ರಾಯಲ್ ಎನ್‍ಫೀಲ್ಡ್ ಮೆಟಿಯೋರ್ 350 ಬೈಕಿನ ಮಾಹಿತಿ ಬಹಿರಂಗ

ಜನಪ್ರಿಯ ದ್ವಿಚಕ್ರ ತಯಾರಕ ಕಂಪನಿಯಾದ ರಾಯಲ್ ಎನ್‍ಫೀಲ್ಡ್ ತನ್ನ ಮೆಟಿಯೋರ್ 350 ಬೈಕನ್ನು ಭಾರತೀಯ ಮಾರುಕಟ್ಟೆಯಲ್ಲಿ ಶೀಘ್ರದಲ್ಲೇ ಬಿಡುಗಡೆಗೊಳಿಸಲಿದೆ. ಈ ಹೊಸ ರಾಯಲ್ ಎನ್‍ಫೀಲ್ಡ್ ಮೆಟಿಯೋರ್ 350 ಬೈಕಿನ ಮಾಹಿತಿಗಳು ಬಹಿರಂಗವಾಗಿವೆ.

ರಾಯಲ್ ಎನ್‍ಫೀಲ್ಡ್ ಮೆಟಿಯೋರ್ 350 ಬೈಕಿನ ಮಾಹಿತಿ ಬಹಿರಂಗ

ರಾಯಲ್ ಎನ್‍ಫೀಲ್ಡ್ ಕಂಪನಿಯು ತನ್ನ ಮೆಟಿಯೋರ್ ಬೈಕನ್ನು ಜೂನ್ ತಿಂಗಳಲ್ಲಿ ಬಿಡುಗಡೆಯಾಗಲಿದೆ ವರದಿಗಳಾಗಿತ್ತು. ಆದರೆ ಕಾರೋನ ಸೋಂಕಿನ ಭೀತಿಯಿಂದ ಈ ಬೈಕಿನ ಬಿಡುಗಡೆಯು ವಿಳಂಬವಾಗಿದೆ. ಈ ಮೆಟಿಯೋರ್ ಬೈಕನ್ನು ಭಾರತದಲ್ಲಿ 2020ರ ಸೆಪ್ಟಂಬರ್ ತಿಂಗಳಲ್ಲಿ ಬಿಡುಗಡೆಗೊಳಿಸಲಿದೆ. ಹೊಸ ರಾಯಲ್ ಎನ್‍ಫೀಲ್ಡ್ ಮೆಟಿಯೋರ್ 350 ಬೈಕಿನ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.1.65 ಲಕ್ಷಗಳಾಗಿರಲಿದೆ ಎಂದು ನಿರೀಕ್ಷಿಸುತ್ತೇವೆ.

ರಾಯಲ್ ಎನ್‍ಫೀಲ್ಡ್ ಮೆಟಿಯೋರ್ 350 ಬೈಕಿನ ಮಾಹಿತಿ ಬಹಿರಂಗ

ರಾಯಲ್ ಎನ್‌ಫೀಲ್ಡ್ ಮೆಟಿಯೋರ್ 350 ಬೈಕಿನ ಮಾಹಿತಿಗಳು ಆನ್‌ಲೈನ್‌ನಲ್ಲಿ ಬಹಿರಂಗವಾಗಿದೆ. ಈ ಹೊಸ ಬೈಕ್ ಫೈರ್‌ಬಾಲ್, ಸ್ಟೆಲ್ಲಾರ್ ಮತ್ತು ಸೂಪರ್‌ನೊವಾ ಎಂಬ ಮೂರು ರೂಪಾಂತರಗಳಲ್ಲಿ ಲಭ್ಯವಿದೆ.

MOST READ: ಬಿಡುಗಡೆಯಾಯ್ತು ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್‍‍ಮಾಸ್ಟರ್ ಬೈಕ್

ರಾಯಲ್ ಎನ್‍ಫೀಲ್ಡ್ ಮೆಟಿಯೋರ್ 350 ಬೈಕಿನ ಮಾಹಿತಿ ಬಹಿರಂಗ

ಇದರಲ್ಲಿ ಫೈರ್‌ಬಾಲ್ ರೂಪಾಂತರವು ಬ್ಲ್ಯಾಕ್ ಔಟ್ ಕಾಂಪೊನೆಟ್ಸ್, ಸಿಂಗಲ್ ಬಣ್ಣದ ಗ್ರಾಫಿಕ್ಸ್ ನೊಂದಿಗೆ ಫ್ಯೂಯಲ್ ಟ್ಯಾಂಕ್, ಬ್ಲ್ಯಾಕ್ ಎಂಜಿನ್ ಮತ್ತು ಬಣ್ಣದ ರಿಮ್ ಟೇಪ್ ಅನ್ನು ಹೊಂದಿದೆ.

ರಾಯಲ್ ಎನ್‍ಫೀಲ್ಡ್ ಮೆಟಿಯೋರ್ 350 ಬೈಕಿನ ಮಾಹಿತಿ ಬಹಿರಂಗ

ಸ್ಟೆಲ್ಲಾರ್ ರೂಪಾಂತರದಲ್ಲಿ ಬ್ಯಾಡ್ಜ್‌ಗಳು, ಕ್ರೋಮ್ ಎಕ್ಸಾಸ್ಟ್, ಕ್ರೋಮ್ ಹ್ಯಾಂಡಲ್‌ಬಾರ್ ಮತ್ತು ಕ್ರೋಮ್ ಇಎಫ್‌ಐ ಕವರ್ ಅನ್ನು ಪಡೆಯುತ್ತದೆ. ಇದು ಬ್ಯಾಕ್ ರೆಸ್ಟ್ ಸಹ ಒಳಗೂಂಡಿದೆ. ಇನ್ನು ಸೂಪರ್‌ನೊವಾ ಎಂಬ ರೂಪಾಂತರವು ಡ್ಯುಯಲ್-ಟೋನ್ ಬಣ್ಣದ ಆಯ್ಕೆಯನ್ನು ಹೊಂದಿದ್ದು, ಇದು ಪ್ರೀಮಿಯಂ ಸೀಟ್ ಫಿನಿಶಿಂಗ್, ವಿಂಡ್‌ಸ್ಕ್ರೀನ್ ಮತ್ತು ಕ್ರೋಮ್ ಇಂಡಿಕೇಟರ್ ಸಹ ಹೊಂದಿದೆ.

MOST READ: ಬಿಡುಗಡೆಯ ಸನಿಹದಲ್ಲಿ ಬಹುನಿರೀಕ್ಷಿತ ಬಿಎಸ್-6 ಹೀರೋ ಬೈಕುಗಳು

ರಾಯಲ್ ಎನ್‍ಫೀಲ್ಡ್ ಮೆಟಿಯೋರ್ 350 ಬೈಕಿನ ಮಾಹಿತಿ ಬಹಿರಂಗ

ಹೊಸ ರಾಯಲ್ ಎನ್‌ಫೀಲ್ಡ್ ಮೆಟಿಯೋರ್ 350 ಬೈಕ್, ಫೈರ್‌ಬಾಲ್ ಯೆಲ್ಲೋ, ಫೈರ್‌ಬಾಲ್ ರೆಡ್, ಸ್ಟೆಲ್ಲಾರ್ ರೆಡ್ ಮೆಟಾಲಿಕ್, ಸ್ಟೆಲ್ಲಾರ್ ಬ್ಲ್ಯಾಕ್ ಮ್ಯಾಟ್, ಸ್ಟೆಲ್ಲಾರ್ ಬ್ಲೂ ಮೆಟಾಲಿಕ್, ಸೂಪರ್‌ನೊವಾ ಬ್ರೌನ್ ಬ್ರೌನ್ ಡ್ಯುಯಲ್-ಟೋನ್ ಮತ್ತು ಸೂಪರ್‌ನೊವಾ ಬ್ಲೂ ಡ್ಯುಯಲ್-ಟೋನ್ ಎಂಬ ಏಳು ಬಣ್ಣಗಳ ಆಯ್ಕೆಯಲ್ಲಿ ಲಭ್ಯವಿರಲಿದೆ.

ರಾಯಲ್ ಎನ್‍ಫೀಲ್ಡ್ ಮೆಟಿಯೋರ್ 350 ಬೈಕಿನ ಮಾಹಿತಿ ಬಹಿರಂಗ

ಈ ಹೊಸ ರಾಯಲ್ ಎನ್‍ಫೀಲ್ಡ್ ಮೆಟಿಯೋರ್ 350 ಬೈಕ್ ಭಾರತದಲ್ಲಿ ಹಲವು ಬಾರಿ ಸ್ಪಾಟ್ ಟೆಸ್ಟ್ ನಡೆಸಲಾಗಿದೆ. ಸ್ಪಾಟ್ ಟೆಸ್ಟ್ ನಲ್ಲಿ ಈ ಬೈಕಿನಲ್ಲಿ ಎರಡು ಡಿಸ್‌ಪ್ಲೇಯನ್ನು ಹೊಂದಿರುವ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಅನ್ನು ಹೊಂದಿರುವುದು ಬಹಿರಂಗವಾಗಿದೆ.

MOST READ: ಬಿಡುಗಡೆಯಾಯ್ತು ಬಹುನಿರೀಕ್ಷಿತ ಹೊಸ ಹೋಂಡಾ ಎಕ್ಸ್-ಬ್ಲೇಡ್ ಬೈಕ್

ರಾಯಲ್ ಎನ್‍ಫೀಲ್ಡ್ ಮೆಟಿಯೋರ್ 350 ಬೈಕಿನ ಮಾಹಿತಿ ಬಹಿರಂಗ

ಇದರಲ್ಲಿ ಕ್ಲಾಕ್, ಫ್ಯೂಯಲ್ ಗೇಜ್, ಓಡೋಮೀಟರ್ ಮತ್ತು ಟ್ರಿಪ್ ಮೀಟರ್‌ನಂತಹ ಮಾಹಿತಿಯನ್ನು ಪ್ರದರ್ಶಿಸಿದರೆ, ಇನ್ನೊಂದು ಟಿಎಫ್‌ಟಿ ಯುನಿಟ್ ನಲ್ಲಿ ಟರ್ನ್-ಬೈ-ಟರ್ನ್ ನ್ಯಾವಿಗೇಷನ್ ಮಾಹಿತಿಯನ್ನು ನೀಡುತ್ತದೆ. ಈ ಡಿಜಿಟಲ್ ಕ್ಲಸ್ಟರ್ ಅನ್ನು ಬ್ಲೂಟೂತ್ ಮೂಲಕ ಕನೆಕ್ಟ್ ಮಾಡಬಹುದಾಗಿದೆ.

ರಾಯಲ್ ಎನ್‍ಫೀಲ್ಡ್ ಮೆಟಿಯೋರ್ 350 ಬೈಕಿನ ಮಾಹಿತಿ ಬಹಿರಂಗ

ಈ ಬೈಕಿನಲ್ಲಿ 346 ಸಿಸಿ ಏರ್-ಕೂಲ್ಡ್ ಸಿಂಗಲ್ ಸಿಲಿಂಡರ್ ಎಂಜಿನ್‌ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ ಫ್ರಿ ಕ್ಯಾಟಲಿಕ್ ಕರ್ನವಾಟರ್ ಅನ್ನು ಎಕ್ಸಾಸ್ಟ್ ಸಿಸ್ಟಂನೊಂದಿಗೆ ಜೋಡಿಸಲಾಗಿದೆ. ಈ ಎಂಜಿನ್ ಉತ್ತಮ ಇಂಧನ ಧಕ್ಷತೆಯನು ಹೊಂದಿದೆ. ಪ್ರಸ್ತುತ ಟ್ಯಾಪೆಟ್-ವಾಲ್ವ್ ಯುಸಿಇ 346 ಸಿಸಿ ಎಂಜಿನ್‌ಗಳಿಗಿಂತ ಹೆಚ್ಚಿನ ಕಾರ್ಯಕ್ಷಮತೆಯನ್ನು ನೀಡುತ್ತದೆ.

Most Read Articles

Kannada
English summary
Royal Enfield Meteor 350 Leaks – 7 Colours, 3 Variants. Read In Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X