Just In
- 13 hrs ago ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- 13 hrs ago ಟೊಯೊಟಾದ ಫಾರ್ಚ್ಯೂನರ್ನಲ್ಲೂ ಸಿಗಲಿದೆ ಹೈಬ್ರಿಡ್: ಇದರ ಮೈಲೇಜ್ ಕೇಳಿ ಸುಸ್ತಾದ ಗ್ರಾಹಕರು!
- 14 hrs ago ನಿಜವಾದ ಮಾನವತಾವಾದಿ: ನಟ ರಾಘವ ಲಾರೆನ್ಸ್ರಿಂದ ವಿಶೇಷ ಚೇತನ ಸಾಧಕರಿಗೆ 13 ಟಿವಿಎಸ್ ಸ್ಕೂಟರ್ ಗಿಫ್ಟ್
- 16 hrs ago ಜನ ಕ್ಯೂ ನಿಂತು ಖರೀದಿಸುತ್ತಿದ್ದ ಮಾರುತಿ ಸ್ವಿಫ್ಟ್ ಕಾರು ಮಾರಾಟದಲ್ಲಿ ಕುಸಿತ: ಕಾರಣವೇನು?
Don't Miss!
- News ಐತಿಹಾಸಿಕ ಪ್ರಸಿದ್ಧ ವದ್ದಿಕೆರೆ ಸಿದ್ದಪ್ಪನ ಬಗ್ಗೆ ನಿಮಗೆಷ್ಟು ಗೊತ್ತು?-ಇಲ್ಲಿದೆ ಸಂಪೂರ್ಣ ವಿವರ
- Sports PBKS vs MI IPL 2024: ಮತ್ತೊಮ್ಮೆ ಕೊನೆಯ ಓವರ್ನಲ್ಲಿ ಮುಗ್ಗರಿಸಿದ ಪಂಜಾಬ್ ಕಿಂಗ್ಸ್ ಪ್ಲೇಆಫ್ ಸನ್ನಿವೇಶ ಹೇಗಿದೆ?
- Finance ಕಚ್ಚಾ ತೈಲ ಆಮದು ಗಣನೀಯ ಇಳಿಕೆ, ಪೆಟ್ರೋಲ್ ಡಿಸೇಲ್ ಬೆಲೆ ಹೆಚ್ಚಾಗುತ್ತಾ?
- Technology Poco: ಹೊಸದಾಗಿ ಲಾಂಚ್ ಆದ ಪೊಕೊ X6 ಪ್ರೊ 5G ಸ್ಮಾರ್ಟ್ಫೋನ್ಗೆ 17% ರಿಯಾಯಿತಿ!8 GB RAM
- Lifestyle ಶುಕ್ರವಾರ ವೈಭವ ಲಕ್ಷ್ಮಿ ವ್ರತ ಮಾಡೋದೇಕೆ..? ಹೇಗೆ ಆಚರಿಸಬೇಕು ಎಂಬ ಮಾಹಿತಿ ಇಲ್ಲಿದೆ..!
- Movies 'ಮಾರ್ಟಿನ್' ಚಿತ್ರದ ನಿರ್ಮಾಪಕ- ನಿರ್ದೇಶಕರ ಮಧ್ಯೆ ಕಿರಿಕ್: ಕೊನೆಗೂ ಸಿಕ್ತು ಸ್ಪಷ್ಟನೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸ್ಪಾಟ್ ಟೆಸ್ಟ್ನಲ್ಲಿ ಕಾಣಿಸಿಕೊಂಡ ಹೊಸ ಹಸ್ಕ್ವರ್ನಾ 401 ಬೈಕ್
ಹಸ್ಕ್ವರ್ನಾ ಕಂಪನಿಯು ಈ ವರ್ಷದ ಫೆಬ್ರವರಿ ತಿಂಗಳಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಸ್ವಾರ್ಟ್ಪಿಲೆನ್ 250 ಹಾಗೂ ವಿಟ್ಪಿಲೆನ್ 250 ಬೈಕ್ ಗಳನ್ನು ಬಿಡುಗಡೆ ಮಾಡುವ ಮೂಲಕ ಭಾರತಕ್ಕೆ ಕಾಲಿಟ್ಟಿತ್ತು. ಇದೀಗ ಹಸ್ಕ್ವರ್ನಾ ಕಂಪನಿಯು ತನ್ನ ಹೊಸ ಮಾದರಿಗಳನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ.
ಹಸ್ಕ್ವರ್ನಾ ಕಂಪನಿಯು ಭಾರತೀಯ ಮಾರುಕಟ್ಟೆಯಲ್ಲಿ ತನ್ನ ಸ್ವಾರ್ಟ್ಪಿಲೆನ್ 401 ಮತ್ತು ವಿಟ್ಪಿಲೆನ್ 401 ಬೈಕ್ಗಳನ್ನು ಭಾರತದಲ್ಲಿ ಬಿಡುಗಡೆಗೊಳಿಸಲಿದೆ. ಇತ್ತೀಚೆಗೆ ಹಸ್ಕ್ವರ್ನಾ ಕಂಪನಿಯು ತನ್ನ 401 ಟ್ವಿನ್ ಬೈಕುಗಳಲ್ಲಿ ಒಂದನ್ನು ಸ್ಪಾಟ್ ಟೆಸ್ಟ್ ನಡೆಸಿತ್ತು. ಈ ಹಸ್ಕ್ವರ್ನಾ 401 ಬೈಕಿನ ಎಂಜಿನ್ ನಲ್ಲಿ ಕೆಟಿಎಂ 390 ಡ್ಯೂಕ್ ಬ್ಯಾಡ್ಜ್ ಅನ್ನು ಹೊಂದಿದೆ. ಹಸ್ಕ್ವರ್ನಾ ಬ್ರ್ಯಾಂಡ್ ಕೆಟಿಎಂನ ಅಂಗಸಂಸ್ಥೆಯಾಗಿದ್ದು, ಎರಡನ್ನೂ ಮಹಾರಾಷ್ಟ್ರದ ಪುಣೆಯ ಬಳಿಯ ಚಕನ್ನಲ್ಲಿರುವ ಬಜಾಜ್ ಆಟೋ ಘಟಕದಲ್ಲಿ ತಯಾರಿಸಲಾಗುತ್ತದೆ ಎಂದು ಗಮನಿಸಬೇಕು.
ಸ್ವಾರ್ಟ್ಪಿಲೆನ್ 250 ಮತ್ತು ವಿಟ್ಪಿಲೆನ್ 250 ಬೈಕುಗಳು ಕೆಟಿಎಂ 250 ಡ್ಯೂಕ್ ಅನ್ನು ಆಧರಿಸಿದಂತೆಯೇ, ಮುಂಬರುವ ಸ್ವಾರ್ಟ್ಪಿಲೆನ್ 401 ಮತ್ತು ವಿಟ್ಪಿಲೆನ್ 401 ಬೈಕ್ಗಳು 390 ಡ್ಯೂಕ್ ಮಾದರಿಯನ್ನು ಆಧರಿಸಿರಲಿದೆ.
MOST READ: ಬಿಡುಗಡೆಯಾಯ್ತು ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್ಮಾಸ್ಟರ್ ಬೈಕ್
ಕೆಟಿಎಂ 390 ಮಾದರಿಯ ಎಂಜಿನ್ ಅನ್ನು ಮುಂಬರುವ ಸ್ವಾರ್ಟ್ಪಿಲೆನ್ 401 ಮತ್ತು ವಿಟ್ಪಿಲೆನ್ 401 ಬೈಕ್ಗಳು ಹೊಂದಿರಲಿದೆ. ಹಸ್ಕ್ವರ್ನಾ 401 ಬೈಕ್ 373 ಸಿಸಿ ಸಿಂಗಲ್ ಸಿಲಿಂಡರ್ ಲಿಕ್ವಿಡ್ ಕೂಲ್ಡ್ ಎಂಜಿನ್ ಅನ್ನು ಹೂಂದಿರಲಿದೆ. ಈ ಎಂಜಿನ್ 44 ಬಿಹೆಚ್ಪಿ ಪವರ್ ಮತ್ತು 37 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.
ಸ್ವಾರ್ಟ್ಪಿಲೆನ್ 401 ಮತ್ತು ವಿಟ್ಪಿಲೆನ್ 401 ಬೈಕ್ಗಳು ಡಬ್ಲ್ಯೂಪಿ ಯುಎಸ್ಡಿ ಫ್ರಂಟ್ ಫೋರ್ಕ್ಸ್, ರಿಯರ್ ಮೊನೊಶಾಕ್, ಬ್ರೇಕಿಂಗ್ ಸಿಸ್ಟಮ್, ಟ್ರೆಲ್ಲಿಸ್ ಫ್ರೇಮ್ ಮತ್ತು ಹಲವಾರು ಭಾಗಗಳು ಕೆಟಿಎಂ ಬೈಕಿನಿಂದ ಎರವಲು ಪಡೆಯಲಿದೆ.
MOST READ: ಬಿಡುಗಡೆಯಾಯ್ತು ಹೊಸ ಕವಾಸಕಿ ವಲ್ಕನ್ ಎಸ್ ಬೈಕ್
ಹಸ್ಕ್ವರ್ನಾ ಸ್ವಾರ್ಟ್ಪಿಲೆನ್ 250 ಬೈಕ್ ನಿಯೋ-ರೆಟ್ರೊ ಸ್ಕ್ರ್ಯಾಂಬ್ಲರ್ ವಿನ್ಯಾಸವನ್ನು ಹೊಂದಿದೆ. ವಿಟ್ಪಿಲೆನ್ 250 ಬೈಕ್ ಕೆಫೆ ರೇಸರ್ ಸ್ಟೈಲಿಂಗ್ ಅನ್ನು ಒಳಗೊಂಡಿದೆ.
ವಿಶೇಷವೆಂದರೆ ಹಸ್ಕ್ವರ್ನಾದ ಸ್ವಾರ್ಟ್ಪಿಲೆನ್ 250 ಹಾಗೂ ವಿಟ್ಪಿಲೆನ್ 250 ಬೈಕ್ಗಳನ್ನು ಕೆಟಿಎಂ ಡ್ಯೂಕ್ 250 ಬೈಕಿನ ಆಧಾರದ ಮೇಲೆ ತಯಾರಿಸಲಾಗಿದೆ. ಈ ಎರಡೂ ಬೈಕ್ಗಳಲ್ಲಿ ಡ್ಯೂಕ್ 250 ಬೈಕಿನಲ್ಲಿರುವಂತಹ ಬಿಡಿಭಾಗ ಹಾಗೂ ಎಂಜಿನ್ಗಳನ್ನು ಅಳವಡಿಸಲಾಗಿದೆ.
MOST READ: ದುಬಾರಿಯಾಯ್ತು ಜನಪ್ರಿಯ ಬಿಎಸ್-6 ಯಮಹಾ ಎಂಟಿ-15 ಬೈಕ್
ಇದರ ಜೊತೆಗೆ ಎರಡು ಬೈಕ್ಗಳು ಕೆಟಿಎಂ ಬೈಕ್ಗಳಂತೆ ವಿಶಿಷ್ಟವಾದ ಡಿಸೈನ್ ಫೀಚರ್ಗಳನ್ನು ಹೊಂದಿವೆ. ಸ್ವಾರ್ಟ್ಪಿಲೆನ್ 250 ಬೈಕ್ ಸ್ಕ್ರಾಂಬ್ಲರ್ನಂತಿದ್ದರೆ, ವಿಟ್ಪಿಲೆನ್ ಕೆಫೆ ರೇಜರ್ ಬೈಕಿನಂತಿದೆ. ಸ್ವಾರ್ಟ್ಪಿಲೆನ್ 250 ಬೈಕಿನಲ್ಲಿ ಡ್ಯುಯಲ್ ಪರ್ಪಸ್ ಟಯರ್ಗಳನ್ನು ಅಳವಡಿಸಲಾಗಿದೆ.
ಹಸ್ಕ್ವರ್ನಾ ಕಂಪನಿಯು ಸ್ವಾರ್ಟ್ಪಿಲೆನ್ 401 ಮತ್ತು ವಿಟ್ಪಿಲೆನ್ 401 ಬೈಕುಗಳನ್ನು ಶೀಘ್ರದಲ್ಲೇ ಭಾರತದಲ್ಲಿ ಬಿಡುಗಡೆಗೊಳಿಸಲಿದೆ. ಈ ಹೊಸ ಹಸ್ಕ್ವರ್ನಾ ಸ್ವಾರ್ಟ್ಪಿಲೆನ್ 401 ಮತ್ತು ವಿಟ್ಪಿಲೆನ್ 401 ಮಾದರಿಗಳು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಬಳಿಕ ಬಜಾಜ ಡೋಮಿನಾರ್ 400 ಮತ್ತು ಬಿಎಂಡಬ್ಲ್ಯು ಜಿ 310 ಆರ್ ಬೈಕುಗಳಿಗೆ ಪೈಪೋಟಿಯನ್ನು ನೀಡುತ್ತದೆ.