Just In
- 35 min ago
ಭಾರತದ ನಂತರ ಜಪಾನ್ ಮಾರುಕಟ್ಟೆಯಲ್ಲೂ ಬಿಡುಗಡೆಯಾಗುತ್ತಿದೆ ಹೋಂಡಾ ಹೈನೆಸ್ ಸಿಬಿ 350
- 10 hrs ago
ಡಕಾರ್ ರ್ಯಾಲಿ 2021: 43ನೇ ಆವೃತ್ತಿಯನ್ನು ಗೆದ್ದ ಹೋಂಡಾ ರೈಡರ್ ಕೆವಿನ್ ಬೆನೆವಿಡೆಸ್
- 12 hrs ago
ಸಿವಿ ವಾಹನ ಮಾದರಿಗಳಿಗಾಗಿ ಹೊಸ ಮಾದರಿಯ ಟೈರ್ ಬಿಡುಗಡೆ ಮಾಡಿದ ಬ್ರಿಡ್ಜ್ಸ್ಟೋನ್
- 12 hrs ago
ಭಾರತದಲ್ಲಿ ಸೋಲ್ಡ್ ಔಟ್ ಆದ ಮರ್ಸಿಡಿಸ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್ಯುವಿ
Don't Miss!
- News
ಬೈಡನ್ ಪದಗ್ರಹಣಕ್ಕೆ ಸಕಲ ಸಿದ್ಧತೆ, ಮದುಮಗಳಂತೆ ಸಿಂಗಾರಗೊಳ್ಳುತ್ತಿದೆ ಸಂಸತ್
- Movies
ಸುದೀಪ್ ಜೊತೆ ಸಿನಿಮಾ: ರಕ್ಷಿತ್ ಶೆಟ್ಟಿ ಹೇಳಿದ್ದು ಹೀಗೆ
- Lifestyle
ಶನಿವಾರದ ಭವಿಷ್ಯ: ಮಕರ ರಾಶಿಯವರೇ ಆರ್ಥಿಕ ದೃಷ್ಟಿಯಿಂದ ಒಳ್ಳೆಯದು
- Sports
ಭಾರತ vs ಆಸ್ಟ್ರೇಲಿಯಾ, Live ಸ್ಕೋರ್: ಭಾರತದ ಆರಂಭಿಕ ವಿಕೆಟ್ ಪತನ
- Education
ECIL Recruitment 2021: ಟೆಕ್ನಿಕಲ್ ಅಧಿಕಾರಿ ಹುದ್ದೆಗಳಿಗೆ ವಾಕ್ ಇನ್ ಇಂಟರ್ವ್ಯೂ
- Finance
Gold, Silver Rate: ಪ್ರಮುಖ ನಗರಗಳಲ್ಲಿ ಜ. 15ರ ಚಿನ್ನ, ಬೆಳ್ಳಿ ದರ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಬಿಡುಗಡೆಯಾಯ್ತು ಹೊಸ ಒಕಿನಾವ ಆರ್30 ಎಲೆಕ್ಟ್ರಿಕ್ ಸ್ಕೂಟರ್
ಎಲೆಕ್ಟ್ರಿಕ್ ದ್ವಿಚಕ್ರ ವಾಹನ ತಯಾರಕ ಕಂಪನಿಯಾದ ಒಕಿನಾವ ತನ್ನ ಹೊಸ ಆರ್30 ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದೆ. ಈ ಹೊಸ ಒಕಿನಾವ ಆರ್30 ಎಲೆಕ್ಟ್ರಿಕ್ ಸ್ಕೂಟರ್ ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ.58,992 ಗಳಾಗಿದೆ.

ಒಕಿನಾವ ಕಂಪನಿಯು ಈ ಹೊಸ ಆರ್30 ಎಲೆಕ್ಟ್ರಿಕ್ ಸ್ಕೂಟರ್‌ಗಾಗಿ ಪ್ರಿ-ಬುಕ್ಕಿಂಗ್ ಅನ್ನು ಕೂಡ ಪ್ರಾರಂಭಿಸಲಾಗಿದೆ. ಈ ಹೊಸ ಒಕಿನಾವ ಆರ್30 ಎಲೆಕ್ಟ್ರಿಕ್ ಸ್ಕೂಟರ್‌ಗಾಗಿ ರೂ.2 ಸಾವಿರ ಪಾವತಿಸಿ ಬುಕ್ಕಿಂಗ್ ಮಾಡಿಕೊಳ್ಳಬಹುದಾಗಿದೆ. ಒಕಿನಾವ ಆರ್30 ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಕಡಿಮೆ ವೇಗದ ವಿಭಾಗದ ಬಿಡುಗಡೆಗೊಳಿಸಲಾಗಿದೆ. ಇದಕ್ಕಾಗಿ ಈ ಒಕಿನಾವ ಆರ್30 ಎಲೆಕ್ಟ್ರಿಕ್ ಸ್ಕೂಟರ್ ಟಾಪ್ ಸ್ಪೀಡ್ ಕೇವಲ 25 ಕಿ.ಮೀ ಆಗಿದೆ.

ಈ ಹೊಸ ಒಕಿನಾವ ಆರ್30 ಎಲೆಕ್ಟ್ರಿಕ್ ಸ್ಕೂಟರ್‌ನಲ್ಲಿ 1.25 ಕಿ.ವ್ಯಾಟ್ ಬ್ಯಾಟರ್ ಪ್ಯಾಕ್ ಅನ್ನು ಅಳವಡಿಸಿದೆ. ಈ ಎಲೆಕ್ಟ್ರಿಕ್ ಸ್ಕೂಟರ್‌ನಲ್ಲಿ ಮೈಕ್ರೋ ಚಾರ್ಜರ್ ಆಟೋ ಕಟ್ ಫಂಕ್ಷನ್ ಅನ್ನು ಒಳಗೊಂಡಿದೆ.
MOST READ: ದುಬಾರಿಯಾಯ್ತು ಜನಪ್ರಿಯ ಬಿಎಸ್-6 ಹೋಂಡಾ ಆಕ್ಟಿವಾ 6ಜಿ ಸ್ಕೂಟರ್

ಈ ಎಲೆಕ್ಟ್ರಿಕ್ ಸ್ಕೂಟರ್ ವಿನ್ಯಾಸದ ಬಗ್ಗೆ ಹೇಳುವುದಾದರೆ, ಆರ್ 30 ಏಪ್ರನ್-ಮೌಂಟೆಡ್ ಹೆಡ್‌ಲೈಟ್ ಮತ್ತು ಮುಂಭಾಗದಲಿ ಡ್ಯುಯಲ್-ಟೋನ್ ಬಣ್ಣದ ಫಿನಿಶಿಂಗ್ ಅನ್ನು ಹೊಂದಿದೆ. ಇನ್ನು ಈ ಎಲೆಕ್ಟ್ರಿಕ್ ಸ್ಕೂಟರ್‌ನಲ್ಲಿ ಅಲಾಯ್ ವ್ಹೀಲ್ ಅನ್ನು ಕೂಡ ಅಳವಡಿಸಲಾಗಿದೆ.

ಈ ಹೊಸ ಒಕಿನಾವ ಆರ್30 ಎಲೆಕ್ಟ್ರಿಕ್ ಸ್ಕೂಟರ್ ಗ್ಲೋಸಿ ರೆಡ್, ಮೆಟಾಲಿಕ್ ಆರೆಂಜ್, ಪರ್ಲ್ ವೈಟ್, ಸೀ ಗ್ರೀನ್ ಮತ್ತು ಸನ್‌ರೈಸ್ ಯೆಲ್ಲೋ ಎಂಬ ಐದು ಬಣ್ಣಗಳ ಆಯ್ಕೆಯಲ್ಲಿ ಲಭ್ಯವಿದೆ.
MOST READ: ಬಿಡುಗಡೆಯಾಯ್ತು ಬಹುನಿರೀಕ್ಷಿತ ಹೊಸ ಹೋಂಡಾ ಎಕ್ಸ್-ಬ್ಲೇಡ್ ಬೈಕ್

ಈ ಹೊಸ ಒಕಿನಾವ ಆರ್30 ಎಲೆಕ್ಟ್ರಿಕ್ ಸ್ಕೂಟರ್‌ನಲ್ಲಿ ಸಸ್ಪೆಂಕ್ಷನ್ ಗಾಗಿ ಮುಂಭಾಗದಲ್ಲಿ ಟೆಲಿಸ್ಕೋಪಿಕ್ ಫೋರ್ಕ್ ಮತ್ತು ಹಿಂಭಾಗದಲ್ಲಿ ಟ್ವಿನ್ ಶಾಕ್ ಅಬ್ಸಾರ್ಬರ್ ಗಳನ್ನು ಹೊಂದಿದೆ.

ಇನ್ನು ಈ ಎಲೆಕ್ಟ್ರಿಕ್ ಸ್ಕೂಟರ್ ಬ್ರೇಕಿಂಗ್ ಸಿಸ್ಟಂ ಬಗ್ಗೆ ಹೇಳುವುದಾದರೆ, ಎರಡು ಟಯರ್ ಗಳಲ್ಲಿ ಡ್ರಮ್ ಬ್ರೇಕ್ ಅನ್ನು ಅಳವಡಿಸಿದೆ. ಇನ್ನು ಇದರೊಂದಿಗೆ ಹೆಚ್ಚಿನ ಸುರಕ್ಷತೆಗಾಗಿ ಇ-ಎಬಿಎಸ್(ಎಲೆಕ್ಟ್ರಾನಿಕ್-ಅಸಿಸ್ಟೆಡ್ ಬ್ರೇಕಿಂಗ್ ಸಿಸ್ಟಂ) ಅನ್ನು ಕೂಡ ನೀಡಿದೆ.
MOST READ: ಬಿಡುಗಡೆಯ ಸನಿಹದಲ್ಲಿ ಬಹುನಿರೀಕ್ಷಿತ ಬಿಎಸ್-6 ಹೀರೋ ಬೈಕುಗಳು

ಇತ್ತೀಚೆಗೆ ಒಕಿನಾವ ಕಂಪನಿಯು ಬೆಂಗಳೂರಿನಲ್ಲಿ ಶೌರ್ಯ ಮೋಟಾರ್ಸ್ ಸಹಭಾಗೀತ್ವದಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ವಿತರಣೆಗೆ ಚಾಲನೆ ನೀಡಿದೆ. ಇದರಂತೆ ಯಾವುದೇ ಹೆಚ್ಚುವರಿ ಶುಲ್ಕವಿಲ್ಲದೇ ಮನೆ ಬಾಗಿಲಿಗೆ ಎಲೆಕ್ಟ್ರಿಕ್ ಸ್ಕೂಟರ್ ಗಳನ್ನು ತಲುಪಿಸುತ್ತಾರೆ.

ಹೊಸ ಒಕಿನಾವ ಆರ್30 ಎಲೆಕ್ಟ್ರಿಕ್ ಸ್ಕೂಟರ್ ಬ್ಯಾಟರಿಗೆ ಮೂರು ವರ್ಷಗಳ ವಾರಂಟಿಯನ್ನು ಕಂಪನಿ ನೀಡಿದೆ. ಇದರೊಂದಿಗೆ 250-ವ್ಯಾಟ್, ಬಿಎಲ್‌ಡಿಸಿ ಮೋಟರ್‌ಗೂ ಮೂರು ವರ್ಷ ಅಥವಾ 30,000 ಕಿ.ಮೀ ವಾರಂಟಿಯನ್ನು ನೀಡಲಾಗಿದೆ,