರ್ಟ್ ಪ್ರೊ ಬೈಕಿನ ಮುಂಭಾಗದಲ್ಲಿ 48 ಎಂಎಂ ಇನವರ್ಡಟ್ ಓಹ್ಲಿನ್ಸ್ ಫ್ರಂಟ್ ಫೋರ್ಕ್ ಮತ್ತು ಹಿಂಭಾಗದಲ್ಲಿ ಓಹ್ಲಿನ್ಸ್ ಮೊನೊಶಾಕ್ ಅನ್ನು ಹೊಂದಿದೆ.

ಹೊಸ ಡುಕಾಟಿ ಸ್ಕ್ರ್ಯಾಂಬ್ಲರ್ 1100 ಪ್ರೊ ಬೈಕ್ ಬಿಡುಗಡೆ ದಿನಾಂಕ ಬಹಿರಂಗ

ಇನ್ನು ಡುಕಾಟಿ ಸ್ಕ್ರ್ಯಾಂಬ್ಲರ್ 1100 ಸ್ಪೋಟ್ ಪ್ರೊ ಬೈಕಿನಲ್ಲಿ ಒಂದೇ ಮಾದರಿಯ ಎಂಜಿನ್ ಅನ್ನು ಹೊಂದಿರುತ್ತದೆ. ಬ್ರೇಕಿಂಗ್ ಸಿಸ್ಟಂನಲ್ಲಿಯು ಯಾವುದೇ ಬದಲಾವಣೆಗಳನ್ನು ಹೊಂದಿಲ್ಲ.

MOST READ: ಬಿಡುಗಡೆಯಾಯ್ತು ಹೊಸ ಕವಾಸಕಿ ವಲ್ಕನ್ ಎಸ್ ಬೈಕ್

ಹೊಸ ಡುಕಾಟಿ ಸ್ಕ್ರ್ಯಾಂಬ್ಲರ್ 1100 ಪ್ರೊ ಬೈಕ್ ಬಿಡುಗಡೆ ದಿನಾಂಕ ಬಹಿರಂಗ

ಹೊಸ ಡುಕಾಟಿ ಸ್ಕ್ರ್ಯಾಂಬ್ಲರ್ 1100 ಪ್ರೊ ಬೈಕಿನಲ್ಲಿ ಆಕ್ಟಿವ್, ಸಿಟಿ ಮತ್ತು ಜರ್ನಿ ಎಂಬ ಮೂರು ರೈಡಿಂಗ್ ಮೋಡ್‌ಗಳಿವೆ. ಈ ಬೈಕಿನಲ್ಲಿ ಟ್ರ್ಯಾಕ್ಷನ್ ಕಂಟ್ರೋಲ್ ಮತ್ತು ಎಬಿಎಸ್ ಅನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗುತ್ತದೆ.

ಹೊಸ ಡುಕಾಟಿ ಸ್ಕ್ರ್ಯಾಂಬ್ಲರ್ 1100 ಪ್ರೊ ಬೈಕ್ ಬಿಡುಗಡೆ ದಿನಾಂಕ ಬಹಿರಂಗ

ಡುಕಾಟಿ ಸ್ಕ್ರ್ಯಾಂಬ್ಲರ್ 1100 ಪ್ರೊ ಬೈಕಿನಲ್ಲಿ ಸಸ್ಪೆಂಕ್ಷನ್ ಗಳಿಗಾಗಿ ಮುಂಭಾಗದಲ್ಲಿ ಇನವರ್ಡಟ್ ಫೋರ್ಕ್ ಮತ್ತು ಹಿಂಭಾಗದಲ್ಲಿ ಕಾಯಾಬಾ ಮೊನೊಶಾಕ್ ಸೆಟಪ್ ಅನ್ನು ನೀಡಿದೆ.

MOST READ: ಆಗಸ್ಟ್ ತಿಂಗಳ ಮಾರಾಟ ವರದಿ ಪ್ರಕಟಿಸಿದ ಸುಜುಕಿ ಮೋಟಾರ್‌ಸೈಕಲ್

ಹೊಸ ಡುಕಾಟಿ ಸ್ಕ್ರ್ಯಾಂಬ್ಲರ್ 1100 ಪ್ರೊ ಬೈಕ್ ಬಿಡುಗಡೆ ದಿನಾಂಕ ಬಹಿರಂಗ

ಡುಕಾಟಿ ಸ್ಕ್ರ್ಯಾಂಬ್ಲರ್ 1100 ಪ್ರೊ ಬೈಕಿನಲ್ಲಿ 320 ಎಂಎಂ ಡಿಸ್ಕ್‌ಗಳನ್ನು ಬ್ರೆಂಬೊ ಎಂ 4.32 ಮೊನೊಬ್ಲೋಕ್ ಕ್ಯಾಲಿಪರ್‌ಗಳೊಂದಿಗೆ ಮುಂಭಾಗದಲ್ಲಿ 245 ಎಂಎಂ ರೋಟರ್ ಅನ್ನು ಮತ್ತು ಹಿಂಭಾಗದಲ್ಲಿ ಸಿಂಗಲ್-ಪಿಸ್ಟನ್ ಸ್ಲೈಡಿಂಗ್ ಕ್ಯಾಲಿಪರ್ ಅನ್ನು ಒಳಗೊಂಡಿರುತ್ತವೆ.

ಹೊಸ ಡುಕಾಟಿ ಸ್ಕ್ರ್ಯಾಂಬ್ಲರ್ 1100 ಪ್ರೊ ಬೈಕ್ ಬಿಡುಗಡೆ ದಿನಾಂಕ ಬಹಿರಂಗ

ಇದರೊಂದಿಗೆ ಡ್ಯುಯಲ್-ಚಾನೆಲ್ ಬಾಷ್ ಕಾರ್ನರಿಂಗ್ ಎಬಿಎಸ್ ಅನ್ನು ನೀಡಲಾಗಿದೆ. ಬಹುನಿರೀಕ್ಷಿತ ಬಿಎಸ್-6 ಡುಕಾಟಿ ಸ್ಕ್ರ್ಯಾಂಬ್ಲರ್ 1100 ಬೈಕ್ ಮುಂದಿನ ವಾರ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿದೆ.

Most Read Articles

Kannada
Read more on ಡುಕಾಟಿ ducati
English summary
BS6 Ducati Scrambler 1100 Pro Launch Date Revealed. Read In Kannada.
Story first published: Friday, September 18, 2020, 16:15 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X