Just In
- 36 min ago Jonty Rhodes: ರಾಯಲ್ ಎನ್ಫೀಲ್ಡ್ ಬೈಕ್ಗಳಿಗೆ ಮನಸೋತ ದ.ಆಫ್ರಿಕಾ ಕ್ರಿಕೆಟರ್!
- 14 hrs ago ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- 15 hrs ago KTM Duke 125 ಬೆಲೆಗೆ ಯಾವೆಲ್ಲಾ ಬೈಕ್ಗಳು ಸಿಗುತ್ತೆ ಗೊತ್ತಾ?: ಪಲ್ಸರ್ನಿಂದ ಹಿಡಿದು MT 15 ವರೆಗೆ
- 15 hrs ago ಅಡ್ವೆಂಚರ್ ಬೈಕ್ ಪ್ರಿಯರಿಗೆ ಸಿಹಿಸುದ್ದಿ: ಬಿಡುಗಡೆಗೆ ಸಜ್ಜಾದ ಸುಜುಕಿ V-Strom 800 DE ಬೈಕ್
Don't Miss!
- News ಆಸ್ತಿ ವಿವರ ಘೋಷಿಸಿದ ಪ್ರಜ್ವಲ್ ರೇವಣ್ಣ: ದೊಡ್ಡಗೌಡರ ಮೊಮ್ಮಗ ಎಷ್ಟು ಕೋಟಿ ಒಡೆಯ ಗೊತ್ತಾ?
- Sports Virat Kohli vs Gautam Gambhir: ವಿರಾಟ್, ಗೌತಮ್ ನಡುವೆ ಬಿರುಕು ಹುಟ್ಟಲು ಕಾರವೇನು? ಇಲ್ಲಿದೆ ಮಾಹಿತಿ
- Lifestyle ಗುಡ್ಫ್ರೈಡೆ ಆಚರಣೆ ಹುಟ್ಟಿದ್ದು ಹೇಗೆ? ಇದರ ಮಹತ್ವವೇನು ಗೊತ್ತಾ?
- Movies ಮಂಗಳ ಗ್ರಹದಿಂದ ಬಂದಿದ್ದಾರೆ ಎಂಬಷ್ಟು ವಿಚಿತ್ರ ವ್ಯಕ್ತಿ ರಾಹುಲ್ ಗಾಂಧಿ ; ಕಂಗನಾ ರಣಾವತ್..!
- Finance ಕಳೆದ 5 ವರ್ಷಗಳಲ್ಲಿ ಸಂಸದ ಡಿಕೆ ಸುರೇಶ್ ಅವರ ಆಸ್ತಿ 75% ರಷ್ಟು ಹೆಚ್ಚಳ, ವಿವರ
- Technology ಬಿಎಸ್ಎನ್ಎಲ್ ಗ್ರಾಹಕರಿಗೆ ಸಿಹಿಸುದ್ದಿ!..ಬಜೆಟ್ ದರದಲ್ಲಿ ಹೊಸ ಪ್ಲ್ಯಾನ್ ಲಾಂಚ್!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮೆಟಿಯೋರ್ 350 ಬೈಕ್ ಬಿಡುಗಡೆ ಮುಂದೂಡಿದ ರಾಯಲ್ ಎನ್ಫೀಲ್ಡ್
ಜನಪ್ರಿಯ ದ್ವಿಚಕ್ರ ತಯಾರಕ ಕಂಪನಿಯಾದ ರಾಯಲ್ ಎನ್ಫೀಲ್ಡ್ ತನ್ನ ಮೆಟಿಯೋರ್ 350 ಬೈಕನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗಿದೆ. ಈ ರಾಯಲ್ ಎನ್ಫೀಲ್ಡ್ ಮೆಟಿಯೋರ್ 350 ಬೈಕ್ ಹೊಸ ಫೀಚರ್ ಗಳೊಂದಿಗೆ ಮಾರುಕಟ್ಟೆಗೆ ಲಗ್ಗೆ ಇಡಲಿದೆ.
ಈ ಹಿಂದೆ ಹೊಸ ರಾಯಲ್ ಎನ್ಫೀಲ್ಡ್ ಮೆಟಿಯೋರ್ 350 ಬೈಕ್ ಇದೇ ತಿಂಗಳು ಬಿಡುಗಡೆಯಾಗಲಿದೆ ಎಂದು ವರದಿಗಳು ಪ್ರಕಟವಾಗಿತ್ತು. ಆದರೆ ಹೊಸ ವರದಿಗಳ ಪ್ರಕಾರ, ಹೊಸ ರಾಯಲ್ ಎನ್ಫೀಲ್ಡ್ ಮೆಟಿಯೋರ್ 350 ಬೈಕ್ ಬಿಡುಗಡೆಯು ಮುಂದಿನ ತಿಂಗಳಿಗೆ ಮುಂದೂಡಲಾಗಿದೆ. ಹೊಸ ರಾಯಲ್ ಎನ್ಫೀಲ್ಡ್ ಮೆಟಿಯೋರ್ 350 ಬೈಕಿನ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.1.65 ಲಕ್ಷಗಳಾಗಿರಬಹುದು ಎಂದು ನಿರೀಕ್ಷಿಸುತ್ತೇವೆ.
ಹೊಸ ರಾಯಲ್ ಎನ್ಫೀಲ್ಡ್ ಮೆಟಿಯೋರ್ 350 ಬೈಕ್ 2140 ಎಂಎಂ ಉದ್ದ, 1140 ಎಂಎಂ ಎತ್ತರ, ಸೀಟ್ ಎತ್ತರ 765 ಎಂಎಂ, ಗ್ರೌಂಡ್ ಕ್ಲಿಯರೆನ್ಸ್ 170 ಎಂಎಂ ಮತ್ತು ವ್ಹೀಲ್ ಬೇಸ್ 1400 ಎಂಎಂ ಆಗಿದೆ. ಈ ಬೈಕಿಗೆ 3 ವರ್ಷಗಳ ವಾರಂಟಿಯನ್ನು ನೀಡಿದ್ದಾರೆ.
MOST READ: ದುಬಾರಿಯಾಯ್ತು ಜನಪ್ರಿಯ ಬಿಎಸ್-6 ಯಮಹಾ ಎಂಟಿ-15 ಬೈಕ್
ರಾಯಲ್ ಎನ್ಫೀಲ್ಡ್ ಮೆಟಿಯೋರ್ 350 ಬೈಕ್ ದುಂಡಗಿನ ಆಕಾರದ ಹ್ಯಾಲೊಜೆನ್ ಹೆಡ್ಲ್ಯಾಂಪ್ ಅನ್ನು ಹೊಂದಿರುತ್ತದೆ. ನಿರೀಕ್ಷೆಯಂತೆ ಪೂರ್ಣ ಎಲ್ಇಡಿ ಯುನಿಟ್ ಅಲ್ಲ, ಆದರೆ ಹೆಡ್ಲ್ಯಾಂಪ್ನ ಸುತ್ತ ಎಲ್ಇಡಿ ರಿಂಗ್ ಹೊಂದಿರುತ್ತದೆ.
ಈ ಹೊಸ ಬೈಕ್ ಫೈರ್ಬಾಲ್, ಸ್ಟೆಲ್ಲಾರ್ ಮತ್ತು ಸೂಪರ್ನೊವಾ ಎಂಬ ಮೂರು ರೂಪಾಂತರಗಳಲ್ಲಿ ಲಭ್ಯವಿದೆ. ಇದರಲ್ಲಿ ಫೈರ್ಬಾಲ್ ರೂಪಾಂತರವು ಬ್ಲ್ಯಾಕ್ ಔಟ್ ಕಾಂಪೊನೆಟ್ಸ್, ಸಿಂಗಲ್ ಬಣ್ಣದ ಗ್ರಾಫಿಕ್ಸ್ ನೊಂದಿಗೆ ಫ್ಯೂಯಲ್ ಟ್ಯಾಂಕ್, ಬ್ಲ್ಯಾಕ್ ಎಂಜಿನ್ ಮತ್ತು ಬಣ್ಣದ ರಿಮ್ ಟೇಪ್ ಅನ್ನು ಹೊಂದಿದೆ.
MOST READ: ಹೊಸ ಬಣ್ಣದ ಆಯ್ಕೆಯನ್ನು ಪಡೆದುಕೊಂಡ 2021ರ ಕವಾಸಕಿ ನಿಂಜಾ 1000 ಎಸ್ಎಕ್ಸ್ ಬೈಕ್
ಸ್ಟೆಲ್ಲಾರ್ ರೂಪಾಂತರದಲ್ಲಿ ಬ್ಯಾಡ್ಜ್ಗಳು, ಕ್ರೋಮ್ ಎಕ್ಸಾಸ್ಟ್, ಕ್ರೋಮ್ ಹ್ಯಾಂಡಲ್ಬಾರ್ ಮತ್ತು ಕ್ರೋಮ್ ಇಎಫ್ಐ ಕವರ್ ಅನ್ನು ಪಡೆಯುತ್ತದೆ. ಇದು ಬ್ಯಾಕ್ ರೆಸ್ಟ್ ಸಹ ಒಳಗೂಂಡಿದೆ. ಇನ್ನು ಸೂಪರ್ನೊವಾ ಎಂಬ ರೂಪಾಂತರವು ಡ್ಯುಯಲ್-ಟೋನ್ ಬಣ್ಣದ ಆಯ್ಕೆಯನ್ನು ಹೊಂದಿದ್ದು, ಇದು ಪ್ರೀಮಿಯಂ ಸೀಟ್ ಫಿನಿಶಿಂಗ್, ವಿಂಡ್ಸ್ಕ್ರೀನ್ ಮತ್ತು ಕ್ರೋಮ್ ಇಂಡಿಕೇಟರ್ ಸಹ ಹೊಂದಿದೆ.
ಹೊಸ ರಾಯಲ್ ಎನ್ಫೀಲ್ಡ್ ಮೆಟಿಯೋರ್ 350 ಬೈಕ್, ಫೈರ್ಬಾಲ್ ಯೆಲ್ಲೋ, ಫೈರ್ಬಾಲ್ ರೆಡ್, ಸ್ಟೆಲ್ಲಾರ್ ರೆಡ್ ಮೆಟಾಲಿಕ್, ಸ್ಟೆಲ್ಲಾರ್ ಬ್ಲ್ಯಾಕ್ ಮ್ಯಾಟ್, ಸ್ಟೆಲ್ಲಾರ್ ಬ್ಲೂ ಮೆಟಾಲಿಕ್, ಸೂಪರ್ನೊವಾ ಬ್ರೌನ್ ಬ್ರೌನ್ ಡ್ಯುಯಲ್-ಟೋನ್ ಮತ್ತು ಸೂಪರ್ನೊವಾ ಬ್ಲೂ ಡ್ಯುಯಲ್-ಟೋನ್ ಎಂಬ ಏಳು ಬಣ್ಣಗಳ ಆಯ್ಕೆಯಲ್ಲಿ ಲಭ್ಯವಿರಲಿದೆ.
MOST READ: ಬಿಡುಗಡೆಯಾಯ್ತು ಹೊಸ ಕವಾಸಕಿ ವಲ್ಕನ್ ಎಸ್ ಬೈಕ್
ಈ ಹೊಸ ರಾಯಲ್ ಎನ್ಫೀಲ್ಡ್ ಮೆಟಿಯೋರ್ 350 ಬೈಕ್ ಭಾರತದಲ್ಲಿ ಹಲವು ಬಾರಿ ಸ್ಪಾಟ್ ಟೆಸ್ಟ್ ನಡೆಸಲಾಗಿದೆ. ಈ ಬೈಕಿನಲ್ಲಿ ಎರಡು ಡಿಸ್ಪ್ಲೇಯನ್ನು ಹೊಂದಿರುವ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಅನ್ನು ಹೊಂದಿರುವುದು ಬಹಿರಂಗವಾಗಿದೆ. ಇದರಲ್ಲಿ ಟ್ರಿಪ್ಪರ್ ನ್ಯಾವಿಗೇಷನ್ ಸಿಸ್ಟಂ ಅನ್ನು ಕೂಡ ಹೊಂದಿರಲಿದೆ.
ಇದರಲ್ಲಿ ಕ್ಲಾಕ್, ಫ್ಯೂಯಲ್ ಗೇಜ್, ಓಡೋಮೀಟರ್ ಮತ್ತು ಟ್ರಿಪ್ ಮೀಟರ್ನಂತಹ ಮಾಹಿತಿಯನ್ನು ಪ್ರದರ್ಶಿಸಿದರೆ, ಮತ್ತೊಂದು ಟಿಎಫ್ಟಿ ಯುನಿಟ್ ನಲ್ಲಿ ಟರ್ನ್-ಬೈ-ಟರ್ನ್ ನ್ಯಾವಿಗೇಷನ್ ಮಾಹಿತಿಯನ್ನು ನೀಡುತ್ತದೆ. ಈ ಡಿಜಿಟಲ್ ಕ್ಲಸ್ಟರ್ ಅನ್ನು ಬ್ಲೂಟೂತ್ ಮೂಲಕ ಕನೆಕ್ಟ್ ಮಾಡಬಹುದಾಗಿದೆ.
MOST READ: ಆಗಸ್ಟ್ ತಿಂಗಳ ಮಾರಾಟ ವರದಿ ಪ್ರಕಟಿಸಿದ ಸುಜುಕಿ ಮೋಟಾರ್ಸೈಕಲ್
ಈ ಬೈಕಿನಲ್ಲಿ 346 ಸಿಸಿ ಏರ್-ಕೂಲ್ಡ್ ಸಿಂಗಲ್ ಸಿಲಿಂಡರ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ ಫ್ರಿ ಕ್ಯಾಟಲಿಕ್ ಕರ್ನವಾಟರ್ ಅನ್ನು ಎಕ್ಸಾಸ್ಟ್ ಸಿಸ್ಟಂನೊಂದಿಗೆ ಜೋಡಿಸಲಾಗಿದೆ. ಈ ಎಂಜಿನ್ ಉತ್ತಮ ಇಂಧನ ಧಕ್ಷತೆಯನು ಹೊಂದಿದೆ.
ಹೊಸ ರಾಯಲ್ ಎನ್ಫೀಲ್ಡ್ ಮೆಟಿಯೋರ್ 350 ಬೈಕ್ ಥಂಡರ್ಬರ್ಡ್ ಎಕ್ಸ್ 350 ಮಾದರಿಯ ರೆಟ್ರೂ-ಅರ್ಬನ್ ಕ್ರೂಸರ್ ವಿನ್ಯಾಸವನ್ನು ಹೊಂದಿದೆ. ಈ ಹೊಸ ರಾಯಲ್ ಎನ್ಫೀಲ್ಡ್ ಮೆಟಿಯೋರ್ ಬೈಕ್ ಭಾರತೀಯ ಮಾರುಕಟ್ಟೆಯಲ್ಲಿ ಗ್ರಾಹಕರನ್ನು ಸೆಳೆಯುವಲ್ಲಿ ಯಶ್ವಸಿಯಾಗಬಹುದು ಎಂದು ನಿರೀಕ್ಷಿಸುತ್ತೇವೆ.