Just In
- 18 min ago Maruti Suzuki: ಮಾರುತಿ ಸುಜುಕಿಯ ಅತ್ಯಂತ ಸುರಕ್ಷಿತ ಕಾರುಗಳಿವು.. 8 ಲಕ್ಷ ಆರಂಭಿಕ ಬೆಲೆ
- 20 min ago 11 ರೀತಿಯ ವಾಹನಗಳ ಲೈಸೆನ್ಸ್ ಹೊಂದಿರುವ ಅಜ್ಜಿ: ಇವರ ಜೀವನೋತ್ಸಾಹಕ್ಕೆ ನೆಟ್ಟಿಗರು ಫಿಧಾ
- 50 min ago ಭಾರತದಲ್ಲಿ ದುರ್ಬಲ ಕಾರುಗಳೇ ಹೆಚ್ಚು ಮಾರಾಟ: ಸುರಕ್ಷತೆಯಿಲ್ಲಿ-0, ಮಾರಾಟದಲ್ಲಿ ನಂ.1
- 1 hr ago Vande Bharat: ಮಧ್ಯಮ ವರ್ಗದವರ ಐರಾವತ.. ವಂದೇ ಭಾರತ್ ಎಕ್ಸ್ಪ್ರೆಸ್ನಿಂದ ಹೊಸ ಮೈಲಿಗಲ್ಲು ನಿರ್ಮಾಣ!
Don't Miss!
- News BJP-JDS ಮೈತ್ರಿ ಲೋಕಸಭಾ ಚುನಾವಣೆಗಷ್ಟೇ ಸೀಮಿತವೇ; ಮೋದಿ-ದೊಡ್ಡಗೌಡರ ಮಾತುಕತೆಯ ರಹಸ್ಯ ಬಿಚ್ಚಿಟ್ಟ ಯಡಿಯೂರಪ್ಪ
- Technology YouTube: ಯೂಟ್ಯೂಬ್ ಬಳಕೆದಾರರಿಗೆ ಶಾಕಿಂಗ್ ನ್ಯೂಸ್! ಆಡ್ ಬ್ಲಾಕರ್ ವಿರುದ್ಧ ಸಮರ
- Lifestyle ಚರ್ಚೆ ಹುಟ್ಟುಹಾಕಿದ ಬೆಂಗಳೂರು-ಹೈದರಾಬಾದ್..! ಎರಡರಲ್ಲಿ ವಾಸಯೋಗ್ಯ ನಗರ ಯಾವುದು..?
- Sports ಟಿ20 ವಿಶ್ವಕಪ್ಗೆ ಭಾರತ ತಂಡದ ಆಯ್ಕೆ; ದ್ರಾವಿಡ್, ಅಗರ್ಕರ್ ಭೇಟಿ ಮಾಡಿದ ರೋಹಿತ್; ಆತಂಕದಲ್ಲಿ ಹಾರ್ದಿಕ್!
- Finance Bengaluru traffic: ಬೆಂಗಳೂರಿನ ಈ ಫ್ಲೈಓವರ್ ಮೇಲೆ ಬೈಕ್ ಬಿಟ್ಟು ಉಳಿದೆಲ್ಲವಕ್ಕೆ ನಿಷೇಧ, ಬದಲಿ ಮಾರ್ಗ ವಿವರ
- Movies "ನಾನೊಂದು ಮನೆ ಕಟ್ಟಿದ್ದೀನಿ.. ಮಾರಲಾಗದ ಮನೆ" ಎಂದಿದ್ದ ದ್ವಾರಕೀಶ್; ಎಲ್ಲಿದೆ ಆ ಮನೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬಿಎಸ್-6 ಹಿಮಾಲಯನ್ ಬೈಕಿನ ವಿತರಣೆ ಆರಂಭಿಸಿದ ರಾಯಲ್ ಎನ್ಫೀಲ್ಡ್
ಚೆನ್ನೈ ಮೂಲದ ದ್ವಿಚಕ್ರ ತಯಾರಕ ಕಂಪನಿಯಾದ ರಾಯಲ್ ಎನ್ಫೀಲ್ಡ್ ತನ್ನ ಜನಪ್ರಿಯ ಬಿಎಸ್-6 ಹಿಮಾಲಯನ್ ಬೈಕ್ ಅನ್ನು ಇತ್ತೀಚೆಗೆ ಭಾರತದಲ್ಲಿ ಬಿಡುಗಡೆಗೊಳಿಸಿತ್ತು. ಇದೀಗ ರಾಯಲ್ ಎನ್ಫೀಲ್ಡ್ ಕಂಪನಿಯು ಬಿಎಸ್-6 ಹಿಮಾಲಯನ್ ಬೈಕಿನ ವಿತರಣೆಯನ್ನು ಪ್ರಾರಂಭಿಸಿದೆ.
ಬಿಎಸ್-6 ರಾಯಲ್ ಎನ್ಫೀಲ್ಡ್ ಹಿಮಾಲಯನ್ ಬೈಕ್ಗೆ ರೂ.10,000 ಪಾವತಿಸಿ ಬುಕ್ಕಿಂಗ್ ಮಾಡಬಹುದಾಗಿದೆ. ಹೊಸ ರಾಯಲ್ ಎನ್ಫೀಲ್ಡ್ ಬಿಎಸ್-6 ಹಿಮಾಲಯನ್ ಬೈಕಿಗೆ ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.1.87 ದಿಂದ ರೂ.1.91ಲಕ್ಷಗಳಾಗಿದೆ. ಬಿಎಸ್-6 ಹಿಮಾಲಯನ್ ಬೈಕಿನಲ್ಲಿ ಹೊಸ 3 ಬಣ್ಣಗಳನ್ನು ಸೇರಿಸಲಾಗಿದೆ. ಹೊಸ 3 ಬಣ್ಣಗಳನ್ನು ಸೇರಿಸಿ ಒಟ್ಟು 6 ಬಣ್ಣಗಳಲ್ಲಿ ಬಿಎಸ್-6 ರಾಯಲ್ ಎನ್ಫೀಲ್ಡ್ ಹಿಮಾಲಯನ್ ಲಭ್ಯವಿರಲಿದೆ. ಈ ಬೈಕ್ ಸ್ಪೋಕ್ ವ್ಹೀಲ್, ಎಂಆರ್ಎಫ್ ಡ್ಯುಯಲ್ ಪರ್ಪಸ್ ಟಯರ್ಗಳನ್ನು ಹೊಂದಿದೆ.
ಹೊಸ ಬೈಕ್ ಸ್ಪೋಕ್ ವ್ಹೀಲ್, ಎಂಆರ್ಎಫ್ ಡ್ಯುಯಲ್ ಪರ್ಪಸ್ ಟಯರ್ಗಳನ್ನು ಹೊಂದಿದೆ. ಫ್ಯೂಯಲ್ ಟ್ಯಾಂಕ್, ರೇರ್ ಲಗೇಜ್ ರ್ಯಾಕ್ನ ಮೇಲಿರುವ ರಾಕ್ ರೆಡ್ ಅಸೆಂಟ್ನೊಂದಿಗಿರುವ ಕಪ್ಪು ಬಣ್ಣವನ್ನು ಹೊಂದಿದೆ.
ಇದರ ಜೊತೆಗೆ ಬ್ಲೂ ಹಾಗೂ ವೈಟ್ ಬಣ್ಣವನ್ನು ಹೊಂದಿರುವ ಮಾದರಿಗಳಿವೆ. ಬಾಡಿ ಪ್ಯಾನೆಲ್ಗಳು ಗ್ರಾವೆಲ್ ಗ್ರೇ ಬ್ಲಾಕ್ ಬಣ್ಣವನ್ನು ಹೊಂದಿವೆ. ಹೊಸ ಹಿಮಾಲಯನ್ ಬೈಕಿನಲ್ಲಿ ಸ್ವಿಚ್ಎಬಲ್ ಎಬಿಎಸ್ ಮತ್ತು ಹಾರ್ಜಾರ್ಡ್ ಲೈಟ್ಗಳನ್ನು ಹೊಂದಿವೆ.
ಸ್ವಿಚ್ಬಲ್ ಮಾಡಬಹುದಾದ ಎಬಿಎಸ್ ಆಯ್ಕೆಯ ಸಹಾಯದಿಂದ ಸವಾರನಿಗೆ ಬೈಕಿನ ಬೆಲೆ ಹೆಚ್ಚು ಕಂಟ್ರೋಲ್ ಅನ್ನು ಹೊಂದಿದೆ. ಈ ಬೈಕಿನ ಎಂಜಿನ್ ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿರಲಿದೆ. 2020ರ ಬಿಎಸ್-6 ರಾಯಲ್ ಎನ್ಫೀಲ್ಡ್ ಹಿಮಾಲಯನ್ ಬೈಕ್ ಡೀಲರ್ಗಳ ಬಳಿ ತಲುಪಿರುವ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ಬಹಿರಂಗವಾಗಿದೆ.
ಸವಾರ ಸುಲಭವಾಗಿ ಎಬಿಎಸ್ ಅನ್ನು ಆಫ್ ಮಾಡಬಹುದು ಮತ್ತು ಸಂಕಷ್ಠದ ಸನ್ನಿವೇಷದಲ್ಲಿ ಬೈಕ್ ನಿಲ್ಲಿಸಲು ಹಿಂದಿನ ಟಯರ್ಗಳನ್ನು ಲಾಕ್ ಮಾಡಬಹುದು. ಹಜಾರ್ಡ್ ಲೈಟ್ಗಳು ಕಠಿಣವಾದ ಹವಮಾನ ಪರಿಸ್ಥಿತಿಯಲ್ಲೂ ಸವಾರಿ ಮಾಡಲು ಹೆಚ್ಚು ಸಹಕಾರಿಯಾಗಿವೆ.
ಹಿಮಾಲಯನ್ ಬಿಎಸ್-6 ಮಾದರಿಯಲ್ಲಿ 411 ಸಿಸಿಯ ಸಿಂಗಲ್ ಸಿಲಿಂಡರ್ ಏರ್ ಕೂಲ್ಡ್ ಎಂಜಿನ್ ಅಳವಡಿಸಲಾಗುವುದು. ಈ ಎಂಜಿನ್ 24.5 ಬಿಹೆಚ್ಪಿ ಪವರ್ ಮತ್ತು 32 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಈ ಬೈಕಿನಲ್ಲಿ 5 ಸ್ಪೀಡ್ ಗೇರ್ಬಾಕ್ಸ್ ನೀಡಲಾಗುವುದು. ಬಿಎಸ್-6 ಹಿಮಾಲಯನ್ ಬೈಕಿನ ಬೆಲೆಯು ಬಣ್ಣಗಳ ಮೇಲೆ ನಿರ್ಧರವಾಗಿದೆ.
ಬೈಕಿನ ಮುಂಭಾಗದಲ್ಲಿ 21 ಇಂಚಿನ ಮತ್ತು ಹಿಂಭಾಗದಲ್ಲಿ 17 ಇಂಚಿನ ಸ್ಪೋಕ್ ವ್ಹೀಲ್ಗಳಿದ್ದು, ಕ್ರಮವಾಗಿ 90/90 ಹಾಗೂ 120/90 ಸೆಕ್ಷನ್ ಟಯರ್ಗಳನ್ನು ಹೊಂದಿವೆ. ಬ್ರೇಕಿಂಗ್ಗಳಿಗಾಗಿ ಮುಂಭಾಗದಲ್ಲಿ ಎರಡು ಪಿಸ್ಟನ್ ಕ್ಯಾಲಿಪರ್ನ 300 ಎಂಎಂ ಫ್ರಂಟ್ ಡಿಸ್ಕ್ ಹಾಗೂ ಹಿಂಭಾಗದಲ್ಲಿ 240 ಎಂಎಂನ ಸಿಂಗಲ್ ಪಿಸ್ಟನ್ ಕ್ಯಾಲಿಪರ್ಗಳಿವೆ.
ರಾಯಲ್ ಎನ್ಫೀಲ್ಡ್ ಹಿಮಾಲಯನ್ ಬೈಕ್ನಲ್ಲಿ ಹೊಸ ಫೀಚರ್ಸ್ಗಳನ್ನು ಹೊಂದಿರುವುದರಿಂದ ಅಳವಡಿಸಿರುವುದರಿಂದ ಹೆಚ್ಚಿನ ಗ್ರಾಹಕರನ್ನು ಸೆಳೆಯಬಹುದು. ಈ ಬೈಕ್ ದೇಶಿಯ ಮಾರುಕಟ್ಟೆಯಲ್ಲಿ ಬಿಎಂಡಬ್ಲ್ಯು ಜಿ 310 ಜಿಎಸ್ ಹಾಗೂ ಕವಾಸಕಿ ವರ್ಸಿಸ್-ಎಕ್ಸ್ 300, ಕೆಟಿಎಂ 390 ಬೈಕುಗಳಿಗೆ ಪೈಪೋಟಿ ನೀಡುತ್ತದೆ.