ಮೊದಲ ಬಾರಿಗೆ ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಕವಾಸಕಿ ಡಬ್ಲ್ಯು175 ಬೈಕ್

ಭಾರತದಲ್ಲಿ ರೆಟ್ರೋ-ಶೈಲಿಯ ಬೈಕುಗಳು ಇತ್ತೀಚಿನ ದಿನಗಳಲ್ಲಿ ಸಾಕಷ್ಟು ಜನಪ್ರಿಯತೆ ಗಳಿಸುತ್ತಿವೆ. ಭಾರತೀಯ ಮಾರುಕಟ್ಟೆಯ ರೆಟ್ರೋ-ಶೈಲಿಯ ವಿಭಾಗದಲ್ಲಿ ರಾಯಲ್ ಎನ್‌ಫೀಲ್ಡ್ ಬೈಕುಗಳು ಹಲವು ದಶಕಗಳಿಂದ ಪಾರುಪತ್ಯ ಸಾಧಿಸುತ್ತಿದೆ.

ಮೊದಲ ಬಾರಿಗೆ ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಕವಾಸಕಿ ಡಬ್ಲ್ಯು 175 ಬೈಕ್

ಭಾರತೀಯ ಮಾರುಕಟ್ಟೆಯಲ್ಲಿ ರಾಯಲ್ ಎನ್‌ಫೀಲ್ಡ್ ಬೈಕುಗಳಿಗೆ ಜಾವಾ ಬೈಕುಗಳು ಪ್ರಬಲ ಪೈಪೋಟಿಯನ್ನು ನೀಡುತ್ತದೆ. ಇತ್ತೀಚೆಗೆ ಹೋಂಡಾ ರಾಯಲ್ ಎನ್‌ಫೀಲ್ಡ್ ಬೈಕುಗಳಿಗೆ ಪೈಪೋಟಿ ನೀಡಲು ಹೈನೆಸ್ ಸಿಬಿ350 ಅನ್ನು ಬಿಡುಗಡೆಗೊಳಿಸಿತ್ತು. ಇನ್ನು ಕವಾಸಕಿ ಕಂಪನಿಯು ‘ಡಬ್ಲ್ಯು' ಸರಣಿಯ ಸುಂದರವಾದ ರೆಟ್ರೊ-ಶೈಲಿಯ ಬೈಕುಗಳನ್ನು ಒಳಗೊಂಡಿದೆ. ಈ ಸರಣಿಯ ಬೈಕುಗಳ ಎಂಜಿನ್‌ಗಳು 175 ಸಿಸಿ ಯಿಂದ 800 ಸಿಸಿ ವರೆಗೆ ಸಾಮರ್ಥ್ಯ ಹೊಂದಿವೆ.

ಮೊದಲ ಬಾರಿಗೆ ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಕವಾಸಕಿ ಡಬ್ಲ್ಯು 175 ಬೈಕ್

ಜಪಾನಿನ ತಯಾರಕರು ಮುಂದಿನ ವರ್ಷ ಭಾರತದಲ್ಲಿ ಈ ಸರಣಿಯ ಡಬ್ಲ್ಯು175 ಎಂಬ ಅತ್ಯಂತ ಚಿಕ್ಕ ಮಾದರಿಯನ್ನು ಬಿಡುಗಡೆಗೊಳಿಸಲಿದೆ ಎಂದು ನಾವು ವರದಿಯನ್ನು ಈ ಹಿಂದೆ ಪ್ರಕಟಸಿದ್ದೇವೆ. ಇದೀಗ ಮೊದಲ ಬಾರಿ ಭಾರತದಲ್ಲಿ ಕವಾಸಕಿ ಡಬ್ಲ್ಯು 175 ಬೈಕ್ ಸ್ಪಾಟ್ ಟೆಸ್ಟ್ ಅನ್ನು ನಡಿಸಿದೆ.

MOST READ: ಹೊಸ ಬಣ್ಣದ ಆಯ್ಕೆಯನ್ನು ಪಡೆದುಕೊಂಡ 2021ರ ಕವಾಸಕಿ ನಿಂಜಾ 1000 ಎಸ್‌ಎಕ್ಸ್ ಬೈಕ್

ಮೊದಲ ಬಾರಿಗೆ ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಕವಾಸಕಿ ಡಬ್ಲ್ಯು 175 ಬೈಕ್

ಈ ಹೊಸ ಕವಾಸಕಿ ಡಬ್ಲ್ಯು 175 ಬೈಕ್ ಸ್ಪಾಟ್ ಟೆಸ್ಟ್ ನಡೆಸುತ್ತಿರುವ ಸ್ಪೈ ಚಿತ್ರಗಳು ಬಹಿರಂಗವಾಗಿವೆ. ಇದು ಭಾರತೀಯ ಮಾರುಕಟ್ಟೆಯಲ್ಲಿ ಬ್ರ್ಯಾಂಡ್‌ನ ಅತ್ಯಂತ ಒಳ್ಳೆ ಬೈಕ್ ಆಗಿರುತ್ತದೆ. ಕವಾಸಕಿ ಡಬ್ಲ್ಯು 175 ಬೈಕ್ ಈಗಾಗಲೇ ಥೈಲ್ಯಾಂಡ್ ಮತ್ತು ಇಂಡೋನೇಷ್ಯಾದಂತಹ ಕೆಲವು ಅಂತರರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಮಾರಾಟದಲ್ಲಿದೆ,

ಮೊದಲ ಬಾರಿಗೆ ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಕವಾಸಕಿ ಡಬ್ಲ್ಯು 175 ಬೈಕ್

ಈ ಬೈಕನ್ನು ಭಾರತಕ್ಕೆ ಸಿಕೆಡಿ ಮಾರ್ಗಗಳ ಮೂಲಕ ತರಲಾಗುತ್ತದೆ ಎಂದು ನಾವು ನಿರೀಕ್ಷಿಸುತ್ತೇವೆ, ಭಾರತದಲ್ಲಿ ಬೈಕು ಜೋಡಿಸುವುದು ಕವಾಸಕಿ ಕಂಪನಿಯ ವೆಚ್ಚವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಈ ಹೊಸ ಕವಾಸಕಿ ಡಬ್ಲ್ಯು175 ಬೈಕಿಗೆ ಸ್ಪರ್ಧಾತ್ಮಕವಾಗಿ ಬೆಲೆಯನ್ನು ನಿಗದಿಪಡಿಸಬಹುದು.

MOST READ: ಬಿಡುಗಡೆಯಾಯ್ತು ಹೊಸ ಕವಾಸಕಿ ವಲ್ಕನ್ ಎಸ್ ಬೈಕ್

ಮೊದಲ ಬಾರಿಗೆ ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಕವಾಸಕಿ ಡಬ್ಲ್ಯು 175 ಬೈಕ್

ಕವಾಸಕಿ ಡಬ್ಲ್ಯು 175 ಬೈಕನ್ನು ಸ್ಪರ್ಧಾತ್ಮಕವಾಗಿ ಬೆಲೆಯಲ್ಲಿ ಬಿಡುಗಡೆಗೊಳಿಸಿದರೆ ಹೆಚ್ಚಿನ ರೆಟ್ರೋ ಶೈಲಿ ಬೈಕು ಪ್ರಿಯರನ್ನು ಸೆಳಯಬಹುದು ಎಂದು ನಿರೀಕ್ಷಿಸುತ್ತೇವೆ. ಹೊಸ ಕವಾಸಕಿ ಡಬ್ಲ್ಯು175 ಬೈಕಿನಲ್ಲಿ 177 ಸಿಸಿ, ಏರ್-ಕೂಲ್ಡ್, ಎಸ್‌ಒಹೆಚ್‌ಸಿ ಎಂಜಿನ್ ಅನ್ನು ಅಳವಡಿಸಲಾಗಿದೆ.

ಕ್ಲಾಸಿಕ್ ಬೈಕ್ ಪ್ರಿಯರಿಗಾಗಿ ಬಿಡುಗಡೆಯಾದ ರಾಯಲ್ ಎನ್‌ಫೀಲ್ಡ್ ಹೊಸ ಮಿಟಿಯೊರ್ 350 ಹೇಗಿದೆ? ಈ ವಿಡಿಯೋ ನೋಡಿ..

ಈ ಎಂಜಿನ್ 12.9 ಬಿಹೆಚ್‍ಪಿ ಪವರ್ ಮತ್ತು 13.2 ಎನ್ಎಂ ಪೀಕ್ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ಅನ್ನು 5-ಸ್ಪೀಡ್ ಗೇರ್‌ಬಾಕ್ಸ್‌ಗೆ ಜೋಡಿಸಲಾಗಿದೆ. ಪವರ್ ಅಂಕಿಅಂಶಗಳು ಹೆಚ್ಚು ಪ್ರಭಾವಶಾಲಿಯಾಗಿಲ್ಲ, ಆದರೆ ಬೈಕು ಸಾಕಷ್ಟು ಹಗುರವಾಗಿರುತ್ತದೆ ಮತ್ತು ಆಕರ್ಷಕವಾಗಿದೆ.

ಮೊದಲ ಬಾರಿಗೆ ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಕವಾಸಕಿ ಡಬ್ಲ್ಯು 175 ಬೈಕ್

ಈ ಡಬ್ಲ್ಯು175 ಬೈಕ್ ಫ್ಯೂಯಲ್ ಇಂಜೆಕ್ಷನ್ ಅನ್ನು ಸೇರಿಸಬಹುದು. ಈ ಬೈಕ್ ಅತ್ಯಂತ ಸರಳವಾದ ವಿನ್ಯಾಸವನ್ನು ಹೊಂದಿದೆ. ಈ ಬೈಕಿನಲ್ಲಿ ರೌಂಡ್ ಹೆಡ್‌ಲ್ಯಾಂಪ್, ಟಿಯರ್‌ಡ್ರಾಪ್ ಆಕಾರದ ಫ್ಯೂಯಲ್ ಟ್ಯಾಂಕ್, ವೈರ್-ಸ್ಪೋಕ್ ವ್ಹೀಲ್ಸ್ ಮತ್ತು ಪಿ-ಶೂಟರ್ ಎಕ್ಸಾಸ್ಟ್ ಅನ್ನು ಹೊಂದಿದೆ.

ಮೊದಲ ಬಾರಿಗೆ ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಕವಾಸಕಿ ಡಬ್ಲ್ಯು 175 ಬೈಕ್

ಹೊಸ ಕವಾಸಕಿ ಡಬ್ಲ್ಯು175 ಬೈಕ್ ಫುಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್, ಸ್ಪೀಡೋ, ಓಡೋಮೀಟರ್ ಮತ್ತು ಟ್ರಿಪ್‌ಮೀಟರ್ ಜೊತೆಗೆ ಟೆಲ್-ಟೇಲ್ ಲ್ಯಾಂಪ್ ಅನ್ನು ಹೊಂದಿವೆ. ಈ ಬೈಕಿನಲ್ಲಿ ಸಾಂಪ್ರದಾಯಿಕ ಟೆಲಿಸ್ಕೋಪಿಕ್ ಫೋರ್ಕ್ಸ್ ಮತ್ತು ಡ್ಯುಯಲ್ ರಿಯರ್ ಶಾಕ್ ಅಬ್ಸಾರ್ಬರ್ ಗಳನ್ನು ಸಹ ಪಡೆಯುತ್ತದೆ.

ಮೊದಲ ಬಾರಿಗೆ ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಕವಾಸಕಿ ಡಬ್ಲ್ಯು 175 ಬೈಕ್

ಡ್ರೈವ್‌ಸ್ಪಾರ್ಕ್ ಅಭಿಪ್ರಾಯ

ಹೊಸ ಕವಾಸಕಿ ಡಬ್ಲ್ಯು175 ಬೈಕ್ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಬಳಿಕ ಯಾವುದೇ ನೇರ ಪ್ರತಿಸ್ಪರ್ಧಿಗಳನ್ನು ಹೊಂದಿರುವುದಿಲ್ಲ. ಏಕೆಂದರೆ ಭಾರತದಲ್ಲಿ ರೆಟ್ರೊ-ಶೈಲಿಯ ಬೈಕ್‌ಗಳು 250 ಸಿಸಿಗಿಂತ ಹೆಚ್ಚಾಗಿದೆ. ಈ ಹೊಸ ಕವಾಸಕಿ ಡಬ್ಲ್ಯು175 ಬೈಕನ್ನು ಎಕ್ಸ್ ಶೋರೂಂ ಪ್ರಕಾರ ರೂ.2 ಲಕ್ಷಗಿಂತ ಕಡಿಮೆ ಬೆಲೆಯಲ್ಲಿ ಬಿಡುಗಡೆಗೊಳಿಸಬಹುದು ಎಂದು ನಿರೀಕ್ಷಿಸುತ್ತೇವೆ.

Most Read Articles

Kannada
English summary
Kawasaki W175 Spied On Test In India For The First Time In Kannada. Read In Kannada.
Story first published: Friday, November 20, 2020, 18:23 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X