ಬಿಡುಗಡೆಯಾಯ್ತು ಹೊಸ ಕವಾಸಕಿ ನಿಂಜಾ 1000 ಎಸ್‌ಎಕ್ಸ್ ಬೈಕ್

ಕವಾಸಕಿ ಕಂಪನಿಯು ತನ್ನ 2021ರ ನಿಂಜಾ 1000 ಎಸ್‌ಎಕ್ಸ್ ಬೈಕನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದೆ. ಈ ಹೊಸ ನಾಲ್ಕನೇ ತಲೆಮಾರಿನ ಕವಾಸಕಿ ನಿಂಜಾ 1000 ಎಸ್‌ಎಕ್ಸ್ ಬೈಕಿನ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.10.79 ಲಕ್ಷಗಳಾಗಿದೆ.

ಬಿಡುಗಡೆಯಾಯ್ತು ಹೊಸ ಕವಾಸಕಿ ನಿಂಜಾ 1000 ಎಸ್‌ಎಕ್ಸ್ ಬೈಕ್

ಕವಾಸಕಿ ನಿಂಜಾ 1000 ಎಸ್‌ಎಕ್ಸ್ ಭಾರತದ ಮೊದಲ ಸ್ಥಳೀಯವಾಗಿ ತಯಾರಿಸಿದ ಪ್ರೀಮಿಯಂ ಸ್ಪೋರ್ಟ್-ಟೂರರ್ ಕೊಡುಗೆಯಾಗಿದೆ. ನವೀಕರಿಸಿದ 2021ರ ನಿಂಜಾ 1000 ಎಸ್‌ಎಕ್ಸ್ ಬೈಕ್ ಅಗ್ರೇಸಿವ್ ಲುಕ್ ಅನ್ನು ಹೊಂದಿದೆ. ಅಲ್ಲದೇ ಈ ಬೈಕಿನಲ್ಲಿ ಹಲವಾರು ಹೊಸ ಫೀಚರ್ ಗಳನ್ನು ಒಳಗೊಂಡಿದೆ. ಕವಾಸಕಿ ಬೈಕುಗಳ ಸರಣಿಯಲ್ಲಿ ಜನಪ್ರಿಯ ಮಾದರಿಗಳಲ್ಲಿ ಒಂದಾಗಿದೆ.

ಬಿಡುಗಡೆಯಾಯ್ತು ಹೊಸ ಕವಾಸಕಿ ನಿಂಜಾ 1000 ಎಸ್‌ಎಕ್ಸ್ ಬೈಕ್

2021ರ ಕವಾಸಕಿ ನಿಂಜಾ 1000 ಎಸ್‌ಎಕ್ಸ್ ಬೈಕ್ ಪುನರ್ನಿರ್ಮಾಸಿದ ಎಕ್ಸಾಸ್ಟ್ ಸಿಸ್ಟಂ ಅನ್ನು ಹೊಂದಿದೆ. ಈ ಹೊಸ ಕವಾಸಕಿ ಬೈಕಿನ ಎರಡೂ ತುದಿಯಲ್ಲಿ ಟ್ವಿನ್-ಎಕ್ಸಾಸ್ಟ್ ಮತ್ತು ಬೈಕಿನ ಬಲಭಾಗದಲ್ಲಿ ಒಂದೇ ಎಕ್ಸಾಸ್ಟ್ ಸಿಸ್ಟಂ ಅನ್ನು ಬದಲಾಯಿಸಿದ್ದಾರೆ.

MOST READ: ಬಿಡುಗಡೆಯಾಯ್ತು ಜನಪ್ರಿಯ ಬಿಎಸ್-6 ಸುಜುಕಿ ಜಿಕ್ಸರ್ 250 ಬೈಕುಗಳು

ಬಿಡುಗಡೆಯಾಯ್ತು ಹೊಸ ಕವಾಸಕಿ ನಿಂಜಾ 1000 ಎಸ್‌ಎಕ್ಸ್ ಬೈಕ್

2021ರ ಕವಾಸಕಿ ನಿಂಜಾ 1000 ಎಸ್‌ಎಕ್ಸ್ ಬೈಕಿನ ಸೈಡ್ ಪ್ಯಾನೆಲ್‌ಗಳು ಮತ್ತು ಸ್ವಲ್ಪ ಪರಿಷ್ಕೃತ ಬೆಲ್ಲಿ ಪ್ಯಾನ್ ಸಹ ಸೇರಿವೆ. ಹೊಸ ನಿಂಜಾ 1000 ಎಸ್‌ಎಕ್ಸ್‌ನಲ್ಲಿ ನವೀಕರಿಸಿದ ಪ್ಯಾನೆಲ್ ಅನ್ನು ಹೊಂದಿದೆ.

ಬಿಡುಗಡೆಯಾಯ್ತು ಹೊಸ ಕವಾಸಕಿ ನಿಂಜಾ 1000 ಎಸ್‌ಎಕ್ಸ್ ಬೈಕ್

ಇನ್ನು ಈ ಹೊಸ ಬೈಕಿನಲ್ಲಿ ಆ್ಯಪ್ ಮೂಲಕ ಸ್ಮಾರ್ಟ್‍ಫೋನ್ ಸಂಪರ್ಕದೊಂದಿಗೆ ಹೊಸ 4.3-ಇಂಚಿನ ಟಿಎಫ್ಟಿ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಅನ್ನು ಹೊಂದಿದೆ. ಈ ಬೈಕಿನಲ್ಲಿ ಎಲ್ಇಡಿ ಲೈಟಿಂಗ್ ಅನ್ನು ಹೊಂದಿದೆ. ಇನ್ನು ಹೊಸ ನಿಂಜಾ 1000 ಎಸ್‌ಎಕ್ಸ್ ಬೈಕ್ 4-ಹಂತದ ಹೊಂದಾಣಿಕೆಯೊಂದಿಗೆ ವಿಂಡ್‌ಸ್ಕ್ರೀನ್ ಅನ್ನು ಹೊಂದಿದೆ.

MOST READ: ಹೊಸ ಬಿಎಂಡಬ್ಲ್ಯೂ ಆರ್ 18 ಕ್ರೂಸರ್ ಬೈಕ್ ಖರೀದಿಗೆ ಬುಕ್ಕಿಂಗ್ ಆರಂಭ

ಬಿಡುಗಡೆಯಾಯ್ತು ಹೊಸ ಕವಾಸಕಿ ನಿಂಜಾ 1000 ಎಸ್‌ಎಕ್ಸ್ ಬೈಕ್

2021ರ ಕವಾಸಕಿ ನಿಂಜಾ 1000 ಎಸ್‌ಎಕ್ಸ್ ಬೈಕಿನ ರೈಡರ್ ಮತ್ತು ಪಿಲಿಯನ್ ಎರಡಕ್ಕೂ ನವೀಕರಿಸಿದ ಎರ್ಗಾನೊಮಿಕ್ಸ್ ಒಳಗೊಂಡಿದೆ. ರೈಡರ್ ಮತ್ತು ಪಿಲಿಯನ್ ಸೀಟುಗಳು ದಪ್ಪವಿದೆ. ರೈಡರ್ ಸೀಟನ್ನು ಮೊದಲಗಿಂತಲೂ ಅಗಲವಾಗಿದೆ.

ಬಿಡುಗಡೆಯಾಯ್ತು ಹೊಸ ಕವಾಸಕಿ ನಿಂಜಾ 1000 ಎಸ್‌ಎಕ್ಸ್ ಬೈಕ್

ಹೊಸ ಕವಾಸಕಿ ನಿಂಜಾ 1000 ಎಸ್‌ಎಕ್ಸ್ ಬೈಕಿನಲ್ಲಿ 1,043 ಸಿಸಿ ಲಿಕ್ವಿಡ್-ಕೂಲ್ಡ್ ಇನ್-ಲೈನ್ ನಾಲ್ಕು ಸಿಲಿಂಡರ್ ಎಂಜಿನ್‌ ಅನ್ನು ಹೊಂದಿದೆ. ಈ ಎಂಜಿನ್ 10,000 ಆರ್‍ಪಿಎಂನಲ್ಲಿ 140 ಬಿಹೆಚ್‍ಪಿ ಪವರ್ ಮತ್ತು 8,000 ಆರ್‍ಪಿಎಂನಲ್ಲಿ 111 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ಅನ್ನು ಆರು-ಸ್ಪೀಡ್ ಗೇರ್‌ಬಾಕ್ಸ್‌ಗೆ ಜೋಡಿಸಲಾಗಿದೆ.

MOST READ: ಬಹಿರಂಗವಾಯ್ತು ಬಿಎಸ್-6 ಹೀರೋ ಎಕ್ಸ್‌ಪಲ್ಸ್ 200 ಬೈಕಿನ ಮಾಹಿತಿ

ಬಿಡುಗಡೆಯಾಯ್ತು ಹೊಸ ಕವಾಸಕಿ ನಿಂಜಾ 1000 ಎಸ್‌ಎಕ್ಸ್ ಬೈಕ್

ಮೇಲಿನ ಬದಲಾವಣೆಗಳು ಮತ್ತು ನವೀಕರಣಗಳ ಹೊರತಾಗಿ, ಹೊಸ ಕವಾಸಕಿ ನಿಂಜಾ 1000 ಎಸ್‌ಎಕ್ಸ್ ಸಹ ಹೊಸ ಎಲೆಕ್ಟ್ರಾನಿಕ್ಸ್‌ ಆಯ್ಜೆಯನ್ನು ಹೊಂದಿದೆ. ಇದರಲ್ಲಿ ಎಲೆಕ್ಟ್ರಾನಿಕ್ ಥ್ರೊಟಲ್, ಎಲೆಕ್ಟ್ರಾನಿಕ್ ಕ್ರೂಸ್ ಕಂಟ್ರೋಲ್, ಕ್ವಿಕ್-ಶಿಫ್ಟರ್, ಕಾರ್ನರಿಂಗ್ ಮ್ಯಾನೇಜ್ಮೆಂಟ್ ಫಂಕ್ಷನ್, ಇಂಟೆಲಿಜೆಂಟ್ ಆಂಟಿ-ಲಾಕ್ ಬ್ರೇಕ್ ಸಿಸ್ಟಂ, ಮಲ್ಟಿಪಲ್ ರೈಡಿಂಗ್ ಮೋಡ್ ಮತ್ತು 3-ಹಂತದ ಟ್ರಾಕ್ಷನ್ ಸಿಸ್ಟಂ ಒಳಗೊಂಡಿದೆ.

ಬಿಡುಗಡೆಯಾಯ್ತು ಹೊಸ ಕವಾಸಕಿ ನಿಂಜಾ 1000 ಎಸ್‌ಎಕ್ಸ್ ಬೈಕ್

2021ರ ಕವಾಸಕಿ ನಿಂಜಾ 1000 ಎಸ್‌ಎಕ್ಸ್ ಬೈಕ್ ಮೆಟಾಲಿಕ್ ಗ್ರ್ಯಾಫೈಟ್ ಗ್ರೇ/ಮೆಟಾಲಿಕ್ ಡಯಾಬ್ಲೊ ಬ್ಲ್ಯಾಕ್ ಮತ್ತು ಎಮರಾಲ್ಡ್ ಗ್ರೀನ್, ಲೋಹೀಯ ಕಾರ್ಬನ್ ಗ್ರೇ ಎಂಬ ಎರಡು ಬಣ್ಣಗಳ ಆಯ್ಕೆಯನ್ನು ಹೊಂದಿದೆ. ಕವಾಸಕಿ ನಿಂಜಾ 1000 ಎಸ್‌ಎಕ್ಸ್ ಭಾರತದ ಮೊದಲ ಸ್ಥಳೀಯವಾಗಿ ತಯಾರಿಸಿದ ಪ್ರೀಮಿಯಂ ಸ್ಪೋರ್ಟ್-ಟೂರರ್ ಮಾದರಿಯಾಗಿದೆ.

Most Read Articles

Kannada
English summary
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X