ರಾಯಲ್ ಎನ್‍ಫೀಲ್ಡ್ ಕ್ಲಾಸಿಕ್ 500 ಟ್ರಿಬ್ಯೂಟ್ ಬ್ಲ್ಯಾಕ್ ಎಡಿಷನ್ ಬಿಡುಗಡೆ
ರಾಯಲ್ ಎನ್‍ಫೀಲ್ಡ್ ಕಂಪನಿಯ ಇಂಗ್ಲೆಂಡ್‌ನಲ್ಲಿ ತನ್ನ ಕ್ಲಾಸಿಕ್ 500 ಟ್ರಿಬ್ಯೂಟ್ ಬ್ಲ್ಯಾಕ್ ಎಡಿಷನ್ ಅನ್ನು ಬಿಡುಗಡೆಗೊಳಿಸಿದೆ. ಇಂಗ್ಲೆಂಡ್‌ನಲ್ಲಿ ಕ್ಲಾಸಿಕ್ 500 ಟ್ರಿಬ್ಯೂಟ್ ಬ್ಲ್ಯಾಕ್ ಎಡಿಷನ್ ಬೈಕಿನ 1000 ಯೂನಿಟ್‌ಗಳನ್ನು ಬಿಡುಗಡೆಗೊಳಿಸಿದೆ.

ಈ ರಾಯಲ್ ಎನ್‍ಫೀಲ್ಡ್ ಕ್ಲಾಸಿಕ್ 500 ಟ್ರಿಬ್ಯೂಟ್ ಬ್ಲ್ಯಾಕ್ ಎಡಿಷನ್ ಬೆಲೆಯು ಅಂದಾಜು ರೂ.5.38 ಲಕ್ಷಗಳಾಗಿದೆ. ರಾಯಲ್ ಎನ್‍ಫೀಲ್ಡ್ ಕಂಪನಿಯು ತನ್ನ 500 ಸಿಸಿ ಯುಸಿಇ (ಯುನಿಟ್ ಕನ್‌ಸ್ಟ್ರಕ್ಷನ್ ಎಂಜಿನ್) ಸೆಗ್‍ಮೆಂಟ್‍ನ ಬೈಕುಗಳ ಉತ್ಪಾದನೆಯನ್ನು ಶೀಘ್ರದಲ್ಲೇ ಸ್ಥಗಿತಗೊಳಿಸುವ ಸಾಧ್ಯತೆಗಳಿದೆ. ಭಾರತದಲ್ಲಿಯು 500ಸಿಸಿ ಸರಣಿಯ ಮಾದರಿಯನ್ನು ಸ್ಥಗಿತಗೊಳಿಸುವ ಸಂಧರ್ಭದಲ್ಲಿ ಅದರ ನೆನೆಪಿಗಾಗಿ ಈ ಕ್ಲಾಸಿಕ್ 500 ಟ್ರಿಬ್ಯೂಟ್ ಬ್ಲ್ಯಾಕ್ ಲಿಮೆಟೆಡ್ ಎಡಿಷನ್ ಅನ್ನು 2020ರ ಫೆಬ್ರವರಿಯಲ್ಲಿ ಬಿಡುಗಡೆಗೊಳಿಸಲಾಗಿತ್ತು.

ಆದರೆ ಈ ಕ್ಲಾಸಿಕ್ 500 ಟ್ರಿಬ್ಯೂಟ್ ಬ್ಲ್ಯಾಕ್ ಎಡಿಷನ್ ಮಾದರಿಯನ್ನು ಜಾಗತಿಕವಾಗಿ ರಫ್ತು ಮಾಡುವುದನ್ನು ಮುಂದುವರೆಸಲಾಗಿದೆ. ರಾಯಲ್ ಎನ್‍ಫೀಲ್ಡ್ ಸರಣಿಯ 500ಸಿಸಿ ಎಂಜಿನ್ ಮಾದರಿಗಳು ಇತಿಹಾಸದ ಪುಟ ಸೇರುವ ಸಾಧ್ಯತೆಗಳಿದೆ.
MOST READ: ಬಿಡುಗಡೆಯಾಯ್ತು ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್‍ಮಾಸ್ಟರ್ ಬೈಕ್

ಕ್ಲಾಸಿಕ್ 500 ಟ್ರಿಬ್ಯೂಟ್ ಬ್ಲ್ಯಾಕ್ ಲಿಮೆಟೆಡ್ ಬೈಕಿನಲ್ಲಿ ಡ್ಯುಯಲ್ ಟೋನ್ ಮ್ಯಾಟ್ ಅಂಡ್ ಗ್ಲೋಸ್ ಬ್ಲ್ಯಾಕ್ ಬಣ್ಣವನ್ನು ಹೊಂದಿದೆ. ಈ ಬೈಕಿನಲ್ಲಿ ಮುಂಭಾಗ ಮತ್ತು ಹಿಂಭಾಗದ ಫೆಂಡರ್‍ಗಳಲ್ಲಿ, ರಿಮ್ಸ್ ಸುತ್ತಲೂ ಮತ್ತು ಫ್ಯೂಯಲ್ ಟ್ಯಾಂಕಿನಲ್ಲಿ ಆರೇಂಜ್ ಬಣ್ಣಗಳನ್ನು ಹೊಂದಿದೆ.

ಕ್ಲಾಸಿಕ್ 500 ಟ್ರಿಬ್ಯೂಟ್ ಬ್ಲ್ಯಾಕ್ ಎಡಿಷನ್ ಬೈಕಿನಲ್ಲಿ ಸಸ್ಪೆಂಕ್ಷನ್ ಗಾಗಿ ಮುಂಭಾಗದಲ್ಲಿ ಟೆಲಿಸ್ಕೋಪಿಕ್ ಫೋರ್ಕ್‌ಗಳು ಮತ್ತು ಹಿಂಭಾಗದಲ್ಲಿ ಡ್ಯುಯಲ್-ಶಾಕ್ ಸೆಟಪ್ ಅನ್ನು ಅಳವಡಿಸಲಾಗಿದೆ. ಇನ್ನು ಈ ಬೈಕಿನಲ್ಲಿ ಬ್ರೇಕಿಂಗ್‌ಗಾಗಿ ಡ್ಯುಯಲ್-ಚಾನೆಲ್ ಎಬಿಎಸ್ ಜೊತೆಗೆ ಎರಡೂ ಟಯರುಗಳಲ್ಲಿ ಡಿಸ್ಕ್ ಬ್ರೇಕ್‌ಗಳನ್ನು ಅಳವಡಿಸಲಾಗಿದೆ.
MOST READ: ಬಿಡುಗಡೆಯಾಯ್ತು ಬಹುನಿರೀಕ್ಷಿತ ಹೊಸ ಹೋಂಡಾ ಎಕ್ಸ್-ಬ್ಲೇಡ್ ಬೈಕ್

ಈ ಕ್ಲಾಸಿಕ್ 500 ಟ್ರಿಬ್ಯೂಟ್ ಬ್ಲ್ಯಾಕ್ ಎಡಿಷನ್ ಬೈಕ್ 500 ಸಿಸಿ ಲಾಂಗ್ ಸ್ಪೋಕ್ ಸಿಂಗಲ್ ಸಿಲಿಂಡರ್ ಯುಸಿಇ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 5,250 ಆರ್‍ಪಿಎಂನಲ್ಲಿ 27.2 ಬಿಹೆಚ್‍ಪಿ ಪವರ್ ಮತ್ತು 4,000 ಆರ್‍ಪಿಎಂನಲ್ಲಿ 41.3 ಎನ್‍ಎಂ ಟಾಕ್ ಅನ್ನು ಉತ್ಪಾದಿಸುತ್ತದೆ.

ಇದರೊಂದಿಗೆ 5 ಸ್ಪೀಡ್ ಗೇರ್‍ಬಾಕ್ಸ್ ಅನ್ನು ಅಳವಡಿಸಲಾಗಿದೆ. ರಾಯಲ್ ಎನ್‍ಫೀಲ್ಡ್ 500 ಸೆಗ್‍ಮೆಂಟ್‍ನ ನೆನೆಪಿಗಾಗಿ ಬಿಡುಗಡೆಗೊಳಿಸುವುದರಿಂದ ಕೊನೆಯ ಬೈಕ್ ಅನ್ನು ಲಿಮಿಡೆಡ್ ಎಡಿಷನ್ ಆಗಿ ಬಿಡುಗಡೆಗೊಳಿಸಲಾಗಿದ್ ಎಂದು ನಿರೀಕ್ಷಿಸುತ್ತೇವೆ.
MOST READ: ಬಿಡುಗಡೆಯ ಸನಿಹದಲ್ಲಿ ಬಹುನಿರೀಕ್ಷಿತ ಬಿಎಸ್-6 ಹೀರೋ ಬೈಕುಗಳು

ರಾಯಲ್ ಎನ್‍ಫೀಲ್ಡ್ ಕಂಪನಿಯ ಟ್ವಿನ್ ಬೈಕ್‍ಗಳು ಉತ್ತಮ ಕಾರ್ಯಕ್ಷಮತೆಯನ್ನು ಹೊಂದಿವೆ. ಇದರಿಂದಾಗಿ ಗ್ರಾಹಕರನ್ನು ಸೆಳೆಯಬಹುದು ಮತ್ತು 500 ಸಿಸಿ ಸೆಗ್‍ಮೆಂಟ್‍ನ ಸ್ಥಾನವನ್ನು ಇದು ಸರಿಯಾಗಿ ನಿಭಾಹಿಸಬಹುದು ಎಂದು ಕಂಪನಿಯ ಆಲೋಚನೆಯಾಗಿದೆ.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ರಾಯಲ್ ಎನ್‍ಫೀಲ್ಡ್ ಕಂಪನಿಯು ಹಿಮಾಲಯನ್ ಬೈಕಿಗೆ ಹೆಚ್ಚು ಗಮನವನ್ನು ಹರಿಸಲಿದೆ. ಇನ್ನು ಭಾರತಕ್ಕೆ ಸಂಬಂಧಿಸಿದಂತೆ ರಾಯಲ್ ಎನ್‍ಫೀಲ್ಡ್ ಕಂಪನಿಯು ತನ್ನ ಮೆಟಿಯೋರ್ 350 ಬೈಕನ್ನು ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ.


Click it and Unblock the Notifications