ಮತ್ತಷ್ಟು ತಡವಾಗಲಿದೆ ರಾಯಲ್ ಎನ್‍ಫೀಲ್ಡ್ ಮೆಟಿಯೋರ್ 350 ಬೈಕ್ ಬಿಡುಗಡೆ

ಜನಪ್ರಿಯ ದ್ವಿಚಕ್ರ ತಯಾರಕ ಕಂಪನಿಯಾದ ರಾಯಲ್ ಎನ್‍ಫೀಲ್ಡ್ ತನ್ನ ಮೆಟಿಯೋರ್ 350 ಬೈಕನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ. ಈ ರಾಯಲ್ ಎನ್‍ಫೀಲ್ಡ್ ಮೆಟಿಯೋರ್ 350 ಮಾದರಿ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಬೈಕುಗಳಲ್ಲಿ ಒಂದಾಗಿದೆ.

ಮತ್ತಷ್ಟು ತಡವಾಗಲಿದೆ ರಾಯಲ್ ಎನ್‍ಫೀಲ್ಡ್ ಮೆಟಿಯೋರ್ 350 ಬೈಕ್ ಬಿಡುಗಡೆ

ಈ ಹಿಂದೆ ಹೊಸ ರಾಯಲ್ ಎನ್‍ಫೀಲ್ಡ್ ಮೆಟಿಯೋರ್ 350 ಬೈಕ್ ಇದೇ ತಿಂಗಳು ಬಿಡುಗಡೆಯಾಗಲಿದೆ ಎಂದು ವರದಿಗಳು ಪ್ರಕಟವಾಗಿತ್ತು. ಆದರೆ ಹೊಸ ವರದಿಗಳ ಪ್ರಕಾರ, ಹೊಸ ರಾಯಲ್ ಎನ್‍ಫೀಲ್ಡ್ ಮೆಟಿಯೋರ್ 350 ಬೈಕ್ ಬಿಡುಗಡೆಯು ಮತ್ತೆ ಮುಂದೂಡಲಾಗಿದೆ. ಹೊಸ ರಾಯಲ್ ಎನ್‍ಫೀಲ್ಡ್ ಮೆಟಿಯೋರ್ 350 ಬೈಕ್ ದೀಪಾವಳಿ ಹಬ್ಬದ ವೇಳೆಯಲ್ಲಿ ಬಿಡುಗಡೆಯಾಗುವುದಿಲ್ಲ. ದೀಪಾವಳಿ ಹಬ್ಬದ ಶುಭ ಸಮಯದಲ್ಲಿ ಬಿಡುಗಡೆಯಾಗದಿರುವುದು ರಾಯಲ್ ಎನ್‍ಫೀಲ್ಡ್ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದೆ.

ಮತ್ತಷ್ಟು ತಡವಾಗಲಿದೆ ರಾಯಲ್ ಎನ್‍ಫೀಲ್ಡ್ ಮೆಟಿಯೋರ್ 350 ಬೈಕ್ ಬಿಡುಗಡೆ

ಹೊಸ ರಾಯಲ್ ಎನ್‍ಫೀಲ್ಡ್ ಮೆಟಿಯೋರ್ 350 ಬೈಕಿನ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.1.65 ಲಕ್ಷಗಳಾಗಿರಬಹುದು ಎಂದು ನಿರೀಕ್ಷಿಸುತ್ತೇವೆ. ಹೊಸ ರಾಯಲ್ ಎನ್‌ಫೀಲ್ಡ್ ಮೆಟಿಯೋರ್ 350 ಬೈಕ್ 2140 ಎಂಎಂ ಉದ್ದ, 1140 ಎಂಎಂ ಎತ್ತರ, ಸೀಟ್ ಎತ್ತರ 765 ಎಂಎಂ, ಗ್ರೌಂಡ್ ಕ್ಲಿಯರೆನ್ಸ್ 170 ಎಂಎಂ ಮತ್ತು ವ್ಹೀಲ್ ಬೇಸ್ 1400 ಎಂಎಂ ಆಗಿದೆ.

MOST READ: ದುಬಾರಿಯಾಯ್ತು ಜನಪ್ರಿಯ ಬಜಾಜ್ ಪಲ್ಸರ್ ಎನ್ಎಸ್ ಬೈಕುಗಳು

ಮತ್ತಷ್ಟು ತಡವಾಗಲಿದೆ ರಾಯಲ್ ಎನ್‍ಫೀಲ್ಡ್ ಮೆಟಿಯೋರ್ 350 ಬೈಕ್ ಬಿಡುಗಡೆ

ರಾಯಲ್ ಎನ್‌ಫೀಲ್ಡ್ ಮೆಟಿಯೋರ್ 350 ಬೈಕ್ ದುಂಡಗಿನ ಆಕಾರದ ಹ್ಯಾಲೊಜೆನ್ ಹೆಡ್‌ಲ್ಯಾಂಪ್ ಅನ್ನು ಹೊಂದಿರುತ್ತದೆ. ನಿರೀಕ್ಷೆಯಂತೆ ಪೂರ್ಣ ಎಲ್ಇಡಿ ಯುನಿಟ್ ಅಲ್ಲ, ಆದರೆ ಹೆಡ್‌ಲ್ಯಾಂಪ್‌ನ ಸುತ್ತ ಎಲ್ಇಡಿ ರಿಂಗ್ ಹೊಂದಿರುತ್ತದೆ.

ಮತ್ತಷ್ಟು ತಡವಾಗಲಿದೆ ರಾಯಲ್ ಎನ್‍ಫೀಲ್ಡ್ ಮೆಟಿಯೋರ್ 350 ಬೈಕ್ ಬಿಡುಗಡೆ

ಈ ಹೊಸ ಬೈಕ್ ಫೈರ್‌ಬಾಲ್, ಸ್ಟೆಲ್ಲಾರ್ ಮತ್ತು ಸೂಪರ್‌ನೊವಾ ಎಂಬ ಮೂರು ರೂಪಾಂತರಗಳಲ್ಲಿ ಲಭ್ಯವಿದೆ. ಇದರಲ್ಲಿ ಫೈರ್‌ಬಾಲ್ ರೂಪಾಂತರವು ಬ್ಲ್ಯಾಕ್ ಔಟ್ ಕಾಂಪೊನೆಟ್ಸ್, ಸಿಂಗಲ್ ಬಣ್ಣದ ಗ್ರಾಫಿಕ್ಸ್ ನೊಂದಿಗೆ ಫ್ಯೂಯಲ್ ಟ್ಯಾಂಕ್, ಬ್ಲ್ಯಾಕ್ ಎಂಜಿನ್ ಮತ್ತು ಬಣ್ಣದ ರಿಮ್ ಟೇಪ್ ಅನ್ನು ಹೊಂದಿದೆ.

MOST READ: ದುಬಾರಿಯಾಯ್ತು ಜನಪ್ರಿಯ ಬಿಎಸ್-6 ಯಮಹಾ ಎಂಟಿ-15 ಬೈಕ್

ಮತ್ತಷ್ಟು ತಡವಾಗಲಿದೆ ರಾಯಲ್ ಎನ್‍ಫೀಲ್ಡ್ ಮೆಟಿಯೋರ್ 350 ಬೈಕ್ ಬಿಡುಗಡೆ

ಸ್ಟೆಲ್ಲಾರ್ ರೂಪಾಂತರದಲ್ಲಿ ಬ್ಯಾಡ್ಜ್‌ಗಳು, ಕ್ರೋಮ್ ಎಕ್ಸಾಸ್ಟ್, ಕ್ರೋಮ್ ಹ್ಯಾಂಡಲ್‌ಬಾರ್ ಮತ್ತು ಕ್ರೋಮ್ ಇಎಫ್‌ಐ ಕವರ್ ಅನ್ನು ಪಡೆಯುತ್ತದೆ. ಇದು ಬ್ಯಾಕ್ ರೆಸ್ಟ್ ಸಹ ಒಳಗೂಂಡಿದೆ. ಇನ್ನು ಸೂಪರ್‌ನೊವಾ ಎಂಬ ರೂಪಾಂತರವು ಡ್ಯುಯಲ್-ಟೋನ್ ಬಣ್ಣದ ಆಯ್ಕೆಯನ್ನು ಹೊಂದಿದ್ದು, ಇದು ಪ್ರೀಮಿಯಂ ಸೀಟ್ ಫಿನಿಶಿಂಗ್, ವಿಂಡ್‌ಸ್ಕ್ರೀನ್ ಮತ್ತು ಕ್ರೋಮ್ ಇಂಡಿಕೇಟರ್ ಸಹ ಹೊಂದಿದೆ.

ಮತ್ತಷ್ಟು ತಡವಾಗಲಿದೆ ರಾಯಲ್ ಎನ್‍ಫೀಲ್ಡ್ ಮೆಟಿಯೋರ್ 350 ಬೈಕ್ ಬಿಡುಗಡೆ

ಈ ಹೊಸ ರಾಯಲ್ ಎನ್‍ಫೀಲ್ಡ್ ಮೆಟಿಯೋರ್ 350 ಬೈಕ್ ಭಾರತದಲ್ಲಿ ಹಲವು ಬಾರಿ ಸ್ಪಾಟ್ ಟೆಸ್ಟ್ ನಡೆಸಲಾಗಿದೆ. ಈ ಬೈಕಿನಲ್ಲಿ ಎರಡು ಡಿಸ್‌ಪ್ಲೇಯನ್ನು ಹೊಂದಿರುವ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಅನ್ನು ಹೊಂದಿರುವುದು ಬಹಿರಂಗವಾಗಿದೆ. ಇದರಲ್ಲಿ ಟ್ರಿಪ್ಪರ್ ನ್ಯಾವಿಗೇಷನ್ ಸಿಸ್ಟಂ ಅನ್ನು ಕೂಡ ಹೊಂದಿರಲಿದೆ.

MOST READ: ದುಬಾರಿಯಾಯ್ತು ಬಿಎಸ್-6 ಟಿವಿಎಸ್ ಎನ್‌ಟಾರ್ಕ್ 125 ಸ್ಕೂಟರ್

ಮತ್ತಷ್ಟು ತಡವಾಗಲಿದೆ ರಾಯಲ್ ಎನ್‍ಫೀಲ್ಡ್ ಮೆಟಿಯೋರ್ 350 ಬೈಕ್ ಬಿಡುಗಡೆ

ಇದರಲ್ಲಿ ಕ್ಲಾಕ್, ಫ್ಯೂಯಲ್ ಗೇಜ್, ಓಡೋಮೀಟರ್ ಮತ್ತು ಟ್ರಿಪ್ ಮೀಟರ್‌ನಂತಹ ಮಾಹಿತಿಯನ್ನು ಪ್ರದರ್ಶಿಸಿದರೆ, ಮತ್ತೊಂದು ಟಿಎಫ್‌ಟಿ ಯುನಿಟ್ ನಲ್ಲಿ ಟರ್ನ್-ಬೈ-ಟರ್ನ್ ನ್ಯಾವಿಗೇಷನ್ ಮಾಹಿತಿಯನ್ನು ನೀಡುತ್ತದೆ. ಈ ಡಿಜಿಟಲ್ ಕ್ಲಸ್ಟರ್ ಅನ್ನು ಬ್ಲೂಟೂತ್ ಮೂಲಕ ಕನೆಕ್ಟ್ ಮಾಡಬಹುದಾಗಿದೆ.

ಮತ್ತಷ್ಟು ತಡವಾಗಲಿದೆ ರಾಯಲ್ ಎನ್‍ಫೀಲ್ಡ್ ಮೆಟಿಯೋರ್ 350 ಬೈಕ್ ಬಿಡುಗಡೆ

ಈ ಬೈಕಿನಲ್ಲಿ 346 ಸಿಸಿ ಏರ್-ಕೂಲ್ಡ್ ಸಿಂಗಲ್ ಸಿಲಿಂಡರ್ ಎಂಜಿನ್‌ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ ಫ್ರಿ ಕ್ಯಾಟಲಿಕ್ ಕರ್ನವಾಟರ್ ಅನ್ನು ಎಕ್ಸಾಸ್ಟ್ ಸಿಸ್ಟಂನೊಂದಿಗೆ ಜೋಡಿಸಲಾಗಿದೆ. ಈ ಎಂಜಿನ್ ಉತ್ತಮ ಇಂಧನ ಧಕ್ಷತೆಯನು ಹೊಂದಿದೆ.

ಮತ್ತಷ್ಟು ತಡವಾಗಲಿದೆ ರಾಯಲ್ ಎನ್‍ಫೀಲ್ಡ್ ಮೆಟಿಯೋರ್ 350 ಬೈಕ್ ಬಿಡುಗಡೆ

ಈ ಹೊಸ ರಾಯಲ್ ಎನ್‍ಫೀಲ್ಡ್ ಮೆಟಿಯೋರ್ ಬೈಕ್ ಭಾರತೀಯ ಮಾರುಕಟ್ಟೆಯಲ್ಲಿ ಗ್ರಾಹಕರನ್ನು ಸೆಳೆಯುವಲ್ಲಿ ಯಶ್ವಸಿಯಾಗಬಹುದು ಎಂದು ನಿರೀಕ್ಷಿಸುತ್ತೇವೆ. ಹೊಸ ರಾಯಲ್ ಎನ್‌ಫೀಲ್ಡ್ ಮೆಟಿಯೋರ್ 350 ಬೈಕ್ ಥಂಡರ್‌ಬರ್ಡ್ ಎಕ್ಸ್ 350 ಮಾದರಿಯ ರೆಟ್ರೂ-ಅರ್ಬನ್ ಕ್ರೂಸರ್ ವಿನ್ಯಾಸವನ್ನು ಹೊಂದಿದೆ.

Article Published On: Friday, October 9, 2020, 14:00 [IST]
English summary
Royal Enfield Meteor 350 Delayed Again, To Launch After Diwali. Read In Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+