ಹೊಸ ಕ್ಲಾಸಿಕ್ 350 ಬೈಕ್ ಬಿಡುಗಡೆ ಮುಂದೂಡಿದ ರಾಯಲ್ ಎನ್‌ಫೀಲ್ಡ್

ರಾಯಲ್ ಎನ್‌ಫೀಲ್ಡ್ ಕಂಪನಿಯ ಸರಣಿಯಲ್ಲಿ ಕ್ಲಾಸಿಕ್ 350 ಬೈಕ್ ಜನಪ್ರಿಯ ಮಾದರಿಯಾಗಿದೆ. ಈ ಹೊಸ ಕ್ಲಾಸಿಕ್ 350 ಬೈಕನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ರಾಯಲ್ ಎನ್‌ಫೀಲ್ಡ್ ಕಂಪನಿಯು ಸಜ್ಜಾಗುತ್ತಿದೆ.

ಹೊಸ ಕ್ಲಾಸಿಕ್ 350 ಬೈಕ್ ಬಿಡುಗಡೆ ಮುಂದೂಡಿದ ರಾಯಲ್ ಎನ್‌ಫೀಲ್ಡ್

ಹೊಸ ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್ 350 ಬೈಕ್ ಬಿಡುಗಡೆಯನ್ನು ಮುಂದೂಡಲಾಗಿದೆ. ಈ ಹೊಸ ಕ್ಲಾಸಿಕ್ 350 ಬೈಕ್ ಭಾರತದಲ್ಲಿ ಮುಂದಿನ ವರ್ಷ ಬಿಡುಗಡೆಯಾಗಲಿದೆ. ಅಂದರೆ 2021ರ ಎರಡನೇ ತ್ರೈಮಾಸಿಕದಲ್ಲಿ ಏಪ್ರಿಲ್ ನಂತರದ ಅವಧಿಯಲ್ಲಿ ಬಿಡುಗಡೆಯಾಗಲಿದೆ ಎಂದು ವರದಿಗಳಾಗಿದೆ. ರಾಯಲ್ ಎನ್‌ಫೀಲ್ಡ್ ಕಂಪನಿಯು ತನ್ನ ಸರಣಿಯಲ್ಲಿರುವ ಎಲ್ಲಾ ಬೈಕುಗಳನ್ನು ಬಿಎಸ್ 6 ಆವೃತ್ತಿಗಳಲ್ಲಿ ಪರಿಚಯಿಸಿದೆ.

ಹೊಸ ಕ್ಲಾಸಿಕ್ 350 ಬೈಕ್ ಬಿಡುಗಡೆ ಮುಂದೂಡಿದ ರಾಯಲ್ ಎನ್‌ಫೀಲ್ಡ್

ಇನ್ನು ಈ ಹಿಂದೆ ಹೊಸ ರಾಯಲ್ ಎನ್‍ಫೀಲ್ಡ್ ಮೆಟಿಯೋರ್ 350 ಬೈಕ್ ಇದೇ ತಿಂಗಳು ಬಿಡುಗಡೆಯಾಗಲಿದೆ ಎಂದು ವರದಿಗಳು ಪ್ರಕಟವಾಗಿತ್ತು. ಆದರೆ ಹೊಸ ವರದಿಗಳ ಪ್ರಕಾರ, ಹೊಸ ರಾಯಲ್ ಎನ್‍ಫೀಲ್ಡ್ ಮೆಟಿಯೋರ್ 350 ಬೈಕ್ ಬಿಡುಗಡೆಯು ಮತ್ತೆ ಮುಂದೂಡಲಾಗಿದೆ.

MOST READ: ದುಬಾರಿಯಾಯ್ತು ಜನಪ್ರಿಯ ಬಜಾಜ್ ಪಲ್ಸರ್ ಎನ್ಎಸ್ ಬೈಕುಗಳು

ಹೊಸ ಕ್ಲಾಸಿಕ್ 350 ಬೈಕ್ ಬಿಡುಗಡೆ ಮುಂದೂಡಿದ ರಾಯಲ್ ಎನ್‌ಫೀಲ್ಡ್

ಹೊಸ ರಾಯಲ್ ಎನ್‍ಫೀಲ್ಡ್ ಮೆಟಿಯೋರ್ 350 ಬೈಕ್ ದೀಪಾವಳಿ ಹಬ್ಬದ ವೇಳೆಯಲ್ಲಿ ಬಿಡುಗಡೆಯಾಗುವುದಿಲ್ಲ. ದೀಪಾವಳಿ ಹಬ್ಬದ ಶುಭ ಸಮಯದಲ್ಲಿ ಬಿಡುಗಡೆಯಾಗದಿರುವುದು ರಾಯಲ್ ಎನ್‍ಫೀಲ್ಡ್ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದೆ.

ಹೊಸ ಕ್ಲಾಸಿಕ್ 350 ಬೈಕ್ ಬಿಡುಗಡೆ ಮುಂದೂಡಿದ ರಾಯಲ್ ಎನ್‌ಫೀಲ್ಡ್

ಈ ಹಬ್ಬದ ಸೀಸನ್ ನಲ್ಲಿ ರಾಯಲ್ ಎನ್‍ಫೀಲ್ಡ್ ಕಂಪನಿಯು ಭಾರತೀಯ ಮಾರುಕಟ್ಟೆಯಲ್ಲಿ ಯಾವುದೇ ಹೊಸ ಮಾದರಿಗಳನ್ನು ಬಿಡುಗಡೆಗೊಳಿಸದೆ ಮಾರಾಟ ಸಂಖ್ಯೆಯನ್ನು ಕಾಯ್ದುಕೊಳ್ಳಲು ಒಂದು ನಿರ್ದರಿಸಬಹುದು ಎಂದು ನಿರೀಕ್ಷಿಸುತ್ತೇವೆ.

MOST READ: ಬಿಡುಗಡೆಯಾಯ್ತು ಹೊಸ ಕವಾಸಕಿ ವಲ್ಕನ್ ಎಸ್ ಬೈಕ್

ಹೊಸ ಕ್ಲಾಸಿಕ್ 350 ಬೈಕ್ ಬಿಡುಗಡೆ ಮುಂದೂಡಿದ ರಾಯಲ್ ಎನ್‌ಫೀಲ್ಡ್

ಇನ್ನು ರಾಯಲ್ ಎನ್‍ಫೀಲ್ಡ್ ಕಂಪನಿಯು ಆಂತರಿಕವಾಗಿ ಪ್ರಾಜೆಕ್ಟ್ ವಿ ಎಂದು ಕರೆಯಲ್ಪಡುವ ಎಂಟ್ರಿ ಲೆವೆಲ್ 250 ಸಿಸಿ ರಾಯಲ್ ಎನ್‌ಫೀಲ್ಡ್ ಬೈಕ್ ಅನ್ನು ಸ್ಥಗಿತಗೊಳಿಸಲಾಗಿದೆ ಎಂದು ವರದಿ ಹೇಳಿದೆ.

ಹೊಸ ಕ್ಲಾಸಿಕ್ 350 ಬೈಕ್ ಬಿಡುಗಡೆ ಮುಂದೂಡಿದ ರಾಯಲ್ ಎನ್‌ಫೀಲ್ಡ್

ಮುಂದಿನ ತಲೆಮಾರಿನ ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್ 350 ಅನ್ನು ಹೊಸ ಮಾಡ್ಯುಲರ್ ಜೆ ಪ್ಲಾಟ್‌ಫಾರ್ಮ್‌ನಲ್ಲಿ ವಿನ್ಯಾಸಗೊಳಿಸಿ ಮತ್ತು ಅಭಿವೃದ್ಧಿಪಡಿಸಲಾಗುತ್ತದೆ. ಈ ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್ 350 ಭಾರತದಲ್ಲಿ ಹಲವು ಬಾರಿ ಸ್ಪಾಟ್ ಟೆಸ್ಟ್ ಅನ್ನು ನಡೆಸಿದೆ.

MOST READ: ಬಿಡುಗಡೆಯಾಯ್ತು ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್‍‍ಮಾಸ್ಟರ್ ಬೈಕ್

ಹೊಸ ಕ್ಲಾಸಿಕ್ 350 ಬೈಕ್ ಬಿಡುಗಡೆ ಮುಂದೂಡಿದ ರಾಯಲ್ ಎನ್‌ಫೀಲ್ಡ್

ಹೊಸ ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್ 350 ಹೆಚ್ಚು ಆಧುನಿಕ ವಿನ್ಯಾಸ ಅಂಶಗಳೊಂದಿಗೆ ಹಳೆಯ ಕ್ಲಾಸಿಕ್ ಪ್ರೊಫೈಲ್ ಅನ್ನು ಉಳಿಸಿಕೊಳ್ಳುವ ನಿರೀಕ್ಷೆಯಿದೆ. ಈ ಬೈಕ್ ಎಲ್ಇಡಿ ಹೆಡ್ ಲ್ಯಾಂಪ್,ಡಿಜಿಟಲ್ ಇನ್ಸ್ ಟ್ರೂಮೆಂಟ್ ಕನ್ಸೋಲ್ ಮತ್ತು ಹೊಸ ಬಣ್ಣಗಳ ಆಯ್ಕೆಗಳನ್ನು ಪಡೆಯಬಹುದು.

ಹೊಸ ಕ್ಲಾಸಿಕ್ 350 ಬೈಕ್ ಬಿಡುಗಡೆ ಮುಂದೂಡಿದ ರಾಯಲ್ ಎನ್‌ಫೀಲ್ಡ್

ಹೊಸ ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್ 350 ಬೈಕಿನಲ್ಲಿ 350 ಸಿಸಿ ಸಿಂಗಲ್ ಸಿಲಿಂಡರ್ ಎಂಜಿನ್ ಅನ್ನು ಹೊಂದಿರಲಿದೆ. ಈ ಎಂಜಿನ್ 20.2 ಬಿಹೆಚ್‌ಪಿ ಪವರ್ ಮತ್ತು 27 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ 5 ಸ್ಪೀಡ್ ಗೇರ್‌ಬಾಕ್ಸ್ ಅನ್ನು ಜೋಡಿಸಲಾಗುತ್ತದೆ.

ಹೊಸ ಕ್ಲಾಸಿಕ್ 350 ಬೈಕ್ ಬಿಡುಗಡೆ ಮುಂದೂಡಿದ ರಾಯಲ್ ಎನ್‌ಫೀಲ್ಡ್

ಈ ಬೈಕಿನಲ್ಲಿ ಡಿಸ್ಕ್ ಬ್ರೇಕ್ ಮತ್ತು ಡ್ಯುಯಲ್-ಚಾನೆಲ್ ಎಬಿಎಸ್ ಅನ್ನು ಹೊಂದಿರಲಿದೆ. ಇನ್ನು ಈ ಬೈಕಿನ ಸಸ್ಪೆಂಕ್ಷನ್ ಬಗ್ಗೆ ಹೇಳುವುದಾದರೆ, ಮುಂಭಾಗದಲ್ಲಿ ಟೆಲಿಸ್ಕೋಪಿಕ್ ಫೋರ್ಕ್ಸ್ ಮತ್ತು ಹಿಂಭಾಗದಲ್ಲಿ ಟ್ವಿನ್ ಅಬ್ಸಾರ್ಬರ್ ಅನ್ನು ಹೊಂದಿರಲಿದೆ.

Article Published On: Saturday, October 10, 2020, 16:26 [IST]
English summary
New Royal Enfield Classic 350 Launch Pushed To 2021. Read In Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+