ಶೀಘ್ರದಲ್ಲೇ ಪ್ರಾರಂಭವಾಗಲಿದೆ ಹೋಂಡಾ ಆಫ್ರಿಕಾ ವಿ-ಟ್ವಿನ್ ಬೈಕ್ ವಿತರಣೆ

ಹೋಂಡಾ ಮೋಟಾರ್‌ಸೈಕಲ್ ಇಂಡಿಯಾ ಕಂಪನಿಯು ತನ್ನ ಹೊಸ ಆಫ್ರಿಕಾ ವಿ-ಟ್ವಿನ್ ಬೈಕ್ ಅನ್ನು ಈ ವರ್ಷದ ಮಾರ್ಚ್ ತಿಂಗಳಲ್ಲಿ ಬಿಡುಗಡೆಗೊಳಿಸಲಾಗಿತ್ತು. ಕರೋನಾ ಸೋಂಕಿನ ಭೀತಿಯಿಂದ ಈ ಬೈಕಿನ ವಿತರಣೆಯು ವಿಳಂಬವಾಗಿದೆ ಎಂದು ನಿರೀಕ್ಷಿಸುತ್ತೇವೆ.

ಶೀಘ್ರದಲ್ಲೇ ಪ್ರಾರಂಭವಾಗಲಿದೆ ಹೋಂಡಾ ಆಫ್ರಿಕಾ ವಿ-ಟ್ವಿನ್ ಬೈಕ್ ವಿತರಣೆ

ಕೆಲವು ವರದಿಗಳ ಪ್ರಕಾರ ಹೊಸ ಆಫ್ರಿಕಾ ವಿ-ಟ್ವಿನ್ ಬೈಕಿನ ವಿತರಣೆಯನ್ನು ಮುಂದಿನ ಜುಲೈ ತಿಂಗಳಲ್ಲಿ ಪ್ರಾರಂಭವಾಗಲಿದೆ. ಇನ್ನು ಡ್ಯುಯಲ್ ಕ್ಲಚ್ ಆಟೋಮ್ಯಾಟಿಕ್ ಆವೃತ್ತಿಯ ಬೈಕಿನ ಆವೃತ್ತಿಯನ್ನು ಮುಂದಿನ ವರ್ಷ ಪ್ರಾರಂಭದಲ್ಲಿ ವಿತರಣೆಯನ್ನು ಪ್ರಾರಂಭಿಸಬಹುದು. 2020ರ ಆಫ್ರಿಕಾ ವಿ-ಟ್ವಿನ್ ಸಿಆರ್‍ಎಫ್ ಬೈಕ್ ಅನ್ನು ಸ್ಟ್ಯಾಂಡರ್ಡ್ ಮತ್ತು ಅಡ್ವೆಂಚರ್ ಸ್ಪೋರ್ಟ್ಸ್ ಎಂಬ ಎರಡು ರೂಪಾಂತರಗಳಲ್ಲಿ ಬಿಡುಗಡೆಗೊಳಿಸಿತು.

ಶೀಘ್ರದಲ್ಲೇ ಪ್ರಾರಂಭವಾಗಲಿದೆ ಹೋಂಡಾ ಆಫ್ರಿಕಾ ವಿ-ಟ್ವಿನ್ ಬೈಕ್ ವಿತರಣೆ

ಹಿಂದಿನ ಮಾದರಿಗಿಂತ 2020ರ ಆಫ್ರಿಕಾ ವಿ-ಟ್ವಿನ್ ಹೆಚ್ಚು ಪವರ್ ಫುಲ್ ಬೈಕ್ ಆಗಿದೆ. ಹೊಸ ಹೋಂಡಾ ಆಫ್ರಿಕಾ ಟ್ವಿನ್ ಬೈಕ್ 1,084ಸಿಸಿ ಎಂಜಿನ್ 101 ಬಿ‍‍ಹೆಚ್‍‍ಪಿ ಪವರ್ ಮತ್ತು 105 ಎನ್‍ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

MOST READ: ಭಾರತಕ್ಕೆ ಲಗ್ಗೆ ಇಡಲಿದೆ ಜನಪ್ರಿಯ ಟ್ರಯಂಫ್ ಸ್ಟ್ರೀಟ್ ಟ್ರಿಪಲ್ ಆರ್ ಬೈಕ್

ಶೀಘ್ರದಲ್ಲೇ ಪ್ರಾರಂಭವಾಗಲಿದೆ ಹೋಂಡಾ ಆಫ್ರಿಕಾ ವಿ-ಟ್ವಿನ್ ಬೈಕ್ ವಿತರಣೆ

ಪಸ್ತುತ ಮಾರುಕಟ್ಟೆಯಲ್ಲಿರುವ ಮಾದರಿಯ ಎಂಜಿನ್‍‍ಗಿಂತ 2.5 ಕಿ.ಗ್ರಾಂ ಹೆಚ್ಚು ತೂಕವನ್ನುಹೊಂದಿದೆ. ಈ ಎಂಜಿನ್‍‍ನೊಂದಿಗೆ 6 ಸ್ಪೀಡ್ ಮ್ಯಾನುವಲ್ ಮತ್ತು ಡಿಸಿ‍ಟಿ ಗೇರ್‍‍ಬಾಕ್ಸ್ ಅನ್ನು ಅಳವಡಿಸಲಾಗಿದೆ.

ಶೀಘ್ರದಲ್ಲೇ ಪ್ರಾರಂಭವಾಗಲಿದೆ ಹೋಂಡಾ ಆಫ್ರಿಕಾ ವಿ-ಟ್ವಿನ್ ಬೈಕ್ ವಿತರಣೆ

ಹೊಸ 2020ರ ಹೋಂಡಾ ಆಫ್ರಿಕಾ ವಿ-ಟ್ವಿನ್ ಬೈಕಿನ ಮುಂಭಾಗದಲ್ಲಿ ಶೋವಾ 45 ಎಂಎಂ ಕಾರ್ಟ್ರಿಡ್ಜ್ ಮಾದರಿಯ ಇನ್ವರ್ಡಡ್ ಟಿಲಿಸ್ಕೋಪಿಕ್ ಫೋರ್ಕ್‍‍ಗಳು ಮತ್ತು ಪ್ರೊ-ಲಿಂಕ್‍‍ನೊಂದಿಗೆ ಮೊನೊಬ್ಲಾಕ್ ಅಲ್ಯೂಮಿನಿಯಂ ಸ್ವಿಂಗ್ ಆರ್ಮ್ ಮತ್ತು ಹಿಂಭಾಗದಲ್ಲಿ ಶೋವಾ ಗ್ಯಾಸ್-ಚಾರ್ಜ್ಡ್ ಡ್ಯಾಂಪರ್ ಅನ್ನು ಒಳಗೊಂಡಿದೆ.

MOST READ: ಬಹಿರಂಗವಾಯ್ತು ಬಿಎಸ್-6 ಹೀರೋ ಎಕ್ಸ್‌ಪಲ್ಸ್ 200 ಬೈಕಿನ ಮಾಹಿತಿ

ಶೀಘ್ರದಲ್ಲೇ ಪ್ರಾರಂಭವಾಗಲಿದೆ ಹೋಂಡಾ ಆಫ್ರಿಕಾ ವಿ-ಟ್ವಿನ್ ಬೈಕ್ ವಿತರಣೆ

ಹೋಂಡಾ ಆಫ್ರಿಕಾ ವಿ-ಟ್ವಿನ್ ಬೈಕ್ ಫ್ರೆಮ್ ನವೀಕರಿಸಲಾಗಿದೆ. ಆಫ್ರಿಕಾ ಟ್ವಿನ್ ಕಾರ್ನರಿಂಗ್ ಎಬಿ‍ಎಸ್, ರೇರ್ ಲಿಫ್ಟ್ ಕಂಟ್ರೋಲ್, ಕಾರ್ನರಿಂಗ್ ಎಬಿಎಸ್, ರೇರ್ ಲಿಫ್ಟ್ ಕಂಟ್ರೋಲ್ ಅನ್ನು ಹೊಂದಿದೆ.

ಶೀಘ್ರದಲ್ಲೇ ಪ್ರಾರಂಭವಾಗಲಿದೆ ಹೋಂಡಾ ಆಫ್ರಿಕಾ ವಿ-ಟ್ವಿನ್ ಬೈಕ್ ವಿತರಣೆ

ಇದಲ್ಲದೆ ಅಡ್ವೆಂಚರ್ ಸ್ಪೋರ್ಟ್ ಇಎಸ್ ಮಾದರಿಯು ಎಲೆಕ್ಟ್ರಾನಿಕ್ ಸಸ್ಪೆಂಷನ್ ಅನ್ನು ಹೊಂದಿದೆ. ಹೊಸ ಆಫ್ರಿಕಾ ಟ್ವಿನ್ ಪ್ರಮುಖ ಫೀಚರ್ಸ್ ಅಂದರೆ ಹೊಸ 6 ಇಂಚಿನ ಟಿ‍ಎಫ್‍‍ಟಿ ಟಚ್‍‍ಸ್ಕ್ರೀನ್ ಡಿಸ್‍‍ಪ್ಲೇ ಅನ್ನು ಹೊಂದಿದ್ದು, ಇದರೊಂದಿಗೆ ಆ್ಯಪಲ್ ಕಾರ್‍‍ಪ್ಲೇ ಅನ್ನು ಅಳವಡಿಸಲಾಗಿದೆ. ಹೊಸ ಬೈಕ್ ಆರು ಎಕ್ಸಸ್ ಐಎಂಯು ಮತ್ತು ಬ್ಲೂಟತ್ ಕನೆಕ್ಟಿವಿಟಿಯನ್ನು ಅಳವಡಿಸಲಾಗಿದೆ.

MOST READ: ಹೊಸ ಬಿಎಂಡಬ್ಲ್ಯೂ ಆರ್ 18 ಕ್ರೂಸರ್ ಬೈಕ್ ಖರೀದಿಗೆ ಬುಕ್ಕಿಂಗ್ ಆರಂಭ

ಶೀಘ್ರದಲ್ಲೇ ಪ್ರಾರಂಭವಾಗಲಿದೆ ಹೋಂಡಾ ಆಫ್ರಿಕಾ ವಿ-ಟ್ವಿನ್ ಬೈಕ್ ವಿತರಣೆ

ಹೊಸ ಬೈಕಿನ ಬ್ರೇಕಿಂಗ್ ಸಿಸ್ಟಂ ಬಗ್ಗೆ ಹೇಳುದಾದರೆ, ಈ ಮುಂಭಾಗದಲ್ಲಿ ಡ್ಯುಯಲ್ 310 ಎಂಎಂ ಹೈಡ್ರಾಲಿಕ್ ಡಿಸ್ಕ್ ಗಳು ಮತ್ತು ಹಿಂಭಾಗದಲ್ಲಿ 256 ಎಂಎಂ ಹೈಡ್ರಾಲಿಕ್ ಡಿಸ್ಕ್ ಅನ್ನು ಅಳವಡಿಸಿದ್ದಾರೆ. ಇದರೊಂದಿಗೆ ಡ್ಯುಯಲ್ ಚಾನೆಲ್ ಎಬಿಎಸ್ ಅನ್ನು ಅಳವಡಿಸಲಾಗಿದೆ. ಈ ಬೈಕ್ ಆನ್ ರೋಡ್ ಮತ್ತು ಆಫ್-ರೋಡ್ ಗಳಲ್ಲಿ ಎಬಿಎಸ್ ಮೋಡ್ ಅನ್ನು ಸಹ ಒಳಗೊಂಡಿದೆ.

ಶೀಘ್ರದಲ್ಲೇ ಪ್ರಾರಂಭವಾಗಲಿದೆ ಹೋಂಡಾ ಆಫ್ರಿಕಾ ವಿ-ಟ್ವಿನ್ ಬೈಕ್ ವಿತರಣೆ

ಈ ಹೊಸ ಹೋಂಡಾ ಆಫ್ರಿಕಾ ವಿ-ಟ್ವಿನ್ ಬೈಕ್ ದೇಶಿಯ ಮಾರುಕಟ್ಟೆಯಲ್ಲಿ ಡುಕಾಟಿ ಮಲ್ಟಿಸ್ಟ್ರಾಡಾ, ಟ್ರಯಂಫ್ ಟೈಗರ್ ಮತ್ತು ಬಿಎಂಡಬ್ಲ್ಯು ಜಿಎಸ್ 1250 ಬೈಕ್‍ಗಳಿಗೆ ಪೈಪೋಟಿಯನ್ನು ನೀಡುತ್ತದೆ.

Most Read Articles

Kannada
English summary
Honda Africa V-Twin deliveries in July 2020. Read In Kannada.
Story first published: Tuesday, June 23, 2020, 10:42 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X