ಅಮೆರಿಕಾದಲ್ಲಿ ಬಿಡುಗಡೆಗೊಂಡ 2021ರ ರಾಯಲ್ ಎನ್ಫೀಲ್ಡ್ ಹಿಮಾಲಯನ್ ಬೈಕ್
ಚೆನ್ನೈ ಮೂಲದ ಬೈಕ್ ತಯಾರಕ ಕಂಪನಿಯಾದ ರಾಯಲ್ ಎನ್‌ಫೀಲ್ಡ್ ತನ್ನ 2021ರ ಹಿಮಾಲಯನ್ ಅಡ್ವೆಂಚರ್ ಟೂರರ್ ಮಾದರಿಯನ್ನು ಅಮೆರಿಕಾದಲ್ಲಿ ಬಿಡುಗಡೆಗೊಳಿಸಿದೆ. ಕೆಲವು ಹೊಸ ಫೀಚರ್ಸ್ ಗಳೊಂದಿಗೆ ಈ 2021ರ ರಾಯಲ್ ಎನ್ಫೀಲ್ಡ್ ಹಿಮಾಲಯನ್ ಬೈಕನ್ನು ಬಿಡುಗಡೆಗೊಂಡಿದೆ.

2021ರ ರಾಯಲ್ ಎನ್ಫೀಲ್ಡ್ ಹಿಮಾಲಯನ್ ಬೈಕಿನಲ್ಲಿ ಕ್ಲೀನರ್ ಎಂಜಿನ್ ಅನ್ನು ಹೊಂದಿದೆ, ಲೇಕ್ ಬ್ಲೂ, ರಾಕ್ ರೆಡ್ ಮತ್ತು ಗ್ರೇವೆಲ್ ಗ್ರೇ - ಪ್ಯಾಲೆಟ್ ಎಂಬ ಮೂರು ಹೊಸ ಡ್ಯುಯಲ್-ಟೋನ್ ಬಣ್ಣಗಳ ಆಯ್ಕೆಯನ್ನು ಹೊಂದಿದೆ. ಯುಎಸ್-ಸ್ಪೆಕ್ ಹಿಮಾಲಯನ್ ಆರಂಭಿಕ ಬೆಲೆಯು ಸುಮಾರು ರೂ,67 ಲಕ್ಷಗಳಾಗಿದೆ. 2021ರ ರಾಯಲ್ ಎನ್ಫೀಲ್ಡ್ ಹಿಮಾಲಯನ್ ಅಮೆರಿಕಾದಲ್ಲಿ ಉತ್ತಮ ಅಡ್ವೆಂಚರ್ ಬೈಕುಗಳಲ್ಲಿ ಒಂದಾಗಿದೆ.

2021ರ ಹಿಮಾಲಯನ್ ಬೈಕಿನಲ್ಲಿ ಸ್ಪೋಕ್ ವ್ಹೀಲ್, ಎಂಆರ್‍ಎಫ್ ಡ್ಯುಯಲ್ ಪರ್ಪಸ್ ಟಯರ್‍ಗಳನ್ನು ಹೊಂದಿದೆ. ಫ್ಯೂಯಲ್ ಟ್ಯಾಂಕ್, ರೇರ್ ಲಗೇಜ್ ರ್‍ಯಾಕ್‍ನ ಮೇಲಿರುವ ರಾಕ್ ರೆಡ್ ಅಸೆಂಟ್‍ನೊಂದಿಗಿರುವ ಬ್ಲ್ಯಾಕ್ ಬಣ್ಣವನ್ನು ಹೊಂದಿದೆ.
MOST READ: ಬಿಡುಗಡೆಯಾಯ್ತು ಹೊಸ ಕವಾಸಕಿ ವಲ್ಕನ್ ಎಸ್ ಬೈಕ್

ಇದರ ಜೊತೆಗೆ ಬ್ಲೂ ಹಾಗೂ ವೈಟ್ ಬಣ್ಣವನ್ನು ಹೊಂದಿರುವ ಮಾದರಿಗಳಿವೆ. ಬಾಡಿ ಪ್ಯಾನೆಲ್‍ಗಳು ಗ್ರಾವೆಲ್ ಗ್ರೇ ಬ್ಲಾಕ್ ಬಣ್ಣವನ್ನು ಹೊಂದಿವೆ. ಹೊಸ ಹಿಮಾಲಯನ್ ಬೈಕಿನಲ್ಲಿ ಸ್ವಿಚ್ಎಬಲ್ ಎಬಿಎಸ್ ಮತ್ತು ಹಾರ್ಜಾರ್ಡ್ ಲೈಟ್‍ಗಳನ್ನು ಹೊಂದಿವೆ.

ಈ ಫೀಚರ್ ಅನ್ನು ಹೊಂದಿರುವುದರಿಂದ ಹೆಚ್ಚಿನ ಆಫ್ ರೋಡ್ ಪ್ರಿಯರನ್ನು ಸೆಳೆಯುತ್ತದೆ. ಈ ಸ್ವಿಚ್‍ಬಲ್ ಮಾಡಬಹುದಾದ ಎಬಿಎಸ್ ಆಯ್ಕೆಯ ಸಹಾಯದಿಂದ ಸವಾರನಿಗೆ ಬೈಕಿನ ಬೆಲೆ ಹೆಚ್ಚು ಕಂಟ್ರೋಲ್ ಅನ್ನು ಹೊಂದಬಹುದು.
MOST READ: ಬಿಡುಗಡೆಯಾಯ್ತು ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್‍ಮಾಸ್ಟರ್ ಬೈಕ್

ಇದರೊಂದಿಗೆ ಸವಾರ ಸುಲಭವಾಗಿ ಎಬಿಎಸ್ ಅನ್ನು ಆಫ್ ಮಾಡಬಹುದು ಮತ್ತು ಸಂಕಷ್ಠದ ಸನ್ನಿವೇಷದಲ್ಲಿ ಬೈಕ್ ನಿಲ್ಲಿಸಲು ಹಿಂದಿನ ಟಯರ್‍ಗಳನ್ನು ಲಾಕ್ ಮಾಡಬಹುದು. ಹಜಾರ್ಡ್ ಲೈಟ್‍ಗಳು ಕಠಿಣವಾದ ಹವಮಾನ ಪರಿಸ್ಥಿತಿಯಲ್ಲೂ ಸವಾರಿ ಮಾಡಲು ಹೆಚ್ಚು ಸಹಕಾರಿಯಾಗಿವೆ.

2021ರ ರಾಯಲ್ ಎನ್ಫೀಲ್ಡ್ ಹಿಮಾಲಯನ್ ಮಾದರಿಯಲ್ಲಿ 411 ಸಿಸಿಯ ಸಿಂಗಲ್ ಸಿಲಿಂಡರ್ ಏರ್ ಕೂಲ್ಡ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 23.9 ಬಿಹೆಚ್‍ಪಿ ಪವರ್ ಮತ್ತು 32 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಈ ಬೈಕಿನಲ್ಲಿ 5 ಸ್ಪೀಡ್ ಗೇರ್‌ಬಾಕ್ಸ್ ನೀಡಲಾಗಿದೆ.
MOST READ: ಬಿಡುಗಡೆಯ ಸನಿಹದಲ್ಲಿ ಬಹುನಿರೀಕ್ಷಿತ ಬಿಎಸ್-6 ಹೀರೋ ಬೈಕುಗಳು

ಬೈಕಿನ ಮುಂಭಾಗದಲ್ಲಿ 21 ಇಂಚಿನ ಮತ್ತು ಹಿಂಭಾಗದಲ್ಲಿ 17 ಇಂಚಿನ ಸ್ಪೋಕ್ ವ್ಹೀಲ್‍ಗಳಿದ್ದು, ಕ್ರಮವಾಗಿ 90/90 ಹಾಗೂ 120/90 ಸೆಕ್ಷನ್ ಟಯರ್‌ಗಳನ್ನು ಹೊಂದಿವೆ. ಬ್ರೇಕಿಂಗ್‍ಗಳಿಗಾಗಿ ಮುಂಭಾಗದಲ್ಲಿ ಎರಡು ಪಿಸ್ಟನ್ ಕ್ಯಾಲಿಪರ್‍ನ 300 ಎಂಎಂ ಫ್ರಂಟ್ ಡಿಸ್ಕ್ ಹಾಗೂ ಹಿಂಭಾಗದಲ್ಲಿ 240 ಎಂಎಂನ ಸಿಂಗಲ್ ಪಿಸ್ಟನ್ ಕ್ಯಾಲಿಪರ್‍ಗಳಿವೆ.

ರಾಯಲ್ ಎನ್ಫೀಲ್ಡ್ ಹಿಮಾಲಯನ್ ಬೈಕ್ ಮಾರುಕಟ್ಟೆಯಲ್ಲಿ ಬಿಎಂಡಬ್ಲ್ಯು ಜಿ 310 ಜಿಎಸ್ ಹಾಗೂ ಕವಾಸಕಿ ವರ್ಸಿಸ್-ಎಕ್ಸ್ 300, ಕೆಟಿಎಂ 390 ಬೈಕುಗಳಿಗೆ ಪೈಪೋಟಿ ನೀಡುತ್ತದೆ. 2021ರ ರಾಯಲ್ ಎನ್ಫೀಲ್ಡ್ ಹಿಮಾಲಯನ್ ಬೈಕನ್ನು ಕಂಪನಿಯ ತಮಿಳುನಾಡು ಘಟಕದಿಂದ ಪ್ರಪಂಚಾದ್ಯಂತ ರಫ್ತು ಮಾಡಲಾಗುತ್ತದೆ.


Click it and Unblock the Notifications