Just In
- 12 hrs ago ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- 13 hrs ago Suzuki Access Electric: ಸುಜುಕಿ ಆಕ್ಸೆಸ್ ಎಲೆಕ್ಟ್ರಿಕ್ ಸ್ಕೂಟರ್ ಈ ವರ್ಷ ಬಿಡುಗಡೆ ಸಾಧ್ಯತೆ!
- 14 hrs ago Royal Enfield Himalayan ಸುಲಭವಾಗಿ ಖರೀದಿಸುವುದು ಹೇಗೆ?: ಇಲ್ಲಿದೆ ಡೌನ್ಪೇಮೆಂಟ್, EMI ಮಾಹಿತಿಗಳು!
- 14 hrs ago ಮಿಂಚಿನ ವೇಗಕ್ಕೆ ಸರಿಸಾಟಿಯಾಗಿ ಬೆಂಗಳೂರಿನ ಹೊಸ ಅಲ್ಟ್ರಾವೈಲೆಟ್ ಬೈಕ್ ಬಿಡುಗಡೆ: 323KM ರೇಂಜ್
Don't Miss!
- News ರಾಜ್ಯದ ವಿವಿಧೆಡೆ ಮಳೆರಾಯನ ಆರ್ಭಟ; ಕರ್ನಾಟಕದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ಎಷ್ಟು ? ಇಲ್ಲಿದೆ ಸಂಪೂರ್ಣ ವಿವರ
- Sports 'ಟಿ20 ವಿಶ್ವಕಪ್ಗೆ ಈತನನ್ನು ಆಯ್ಕೆ ಮಾಡಿ'; ಅಜಿತ್ ಅಗರ್ಕರ್ಗೆ ಬಂತು ದೊಡ್ಡ ಮನವಿ!
- Finance ಡಾ. ರಾಜ್ಕುಮಾರ್ ಜನ್ಮದಿನದಂದು ಹೊಸ ಉದ್ಯಮ ಆರಂಭಿಸಿದ ಅಶ್ವಿನಿ ಪುನೀತ್ ರಾಜ್ಕುಮಾರ್
- Lifestyle ಮಲೆನಾಡ ಶೈಲಿನ ಮೃದುವಾದ ಕಡುಬು ಮಾಡೋದು ಹೇಗೆ.? ಸಿಂಪಲ್ ತಿಂಡಿ ರೆಸಿಪಿ
- Movies ನೀಲಿ ಪ್ರಪಂಚದ ಕರಾಳ ಸತ್ಯವನ್ನ ಹೇಳಿದ ಲಾನಾ ರೋಡ್ಸ್
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬಿಡುಗಡೆಯಾಯ್ತು ಹೊಸ ಕವಸಾಕಿ ನಿಂಜಾ ಝಡ್ ಎಕ್ಸ್ 25ಆರ್ ಬೈಕ್
ಕವಾಸಕಿ ಕಂಪನಿಯು ತನ್ನ ನಿಂಜಾ ಝಡ್ ಎಕ್ಸ್ 25ಆರ್ ಬೈಕನ್ನು ಇಂಡೋನೇಷ್ಯಾದಲ್ಲಿ ಬಿಡುಗಡೆಗೊಳಿಸಿದೆ. ಈ ಹೊಸ ಕವಾಸಕಿ ನಿಂಜಾ ಝಡ್ಎಕ್ಸ್ 25ಆರ್ ಇನ್-ಲೈನ್ ನಾಲ್ಕು ಸಿಲಿಂಡರ್ ಎಂಜಿನ್ ಅನ್ನು ಹೊಂದಿರುವ ಪವರ್ ಫುಲ್ ಬೈಕ್ ಆಗಿದೆ.
ಕವಾಸಕಿ ಕಂಪನಿಯು ನಿಂಜಾ ಝಡ್ಎಕ್ಸ್ 25ಆರ್ ಬೈಕಿನ ವಿತರಣೆಯನ್ನು ಈ ವರ್ಷದ ಡಿಸೆಂಬರ್ ತಿಂಗಳಲ್ಲಿ ಪ್ರಾರಂಭಿಸಬಹುದು ಎಂದು ನಿರೀಕ್ಷಿಸುತ್ತೇವೆ. ಈ ನಾಲ್ಕು ಸಿಲಿಂಡರ್, ಕ್ವಾರ್ಟರ್-ಲೀಟರ್ ಸ್ಪೋರ್ಟ್ಬೈಕ್ ಅನ್ನು ಇಂಡೋನೇಷ್ಯಾದ ಮಾರುಕಟ್ಟೆಗಾಗಿ ಆಕರ್ಷಕವಾಗಿ ವಿನ್ಯಾಸಗೊಳಿಸಲಾಗಿದೆ. ಈ ಝಡ್ಎಕ್ಸ್ 25ಆರ್ ಬೈಕನ್ನು ನ್ಯೂಜಿಲೆಂಡ್ನಲ್ಲಿ ಕವಾಸಕಿ ಕಂಪನಿಯು ಇತ್ತೀಚೆಗೆ ಬಿಡುಗಡೆಗೊಳಿಸಿತ್ತು. ಆದರೆ ಕರೋನಾ ಸೋಂಕಿನ ಭೀತಿಯಿಂದಾಗಿ ಝಡ್ಎಕ್ಸ್ 25ಆರ್ ಬೈಕನ್ನು ಇಂಡೋನೇಷ್ಯಾದಲ್ಲಿ ತಡವಾಗಿ ಬಿಡುಗಡೆಗೊಳಿಸಿದೆ
ಈ ಹೊಸ ಕವಾಸಕಿ ನಿಂಜಾ ಝಡ್ಎಕ್ಸ್ 25ಆರ್ ಬೈಕಿನ ಆರಂಭಿಕ ಬೆಲೆಯು ರೂ.5.08 ಲಕ್ಷಗಳಾಗಿದೆ. ಇನ್ನು ಈ ಬೈಕಿನ ಎಬಿಎಸ್ ರೂಪಾಂತರದ ಬೆಲೆಯು ರೂ.5.87 ಲಕ್ಷಗಳಾಗಿದೆ.
MOST READ: ಬಿಡುಗಡೆಯಾಯ್ತು ಬಹುನಿರೀಕ್ಷಿತ ಹೊಸ ಹೋಂಡಾ ಎಕ್ಸ್-ಬ್ಲೇಡ್ ಬೈಕ್
ಕವಾಸಕಿ ಕಂಪನಿಯು 2019ರ ಟೋಕಿಯೊ ಮೋಟಾರ್ ಶೋನಲ್ಲಿ ಸಂಪೂರ್ಣ ಫೇರ್ಡ್ ಕವಾಸಕಿ ಝಡ್ಎಕ್ಸ್ 25ಆರ್ ಬೈಕನ್ನು ಮೊದಲ ಬಾರಿಗೆ ಪ್ರದರ್ಶಿಸಿತ್ತು. ಈ ಬೈಕ್ ತನ್ನ ಆಗ್ರೆಸಿವ್ ಸ್ಟೈಲಿಂಗ್ ಮತ್ತು ಇನ್-ಲೈನ್ ನಾಲ್ಕು ಎಂಜಿನ್ ನಿಂದ ಗ್ರಾಹಕರ ಗಮನಸೆಳೆಯಿತು.
ಕವಾಸಕಿ ನಿಂಜಾ ಝಡ್ಎಕ್ಸ್ 25ಆರ್ ಬೈಕ್ 249 ಸಿಸಿ, ಲಿಕ್ವಿಡ್-ಕೂಲ್ಡ್, ಇನ್-ಲೈನ್ ನಾಲ್ಕು ಸಿಲಿಂಡರ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ ಸುಮಾರು 41.4 ಬಿಹೆಚ್ಪಿ ಪವರ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ 6 ಸ್ಪೀಡ್ ಗೇರ್ಬಾಕ್ಸ್ ಅನ್ನು ಅಳವಡಿಸಲಾಗಿದೆ. ಇದರೊಂದಿಗೆ ಸ್ಲಿಪ್ಪರ್ ಅಸಿಸ್ಟ್ ಕ್ಲಚ್ ಮತ್ತು ಕ್ವಿಕ್ಶಿಫ್ಟರ್ ಸಿಸ್ಟಂ ಅನ್ನು ಅಳವಡಿಸಲಾಗಿದೆ.
MOST READ: ಭಾರತಕ್ಕೆ ಲಗ್ಗೆ ಇಡಲಿದೆ ಜನಪ್ರಿಯ ಟ್ರಯಂಫ್ ಸ್ಟ್ರೀಟ್ ಟ್ರಿಪಲ್ ಆರ್ ಬೈಕ್
ಕವಾಸಕಿ ನಿಂಜಾ ಝಡ್ಎಕ್ಸ್ 25ಆರ್ ಟ್ವಿನ್ ಪಾಡ್ ಹೆಡ್ ಲ್ಯಾಂಪ್, ಫುಲ್ ಫೇರಿಂಗ್ ಮತ್ತು ಡ್ಯುಯಲ್ ಟೋನ್ ಬಣ್ಣದ ಆಯ್ಕೆಯನ್ನು ಹೊಂದಿದೆ. ಈ ಬೈಕ್ ಮಸ್ಕ್ಯುಲರ್ ಟ್ಯಾಂಕ್, ಅಂಡರ್ಬೆಲ್ಲಿ ಎಕ್ಸಾಸ್ಟ್ ಮತ್ತು ಕಡಿಮೆ ಸೆಟ್ ಕ್ಲಿಪ್-ಆನ್ ಹ್ಯಾಂಡಲ್ಬಾರ್ ಅನ್ನು ಹೊಂದಿದೆ.
ಈ ಬೈಕಿನ ಮುಂಭಾಗದಲ್ಲಿ 37 ಎಂಎಂ ಅಪ್ಸೈಡ್-ಡೌನ್ ಶೋವಾ ಪ್ರತ್ಯೇಕ ಫಂಕ್ಷನ್ ಫೋರ್ಕ್ ಅನ್ನು ಹೊಂದಿದೆ. ಈ ಬೈಕಿನ ಹಿಂಭಾಗದಲ್ಲಿ ಬ್ಯಾಕ್-ಲಿಂಕ್ ಸಂಸೆಕ್ಷನ್ ಅನ್ನು ಹೊಂದಿದೆ. ಈ ಬೈಕಿನಲ್ಲಿ ಸುರಕ್ಷತೆಗಾಗಿ ಮುಂಭಾಗ ಮತ್ತು ಹಿಂಭಾಗದ ಟಯರುಗಳಲ್ಲಿ ಡಿಸ್ಕ್ ಬ್ರೇಕ್ ಗಳನ್ನು ಅಳವಡಿಸಲಾಗಿದೆ.
MOST READ: ಬಹಿರಂಗವಾಯ್ತು ಬಿಎಸ್-6 ಹೀರೋ ಎಕ್ಸ್ಪಲ್ಸ್ 200 ಬೈಕಿನ ಮಾಹಿತಿ
ಕವಾಸಕಿ ಝಡ್ಎಕ್ಸ್ 25ಆರ್ ಬೈಕಿನಲ್ಲಿ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಅನ್ನು ಅಳವಡಿಸಲಾಗಿದೆ. ಇದರೊಂದಿಗೆ ಅನಲಾಗ್ ಟ್ಯಾಕೋಮೀಟರ್ ಮತ್ತು ಸೆಮಿ ಡಿಜೆಟಲ್ ಯುನಿಟ್ ಸಿಸ್ಟಂ ಅನ್ನು ಹೊಂದಿರಲಿದೆ. ಕವಾಸಕಿ ಝಡ್ಎಕ್ಸ್ 25ಆರ್ ಎಲೆಕ್ತ್ರಾನಿಕ್ ರೈಡರ್ ಅನ್ನು ಕೂಡ ಒಳಗೊಂಡಿದೆ. ಇವುಗಳೊಂದಿಗೆ ಡ್ಯುಯಲ್ ಚಾನೆಲ್ ಎಬಿಎಸ್ ಮತ್ತು ಟ್ರ್ಯಾಕ್ಷನ್ ಕಂಟ್ರೋಲ್ ಅನ್ನು ಹೊಂದಿದೆ.
ಹೊಸ ಕವಾಸಕಿ ನಿಂಜಾ ಝಡ್ಎಕ್ಸ್ 25ಆರ್ ಬೈಕ್ ಭಾರತದಲ್ಲಿ ಬಿಡುಗಡೆಯಾದ ಬಳಿಕ ಹೋಂಡಾ ಸಿಬಿಆರ್ 250 ಆರ್ಆರ್ ಬೈಕಿಗೆ ನೇರ ಪೈಪೋಟಿಯನ್ನು ನೀಡುತ್ತದೆ. ಈ ಎರಡು ಬೈಕುಗಳು ಉತ್ತಮ ಕಾರ್ಯಕ್ಷಮತೆಯನ್ನು ಹೊಂದಿರುವುದರಿಂದ ಪ್ರಬಲ ಪೈಪೋಟಿಯನ್ನು ನೀಡುತ್ತದೆ.