Just In
Don't Miss!
- News
ಕೋವಿಡ್ ಲಸಿಕೆ ಪಡೆದುಕೊಂಡಿದ್ದ ಆರೋಗ್ಯ ಇಲಾಖೆ ಉದ್ಯೋಗಿ ಹೃದಯಾಘಾತದಿಂದ ಸಾವು
- Sports
ಐಎಸ್ಎಲ್: ಅಂಕ ಹಂಚಿಕೊಂಡ ಈಸ್ಟ್ ಬೆಂಗಾಲ್ ಮತ್ತು ಚೆನ್ನೈಯಿನ್
- Finance
ಪ್ರಮುಖ ಮಾರುಕಟ್ಟೆಯಲ್ಲಿ ಅಡಿಕೆ, ಮೆಣಸು, ಕಾಫೀ ಜ. 18ರ ದರ
- Movies
ಶಿವಲಿಂಗಕ್ಕೆ ಅಪಮಾನ: ನಟಿಯ ವಿರುದ್ಧ ಮಾಜಿ ರಾಜ್ಯಪಾಲ ದೂರು
- Education
IIMB Recruitment 2021: ಪ್ರಾಜೆಕ್ಟ್ ಎಕ್ಸಿಕ್ಯುಟಿವ್- ಡೆವಲಪ್ಮೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Lifestyle
ಬಂಜೆತನಕ್ಕೆ ಕಾರಣವಾಗುವ ಥೈರಾಯ್ಡ್ ಲಕ್ಷಣಗಳು
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಹೊಸ ಫೀಚರ್‌ನೊಂದಿಗೆ ಬಿಡುಗಡೆಯಾಗಲಿದೆ ರಾಯಲ್ ಎನ್ಫೀಲ್ಡ್ ಮೆಟಿಯೋರ್ ಬೈಕ್
ಜನಪ್ರಿಯ ದ್ವಿಚಕ್ರ ತಯಾರಕ ಕಂಪನಿಯಾದ ರಾಯಲ್ ಎನ್‍ಫೀಲ್ಡ್ ತನ್ನ ಮೆಟಿಯೋರ್ 350 ಬೈಕನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗಿದೆ. ಈ ರಾಯಲ್ ಎನ್ಫೀಲ್ಡ್ ಮೆಟಿಯೋರ್ 350 ಬೈಕ್ ಹೊಸ ಫೀಚರ್ ಗಳೊಂದಿಗೆ ಮಾರುಕಟ್ಟೆಗೆ ಲಗ್ಗೆ ಇಡಲಿದೆ.

ರಾಯಲ್ ಎನ್‍ಫೀಲ್ಡ್ ಕಂಪನಿಯು ತನ್ನ ಮೆಟಿಯೋರ್ ಬೈಕನ್ನು ಜೂನ್ ತಿಂಗಳಲ್ಲಿ ಬಿಡುಗಡೆಯಾಗಲಿದೆ ವರದಿಗಳಾಗಿತ್ತು. ಆದರೆ ಕಾರೋನ ಸೋಂಕಿನ ಭೀತಿಯಿಂದ ಈ ಬೈಕಿನ ಬಿಡುಗಡೆಯು ವಿಳಂಬವಾಗಿದೆ. ಈ ಮೆಟಿಯೋರ್ 350 ಬೈಕಿನ ಹೊಸ ಮಾಹಿತಿಗಳನ್ನು ಗಾಡಿವಾಡಿ ಬಹಿರಂಗಪಡಿಸಿದೆ. ಹೊಸ ರಾಯಲ್ ಎನ್ಫೀಲ್ಡ್ ಮೆಟಿಯೋರ್ 350 ಬೈಕಿನ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.1.65 ಲಕ್ಷಗಳಾಗಿರಲಿದೆ ಎಂದು ನಿರೀಕ್ಷಿಸುತ್ತೇವೆ.

ಈ ಹೊಸ ಬೈಕ್ ಫೈರ್‌ಬಾಲ್, ಸ್ಟೆಲ್ಲಾರ್ ಮತ್ತು ಸೂಪರ್‌ನೊವಾ ಎಂಬ ಮೂರು ರೂಪಾಂತರಗಳಲ್ಲಿ ಲಭ್ಯವಿದೆ. ಇದರಲ್ಲಿ ಫೈರ್‌ಬಾಲ್ ರೂಪಾಂತರವು ಬ್ಲ್ಯಾಕ್ ಔಟ್ ಕಾಂಪೊನೆಟ್ಸ್, ಸಿಂಗಲ್ ಬಣ್ಣದ ಗ್ರಾಫಿಕ್ಸ್ ನೊಂದಿಗೆ ಫ್ಯೂಯಲ್ ಟ್ಯಾಂಕ್, ಬ್ಲ್ಯಾಕ್ ಎಂಜಿನ್ ಮತ್ತು ಬಣ್ಣದ ರಿಮ್ ಟೇಪ್ ಅನ್ನು ಹೊಂದಿದೆ.
MOST READ: ಬಿಡುಗಡೆಯಾಯ್ತು ಹೊಸ ಟ್ರಯಂಫ್ ಬೊನೊವೆಲ್ಲಿ ಸ್ಪೀಡ್‍ಮಾಸ್ಟರ್ ಬೈಕ್

ಸ್ಟೆಲ್ಲಾರ್ ರೂಪಾಂತರದಲ್ಲಿ ಬ್ಯಾಡ್ಜ್‌ಗಳು, ಕ್ರೋಮ್ ಎಕ್ಸಾಸ್ಟ್, ಕ್ರೋಮ್ ಹ್ಯಾಂಡಲ್‌ಬಾರ್ ಮತ್ತು ಕ್ರೋಮ್ ಇಎಫ್‌ಐ ಕವರ್ ಅನ್ನು ಪಡೆಯುತ್ತದೆ. ಇದು ಬ್ಯಾಕ್ ರೆಸ್ಟ್ ಸಹ ಒಳಗೂಂಡಿದೆ.

ಇನ್ನು ಸೂಪರ್‌ನೊವಾ ಎಂಬ ರೂಪಾಂತರವು ಡ್ಯುಯಲ್-ಟೋನ್ ಬಣ್ಣದ ಆಯ್ಕೆಯನ್ನು ಹೊಂದಿದ್ದು, ಇದು ಪ್ರೀಮಿಯಂ ಸೀಟ್ ಫಿನಿಶಿಂಗ್, ವಿಂಡ್‌ಸ್ಕ್ರೀನ್ ಮತ್ತು ಕ್ರೋಮ್ ಇಂಡಿಕೇಟರ್ ಸಹ ಹೊಂದಿದೆ.
MOST READ: ಬಿಡುಗಡೆಯಾಯ್ತು ಹೊಸ ಕವಾಸಕಿ ವಲ್ಕನ್ ಎಸ್ ಬೈಕ್

ಹೊಸ ರಾಯಲ್ ಎನ್ಫೀಲ್ಡ್ ಮೆಟಿಯೋರ್ 350 ಬೈಕ್, ಫೈರ್‌ಬಾಲ್ ಯೆಲ್ಲೋ, ಫೈರ್‌ಬಾಲ್ ರೆಡ್, ಸ್ಟೆಲ್ಲಾರ್ ರೆಡ್ ಮೆಟಾಲಿಕ್, ಸ್ಟೆಲ್ಲಾರ್ ಬ್ಲ್ಯಾಕ್ ಮ್ಯಾಟ್, ಸ್ಟೆಲ್ಲಾರ್ ಬ್ಲೂ ಮೆಟಾಲಿಕ್, ಸೂಪರ್‌ನೊವಾ ಬ್ರೌನ್ ಬ್ರೌನ್ ಡ್ಯುಯಲ್-ಟೋನ್ ಮತ್ತು ಸೂಪರ್‌ನೊವಾ ಬ್ಲೂ ಡ್ಯುಯಲ್-ಟೋನ್ ಎಂಬ ಏಳು ಬಣ್ಣಗಳ ಆಯ್ಕೆಯಲ್ಲಿ ಲಭ್ಯವಿರಲಿದೆ.

ಈ ಹೊಸ ರಾಯಲ್ ಎನ್ಫೀಲ್ಡ್ ಮೆಟಿಯೋರ್ 350 ಬೈಕ್ ಭಾರತದಲ್ಲಿ ಹಲವು ಬಾರಿ ಸ್ಪಾಟ್ ಟೆಸ್ಟ್ ನಡೆಸಲಾಗಿದೆ. ಈ ಬೈಕಿನಲ್ಲಿ ಎರಡು ಡಿಸ್‌ಪ್ಲೇಯನ್ನು ಹೊಂದಿರುವ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಅನ್ನು ಹೊಂದಿರುವುದು ಬಹಿರಂಗವಾಗಿದೆ. ಇದರಲ್ಲಿ ಟ್ರಿಪ್ಪರ್ ನ್ಯಾವಿಗೇಷನ್ ಸಿಸ್ಟಂ ಅನ್ನು ಕೂಡ ಹೊಂದಿರಲಿದೆ.
MOST READ: ಆಗಸ್ಟ್ ತಿಂಗಳ ಮಾರಾಟ ವರದಿ ಪ್ರಕಟಿಸಿದ ಸುಜುಕಿ ಮೋಟಾರ್‌ಸೈಕಲ್

ಇದರಲ್ಲಿ ಕ್ಲಾಕ್, ಫ್ಯೂಯಲ್ ಗೇಜ್, ಓಡೋಮೀಟರ್ ಮತ್ತು ಟ್ರಿಪ್ ಮೀಟರ್‌ನಂತಹ ಮಾಹಿತಿಯನ್ನು ಪ್ರದರ್ಶಿಸಿದರೆ, ಮತ್ತೊಂದು ಟಿಎಫ್‌ಟಿ ಯುನಿಟ್ ನಲ್ಲಿ ಟರ್ನ್-ಬೈ-ಟರ್ನ್ ನ್ಯಾವಿಗೇಷನ್ ಮಾಹಿತಿಯನ್ನು ನೀಡುತ್ತದೆ. ಈ ಡಿಜಿಟಲ್ ಕ್ಲಸ್ಟರ್ ಅನ್ನು ಬ್ಲೂಟೂತ್ ಮೂಲಕ ಕನೆಕ್ಟ್ ಮಾಡಬಹುದಾಗಿದೆ.

ಈ ಬೈಕಿನಲ್ಲಿ 346 ಸಿಸಿ ಏರ್-ಕೂಲ್ಡ್ ಸಿಂಗಲ್ ಸಿಲಿಂಡರ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ ಫ್ರಿ ಕ್ಯಾಟಲಿಕ್ ಕರ್ನವಾಟರ್ ಅನ್ನು ಎಕ್ಸಾಸ್ಟ್ ಸಿಸ್ಟಂನೊಂದಿಗೆ ಜೋಡಿಸಲಾಗಿದೆ. ಈ ಎಂಜಿನ್ ಉತ್ತಮ ಇಂಧನ ಧಕ್ಷತೆಯನು ಹೊಂದಿದೆ.
MOST READ: ಬಿಡುಗಡೆಯ ಸನಿಹದಲ್ಲಿ ಬಹುನಿರೀಕ್ಷಿತ ಬಿಎಸ್-6 ಹೀರೋ ಬೈಕುಗಳು

ಬಿಎಸ್ 6 ಕ್ಲಾಸಿಕ್ 350 ಎಂಜಿನ್ಗೆ ಹೋಲಿಸಿದರೆ ಸುಮಾರು 0.4 ಬಿಹೆಚ್‌ಪಿ ಪವರ್ ಹೆಚ್ಚಾದರೆ, 1 ಎನ್‌ಎಂ ಟಾರ್ಕ್ ಕಡಿಮೆಯಾಗಿದೆ. ಎಂಜಿನ್‌ನಂತೆಯೇ, ಕ್ಲಚ್ ಮತ್ತು ಗೇರ್ ಬಾಕ್ಸ್ ಸಿಸ್ಟಂ ಅನ್ನು ಸಹ ಹೊಸದಾಗಿ ಅಭಿವೃದ್ಧಿಪಡಿಸಲಾಗಿದೆ.

ಥಂಡರ್‌ಬರ್ಡ್ ಬೈಕಿನ ಉತ್ತರಾಧಿಕಾರಿಯಾಗಿ ಬರುವ ಹೊಸ ಮೆಟಿಯೋರ್ 350 ಬೈಕ್ ಬೈಕಿನಲ್ಲಿ ಅಳವಡಿಸಲಾಗುವ ಎಂಜಿನ್ ಹೊಸ ಟೆಕ್ನಾಲಜಿಯನ್ನು ಹೊಂದಿರಲಿದ್ದು, ವೈಬ್ರೆಷನ್ ಸಮಸ್ಯೆಯನ್ನು ಹೋಗಲಾಡಿಸಲಿದೆ. ಪ್ರಸ್ತುತ ಟ್ಯಾಪೆಟ್-ವಾಲ್ವ್ ಯುಸಿಇ 346 ಸಿಸಿ ಎಂಜಿನ್‌ಗಳಿಗಿಂತ ಹೆಚ್ಚಿನ ಕಾರ್ಯಕ್ಷಮತೆಯನ್ನು ನೀಡುತ್ತದೆ.

ರಾಯಲ್ ಎನ್ಫೀಲ್ಡ್ ಮೆಟಿಯೋರ್ 350 ಬೈಕ್ ಥಂಡರ್‌ಬರ್ಡ್ ಎಕ್ಸ್ 350 ಮಾದರಿಯ ರೆಟ್ರೂ-ಅರ್ಬನ್ ಕ್ರೂಸರ್ ವಿನ್ಯಾಸವನ್ನು ಹೊಂದಿದೆ. ಈ ಹೊಸ ರಾಯಲ್ ಎನ್ಫೀಲ್ಡ್ ಮೆಟಿಯೋರ್ ಬೈಕ್ ಭಾರತೀಯ ಮಾರುಕಟ್ಟೆಯಲ್ಲಿ ಹೆಚ್ಚಿನ ಗ್ರಾಹಕರನ್ನು ಸೆಳೆಯಬಹುದು ಎಂದು ನಿರೀಕ್ಷಿಸುತ್ತೇವೆ.