ಬಿಡುಗಡೆಯಾಯ್ತು ಬಿಎಸ್-6 ಕವಾಸಕಿ ವರ್ಸಿಸ್ 650 ಬೈಕ್
ಕವಾಸಕಿ ಇಂಡಿಯಾ ಮೋಟಾರ್‌ಸೈಕಲ್ ಸದ್ದಿಲ್ಲದೇ ತನ್ನ ಹೊಸ ವರ್ಸಿಸ್ 650 ಬೈಕನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದೆ. ಈ ಬಿಎಸ್-6 ಕವಾಸಕಿ ವರ್ಸಿಸ್ 650 ಬೈಕಿನ ಬೆಲೆಯು ರೂ.6.79 ಲಕ್ಷಗಳಾಗಿದೆ.

ಹೊಸ ಕವಾಸಕಿ ವರ್ಸಿಸ್ 650 ಬೈಕಿನ ಬೆಲೆಯು ಹಿಂದಿನ ಬಿಎಸ್-4 ಮಾದರಿಗೆ ಹೋಲಿಸಿದರೆ ಕೇವಲ ರೂ.10,000 ಹೆಚ್ಚಾಗಿದೆ. ಕವಾಸಕಿ ನಿಂಜಾ 650 ಮತ್ತು ಝಡ್650 ಬೈಕುಗಳ ನಂತರ 650 ಸಿಸಿ ವಿಭಾಗದಲ್ಲಿ ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸಿ ಬಿಡುಗಡೆಗೊಂಡ ಮೂರನೇ ಬೈಕ್ ಇದಾಗಿದೆ. 2020ರ ಕವಾಸಕಿ ವರ್ಸಿಸ್ 650 ಜಪಾನಿನ ಬ್ರಾಂಡ್‌ನ ಪೋರ್ಟ್ಫೋಲಿಯೊದಲ್ಲಿ ಅತ್ಯಂತ ಉತ್ತಮ ಅಡ್ವೆಂಚರ್ ಮಾದರಿಯಾಗಿದೆ.

ಈ ಹೊಸ 2020ರ ಕವಾಸಕಿ ವರ್ಸಿಸ್ 650 ಬೈಕಿನಲ್ಲಿ 649 ಸಿಸಿ, ಲಿಕ್ವಿಡ್-ಕೂಲ್ಡ್ ಪ್ಯಾರಲಲ್-ಟ್ವಿನ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 8500 ಆರ್‌ಪಿಎಂನಲ್ಲಿ 65 ಬಿಹೆಚ್‌ಪಿ ಪವರ್ ಮತ್ತು 7000 ಆರ್‌ಪಿಎಂನಲ್ಲಿ 61 ಎನ್‌ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ 6-ಸ್ಪೀಡ್ ಗೇರ್‌ಬಾಕ್ಸ್ ಅನ್ನು ಜೋಡಿಸಲಾಗಿದೆ.
MOST READ: ಬಿಡುಗಡೆಯಾಯ್ತು ಬಹುನಿರೀಕ್ಷಿತ ಹೊಸ ಹೋಂಡಾ ಎಕ್ಸ್-ಬ್ಲೇಡ್ ಬೈಕ್

ಕವಾಸಕಿ ವರ್ಸಿಸ್ 650 ಬಿಎಸ್-4 ಮಾದರಿಯು 8500 ಆರ್‌ಪಿಎಂನಲ್ಲಿ 68 ಬಿಹೆಚ್‌ಪಿ ಪವರ್ ಮತ್ತು 7000 ಆರ್‌ಪಿಎಂನಲ್ಲಿ 64 ಎನ್‌ಎಂ ಪೀಕ್ ಟಾರ್ಕ್ ಅನ್ನು ಉತ್ಪಾದಿಸುತ್ತಿತ್ತು. ಇಂದಿನ ಮಾದರಿಗೆ ಹೋಲಿಸಿದರೆ ಬಿಹೆಚ್‍ಪಿ ಪವರ್ ಮತ್ತು ಟಾರ್ಕ್ ಅಂಕಿ ಅಂಶಗಳು ಕಡಿಮೆಯಾಗಿದೆ.

ಇನ್ನು ಹೊಸ ವರ್ಸಿಸ್ 650 ಬೈಕಿನಲ್ಲಿ ನಿಂಜಾ 650 ಮಾದರಿಯಲ್ಲಿರುವಂತಹ ಎಲ್ಇಡಿ ಹೆಡ್‌ಲೈಟ್‌ಗಳು ಮತ್ತು ಬ್ಲೂಟೂತ್ ಕನೆಕ್ಟಿವಿಟಿ ಕಲರ್ ಟಿಎಫ್‌ಟಿ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ನಂತಹ ಫೀಚರ್ ಗಳನ್ನು ನೀಡಲಾಗಿಲ್ಲ.
MOST READ: ಬಿಡುಗಡೆಯ ಸನಿಹದಲ್ಲಿ ಬಹುನಿರೀಕ್ಷಿತ ಬಿಎಸ್-6 ಹೀರೋ ಬೈಕುಗಳು

ಇನ್ನು 2020ರ ಕವಾಸಕಿ ವರ್ಸಿಸ್ 650 ಬೈಕಿನಲ್ಲಿ ಸಸ್ಪೆಂಕ್ಷನ್ ಗಾಗಿ ಮುಂಭಾಗದಲ್ಲಿ 41 ಎಂಎಂ ಯುಎಸ್ಡಿ ಫೋರ್ಕ್ಸ್ ಮತ್ತು ಹಿಂಭಾಗದಲ್ಲಿ 145 ಎಂಎಂ ಆಫ್ಸೆಟ್ ಲೇಡೌನ್ ಮೊನೊಶಾಕ್ ಸೆಟಪ್ ಅನ್ನು ಅಳವಡಿಸಲಾಗಿದೆ.

ಇನ್ನು ಈ ಹೊಸ ಕವಾಸಕಿ ವರ್ಸಿಸ್ 650 ಬೈಕಿನ ಬ್ರೇಕಿಂಗ್ ಸಿಸ್ಟಂ ಬಗ್ಗೆ ಹೇಳುವುದಾದರೆ 300 ಎಂಎಂ ಪೆಟಲ್ ಡಿಸ್ಕ್ ಮತ್ತು ಡ್ಯುಯಲ್-ಪಿಸ್ಟನ್ ಕ್ಯಾಲಿಪರ್‌ಗಳನ್ನು ನೀಡಲಾಗಿದೆ. ಹಿಂಭಾಗದಲ್ಲಿ ಸಿಂಗಲ್-ಪಿಸ್ಟನ್ ಕ್ಯಾಲಿಪರ್‌ನೊಂದಿಗೆ 250 ಎಂಎಂ ಪೆಟಲ್ ಡಿಸ್ಕ್ ಬ್ರೇಕ್ ಅಳವಡಿಸಲಾಗಿದೆ.
MOST READ: ಬಿಡುಗಡೆಯಾಯ್ತು ಹೊಸ ಟಿವಿಎಸ್ ಜೆಸ್ಟ್ 110 ಸ್ಕೂಟರ್

ಇನ್ನು ಈ ಹೊಸ ಕವಾಸಕಿ ವರ್ಸಿಸ್ 650 ಬೈಕಿನಲ್ಲಿ 17 ಇಂಚಿನ ಅಲಾಯ್ ವ್ಹೀಲ್ ಅನ್ನು ಅಳವಡಿಸಲಾಗಿದೆ. ಈ ಬೈಕಿನ ಎಂಜಿನ್ ಅನ್ನು ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸುವುದನ್ನು ಹೊರತುಪಡಿಸಿ ಇತರ ಪ್ರಮುಖ ಯಾವುದೇ ಬದಲಾವಣೆಗಳನ್ನು ಮಾಡಲಾಗಿಲ್ಲ.

ಕವಾಸಕಿ ಕಂಪನಿಯು ತನ್ನ ಜನಪ್ರಿಯ ಮಾದರಿಗಳನು ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸಿ ಬಿಡುಗಡೆಗೊಳಿಸಲಾಗುತ್ತಿದೆ. ಕವಾಸಕಿ ಕಂಪನಿಯು ಭಾರತೀಯ ಮಾರುಕಟ್ಟೆಯಲ್ಲಿ ಪಾರುಪತ್ಯ ಸಾಧಿಸಲು ಪ್ರಯತ್ನಿಸುತ್ತಿದೆ.


Click it and Unblock the Notifications