Just In
Don't Miss!
- News
ಕೊಟ್ಟ ಮಾತು ಉಳಿಸಿಕೊಂಡ ಬೈಡನ್, ಸಂಪುಟದಲ್ಲಿ ಭಾರತೀಯರೇ ಮಿಂಚಿಂಗ್
- Sports
ಐಎಸ್ಎಲ್: ಜೆಮ್ಷೆಡ್ಪುರಕ್ಕೆ ಆಘಾತ ನೀಡಿದ ನಾರ್ಥ್ಈಸ್ಟ್
- Movies
ಹರ ಜಾತ್ರೆಯಲ್ಲಿ ಪುನೀತ್ ರಾಜ್ ಕುಮಾರ್; ಅಪ್ಪು ಹಾಡು ಕೇಳಿ ಸಂಭ್ರಮಿಸಿದ ಅಭಿಮಾನಿಗಳು
- Finance
ಸಿಲಿಂಡರ್ ಬುಕ್ ಮಾಡಿದ ಎರಡು ಗಂಟೆಯೊಳಗೆ ಮನೆ ಬಾಗಿಲಿಗೆ ಡೆಲಿವರಿ
- Lifestyle
ಸಂಜೆ ಸ್ನ್ಯಾಕ್ಸ್ ಗೆ ಹೇಳಿಮಾಡಿಸಿದ್ದು ಈ ತಡ್ಕಾ ಮಸಾಲೆ ಮ್ಯಾಗಿ
- Education
BEL Recruitment 2021: 205 ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ರಾಯಲ್ ಎನ್‍ಫೀಲ್ಡ್ ಬೈಕ್‍ಗಳಿಗೆ ಟಕ್ಕರ್ ನೀಡಲು ಸಜ್ಜಾದ ಹೊಸ ಹೋಂಡಾ ಬೈಕ್
ಜಪಾನ್ ಮೂಲದ ದ್ವಿಚಕ್ರ ವಾಹನ ತಯಾರಕ ಕಂಪನಿಯಾದ ಹೋಂಡಾ ಮೋಟಾರ್‌ಸೈಕಲ್ ಭಾರತೀಯ ಮಾರುಕಟ್ಟೆಯಲ್ಲಿ ದ್ವಿಚಕ್ರ ವಾಹನ ವಿಭಾಗದಲ್ಲಿ ಪಾರುಪತ್ಯ ಸಾಧಿಸಲು ಸಜ್ಜಾಗುತ್ತಿದೆ. ಹೋಂಡಾ ಕಂಪನಿಯು ಹೊಚ್ಚ ಹೊಸ ಬೈಕನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಿದ್ದವಾಗಿದೆ.

ಹೋಂಡಾ ಮೋಟಾರ್‌ಸೈಕಲ್ ಕಂಪನಿಯು ಇದೇ ತಿಂಗಳ 30ರಂದು ಹೊಸ ಬೈಕನ್ನು ಬಿಡುಗಡೆಗೊಳಿಸಲಿದೆ. ಈ ಮಾಹಿತಿಯನ್ನು ಹೋಂಡಾ ಕಂಪನಿಯು ಹೊಸ ಟೀಸರ್ ಬಿಡುಗಡೆಗೊಳಿಸುವ ಮೂಲಕ ಬಹಿರಂಗಪಡಿಸಿದೆ. ಹೊಸ ಬೈಕ್ ಪ್ರೀಮಿಯಂ ಮಾದರಿಯಾಗಲಿದ್ದು, 300ಸಿಸಿಯ ಸರಣಿ ಮೇಲಿನ ಸ್ಥಾನವನ್ನು ಪಡೆಯಬಹುದು. ಹೊಸ ಬೈಕ್ ಬಿಡುಗಡೆಯಾದ ಬಳಿಕ ಹೋಂಡಾ ಕಂಪನಿಯ ಪ್ರೀಮಿಯಂ ಬಿಗ್‌ವಿಂಗ್ ಡೀಲರುಗಳ ಮೂಲಕ ಪ್ರತ್ಯೇಕವಾಗಿ ಮಾರಾಟ ಮಾಡಲಾಗುತ್ತದೆ.

ಹೊಸ ಬೈಕ್ 300-500 ಸಿಸಿ ವಿಭಾಗದ ಕ್ರೂಸರ್ ಭಾಗವಾಗಲಿದೆ. ಈ ಹೊಸ ಬೈಕ್ ಭಾರತೀಯ ಮಾರುಕಟ್ಟೆಯಲ್ಲಿ ರಾಯಲ್ ಎನ್‌ಫೀಲ್ಡ್ ಮತ್ತು ಜಾವಾ ಬೈಕುಗಳಿಗೆ ನೇರವಾಗಿ ಪೈಪೋಟಿಯನ್ನು ನೀಡುತ್ತದೆ.
MOST READ: ದುಬಾರಿಯಾಯ್ತು ಜನಪ್ರಿಯ ಬಿಎಸ್-6 ಯಮಹಾ ಎಂಟಿ-15 ಬೈಕ್

ಹೊಸ ಬೈಕ್ ಬ್ರ್ಯಾಂಡ್ನ ಅಂತರರಾಷ್ಟ್ರೀಯ ರೆಬೆಲ್ 300 ಮಾದರಿಯನ್ನು ಆಧರಿಸಿರಬಹುದು. ಆದರೆ ಹೊಸ ಬೈಕ್ ಭಾರತೀಯ ಮಾರುಕಟ್ಟೆಗೆ ತಕ್ಕಂತೆ ಹಲವಾರು ಗಮನಾರ್ಹವಾದ ನವೀಕರಣಗಳು ಮತ್ತು ಬದಲಾವಣೆಗಳೊಂದಿಗೆ ಬಿಡುಗಡೆಗೊಳಿಸಬಹುದು.

ಇದೇ ರೀತಿ ಇತ್ತೀಚೆಗೆ ಹೋಂಡಾ ಕಂಪನಿಯು ಹಾರ್ನೆಟ್ 2.0 ಬೈಕ್ ಅನ್ನು ಬಿಡುಗಡೆಗೊಳಿಸಿತ್ತು. ಈ ಹೊಸ ಹೋಂಡಾ ಹಾರ್ನೆಟ್ 2.0 ಬೈಕ್ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿರುವ ಕಂಪನಿಯ ಸಿಬಿ190ಆರ್ ಅನ್ನು ಆಧರಿಸಿದೆ. ಆದರೆ ಕೆಲವು ಬದಲಾವಣೆಗಳೊಂದಿಗೆ ಬಿಡುಗಡೆಗೊಳಿಸಿದ್ದರು.
MOST READ: ಬಿಡುಗಡೆಯ ಸನಿಹದಲ್ಲಿ ಬಹುನಿರೀಕ್ಷಿತ ಬಿಎಸ್-6 ಹೀರೋ ಬೈಕುಗಳು

ಹೋಂಡಾ ಹಾರ್ನೆಟ್ 2.0 ಬೈಕ್ ಪಿಜಿಎಂ-ಫೈ ತಂತ್ರಜ್ಞಾನದೊಂದಿಗೆ ಬ್ರಾಂಡ್‌ನ ಹೊಸ ಬಿಎಸ್-6 ಪ್ರೇರಿತ 184 ಸಿಸಿ ಸಿಂಗಲ್ ಸಿಲಿಂಡರ್ ಎಂಜಿನ್ ಹೊಂದಿದೆ. ಈ ಎಂಜಿನ್ 8500 ಆರ್‌ಪಿಎಂನಲ್ಲಿ 17 ಬಿಹೆಚ್‌ಪಿ ಮತ್ತು 6000 ಆರ್‌ಪಿಎಂನಲ್ಲಿ 16.1 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ಈ ಎಂಜಿನ್ ಅನ್ನು ಐದು-ಸ್ಪೀಡ್ ಗೇರ್‌ಬಾಕ್ಸ್‌ನೊಂದಿಗೆ ಜೋಡಿಸಲಾಗಿದೆ. ಇನ್ನು ಈ ಹೊಸ ಹೋಂಡಾ ಹಾರ್ನೆಟ್ 2.0 ಬೈಕಿನಲ್ಲಿ ಸಸ್ಪೆಂಕ್ಷನ್ ಗಾಗಿ ಮುಂಭಾಗದಲ್ಲಿ ಗೋಲ್ಡನ್ ಯುಎಸ್ಡಿ ಫೋರ್ಕ್‌ಗಳು ಮತ್ತು ಹಿಂಭಾಗದಲ್ಲಿ ಮೊನೊ-ಶಾಕ್ ಸೆಟಪ್ ಅನ್ನು ಒಳಗೊಂಡಿದೆ.
MOST READ: ಬಿಡುಗಡೆಯಾಯ್ತು ಹೊಸ ಕವಾಸಕಿ ವಲ್ಕನ್ ಎಸ್ ಬೈಕ್

ಹೊಸ ಹೋಂಡಾ ಹಾರ್ನೆಟ್ 2.0 ಬೈಕಿನ ಬ್ರೇಕಿಂಗ್ ಸಿಸ್ಟಂ ಬಗ್ಗೆ ಹೇಳುವುದಾದರೆ, ಮುಂಭಾಗದಲ್ಲಿ 276 ಎಂಎಂ ಡಿಸ್ಕ್ ಮತ್ತು ಹಿಂಭಾಗದಲ್ಲಿ 220 ಎಂಎಂ ಡಿಸ್ಕ್ ಅನ್ನು ಒಳಗೊಂಡಿದೆ. ಇದರೊಂದಿಗೆ ಸ್ಟ್ಯಾಂಡರ್ಡ್ ಆಗಿ ಸಿಂಗಲ್-ಚಾನೆಲ್ ಎಬಿಎಸ್ ಅನ್ನು ನೀಡಿದೆ

ಹೊಸ ಪ್ರೀಮಿಯಂ ಬೈಕ್ ಅನ್ನು ಇದೇ ರೀತಿ ಕೆಲವು ಬದಲಾವಣೆಗಳೊಂದಿಗೆ ಬಿಡುಗಡೆಗೊಳಿಸಬಹುದು. ಆದರೆ ಕೆಲವು ವರದಿಗಳ ಪ್ರಕಾರ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸುವ ಬೈಕ್ 500ಸಿಸಿ ಆಗಿರಲಿದೆ.
MOST READ: ಬಿಡುಗಡೆಯಾಯ್ತು ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್‍ಮಾಸ್ಟರ್ ಬೈಕ್

ಹೋಂಡಾ ಕಂಪನಿಯು ಇತ್ತೀಚೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ 500ಸಿಸಿ ಬೈಕುಗಳನ್ನು ಬಿಡುಗಡೆಗೊಳಿಸಿತ್ತು. ಇವುಗಳು ಸಿಬಿ500ಎಕ್ಸ್, ಸಿಬಿಆರ್500ಆರ್ ಮತ್ತು ಸಿಬಿಆರ್500ಎಫ್ ಎಂಬ ಬೈಕುಗಳಾಗಿದೆ.

ಹೋಂಡಾ ಕಂಪನಿಯು ಹೊಸ ಬೈಕಿನ ಬಿಡುಗಡೆಯ ದಿನಾಂಕವನ್ನು ಹೊರತುಪಡಿಸಿ ಉಳಿದಂತೆ ಯಾವುದೇ ಇತರ ಮಾಹಿತಿಗಳನ್ನು ಬಹಿರಂಗಪಡಿಸಲಿಲ್ಲ. ಇದೇ ತಿಂಗಳ 30ರಂದು ಹೊಸ ಹೋಂಡಾ ಬೈಕ್ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿದೆ.