Just In
Don't Miss!
- News
ಪೊಲೀಸ್ ಠಾಣೆಯಲ್ಲಿ ಬಗೆಹರಿದ ಒಂದು ಕೋಣದ ವಿವಾದ!
- Movies
'ದೀಪ್ ಸಿಧು ಜೊತೆ ನನಗೆ ಯಾವುದೇ ಸಂಬಂಧವಿಲ್ಲ': ಸಂಸದ, ನಟ ಸನ್ನಿ ಡಿಯೋಲ್ ಸ್ಪಷ್ಟನೆ
- Finance
ಬಜೆಟ್ 2021: ಸ್ಟ್ಯಾಂಡರ್ಡ್ ಡಿಡಕ್ಷನ್ ರು. 1 ಲಕ್ಷಕ್ಕೆ ಹೆಚ್ಚಳ ನಿರೀಕ್ಷೆ
- Sports
ಬೈರ್ಸ್ಟೋವ್ಗೆ 2 ಪಂದ್ಯಗಳ ವಿಶ್ರಾಂತಿ ನೀಡಿರುವುದನ್ನು ಸಮರ್ಥಿಸಿದ ಇಂಗ್ಲೆಂಡ್ ಕೋಚ್
- Education
WCD Chitradurga Recruitment 2021: ಅಂಗನವಾಡಿಯಲ್ಲಿ 129 ಹುದ್ದೆಗಳಿಗೆ ಅರ್ಜಿ ಆಹ್ವಾನ
- Lifestyle
ಗರ್ಭಾವಸ್ಥೆಯಲ್ಲಿ ಥೈರಾಯ್ಡ್ ಸಮಸ್ಯೆ: ಇದರ ಅಪಾಯಗಳೇನು, ತಡೆಗಟ್ಟುವುದು ಹೇಗೆ?
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
2021ರ ಕೆಟಿಎಂ 1290 ಸೂಪರ್ ಅಡ್ವೆಂಚರ್ ಬೈಕ್ ಮಾಹಿತಿ ಬಹಿರಂಗ
ಕೆಟಿಎಂ ಕಂಪನಿಯು ತನ್ನ 2021ರ 1290 ಸೂಪರ್ ಅಡ್ವೆಂಚರ್ ಬೈಕನ್ನು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ. ಈ ಹೊಸ ಕೆಟಿಎಂ 1290 ಸೂಪರ್ ಅಡ್ವೆಂಚರ್ ಬೈಕ್ ಕೆಲವು ಹೊಸ ಅಪ್ಡೇಟ್ ಗಳೊಂದಿಗೆ ಮಾರುಕಟ್ಟೆಗೆ ಲಗ್ಗೆ ಇಡಲಿದೆ.

2021ರ ಕೆಟಿಎಂ 1290 ಸೂಪರ್ ಅಡ್ವೆಂಚರ್ ಬೈಕ್ ಸೂಪರ್ ಅಡ್ವೆಂಚರ್ ಆರ್ ಮತ್ತು ಸೂಪರ್ ಅಡ್ವೆಂಚರ್ ಎಸ್ ಎಂಬ ಎರಡು ವೆರಿಯೆಂಟ್ ಗಳಲ್ಲಿ ಬಿಡುಗಡೆಯಾಗಲಿದೆ. ಕೆಟಿಎಂ ತನ್ನ ವೆಬ್‌ಸೈಟ್‌ನಲ್ಲಿ ಹೊಸ 1290 ಸೂಪರ್ ಅಡ್ವೆಂಚರ್ ಬೈಕ್ ಎರಡು ರೂಪಾಂತರಗಳಲ್ಲಿ ಬಿಡುಗಡೆಗೊಳಿಸಲಾಗುವುದು ಎಂದು ಮಾಹಿತಿಯನ್ನು ಬಹಿರಂಗಪಡಿಸಿತ್ತು. ಆದರೆ ನಂತರದಲ್ಲಿ ಅವರು ಆ ಮಾಹಿತಿಯನ್ನು ತೆಗೆದುಹಾಕಲಾಯಿತು.

ಆದರೆ ಈ ಮಾಹಿತಿಯನ್ನು ಸುದ್ದಿಸಂಸ್ಥೆ ಬಹಿರಂಗಪಡಿಸಿದೆ. ವೆಬ್‌ಸೈಟ್ ಪ್ರಕಟಿಸಿದ ಮಾಹಿತಿಯ ಪ್ರಕಾರ, 2021ರ ಕೆಟಿಎಂ ಸೂಪರ್ ಅಡ್ವೆಂಚರ್ ಆರ್ ಮತ್ತು ಸೂಪರ್ ಅಡ್ವೆಂಚರ್ ಎಸ್ ರಾಡಾರ್ ಆಧಾರಿತ ಅಡಾಪ್ಟಿವ್ ಕ್ರೂಸ್ ಕಂಟ್ರೋಲ್ ಸಿಸ್ಟಂ ಅನ್ನು ಪಡೆದುಕೊಳ್ಳಲಿದೆ.
MOST READ: ಬಿಡುಗಡೆಯಾಯ್ತು ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್‍ಮಾಸ್ಟರ್ ಬೈಕ್

ಪ್ರತಿಸ್ಪರ್ಧಿ ಬ್ರ್ಯಾಂಡ್‌ಗಳಾದ ಡುಕಾಟಿ ಮತ್ತು ಬಿಎಂಡಬ್ಲ್ಯು ಕೂಡ ತಂತ್ರಜ್ಞಾನವನ್ನು ಅಳವಡಿಸಿಕೊಂಡಿದ್ದರಿಂದ ಇದು ದೊಡ್ಡ ಆಶ್ಚರ್ಯವಲ್ಲ. ಡುಕಾಟಿಯು ತನ್ನ ಹೊಸ ಮಲ್ಟಿಸ್ಟ್ರಾಡಾ ವಿ4 ಬೈಕಿನಲ್ಲಿ ಈಗಾಗಲೇ ಈ ತಂತ್ರಜ್ಞಾನದೊಂದಿಗೆ ಬಿಡುಗಡೆ ಮಾಡಲಾಗಿದೆ.

ಇನ್ನು 2021ರ ಕೆಟಿಎಂ 1290 ಸೂಪರ್ ಅಡ್ವೆಂಚರ್ ಬೈಕಿನ ಎರಡು ವೆರಿಯೆಂಟ್ ಗಳು ಲೋವರ್ ಸೀಟ್ ಅನ್ನು ಹೊಂದಿದೆ. ಇದರಿಂದ ಸ್ವಲ್ಪ ಕುಳ್ಳಗೆ ಇರುವ ಸಾವಾರರಿಗೂ ಕೂಡ ರೈಡ್ ಮಾಡಲು ಸುಲಭವಾಗಿರುತ್ತದೆ.
MOST READ: ಬಿಡುಗಡೆಯಾಯ್ತು ಹೊಸ ಕವಾಸಕಿ ವಲ್ಕನ್ ಎಸ್ ಬೈಕ್

2021ರ ಕೆಟಿಎಂ 1290 ಸೂಪರ್ ಅಡ್ವೆಂಚರ್ ಬೈಕಿನಲ್ಲಿ ನವೀಕರಿಸಿದ ಎಕ್ಸಾಸ್ಟ್ ಸಿಸ್ಟಂ ಮತ್ತು ಟ್ವಿನ್ ರೇಡಿಯೇಟರ್ ಒಳಗೊಂಡಿರುತ್ತದೆ. ಈ ರೀತಿ 2021ರ ಕೆಟಿಎಂ 1290 ಸೂಪರ್ ಅಡ್ವೆಂಚರ್ ಬೈಕ್ ಕೆಲವು ಹೊಸ ಅಪ್ಡೇಟ್ ಗಳನ್ನು ಪಡೆದುಕೊಳ್ಳಬಹುದು.

ಇನ್ನು ಬೈಕಿನ ಹೃದಯ ಭಾಗ ಎಂದೇ ಹೇಳುವ ಎಂಜಿನ್ ಬಗ್ಗೆ ಹೇಳುವುದಾದರೆ, ಹೊಸ ಕೆಟಿಎಂ 1290 ಸೂಪರ್ ಅಡ್ವೆಂಚರ್ ಬೈಕಿನಲ್ಲಿ ವಿ-ಟ್ವಿನ್, ಲಿಕ್ವಿಡ್-ಕೂಲ್ಡ್ ಎಂಜಿನ್ ಅನ್ನು ಅಳವಡಿಸಲಾಗುತ್ತದೆ. ಈ ಎಂಜಿನ್ 158 ಬಿಹೆಚ್‌ಪಿ ಪವರ್ ಮತ್ತು 138 ಎನ್ಎಂ ಪೀಕ್ ಟಾರ್ಕ್ ಅನ್ನು ಉತ್ಪಾದಿಸುತ್ತದೆ.
MOST READ: ಹೊಸ ಬಣ್ಣದ ಆಯ್ಕೆಯನ್ನು ಪಡೆದುಕೊಂಡ 2021ರ ಕವಾಸಕಿ ನಿಂಜಾ 1000 ಎಸ್‌ಎಕ್ಸ್ ಬೈಕ್

2021ರ ಕೆಟಿಎಂ 1290 ಸೂಪರ್ ಅಡ್ವೆಂಚರ್ ಬೈಕಿನ ಎಲೆಕ್ಟ್ರಾನಿಕ್ಸ್ ಪ್ಯಾಕೇಜ್ ಬಗ್ಗೆ ಹೇಳುವುದಾದರೆ, ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಂ, ಎಬಿಎಸ್, ಲೀನ್ ಸೆನೆಸ್ಟಿವ್ ಟ್ರ್ಯಾಕ್ಷನ್ ಕಂಟ್ರೋಲ್ ಮತ್ತು ಆಯ್ದ ರೈಡಿಂಗ್ ಮೋಡ್‌ಗಳನ್ನು ಒಳಗೊಂಡಿರುತ್ತದೆ.

2021ರ ಕೆಟಿಎಂ 1290 ಸೂಪರ್ ಅಡ್ವೆಂಚರ್ ಬೈಕಿನಲ್ಲಿ 7 ಇಂಚಿನ ಟಿಎಫ್‌ಟಿ ಡಿಸ್ ಪ್ಲೇಯನ್ನು ಹೊಂದಿರುತ್ತದೆ. ಈ ಹೊಸ ಕೆಟಿಎಂ 1290 ಸೂಪರ್ ಅಡ್ವೆಂಚರ್ ಬೈಕ್ ಭಾರತದಲ್ಲಿ ಬಿಡುಗಡೆಯಾಗುವ ಸಾಧ್ಯತೆಗಳಿಲ್ಲ.

ಭಾರತೀಯ ಮಾರುಕಟ್ಟೆಯಲ್ಲಿಇ ಕೆಟಿಎಂ ತನ್ನ ಆರ್‌ಸಿ ಸರಣಿಯಲ್ಲಿರುವ ಮಾದರಿಗಳನ್ನು ಅಪ್ದೇಟ್ ಮಾಡಲಾಗುತ್ತಿದೆ. ಶೀಘ್ರದಲ್ಲೇ ಭಾರತದಲ್ಲಿ ಕೆಟಿಎಂ ಕಂಪನಿಯು ತನ್ನ ಹೊಸ ಆರ್‌ಸಿ 200 ಬೈಕನ್ನು ಬಿಡುಗಡೆಗೊಳಿಸಲಿದೆ.