ಬಿಡುಗಡೆಯಾಯ್ತು ಬಹುನಿರೀಕ್ಷಿತ ಬಿಎಸ್-6 ಹೀರೋ ಎಕ್ಸ್‌ಟ್ರಿಮ್ 200ಎಸ್ ಬೈಕ್

ವಿಶ್ವದ ಅತಿದೊಡ್ಡ ದ್ವಿಚಕ್ರ ವಾಹನ ತಯಾರಕ ಕಂಪನಿಯಾದ ಹೀರೋ ಮೋಟೊಕಾರ್ಪ್ ಕೊನೆಗೂ ತನ್ನ ಬಹುನಿರೀಕ್ಷಿತ ಬಿಎಸ್-6 ಎಕ್ಸ್‌ಟ್ರಿಮ್ 200ಎಸ್ ಬೈಕನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದೆ. ಈ ಹೊಸ ಹೀರೋ ಎಕ್ಸ್‌ಟ್ರಿಮ್ 200ಎಸ್ ಬೈಕಿನ ಬೆಲೆಯು ದೆಹಲಿ ಎಕ್ಸ್ ಶೋರೂಂ ಪ್ರಕಾರ ರೂ.1.16 ಲಕ್ಷಗಳಾಗಿದೆ.

ಬಿಡುಗಡೆಯಾಯ್ತು ಬಹುನಿರೀಕ್ಷಿತ ಬಿಎಸ್-6 ಹೀರೋ ಎಕ್ಸ್‌ಟ್ರಿಮ್ 200ಎಸ್ ಬೈಕ್

ಹೊಸ ಹೀರೋ ಎಕ್ಸ್‌ಟ್ರಿಮ್ 200ಎಸ್ ಬೈಕಿನಲ್ಲಿ ಹಲವಾರು ಹೊಸ ಫೀಚರ್ ಗಳು, ಹೆಚ್ಚುವರಿ ಉಪಕರಣಗಳು ಮತ್ತು ವಿನ್ಯಾಸದಲ್ಲಿ ಸ್ವಲ್ಪ ನವೀಕರಣಗಳನ್ನು ನಡೆಸಲಾಗಿದೆ. ಹೊಸ ಎಕ್ಸ್‌ಟ್ರಿಮ್ 200ಎಸ್ ಬೈಕ್ ಟ್ವಿನ್ ಎಲ್ಇಡಿ ಹೆಡ್ ಲ್ಯಾಂಪ್ ಗಳು, ಎಲ್ಇಡಿ ಟೈಲ್ ಲೈಟ್ ಗಳು, ಹಿಂಭಾಗದ ಕೌಲ್ ವಿನ್ಯಾಸ, ಆಂಟಿ-ಸ್ಲಿಪ್ ಸೀಟುಗಳು ಮತ್ತು ಇತರ ನವೀಕರಣಗಳೊಂದಿಗೆ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ.

ಬಿಡುಗಡೆಯಾಯ್ತು ಬಹುನಿರೀಕ್ಷಿತ ಬಿಎಸ್-6 ಹೀರೋ ಎಕ್ಸ್‌ಟ್ರಿಮ್ 200ಎಸ್ ಬೈಕ್

ಹೊಸ ಎಕ್ಸ್‌ಟ್ರಿಮ್ 200ಎಸ್ ಬೈಕ್ ಬ್ಲೂಟೂತ್ ಕನೆಕ್ಟಿವಿಟಿಯೊಂದಿಗೆ ಸಂಪೂರ್ಣ ಡಿಜಿಟಲ್ ಎಲ್ಸಿಡಿ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಅನ್ನು ಹೊಂದಿದೆ. ಇದರಲ್ಲಿ ಟರ್ನ್-ಬೈ-ಟರ್ನ್ ನ್ಯಾವಿಗೇಷನ್, ಗೇರ್ ಇಂಡಿಕೇಟರ್, ಟ್ರಿಪ್ ಮೀಟರ್ ಮತ್ತು ಸರ್ವಿಸ್ ರಿಮೈಂಡರ್ ಮತ್ತು ಇತರ ಮಾಹಿತಿಗಳನ್ನು ನೀಡುತ್ತದೆ.

MOST READ: ಬಿಡುಗಡೆಯಾಯ್ತು ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್‍‍ಮಾಸ್ಟರ್ ಬೈಕ್

ಬಿಡುಗಡೆಯಾಯ್ತು ಬಹುನಿರೀಕ್ಷಿತ ಬಿಎಸ್-6 ಹೀರೋ ಎಕ್ಸ್‌ಟ್ರಿಮ್ 200ಎಸ್ ಬೈಕ್

ಫೀಚರ್ ಗಳ ಸುದೀರ್ಘ ಪಟ್ಟಿಯ ಜೊತೆಗೆ, ಹೊಸ ಎಕ್ಸ್‌ಟ್ರಿಮ್ 200ಎಸ್ ಬೈಕ್ ಸಹ ಹೊಚ್ಚ ಹೊಸ ಬಣ್ಣದ ಆಯ್ಕೆಯೊಂದಿಗೆ ಬರುತ್ತದೆ. ಇದನ್ನು ಪರ್ಲ್ ಫೇಡ್ಲೆಸ್ ವೈಟ್ ಎಂದು ಕರೆಯಲಾಗುತ್ತದೆ. ಸ್ಪೋರ್ಟ್ಸ್ ರೆಡ್ ಮತ್ತು ಪ್ಯಾಂಥರ್ ಬ್ಲ್ಯಾಕ್‌ನ ಇತರ ಎರಡು ಸ್ಟ್ಯಾಂಡರ್ಡ್ ಆಯ್ಕೆಗಳೊಂದಿಗೆ ಈ ಹೊಸ ಬಣ್ಣದ ಆಯ್ಕೆಯು ಲಭ್ಯವಿರುತ್ತದೆ.

ಬಿಡುಗಡೆಯಾಯ್ತು ಬಹುನಿರೀಕ್ಷಿತ ಬಿಎಸ್-6 ಹೀರೋ ಎಕ್ಸ್‌ಟ್ರಿಮ್ 200ಎಸ್ ಬೈಕ್

ಬೈಕಿನ ಹೃದಯ ಭಾಗ ಎಂದೇ ಹೇಳಬಹುದಾದ ಎಂಜಿನ್ ಬಗ್ಗೆ ಹೇಳುವುದಾದರೆ, ಹೊಸ ಎಕ್ಸ್‌ಟ್ರಿಮ್ 200ಎಸ್ ಬೈಕಿನಲ್ಲಿ ಅದೇ 199 ಸಿಸಿ ಸಿಂಗಲ್-ಸಿಲಿಂಡರ್ ಆಯಿಲ್-ಕೂಲ್ಡ್ ಫ್ಯೂಯಲ್ -ಇಂಜೆಕ್ಟ್ ಎಂಜಿನ್‌ ಅನ್ನು ನವೀಕರಿಸಿ ಅದನ್ನು ಅಳವಡಿಸಲಾಗಿದೆ.

MOST READ: ದುಬಾರಿಯಾಯ್ತು ಬಿಎಸ್-6 ಟಿವಿಎಸ್ ಎನ್‌ಟಾರ್ಕ್ 125 ಸ್ಕೂಟರ್

ಬಿಡುಗಡೆಯಾಯ್ತು ಬಹುನಿರೀಕ್ಷಿತ ಬಿಎಸ್-6 ಹೀರೋ ಎಕ್ಸ್‌ಟ್ರಿಮ್ 200ಎಸ್ ಬೈಕ್

ಈ ಎಂಜಿನ್ 8500 ಆರ್‌ಪಿಎಂನಲ್ಲಿ 17.8 ಬಿಹೆಚ್‌ಪಿ ಪವರ್ ಮತ್ತು 6500 ಆರ್‌ಪಿಎಂನಲ್ಲಿ 16.4 ಎನ್ಎಂ ಪೀಕ್ ಟಾರ್ಕ್ ಅನ್ನು ಉತ್ಪಾದಿಸುತ್ತದೆ, ಈ ಎಂಜಿನ್ ಅನ್ನು ಐದು-ಸ್ಪೀಡ್ ಗೇರ್‌ಬಾಕ್ಸ್‌ನೊಂದಿಗೆ ಜೋಡಿಸಲಾಗಿದೆ.

ಬಿಡುಗಡೆಯಾಯ್ತು ಬಹುನಿರೀಕ್ಷಿತ ಬಿಎಸ್-6 ಹೀರೋ ಎಕ್ಸ್‌ಟ್ರಿಮ್ 200ಎಸ್ ಬೈಕ್

ಹೊಸ ಎಕ್ಸ್‌ಟ್ರಿಮ್ 200ಎಸ್ ಬೈಕಿನ ಸಸ್ಪೆಂಕ್ಷನ್ ಸೆಟಪ್ ಬಗ್ಗೆ ಹೇಳುವುದಾದರೆ, ಮುಂಭಾಗದಲ್ಲಿ ಸ್ಟ್ಯಾಂಡರ್ಡ್ ಟೆಲಿಸ್ಕೋಪಿಕ್ ಫೋರ್ಕ್ಸ್ ಮತ್ತು ಹಿಂಭಾಗದಲ್ಲಿ ಏಳು-ಹಂತದ ಹೊಂದಾಣಿಕೆ ಮಾಡಬಹುದಾದ ಮೊನೊ-ಶಾಕ್ ಸೆಟಪ್ ಅನ್ನು ನೀಡಿದೆ.

MOST READ: ಹೊಸ ಬಣ್ಣದ ಆಯ್ಕೆಯನ್ನು ಪಡೆದುಕೊಂಡ 2021ರ ಕವಾಸಕಿ ನಿಂಜಾ 1000 ಎಸ್‌ಎಕ್ಸ್ ಬೈಕ್

ಬಿಡುಗಡೆಯಾಯ್ತು ಬಹುನಿರೀಕ್ಷಿತ ಬಿಎಸ್-6 ಹೀರೋ ಎಕ್ಸ್‌ಟ್ರಿಮ್ 200ಎಸ್ ಬೈಕ್

ಅತಿ ಪ್ರಮುಖವಾಗಿ ಬೈಕಿನ ಬ್ರೇಕಿಂಗ್ ಸಿಸ್ಟಂ ಬಗ್ಗೆ ಹೇಳುವುದಾದರೆ, ಮುಂಭಾಗದಲ್ಲಿ 276 ಎಂಎಂ ಬ್ರೇಕ್ ಮತ್ತು ಹಿಂಭಾಗದಲ್ಲಿ 220 ಎಂಎಂ ಡಿಸ್ಕ್ ಬ್ರೇಕ್ ಗಳನ್ನು ಅಳವಡಿಸಳಾಗಿದೆ. ಇದರೊಂದಿಗೆ ಸಿಂಗಲ್-ಚಾನೆಲ್ ಎಬಿಎಸ್ ಅನ್ನು ಕೂಡ ನೀಡಿದೆ.

ಬಿಡುಗಡೆಯಾಯ್ತು ಬಹುನಿರೀಕ್ಷಿತ ಬಿಎಸ್-6 ಹೀರೋ ಎಕ್ಸ್‌ಟ್ರಿಮ್ 200ಎಸ್ ಬೈಕ್

ಡ್ರೈವ್‌ಸ್ಪಾರ್ಕ್ ಅಭಿಪ್ರಾಯ

ಹೊಸ ಎಕ್ಸ್‌ಟ್ರಿಮ್ 200ಎಸ್ ಬೈಕ್ ಭಾರತೀಯ ಮಾರುಕಟ್ಟೆಯಿಂದ ಬಹುನಿರೀಕ್ಷಿತ ಬೈಕ್ ಆಗಿದೆ. ಈ ಹೊಸ ಹೀರೋ ಎಕ್ಸ್‌ಟ್ರಿಮ್ 200ಎಸ್ ಭಾರತೀಯ ಮಾರುಕಟ್ಟೆಯಲ್ಲಿ ಬಜಾಜ್ ಪಲ್ಸರ್ ಆರ್‍ಎಸ್ 200 ಮತ್ತು ಕೆಟಿಎಂ ಆರ್‍‍ಸಿ 200 ಬೈಕುಗಳಿಗೆ ಪೈಪೋಟಿ ನೀಡುತ್ತದೆ.

Most Read Articles

Kannada
English summary
Hero Xtreme 200S BS6 Motorcycle Launched In India. Read In Kannada.
Story first published: Tuesday, November 10, 2020, 18:04 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X